ದೂದ್ ಸಾಗರ ಸೋನಾಲಿಂ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು: ಬೆಳಗಾವಿ ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ
ಸಮಗ್ರ ನ್ಯೂಸ್: ದೂದ್ ಸಾಗರ ಹಾಗೂ ಸೋನಾಲಿಂ ಮಾರ್ಗ ಮಧ್ಯೆ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಬೆಳಗಾವಿ ಹುಬ್ಬಳ್ಳಿ ಮಾರ್ಗದಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ. ಗೋವಾದ ವಾಸ್ಕೋದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದರಿಂದ 11 ಬೋಗಿಗಳು ನೆಲಕ್ಕುರುಳಿ ಕಲ್ಲಿದ್ದಲು ವ್ಯರ್ಥವಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸದ್ಯ ಬೆಳಗಾವಿ, ಹುಬ್ಬಳ್ಳಿ ಮಾರ್ಗದ ರೈಲು ಸಂಚಾರ ಸಮಯ ಬದಲಾಗಿದೆ. ಗೋವಾ ಮೂಲಕ ಸಂಚರಿಸುವ ಎರಡು ಟ್ರೈನ್ ಗಳ ಸಂಚಾರ ಬಂದ್ ಆಗಿದೆ. […]