ಕನ್ನಡ ಗ್ರಾಮಗಳ ಹೆಸರನ್ನು ಯಾವುದೇ ಕಾರಣಕ್ಕೂ ಮಲಯಾಳೀಕರಣ ಮಾಡುವುದಿಲ್ಲ: ಮಂಜೇಶ್ವರ ಶಾಸಕ ಕೆ. ಎಂ. ಅಶ್ರಫ್ ಸ್ಪಷ್ಟನೆ
ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಕನ್ನಡ ಗ್ರಾಮಗಳ ಹೆಸರುಗಳನ್ನು ಮಲಯಾಳಂಗೆ ಬದಲಾಯಿಸಲು ಕೇರಳ ಸರ್ಕಾರ ಆದೇಶಿಸಿದೆ ಎಂದು ವ್ಯಾಪಕ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಈ ಬಗ್ಗೆ ಮಂಜೇಶ್ವರ ಶಾಸಕ ಸ್ಪಷ್ಟನೆ ನೀಡಿದ್ದಾರೆ. ಗ್ರಾಮಗಳ ಹೆಸರು ಬದಲಾಯಿಸುವ ಬಗ್ಗೆ ಈವರೆಗೆ ಕೇರಳ ಸರ್ಕಾರ ಯಾವುದೇ ಆದೇಶ ಹೊರಡಿಸಿಲ್ಲ. ಈ ಬಗ್ಗೆ ನಾನು ಮುಖ್ಯಮಂತ್ರಿ ಕಚೇರಿ ಮತ್ತು ಕಾಸರಗೋಡು ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಈ ಬಗ್ಗೆ ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಮಂಜೇಶ್ವರ ಶಾಸಕ ಕೆ ಎಂ ಅಶ್ರಫ್ ಸಾಮಾಜಿಕ ಜಾಲತಾಣಗಳ […]










