ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ/ ಬಿಜೆಪಿ ಚುನಾವಣಾ ಉಸ್ತುವಾರಿಗಳಾಗಿ ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ನೇಮಕ
ಸಮಗ್ರ ನ್ಯೂಸ್: ಸೆಪ್ಟೆಂಬರ್ 18 ರಿಂದ 3 ಹಂತಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗೆ, ರಾಮ್ ಮಾಧವ್ ಹಾಗೂ ಜಿ. ಕಿಶನ್ ರೆಡ್ಡಿ ಅವರನ್ನು ಚುನಾವಣಾ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿದೆ. ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಬಹುತೇಕ ಅದೇ ದಿನ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ.