ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಕಾಯ್ದೆ/ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಡೆ ಕೋರುವಂತೆ ಸುಪ್ರೀಂ ಕೋರ್ಟ್ ಗೆ 237 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ತಡೆ ನೀಡಲು ನಿರಾಕರಿಸಿದೆ. ಜೊತೆಗೆ ವಿರೋಧ ಹಾಗೂ ತಡೆ ಕುರಿತು ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್, ಜಸ್ಟೀಸ್ ಜೆಬಿ ಪರಿದ್ವಾಲ್, ಮನೋಜ್ ಮಿಶ್ರಾ ಸೇರಿದ ಪೀಠ, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಅವಶ್ಯಕತೆ, ಇದಕ್ಕೆ ಎದುರಾಗಿರುವ ವಿರೋಧಗಳ ಕುರಿತು ಏಪ್ರಿಲ್ […]

ಪೌರತ್ವ ತಿದ್ದುಪಡಿ ಕಾಯ್ದೆ/ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್ Read More »

Whatsappನಲ್ಲಿ ನ್ಯೂ ಫೀಚರ್! ಸ್ಕ್ರೀನ್ ಶಾಟ್ಸ್ ಗೆ ಬಿತ್ತು ಕಡಿವಾಣ

ಬಳಕೆದಾರರ ಗೌಪ್ಯತೆಯನ್ನು ಕಾಪಾಡಲು ವಾಟ್ಸಾಪ್ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಮೂಲಕ ಯಾರೂ ಪ್ರೊಫೈಲ್ ಫೋಟೋಗಳನ್ನು ತೆಗೆಯುವಂತಿಲ್ಲ ಮತ್ತು ಸ್ಕ್ರೀನ್ ಶಾಟ್ ಗಳನ್ನು ತೆಗೆಯುವಂತಿಲ್ಲ ಮತ್ತು ಮಾರ್ಫ್ ಮಾಡುವಂತಿಲ್ಲ. WhatsApp ಸಾಮಾನ್ಯವಾಗಿ ಬಳಕೆದಾರರಿಗೆ ಫೋಟೋ ಅಥವಾ ವೀಡಿಯೊ ಸ್ಕ್ರೀನ್‌ಶಾಟ್‌ಗಳನ್ನು ವೀಕ್ಷಿಸಲು ಅನುಮತಿಸುವುದಿಲ್ಲ. ಈಗ ಅದೇ ವೈಶಿಷ್ಟ್ಯವು ಪ್ರೊಫೈಲ್ ಚಿತ್ರದಲ್ಲೂ ಬರಲಿದೆ. ಕೆಲವರು ನಿಮ್ಮ ಪ್ರೊಫೈಲ್ ಚಿತ್ರವನ್ನು ಉಳಿಸುತ್ತಾರೆ ಅಥವಾ ನಿಮಗೆ ತಿಳಿಯದೆ ಸ್ಕ್ರೀನ್‌ಶಾಟ್ ತೆಗೆದುಕೊಳ್ಳುತ್ತಾರೆ. ಚಾಟ್‌ಗಳು ಸ್ಕ್ರೀನ್‌ಶಾಟ್‌ಗಳನ್ನು ಸಹ ತೆಗೆದುಕೊಳ್ಳುತ್ತವೆ. WhatsApp ಇನ್ನು ಮುಂದೆ ಅಂತಹ ವಿಷಯಗಳನ್ನು

Whatsappನಲ್ಲಿ ನ್ಯೂ ಫೀಚರ್! ಸ್ಕ್ರೀನ್ ಶಾಟ್ಸ್ ಗೆ ಬಿತ್ತು ಕಡಿವಾಣ Read More »

ಬಾಬಾ ರಾಮ್‍ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಸಮನ್ಸ್/ ಖುದ್ದು ಹಾಜರಾಗಲು ಸೂಚನೆ

ಸಮಗ್ರ ನ್ಯೂಸ್: ಯೋಗ ಗುರು ಬಾಬಾ ರಾಮ್‍ದೇವ್, ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆ ವೇಳೆ ಖುದ್ದು ಹಾಜರಾಗುವಂತೆ ಸೂಚಿಸಿದೆ. ಶೋಕಾಸ್ ನೋಟಿಸ್‍ಗೆ ಉತ್ತರ ನೀಡದ ಹಿನ್ನೆಲೆಯಲ್ಲಿ, ನಮ್ಮ ಆದೇಶಗಳನ್ನು ನಿರ್ಲಕ್ಷಿಸಿದ್ದೀರಿ. ಬಾಬಾ ರಾಮ್‍ದೇವ್, ಪತಂಜಲಿ ಮುಖ್ಯಸ್ಥ ಆಚಾರ್ಯ ಬಾಲಕೃಷ್ಣ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ವೇಳೆ ಪತಂಜಲಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಪ್ಪಗಿ ರಾಮದೇವ್

ಬಾಬಾ ರಾಮ್‍ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಸಮನ್ಸ್/ ಖುದ್ದು ಹಾಜರಾಗಲು ಸೂಚನೆ Read More »

ಮಹಾರಾಷ್ಟ್ರದಲ್ಲಿ ನಕ್ಸಲ್- ಪೊಲೀಸ್ ಚಕಮಕಿ/ ನಾಲ್ವರು ನಕ್ಸಲರ ಹತ್ಯೆ

ಸಮಗ್ರ ನ್ಯೂಸ್: ಪೊಲೀಸರು ಹಾಗೂ ನಕ್ಸಲರ ನಡುವೆ ಮಹಾರಾಷ್ಟ್ರದ ಗಡ್ಡಿರೋಲಿಯಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ನಕ್ಸಲರನ್ನು ಪೊಲೀಸರು ಹೊಡೆದುರುಳಿಸಿದ್ದಾರೆ. ಮಹಾರಾಷ್ಟ್ರ ಪೊಲೀಸರ ವಿಶೇಷ ಸಿ-60 ಕಮಾಂಡೋಗಳು ಹಾಗೂ ಸಿಆರ್‍ಪಿಎಫ್ ಕಮಾಂಡೋಗಳು ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅನಾಹುತ ಸೃಷ್ಟಿಸಲು ಸಂಚು ರೂಪಿಸಿ ಅರಣ್ಯಗಳಲ್ಲಿ ಅಡಗಿ ಕುಳಿತಿದ್ದ ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ನಕ್ಸಲರನ್ನು ಹಿಡಿದುಕೊಟ್ಟವರಿಗೆ 36 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿತ್ತು. ಇದೀಗ ನಕ್ಸಲರು ಬಲಿಯಾಗಿದ್ದು, ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.

ಮಹಾರಾಷ್ಟ್ರದಲ್ಲಿ ನಕ್ಸಲ್- ಪೊಲೀಸ್ ಚಕಮಕಿ/ ನಾಲ್ವರು ನಕ್ಸಲರ ಹತ್ಯೆ Read More »

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ನೇಮಕ

ಸಮಗ್ರ ನ್ಯೂಸ್: ಪಶ್ಚಿಮ ಬಂಗಾಳದ ಡಿಜಿಪಿ ಹುದ್ದೆಯಿಂದ ರಾಜೀವ್ ಕುಮಾರ್ ಅವರನ್ನು ವಜಾಗೊಳಿಸಿದ ನಂತರ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ಅವರನ್ನು ನೇಮಕ ಮಾಡಲಾಗಿದೆ. ವಿವೇಕ್ ಸಹಾಯ್ ಅವರಿಗೆ ರಾಜ್ಯ ಪೊಲೀಸ್ ಮುಖ್ಯಸ್ಥರ ಜವಾಬ್ದಾರಿಯನ್ನು ನೀಡಲಾಗಿದ್ದು, ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವಿವೇಕ್ ಸಹಾಯ್ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ. ವಿವೇಕ್ ಸಹಾಯ್ ಅವರು ಪಶ್ಚಿಮ ಬಂಗಾಳ ಕೇಡರ್‍ನ 1988 ಬ್ಯಾಚ್‍ನ ಐಪಿಎಸ್ ಅಧಿಕಾರಿ. ಅವರು ಈ ಹಿಂದೆ ಡೈರೆಕ್ಟರ್ ಜನರಲ್ (ಡಿಜಿ), ಪ್ರಾವಿಶನಿಂಗ್

ಪಶ್ಚಿಮ ಬಂಗಾಳದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ವಿವೇಕ್ ಸಹಾಯ್ ನೇಮಕ Read More »

ಬಿಜೆಪಿ ಸೇರ್ಪಡೆಗೊಂಡ ಸುಪ್ರೀಂ ಕೋರ್ಟ್ ವಕೀಲೆ ಸೀಮಾ ಕುಶ್ವಾಹಾ

ಸಮಗ್ರ ನ್ಯೂಸ್: ನಿರ್ಭಯಾ ಸಾಮೂಹಿಕ ಅತ್ಯಾಚಾರ, ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಶ್ರದ್ಧಾ ವಾಕರ್ ಹತ್ಯೆಯಂತಹ ಪ್ರಮುಖ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ವಾದ ಮಂಡಿಸಿದ್ದ ಸುಪ್ರೀಂ ಕೋರ್ಟ್ ವಕೀಲೆ ಮತ್ತು ಬಿಎಸ್ಪಿ ನಾಯಕಿ ಸೀಮಾ ಕುಶ್ವಾಹಾ ಅವರು ಸೋಮವಾರ ಬಿಜೆಪಿ ಸೇರ್ಪಡೆಗೊಂಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಪಕ್ಷಕ್ಕೆ ಸ್ವಾಗತಿಸಿದರು. ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ(ಬಿಎಸ್ಪಿ)ಕ್ಕೆ ಕುಶ್ವಾಹಾ ಅವರು 2022 ರ ಜನವರಿಯಲ್ಲಿ ಸೇರಿದ್ದರು. ಸೀಮಾ ಅವರು ನಿರ್ಭಯಾ ಜ್ಯೋತಿ ಟ್ರಸ್ಟ್ ಸ್ಥಾಪಿಸಿದರು

ಬಿಜೆಪಿ ಸೇರ್ಪಡೆಗೊಂಡ ಸುಪ್ರೀಂ ಕೋರ್ಟ್ ವಕೀಲೆ ಸೀಮಾ ಕುಶ್ವಾಹಾ Read More »

ಪರಿಸರ ಸ್ನೇಹಿ ಚುನಾವಣೆ/ ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ ಮುಂದಾದ ಆಯೋಗ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿಸಲು ಚುನಾವಣಾ ಆಯೋಗ ಟೊಂಕಕಟ್ಟಿದ್ದು, ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ, ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಒತ್ತು ನೀಡುವ ಜೊತೆಗೆ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ ಕಡಿವಾಣ, ಕಾರ್ ಪೂಲಿಂಗ್‍ಗೆ ಉತ್ತೇಜನ ಸೇರಿ ಹಲವು ಕ್ರಮಗಳಿಗೆ ಮುಂದಾಗಿದೆ. ಇದರ ಜೊತೆಗೆ, ಪರಿಸರ ಸ್ನೇಹಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳೂ ಸಾಥ್ ನೀಡಬೇಕು ಎಂದೂ ಅವರು ಕೋರಿದ್ದಾರೆ. ಚುನಾವಣೆಗೆ ಸಂಬಂಧಿಸಿದ ಪ್ರತಿ ಕಾರ್ಯಕ್ರಮಗಳೂ ಆದಷ್ಟು ಪರಿಸರ ಸ್ನೇಹಿಯಾಗಿರಬೇಕು ಎಂಬುದು ಆಯೋಗದ

ಪರಿಸರ ಸ್ನೇಹಿ ಚುನಾವಣೆ/ ಕನಿಷ್ಠ ಪ್ರಮಾಣದಲ್ಲಿ ಕಾಗದ ಬಳಕೆ ಮುಂದಾದ ಆಯೋಗ Read More »

ಕಮಲ್‍ನಾಥ್‍ಗೆ ಶಾಕ್ ಕೊಟ್ಟ ಬೆಂಬಲಿಗರು/ ಆಪ್ತ ಸಹಾಯಕ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಕಮಲನಾಥ್ ಅವರ ಆಪ್ತ ಸಹಾಯಕ ಸೇರಿದಂತೆ ಹಲವು ಕಾರ್ಯಕರ್ತರು ಇಂದು ಭೋಪಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಮಾಜಿ ಕಾಂಗ್ರೆಸ್ ವಕ್ತಾರ ಸೈಯದ್ ಜಾಫರ್ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ವಿ.ಡಿ. ಶರ್ಮಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ. ಛಿಂದ್ವಾರಾ ಮೂಲದ ಜಾಫರ್ ಅವರನ್ನು ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ಆಪ್ತ ಸಹಾಯಕ ಎಂದೇ ಪರಿಗಣಿಸಲಾಗಿತ್ತು.

ಕಮಲ್‍ನಾಥ್‍ಗೆ ಶಾಕ್ ಕೊಟ್ಟ ಬೆಂಬಲಿಗರು/ ಆಪ್ತ ಸಹಾಯಕ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆ Read More »

ಬದಲಾದ ಕಾಶ್ಮೀರ/ ಕಣಿವೆ ರಾಜ್ಯದಲ್ಲೀಗ ಫಾರ್ಮುಲಾ 4 ಕಾರುಗಳ ಘರ್ಜನೆ

ಸಮಗ್ರ ನ್ಯೂಸ್: ಕಲ್ಲೆಸೆತಕ್ಕೆ ಸುದ್ದಿಯಾಗುತ್ತಿದ್ದ ಕಾಶ್ಮೀರದ ಬೀದಿಗಳಲ್ಲಿ ಇದೇ ಮೊದಲ ಬಾರಿಗೆ ಫಾರ್ಮುಲಾ 4 ಕಾರು ರೇಸ್ ಆಯೋಜಿಸಲಾಗಿದ್ದು, ಕಣಿವೆ ರಾಜ್ಯ ಕಾಶ್ಮೀರದ ಶ್ರೀನಗರ ದಾಲ್ ಸರೋವರದ ದಡದಲ್ಲಿ ಫಾರ್ಮುಲಾ 4 ಕಾರುಗಳ ಘರ್ಜನೆ ಜಗತ್ತಿನ ಗಮನಸೆಳೆದಿದೆ. ದಾಲ್ ಸರೋವರದ ದಡದಲ್ಲಿರುವ ಲಲಿತ್ ಘಾಟ್‍ನಿಂದ ನೆಹರೂ ಪಾರ್ಕ್‍ವರೆಗಿನ 1.7 ಕಿಮೀ ಟ್ರ್ಯಾಕ್‍ನಲ್ಲಿ ಸ್ಟೀಕ್ ರೇಸಿಂಗ್ ಕಾರುಗಳು ಭರ್ಜರಿ ಸದ್ದು ಮಾಡಿದವು. ಪ್ರಧಾನಿ ನರೇಂದ್ರ ಮೋದಿ ಖುದ್ದು ಈ ಕುರಿತು ಸಂತಸ ವ್ಯಕ್ತಪಡಿಸಿದ್ದು, ತುಂಬಾ ಸಂತೋಷವಾಗಿದೆ. ಇದು ಜಮ್ಮು

ಬದಲಾದ ಕಾಶ್ಮೀರ/ ಕಣಿವೆ ರಾಜ್ಯದಲ್ಲೀಗ ಫಾರ್ಮುಲಾ 4 ಕಾರುಗಳ ಘರ್ಜನೆ Read More »

ಇನ್ಮುಂದೆ ಭಾನುವಾರವೂ ಅಂಚೆ ಕಚೇರಿಗಳು ಓಪನ್

ಸಮಗ್ರ ನ್ಯೂಸ್ : ಇತ್ತೀಚೆಗೆ ಪೋಸ್ಟ್ ಆಫೀಸ್ ಕೆಲಸಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಗ್ರಾಹಕರ ಬೇಡಿಕೆಗೆ ಸ್ಪಂದಿಸಿರುವ ಕರ್ನಾಟಕ ಅಂಚೆ ಇಲಾಖೆ ಭಾನುವಾರದಂದು ರಾಜ್ಯದಾದ್ಯಂತ ಆಯ್ದ ಕೆಲವು ಅಂಚೆ ಕಚೇರಿಗಳನ್ನು ತೆರೆಯಲು ಚಿಂತನೆ ನಡೆಸುತ್ತಿದೆ. ವಾರದ ನಿಯಮಿತ ಕೆಲಸದ ದಿನದಂದು ಅವುಗಳನ್ನು ಮುಚ್ಚಲಾಗುತ್ತದೆ, ಇದರಿಂದಾಗಿ ಸಾರ್ವಜನಿಕರಿಗೆ ವಾರದ ಎಲ್ಲಾ ದಿನಗಳಲ್ಲೂ ಕನಿಷ್ಠ ತಮ್ಮ ನಗರಗಳಲ್ಲಿ ಕೆಲವು ಸ್ಥಳಗಳಲ್ಲಿ ಅಂಚೆ ಸೇವೆಗಳು ಲಭ್ಯವಿರುತ್ತವೆ. ಭಾನುವಾರ ಕಾರ್ಯನಿರ್ವಹಿಸುವ ಅಂಚೆ ಕಚೇರಿಗಳಲ್ಲಿ ಹಣಕಾಸಿನ ಸೇವೆಗಳ ಅಗತ್ಯತೆಯನ್ನು ಸಾರ್ವಜನಿಕರು ಬಯಸುತ್ತಿದ್ದಾರೆ. ಆದ್ದರಿಂದ ನಾವು ಈಗ

ಇನ್ಮುಂದೆ ಭಾನುವಾರವೂ ಅಂಚೆ ಕಚೇರಿಗಳು ಓಪನ್ Read More »