ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿಯಿಂದ ಭರ್ಜರಿ ಕೊಡುಗೆ| ಬಿಜೆಪಿಯ ಪ್ರಣಾಳಿಕೆಯಲ್ಲಿ ಏನಿದೆ ಇಲ್ಲಿದೆ ನೋಡಿ…!
ಸಮಗ್ರ ನ್ಯೂಸ್: ಲೋಕ ಸಭಾ ಚುನಾವಣೆ ಹಿನ್ನೆಲೆ ಇಂದು ಬಿಜೆಪಿಯು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅದರಲ್ಲೂ, ರೈತರು, ಬಡವರು, ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, ಒಂದು ದೇಶ, ಒಂದು ಚುನಾವಣೆ ಜಾರಿ ಸೇರಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ದೇಶದಲ್ಲಿ ಈಗಾಗಲೇ ಒಂದು ದೇಶ, ಒಂದು ಚುನಾವಣೆ ನಡೆಸುವ ಕುರಿತು ಪರ ಹಾಗೂ ವಿರೋಧಗಳ ಚರ್ಚೆ ನಡೆಯುತ್ತಿದೆ. […]










