ರಾಷ್ಟ್ರೀಯ

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್ : ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಯಾವ ಮಾಂತ್ರಿಕ ಪೆಟ್ಟಿಗೆ ಮೋದಿ ಬಳಿ ಇದೆ. ಇದಕ್ಕೆ ಉತ್ತರ ಕೊಡುತ್ತೀರಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ನಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, ಮೋದಿಯವರೆ, ಅಜಿತ್ ಪವಾರ್, ಮುಕುಲ್ ರಾಯ್, ನವೀನ್ ಜಿಂದಾಲ್, ತಪಸ್ ರಾಯ್, ಪೆಮಾ ಖಂಡ್ ಇವರ ಮೇಲೆಲ್ಲಾ ಭ್ರಷ್ಟಾಚಾರದ ಆರೋಪವಿದೆ. ಇವರೆಲ್ಲಾ ಈಗ ನಿಮ್ಮ ಸಂಬಂಧ ಬೆಳೆಸಿದ್ದಾರೆ. ಇಲ್ಲಿ ಕೆಲವರಿಗೆ ಉನ್ನತ ಹುದ್ದೆ ಸಿಕ್ಕಿದೆ. ನಿಮ್ಮ ಪಕ್ಷದ […]

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್ Read More »

ಕೇಜ್ರಿವಾಲ್‌ ಪ್ರಕರಣದಲ್ಲಿ ನ್ಯಾಯಯುತ, ಕಾನೂನಾತ್ಮಕ ಪ್ರಕ್ರಿಯೆ ನಡೆಯಲಿ;ಅಮೆರಿಕ

ಸಮಗ್ರ ನ್ಯೂಸ್: ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ರವರು ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾರೆ. ಅವರ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕಾದ ಸ್ಟೇಟ್‌ ಇಲಾಖೆ ವಕ್ತಾರ, ಕೇಜ್ರಿವಾಲ್ ಪ್ರಕರಣ ಕುರಿತಂತೆ ಅವರಿಗೆ ನ್ಯಾಯಯುತ, ಪಾರದರ್ಶಕ ಮತ್ತು ಸರಿಯಾದ ಸಮಯದಲ್ಲಿ ಕಾನೂನಾತ್ಮಕ ಪ್ರಕ್ರಿಯೆ ನಡೆಯುವುದೆಂದು ಆಶಿಸುತ್ತೇವೆ ಎಂದು ಹೇಳಿದೆ.‌ ಜರ್ಮನ್‌ ವಿದೇಶ ಸಚಿವರ ಹೇಳಿಕೆಗೆ ಭಾರತ ಸರ್ಕಾರ ವ್ಯಕ್ತಪಡಿಸಿರುವ ಆಕ್ಷೇಪದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಕ್ತಾರರು ಭಾರತ ಸರ್ಕಾರದ ಜೊತೆ ನಡೆಸಿದ ಚರ್ಚೆಗಳ ಕುರಿತು

ಕೇಜ್ರಿವಾಲ್‌ ಪ್ರಕರಣದಲ್ಲಿ ನ್ಯಾಯಯುತ, ಕಾನೂನಾತ್ಮಕ ಪ್ರಕ್ರಿಯೆ ನಡೆಯಲಿ;ಅಮೆರಿಕ Read More »

ಮದ್ಯ ನೀತಿ ಹಗರಣ| ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು

ಸಮಗ್ರ ನ್ಯೂಸ್: ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ.ಕವಿತಾ ಅವರನ್ನು ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಏಪ್ರಿಲ್ 9 ರ ವರೆಗೆ ಜೈಲಿಗೆ ಕಳುಹಿಸಿದೆ. ಮದ್ಯ ನೀತಿ ಹಗರಣದಲ್ಲಿ ಕವಿತಾ ಅವರು ಮಾ.15 ರಂದು ಜಾರಿ ನಿರ್ದೇಶನಾಲಯದ ವಶದಲ್ಲಿದ್ದು, ಕಳೆದ ವಾರ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿತ್ತು. ಈ ವೇಳೆ ಅವರ ಮೊಬೈಲ್‌ನಲ್ಲಿದ್ದ ಡೇಟಾವನ್ನು ಪರಿಶೀಲಿಸಲಾಗಿತ್ತು. ಕವಿತಾ ಅವರಿಗೆ ದೆಹಲಿ ನ್ಯಾಯಾಲಯವು ಈಗ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅವರನ್ನು ಲಾಕಪ್‌ನಲ್ಲಿ ಇರಿಸುವ ಬದಲು

ಮದ್ಯ ನೀತಿ ಹಗರಣ| ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು Read More »

ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್

ಸಮಗ್ರ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಮತ್ತು ಪಂಜಾಬ್​ ಕಿಂಗ್ಸ್​ ನಡುವಣ ಐಪಿಎಲ್ ಪಂದ್ಯದ ವೇಳೆ ಆರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬ್ಯಾಟಿಂಗ್​ಗೆ ಕ್ರೀಸ್​ಗೆ ಬರುತ್ತಿದ್ದಂತೆಯೇ ವ್ಯಕ್ತಿಯೊಬ್ಬ ಕ್ರೀಡಾಂಗಣದ ಗ್ರಿಲ್ ಹಾರಿ ಕ್ರೀಸ್​ ಬಳಿ ಬಂದು ಕೊಹ್ಲಿಯ ಕಾಲು ಹಿಡಿದ ಘಟನೆ ನಡೆದಿದ್ದು, ತಕ್ಷಣ ಆತನನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾಯಚೂರಿನಿಂದ ಬಂದಿದ್ದ ಅಪ್ರಾಪ್ತ ಎಂಬ ಮಾಹಿತಿ ತಿಳಿದು ಬಂದಿದೆ. ಈತ 3000 ರೂಪಾಯಿ ಕೊಟ್ಟು ಡಿ ಬ್ಲಾಕ್ ಟಿಕೆಟ್

ಕ್ರೀಡಾಂಗಣದಲ್ಲಿ ಕೊಹ್ಲಿಯ ಕಾಲು ಹಿಡಿದ ಅಭಿಮಾನಿ ವಿರುದ್ಧ ಕೇಸ್ Read More »

ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಹತ್ವದ ಸಭೆ/ ಗಾಜಾದಲ್ಲಿ ಕದನ ವಿರಾಮಕ್ಕೆ ನಿರ್ಣಯ

ಸಮಗ್ರ ನ್ಯೂಸ್: ಇಸ್ರೇಲ್ ಹಾಗೂ ಪ್ಯಾಲೆಸ್ತಿನ್ ನಡುವಿನ ಸಂಘರ್ಷ ಅಂತ್ಯಗೊಳಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಹತ್ವದ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಮೂಲಕ ತಕ್ಷಣವೇ ಗಾಜಾದಲ್ಲಿ ಕದನ ವಿರಾಮ ಘೋಷಿಸಬೇಕು ಎಂದು ಭದ್ರತಾ ಮಂಡಳಿಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ವಿಶ್ವಂಸ್ಥೆ ಭದ್ರತಾ ಮಂಡಳಿ ಕದನ ವಿಮಾನ ಘೋಷಣೆಗೆ ಆಗ್ರಹಿಸಿದೆ. ಭದ್ರತಾ ಮಂಡಳಿಯ ಎಲ್ಲಾ 14 ಸದಸ್ಯರು ಕದನ ವಿಮಾನ ಘೋಷಣೆಗೆ ಮತ ಚಲಾಯಿಸಿದರು. ಇದೇ ವೇಳೆ ಒತ್ತೆಯಾಳಾಗಿ ಇರಿಸಿಕೊಂಡಿರುವ ನಾಗರೀಕರನ್ನು ಹಮಾಸ್ ತಕ್ಷಣವೇ ಬಿಡುಗಡೆ ಮಾಡಬೇಕು.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಹತ್ವದ ಸಭೆ/ ಗಾಜಾದಲ್ಲಿ ಕದನ ವಿರಾಮಕ್ಕೆ ನಿರ್ಣಯ Read More »

ಗಡಿಯಲ್ಲಿ ಮತ್ತೆ ಗಡಿಬಿಡಿ/ ಅರುಣಾಚಲ ಪ್ರದೇಶ ನಮ್ಮದು ಎಂದು ಚೀನಾ ಮತ್ತೆ ಕಿರಿಕ್

ಸಮಗ್ರ ನ್ಯೂಸ್: ಅರುಣಾಚಲ ಪ್ರದೇಶ ಚೀನಾದ ಭಾಗ. ಭಾರತ ಅಕ್ರಮವಾಗಿ ಆಕ್ರಮಿಸಿಕೊಂಡಿದೆ ಎಂದು ಚೀನಾ ಮತ್ತೆ ಕಿರಿಕ್ ಮಾಡಿದೆ. ಅರುಣಾಚಲ ಪ್ರದೇಶ ಭಾರತದ ನೈಸರ್ಗಿಕ ಭಾಗ. ಆ ರಾಜ್ಯದ ಮೇಲೆ ಚೀನಾ ಹಕ್ಕು ಸಾಧಿಸುವುದು ಅಸಂಬದ್ಧ ಎಂದು ಕೇಂದ್ರ ಸಚಿವ ಎಸ್.ಜೈಶಂಕರ್ ಹೇಳಿಕೆಗೆ ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಗಡಿಯನ್ನು ಎಂದಿಗೂ ಇತ್ಯರ್ಥಪಡಿಸಲಾಗಿಲ್ಲ, ಅರುಣಾಚಲ ಪ್ರದೇಶಕ್ಕೆ ಚೀನಾದ ಅಧಿಕೃತ ಹೆಸರು ಜಂಗ್ಲಾನ್. ಭಾರತವು ಕಾನೂನುಬಾಹಿರವಾಗಿ ಆಕ್ರಮಿಸಿಕೊಂಡಿದೆ.

ಗಡಿಯಲ್ಲಿ ಮತ್ತೆ ಗಡಿಬಿಡಿ/ ಅರುಣಾಚಲ ಪ್ರದೇಶ ನಮ್ಮದು ಎಂದು ಚೀನಾ ಮತ್ತೆ ಕಿರಿಕ್ Read More »

ಪೋನ್ ಕದ್ದಾಲಿಕೆ ಪ್ರಕರಣ/ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಪ್ರಮುಖ ಆರೋಪಿ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಲೋಕಸಭೆ ಚುನಾವಣೆ ಅಬ್ಬರದ ನಡುವೆ ನಡೆದಿತ್ತು ಎನ್ನಲಾದ ಪೋನ್ ಕದ್ದಾಲಿಕೆ ಪ್ರಕರಣದಲ್ಲಿ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಅವರನ್ನು ಆರೋಪಿ ನಂ.1 ಎಂದು ಹೆಸರಿಸಲಾಗಿದೆ. ಸದ್ಯ ಪ್ರಭಾಕರ್ ರಾವ್ ಅಮೆರಿಕದಲ್ಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಅವರ ವಿರುದ್ಧ ಹೈದರಾಬಾದ್ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕೆ ಚಂದ್ರಶೇಖರ ರಾವ್ ನೇತೃತ್ವದ ಹಿಂದಿನ ಬಿಆರ್‍ಎಸ್ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರ ಪೋನ್‍ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡುವ ಮೂಲಕ ದತ್ತಾಂಶಗಳನ್ನು

ಪೋನ್ ಕದ್ದಾಲಿಕೆ ಪ್ರಕರಣ/ ತೆಲಂಗಾಣ ಗುಪ್ತಚರ ದಳದ ಮಾಜಿ ಮುಖ್ಯಸ್ಥ ಟಿ.ಪ್ರಭಾಕರ್ ರಾವ್ ಪ್ರಮುಖ ಆರೋಪಿ Read More »

ರಾಮಜನ್ಮಭೂಮಿಯಲ್ಲಿ ರಂಗೋತ್ಸವ/ ಸಂಭ್ರಮದಿಂದ ಹೋಳಿ ಆಚರಿಸಿದ ರಾಮಭಕ್ತರು

ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಂಗೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಬಾಲರಾಮನ ದರುಶನ ಪಡೆದರು. ರಾಮಜನ್ಮಭೂಮಿಯಲ್ಲಿ ಭಕ್ತಿ ಗೀತೆಗಳನ್ನು ಹಾಡಿ ಸಂಭ್ರಮದಿಂದ ಹೋಳಿಯನ್ನು ಆಚರಿಸಿದರು. ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಬಳಿಕ ಮೊದಲ ‘ರಂಗಭಾರಿ ಏಕಾದಶಿ’ಯಂದು ಹನುಮಂತನಗರಿ ದೇವಸ್ಥಾನದಲ್ಲಿ ದೇವರಿಗೆ ಬಣ್ಣ ಹಚ್ಚುವ ಮೂಲಕ ಬಣ್ಣಗಳ ಹಬ್ಬ ‘ರಂಗೋತ್ಸವ’ವನ್ನು ಆಚರಿಸಲಾಯಿತು. ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮನಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅದ್ಧೂರಿಯಾಗಿ ಹೋಳಿ ಆಚರಣೆ ಮಾಡಲಾಗಿದೆ.

ರಾಮಜನ್ಮಭೂಮಿಯಲ್ಲಿ ರಂಗೋತ್ಸವ/ ಸಂಭ್ರಮದಿಂದ ಹೋಳಿ ಆಚರಿಸಿದ ರಾಮಭಕ್ತರು Read More »

ಕೇಜ್ರಿವಾಲ್ ಬಂಧನ/ ಹೋಳಿ ಬಹಿಷ್ಕರಿಸಿದ ಆಮ್ ಆದ್ಮಿ

ಸಮಗ್ರ ನ್ಯೂಸ್: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅಬಕಾರಿ ನೀತಿ ಹಗರಣದಲ್ಲಿ ಅರೆಸ್ಟ್ ಆಗಿದ್ದಾರೆ. ಇತ್ತ ಪ್ರಧಾನಿ ಮೋದಿ ಸರ್ವಾಧಿಕಾರಿ ಧೋರಣೆಯಿಂದ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತಿದೆ ಎಂದು ಆರೋಪಿಸಿ ಆಪ್ ಈಗಾಗಲೇ ದೇಶಾದ್ಯಂತ ಪ್ರತಿಭಟನೆ ಮಾಡಿದ್ದು, ಇಂದು ಹೋಳಿ ಹಬ್ಬವನ್ನು ಬಹಿಷ್ಕರಿಸಿದೆ. ಕೇಜಿವಾಲ್ ಬಂಧನದಲ್ಲಿರುವ ಕಾರಣ ಆಪ್ ನಾಯಕರು ಯಾರು ಹೋಳಿ ಹಬ್ಬದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೋಳಿ ಹಬ್ಬ ಆಚರಣೆ ಗೆಲುವಿನ ಸಂಕೇತವಾಗಿದೆ. ಸಂಭ್ರಮದ ಸಂಕೇತವಾಗಿದೆ. ಆದರೆ ಆಪ್ ದುಷ್ಟರ ವಿರುದ್ಧ, ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುತ್ತಿದೆ. ಹೀಗಾಗಿ ಹೋಳಿ

ಕೇಜ್ರಿವಾಲ್ ಬಂಧನ/ ಹೋಳಿ ಬಹಿಷ್ಕರಿಸಿದ ಆಮ್ ಆದ್ಮಿ Read More »

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಕಾರು ಕಳ್ಳತನ!

ಸಮಗ್ರ ನ್ಯೂಸ್‌ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಟೊಯೊಟಾ ಫಾರ್ಚೂನರ್ಕಾರನ್ನು ಆಗ್ನೇಯ ದೆಹಲಿಯ ಗೋವಿಂದಪುರಿ ಪ್ರದೇಶದಿಂದ ಕಳ್ಳತನವಾಗಿರುವ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಚಾಲಕ ಜೋಗಿಂದರ್ ಅವರು ಟೊಯೊಟಾ ಫಾರ್ಚುನರ್ ಕಾರನ್ನು ಸರ್ವಿಸ್ ಮಾಡಿದ ನಂತರ ಗೋವಿಂದಪುರಿಗೆ ತಂದು ತಮ್ಮ ಮನೆಯಲ್ಲಿ ನಿಲ್ಲಿಸಿದ್ದರು. ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ ಎಂದು ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕದ್ದ ಕಾರು ಗುರುಗ್ರಾಮ್ ಕಡೆಗೆ ಹೋಗುತ್ತಿರುವುದು ಕಂಡುಬಂದಿದೆ. ಆದರೆ,

ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾರ ಪತ್ನಿಯ ಕಾರು ಕಳ್ಳತನ! Read More »