ರಾಷ್ಟ್ರೀಯ

ರಿಲಯನ್ಸ್ ಜೊತೆಗೆ ವಾಲ್ಟ್ ಡಿಸ್ನಿ ವಿಲೀನ

ಸಮಗ್ರ ನ್ಯೂಸ್: ಭಾರತದಲ್ಲಿ ವಾಲ್ಟ್ ಡಿಸ್ನಿ ಸಂಸ್ಥೆಯು ರಿಲಯನ್ಸ್ ಜೊತೆಗೆ ಮಾಧ್ಯಮ ಕ್ಷೇತ್ರದಲ್ಲಿ ವಿಲೀನವಾಗುವುದಾಗಿ ಪ್ರಕಟಿಸಿದೆ. ಈ ಮೂಲಕ ಹೊಸ ಸಂಸ್ಥೆಯ ಒಟ್ಟಾರೆ ಮೌಲ್ಯ 70 ಸಾವಿರ ಕೋಟಿ ರು.ಗೂ ಅಧಿಕವಾಗಲಿದೆ. ಹೊಸ ಸಂಸ್ಥೆಯಲ್ಲಿ ಶೇ.63.16ರಷ್ಟು ಷೇರನ್ನು ರಿಲಯನ್ಸ್ ಮತ್ತು ಅದರ ಅಂಗ ಸಂಸ್ಥೆಗಳು ಹೊಂದಿದ್ದರೆ, ಡಿಸ್ನಿ ಸಂಸ್ಥೆಯು ಶೇ.36.84ರಷ್ಟು ಷೇರುಗಳನ್ನು ಹೊಂದಿರಲಿದೆ. ಹೊಸ ಸಂಸ್ಥೆಯ ಅಧ್ಯಕ್ಷರಾಗಿ ನೀತಾ ಅಂಬಾನಿ ಅವರು ಕಾರ್ಯನಿರ್ವಹಿಸಲಿದ್ದು, ಉಪಾಧ್ಯಕ್ಷರಾಗಿ ಉದಯ್ ಶಂಕರ್ ಅವರು ಕಾರ್ಯನಿರ್ವಹಿಸಲಿದ್ದಾರೆ. ರಿಲಯನ್ಸ್ ಒಟಿಟಿ ಕ್ಷೇತ್ರದಲ್ಲಿ 11.5 ಸಾವಿರ […]

ರಿಲಯನ್ಸ್ ಜೊತೆಗೆ ವಾಲ್ಟ್ ಡಿಸ್ನಿ ವಿಲೀನ Read More »

ಜಾರ್ಖಂಡ್‌ನಲ್ಲಿ ಭೀಕರ ರೈಲು ದುರಂತ| 12 ಮಂದಿ ಸಾವು

ಸಮಗ್ರ ನ್ಯೂಸ್: ಜಾರ್ಖಂಡ್‌ನ ಜಮ್ತಾರ ಜಿಲ್ಲೆಯಲ್ಲಿ ನಿನ್ನೆ ಸಂಜೆ ಭೀಕರ ರೈಲು ದುರಂತ ಸಂಭವಿಸಿದೆ. ಈ ದುರಂತದಲ್ಲಿ ಸ್ಥಳದಲ್ಲೇ 12 ಮಂದಿ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ರೈಲ್ವೆ ಪೊಲೀಸರು ಹಾಗೂ ಸಿಬ್ಬಂದಿಯೂ ಕೂಡಲೇ ಜನರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯನಡೆದಿದೆ ಎಂದು ತಿಳಿದುಬಂದಿದೆ. ಭಾಗಲ್ಪುರಕ್ಕೆ ತೆರಳುತ್ತಿದ್ದ ಆಂಗ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂಬ ಮಾಹಿತಿ ಹರಡಿದೆ. ಇದರಿಂದಾಗಿ ರೈಲಿನಲ್ಲಿದ್ದ ಪ್ರಯಾಣಿಕರು ಗಲಿಬಿಲಿಗೊಂಡಿದ್ದಾರೆ. ಅಷ್ಟೇ ಅಲ್ಲ, ಆತಂಕದಲ್ಲಿ ನಿಧಾನವಾಗಿ ಚಲಿಸುತ್ತಿದ್ದ

ಜಾರ್ಖಂಡ್‌ನಲ್ಲಿ ಭೀಕರ ರೈಲು ದುರಂತ| 12 ಮಂದಿ ಸಾವು Read More »

ಪ್ಯಾಸೆಂಜರ್ ರೈಲುಗಳ ದರ ಇಳಿಕೆ

ಸಮಗ್ರ ನ್ಯೂಸ್: ಕೋವಿಡ್ ವೇಳೆ ಏರಿಕೆ ಮಾಡಲಾಗಿದ್ದ ಪ್ಯಾಸೆಂಜರ್ ರೈಲುಗಳ ಕನಿಷ್ಠ ದರವನ್ನು ಭಾರತೀಯ ರೈಲ್ವೆ ಮಂಗಳವಾರದಿಂದ ಇಳಿಕೆ ಮಾಡಿದ್ದು, ಸಾಮಾನ್ಯ ರೈಲಿನ ಸೆಕೆಂಡ್ ಕ್ಲಾಸ್ ಕನಿಷ್ಠ ಟಿಕೆಟ್ ದರದಲ್ಲಿ ಶೇ.50ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ. ಹಲವು ಪ್ಯಾಸೆಂಜರ್ ರೈಲುಗಳ ಹೆಸರನ್ನು ಲಾಕ್‍ಡೌನ್ ತೆರವಾದ ನಂತರ ಎಕ್ಸ್‍ಪ್ರೆಸ್ ಸ್ಪೆಷಲ್ ಅಥವಾ ಮೆಮು/ಡೆಮು ಎಕ್ಸ್‍ಪ್ರೆಸ್ ಎಂದು ಬದಲಾವಣೆ ಮಾಡಿ, ಕನಿಷ್ಠ ಟಿಕೆಟ್ ದರವನ್ನು 10 ರು.ನಿಂದ 30 ರು.ವರೆಗೆ ಏರಿಕೆ ಮಾಡಲಾಗಿತ್ತು. ಆದರೆ ರೈಲ್ವೆಯ ಈ

ಪ್ಯಾಸೆಂಜರ್ ರೈಲುಗಳ ದರ ಇಳಿಕೆ Read More »

ಮಾರ್ಚ್‍ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರವು ಮಾರ್ಚ್‍ನಲ್ಲಿ, ಲೋಕಸಭೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮೊದಲು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇನ್ನೊಬ್ಬ ಕೇಂದ್ರ ಸಚಿವ ಶಂತನು ಠಾಕೂರ್ ಅವರು ಈ ತಿಂಗಳ ಆರಂಭದಲ್ಲಿ, 2019ರಲ್ಲೇ ಸಂಸತ್ತು ಅಂಗೀಕರಿಸಿದ್ದ ಸಿಎಎ ಕಾಯ್ದೆಯನ್ನು ಚುನಾವಣೆಗೂ ಮುನ್ನ ಜಾರಿಗೆ ತರಲಾಗುವುದು ಎಂದಿದ್ದರು. ಇದರ ಪ್ರಕಾರ 2014ರ ಡಿ.31ರಂದು ಅಥವಾ

ಮಾರ್ಚ್‍ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ Read More »

ಜಮಾತ್-ಎ-ಇಸ್ಲಾಮಿ ಮೇಲೆ ಮುಂದಿನ 5 ವರ್ಷಗಳವರೆಗೆ ನಿಷೇಧ/ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 5 ವರ್ಷಗಳವರೆಗೆ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ಕುರಿತು ಅಮಿತ್ ಶಾ ಟ್ವಿಟ್ ಮಾಡಿದ್ದು, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿಯವರ ನೀತಿಯನ್ನು ಅನುಸರಿಸಿ ಸರ್ಕಾರವು ಜಮ್ಮು ಕಾಶ್ಮೀರದ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನ ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರದ ಭದ್ರತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧ ಸಂಘಟನೆಯು ತನ್ನ ಚಟುವಟಿಕೆಗಳನ್ನು ಮುಂದುವರಿಸುತ್ತಿರುವುದು ಕಂಡುಬಂದಿದೆ.

ಜಮಾತ್-ಎ-ಇಸ್ಲಾಮಿ ಮೇಲೆ ಮುಂದಿನ 5 ವರ್ಷಗಳವರೆಗೆ ನಿಷೇಧ/ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ Read More »

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ದೀರ್ಘಕಾಲದ ಗಾಯದಿಂದಾಗಿ ಶಮಿ ಲಂಡನ್‍ನಲ್ಲಿ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024 ಸೇರಿದಂತೆ ಹಲವಾರು ಟೂರ್ನಿಗಳಿಂದ ಹೊರಗುಳಿಯಲಿದ್ದಾರೆ. ‘ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ’ ಎಂದು ಪೋಟೋಗಳ ಸಮೇತ

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ Read More »

ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.ಸುಪ್ರೀಂ ಕೋರ್ಟ್‍ನಲ್ಲಿ, ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‍ಜಿಒಗಳ ಕೈವಾಡ ಇದೆ ಎಂದು ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಅಣ್ಣಾಮಲೈ ವಿರುದ್ಧ ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅವರು ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ

ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ Read More »

ಸುಳ್ಳು ಜಾಹೀರಾತು/ ಪತಂಜಲಿ ಕಂಪನಿಗೆ ಶಾಕ್ ನೀಡಿದ ಸುಪ್ರೀಂ

ಸಮಗ್ರ ನ್ಯೂಸ್: ಬಾಬಾ ರಾಮ್‍ದೇವ್ ಮಾಲೀಕತ್ವದ ಪತಂಜಲಿ ಆರ್ಯುವೇದ ಕಂಪನಿಯ ಸುಳ್ಳು ಜಾಹೀರಾತಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದು, ಪತಂಜಲಿ ಕಂಪನಿಯ ಜಾಹೀರಾತುಗಳಿಂದ ಇಡೀ ದೇಶವನ್ನೇ ಅವರು ದಾರಿ ತಪ್ಪಿಸುತ್ತಿದ್ದಾರೆ . ಇದು ನಿಜಕ್ಕೂ ದುರಾದೃಷ್ಟದ ಸಂಗತಿ. ಕೇಂದ್ರ ಸರ್ಕಾರ ಈ ಕುರಿತಾಗಿ ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ಇದರ ಜೊತೆಗೆ, ಸುಳ್ಳು ಮಾಹಿತಿ ನೀಡುವ ಔಷಧಗಳ, ಎಲೆಕ್ಟ್ರಾನಿಕ್

ಸುಳ್ಳು ಜಾಹೀರಾತು/ ಪತಂಜಲಿ ಕಂಪನಿಗೆ ಶಾಕ್ ನೀಡಿದ ಸುಪ್ರೀಂ Read More »

ಮಿಸ್ ವರ್ಲ್ಡ್ 2024|ಭಾರತವನ್ನು ಪ್ರತಿನಿಧಿಸಲಿರುವ ಕರಾವಳಿ ಮೂಲದ ಸಿನಿ ಶೆಟ್ಟಿ

ಸಮಗ್ರ ನ್ಯೂಸ್: 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ.ಸಿನಿ ಶೆಟ್ಟಿ ಅಕೌಂಟಿಂಗ್ ಮತ್ತು ಫೈನಾನ್ಸ್‌ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿಶ್ವ ಸುಂದರಿ ಚಾಂಪಿಯನ್‌ ಶಿಪ್ ಮಾರ್ಚ್ 9 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌

ಮಿಸ್ ವರ್ಲ್ಡ್ 2024|ಭಾರತವನ್ನು ಪ್ರತಿನಿಧಿಸಲಿರುವ ಕರಾವಳಿ ಮೂಲದ ಸಿನಿ ಶೆಟ್ಟಿ Read More »

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು

ಸಮಗ್ರ ನ್ಯೂಸ್:ಬಿಹಾರ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ಬಿಹಾರದ ಕೈಮೂರ್ ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್, ಚಾಲಕನ ನಿಯಂತ್ರಣ ತಪ್ಪಿ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್ ಮತ್ತು ಬೈಕ್ ಎರಡೂ ಪಕ್ಕದ ರಸ್ತೆಗೆ ದೂಡಲ್ಪಟ್ಟಿವೆ. ನಂತರ, ವೇಗವಾಗಿ ಬಂದ ಟ್ರಕ್ ಅವುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ,

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು Read More »