ರಾಷ್ಟ್ರೀಯ

ಆಂಧ್ರದಲ್ಲಿ ಎನ್‍ಡಿಎ ಜಂಟಿ ಪ್ರಣಾಳಿಕೆ ಬಿಡುಗಡೆ/ ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ಅನುದಾನ

ಸಮಗ್ರ ನ್ಯೂಸ್: ಆಂಧ್ರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್(ಎನ್‍ಡಿಎ) ಜಂಟಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅರ್ಹ ಮಹಿಳೆಯರಿಗೆ ಮಾಸಿಕ ರೂ. 1,500 ಪಿಂಚಣಿ ಮತ್ತು ನಿರುದ್ಯೋಗಿ ಯುವಕರಿಗೆ ಮಾಸಿಕ ರೂ. 3,000 ಹಣಕಾಸಿನ ನೆರವನ್ನು ಘೋಷಿಸಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್, ಟಿಡಿಪಿಯ ‘ಸೂಪರ್ ಸಿಕ್ಸ್ ಮತ್ತು ನಮ್ಮ ಪಕ್ಷದ ‘ಶನ್ಮುಕ್ತ ವ್ಯೂಹಂ’ ಪರಿಕಲ್ಪನೆಯ ಸಂಯೋಜನೆಯೇ ಈ ಪ್ರಣಾಳಿಕೆ ಎಂದು ಹೇಳಿದರು. ಮಹಿಳೆಯರಿಗೆ ಸರ್ಕಾರಿ ಬಸ್‍ನಲ್ಲಿ ಉಚಿತ […]

ಆಂಧ್ರದಲ್ಲಿ ಎನ್‍ಡಿಎ ಜಂಟಿ ಪ್ರಣಾಳಿಕೆ ಬಿಡುಗಡೆ/ ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ಅನುದಾನ Read More »

ನಾಳೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ

ಸಮಗ್ರ ನ್ಯೂಸ್: ಅಯೋಧ್ಯೆಗೆ ನಾಳೆ (ಬುಧವಾರ, ಮೇ 1) ರಾಷ್ಟ್ರಪತಿ ದೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ಹನುಮಾನ್ ಗರ್ಹಿ ದೇವಾಲಯ, ಶ್ರೀರಾಮ್ ದೇವಾಲಯ ಮತ್ತು ಕುಬೇರ ತೀಲಾದಲ್ಲಿ ದರುಶನ ಮತ್ತು ಆರತಿ ನಡೆಸಲಿದ್ದಾರೆ. ಅದರ ಜೊತೆಗೆ ಸರಯೂ ಪೂಜೆ ಮತ್ತು ಆರತಿಯನ್ನೂ ಮಾಡಲಿದ್ದಾರೆ.

ನಾಳೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ Read More »

ಬಿಹಾರ: ಲೋಕಸಭಾ ಚುನಾವಣೆ ಪ್ರಚಾರ- ಪವನ್​ ಸಿಂಗ್​ ಕಾರಿನ ಗ್ಲಾಸ್​ ಪುಡಿ ಪುಡಿ

ಸಮಗ್ರ ನ್ಯೂಸ್‌ : 2024ರ ಲೋಕಸಭಾ ಚುನಾವಣೆಗೆ ಭೋಜ್​ಪುರಿ ಸೂಪರ್​ಸ್ಟಾರ್ ​ಪವನ್​ ಸಿಂಗ್​ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಬಿಹಾರದ ಕರಕಟ್​ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ನಟ ಚುನಾವಣೆಯಲ್ಲಿ ಹೆಚ್ಚು ಮತ ಪಡೆಯಲು ರೋಡ್​ ಶೋ ನಡೆಸಿದ್ದಾರೆ. ರೋಡ್​ ಶೋ ವೇಳೆ ನಟನನ್ನು ಕಾಣಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು, ಆದರೆ ಈ ವೇಳೆ ಅಭಿಮಾನಿಯೊಬ್ಬ ಪವನ್​ ಸಿಂಗ್​ ಕಾರು ಗ್ಲಾಸ್​ ಮೇಲೆ ಏರಿ ಸೆಲ್ಫಿ ತೆಗೆಯಲು ಮುಂದಾಗಿದ್ದಾನೆ. ಆದರೆ ಸೆಲ್ಫಿ ತೆಗೆಯುವ ಅವಾಂತರದಲ್ಲಿ ಪವನ್​ ಸಿಂಗ್​

ಬಿಹಾರ: ಲೋಕಸಭಾ ಚುನಾವಣೆ ಪ್ರಚಾರ- ಪವನ್​ ಸಿಂಗ್​ ಕಾರಿನ ಗ್ಲಾಸ್​ ಪುಡಿ ಪುಡಿ Read More »

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ

ಸಮಗ್ರ ನ್ಯೂಸ್‌ : ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಪೂಂಚ್‌ನ ಮಂಡಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದ ಭೂಕುಸಿತ ಉಂಟಾಗಿ ಹಲವಾರು ಮನೆಗಳು ಹಾನಿಗೊಳಗಾಗಿವೆ. ಪೂಂಚ್ ಮತ್ತು ಉತ್ತರ ಕಾಶ್ಮೀರದ ಭಾಗಗಳಲ್ಲಿ ಸುರಿದ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದೆ. ಪರಿಣಾಮ 8 ರಿಂದ 10 ಕಟ್ಟಡಗಳು ಮತ್ತು ರಸ್ತೆಗಳಿಗೆ ಹಾನಿಯಾಗಿದೆ. ಈ ಸಂಬಂಧ ಸ್ಥಳೀಯ ನಿವಾಸಿ ಅಶ್ಫಾಕ್ ಹುಸೇನ್ ಪ್ರತಿಕ್ರಿಯಿಸಿ, ಭಾರೀ ಮಳೆಯಿಂದಾಗಿ 8 ರಿಂದ 10 ಮನೆಗಳಿಗೆ ಹಾನಿಯಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ Read More »

ಇಂದು ಆಯುಷ್ಮಾನ್ ಭಾರತ್ ದಿನ ಆಚರಣೆ

ಸಮಗ್ರ ನ್ಯೂಸ್‌ : ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸುತ್ತದೆ. ಪ್ರಧಾನ ಮಂತ್ರಿ ಜನ್ ಆರೋಗ್ಯ ಯೋಜನೆ ಎಂದೂ ಕರೆಯಲ್ಪಡುವ ಈ ಯೋಜನೆಯಿಂದ ಭಾರತ ಸರ್ಕಾರವು ಸುಮಾರು 50 ಕೋಟಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಅಗ್ಗದ ಮತ್ತು ಸುಲಭವಾದ ಆರೋಗ್ಯ ಸೇವೆಯನ್ನು ನೀಡುತ್ತಿದೆ. ಬಡವರಿಗೆ ಆರೋಗ್ಯ ರಕ್ಷಣೆ ಒದಗಿಸಲು ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿ

ಇಂದು ಆಯುಷ್ಮಾನ್ ಭಾರತ್ ದಿನ ಆಚರಣೆ Read More »

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ

ಸಮಗ್ರ ನ್ಯೂಸ್‌ : ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ಕರೆ ನೀಡಿದರು. ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲಗೇರಿಯಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮೋದಿ ಅವರು ದೇಶದ ರೈತರು, ಮಹಿಳೆಯರು, ಯುವಕರು, ಕಾರ್ಮಿಕರು ಸೇರಿದಂತೆ ಎಲ್ಲ ವಲಯದಲ್ಲಿನ ಜನರ ಕಲ್ಯಾಣಕ್ಕೆ ಕೋಟಿಗಟ್ಟಲೇ

ಧಾರವಾಡ : ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು- ಅರವಿಂದ ಬೆಲ್ಲದ Read More »

ಪ್ರಜ್ವಲ್‌ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ‌ ರಚನೆ

ಸಮಗ್ರ ನ್ಯೂಸ್: ಕೆಲವು ದಿನಗಳಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಹಾಸನದ ರಾಸಲೀಲೆ ಪೆನ್ ಡ್ರೈವ್ ಪ್ರಕರಣ ತನಿಖೆಗೆ ಸರ್ಕಾರದಿಂದ ಎಸ್‌ಐಟಿ ರಚಿಸಲಾಗಿದೆ. ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿ ಬಂದ ಲೈಂಗಿಕ ದೌರ್ಜನ್ಯಗಳ ಆರೋಪಗಳ ಬಗ್ಗೆ ತನಿಖೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ದಳ(ಎಸ್‌ಐಟಿ) ರಚಿಸಲಾಗಿದೆ. ಗೌರಿ ಲಂಕೇಶ್ ಕೊಲೆ ಪ್ರಕರಣದ ವಿಶೇಷ ತನಿಖಾ ದಳ ಸಾರಥ್ಯ ವಹಿಸಿದ್ದ ಪ್ರಸ್ತುತ ಸಿಐಡಿ ಎಡಿಜಿಪಿ ಆಗಿರುವ

ಪ್ರಜ್ವಲ್‌ ರೇವಣ್ಣ ಸೆಕ್ಸ್ ಕರ್ಮಕಾಂಡ| ಪ್ರಕರಣ ತನಿಖೆಗೆ ಎಸ್ಐಟಿ‌ ರಚನೆ Read More »

ತೆಲಂಗಾಣ : ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಐಪಿಎಲ್ ಬೆಟ್ಟಿಂಗ್ನಿಂದ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ವಿನೀತ್ ಎಂದು ಗುರುತಿಸಲಾಗಿದೆ. ವಿನೀತ್ ಬಿಟೆಕ್ ವಿದ್ಯಾರ್ಥಿಯಾಗಿದ್ದು, ಸದಾಶಿವಪೇಟೆಯ ಸಂಗರೆಡ್ಡಿ ಜಿಲ್ಲೆಯವನಾಗಿದ್ದಾನೆ. ಈತ ಆನ್ಲೈನ್ ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡಿದ್ದನು. ಐಪಿಎಲ್ ಬೆಟ್ಟಿಂಗ್ಗಾಗಿ ವಿನೀತ್ ಲೋನ್ ಆ್ಯಪ್ ಮೂಲಕ ಸಾಲ ಪಡೆದುಕೊಂಡಿದ್ದನು. ಆದರೆ ಐಪಿಎಲ್ ಗೋಜಿಗೆ ಬಿದ್ದು ಬೆಟ್ಟಿಂಗ್ ಮೇಲೆ ಬೆಟ್ಟಿಂಗ್ ಕಟ್ಟುತ್ತಾ ಕೊನೆಗೆ 10 ಲಕ್ಷದವರೆಗೆ ಸಾಲ ಮಾಡಿದ್ದಾನೆ. ಕೊನೆಗೆ ಸಾಲ

ತೆಲಂಗಾಣ : ಐಪಿಎಲ್ ಬೆಟ್ಟಿಂಗ್ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ Read More »

ವಿಜಯಪುರ : ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್

ಸಮಗ್ರ ನ್ಯೂಸ್‌ : ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಭೇಟಿಯಾದರು. ಈ ಸಂದರ್ಭ ಶಿವಪುತ್ರಪ್ಪ ಅವರಿಂದ ಶುಭಾಶಯ ಹಾಗೂ ಅನೇಕ ಸಲಹೆಗಳನ್ನು ಆಲಗೂರರು ಪಡೆದರು. ನಿಮ್ಮ ಹಾಗೂ ಪಕ್ಷದ ಪರ ಒಳ್ಳೆಯ ವಾತಾವರಣ ಇದೆ. ಜನ ಈ ಸಲ ಬದಲಾವಣೆ ಬಯಸಿದ್ದಾರೆ. ಅವರು ಬೇಸತ್ತಿದ್ದಾರೆ. ಜನಗಳಿಗೆ ಜಿಲ್ಲೆಯ ಅಭಿವೃದ್ಧಿ ಬೇಕಾಗಿದೆ. ನೀವು ಖಂಡಿತ ವಿಜಯಶಾಲಿಯಾಗುತ್ತೀರಿ ಎಂದು ದೇಸಾಯಿಯವರು ಹರಸಿದ್ದಾರೆ.

ವಿಜಯಪುರ : ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್ Read More »

ರಾಜಸ್ಥಾನ : ಮೋದಿ ಹೇಳಿಕೆ ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಸಮಗ್ರ ನ್ಯೂಸ್‌ :ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ರಾಜಸ್ತಾನದ ಬಾನಸ್ವರಾದಲ್ಲಿ ಪತ್ರಕರ್ತರ ಜೊತೆ ಮಾತನಾಡುತ್ತಾ ಪ್ರಧಾನಿ ಮೋದಿ ಯವರು ಮುಸ್ಲಿಮರ ಬಗ್ಗೆ ನೀಡಿರುವ ಹೇಳಿಕೆಗೆ ಟೀಕೆ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಅವರನ್ನು ಪಕ್ಷದಿಂದ ಉಚ್ಛಾಟನೆ ಗೊಳಿಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಮುಕ್ತ ಪ್ರಸಾದ್‌ ನಗರ ಪೊಲೀಸ್‌ ಠಾಣಾಧಿಕಾರಿ ಧೀರೇಂದ್ರೆ ಶೆಖಾವತ್‌ ಮಾಹಿತಿ

ರಾಜಸ್ಥಾನ : ಮೋದಿ ಹೇಳಿಕೆ ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ Read More »