ದೇಶ-ವಿದೇಶ

ಸ್ನೇಹಮಯಿ ಕೃಷ್ಣ ವಿರುದ್ಧ ಸೌಜನ್ಯ ಪರ ಹೋರಾಟಗಾರ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ಕೊಲೆಯಾದ ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪ ಮಾಡಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ಎಂಬವರು ದೂರು ನೀಡಿದ್ದಾರೆ. ವೆಂಕಪ್ಪ ಕೋಟ್ಯಾನ್ ನೀಡಿದ ದೂರಿನಲ್ಲಿ ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಇದು ಸೌಜನ್ಯ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು […]

ಸ್ನೇಹಮಯಿ ಕೃಷ್ಣ ವಿರುದ್ಧ ಸೌಜನ್ಯ ಪರ ಹೋರಾಟಗಾರ ದೂರು Read More »

ರಷ್ಯಾದಲ್ಲಿ ಭಾರೀ ಭೂಕಂಪ| ತ್ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ರಷ್ಯಾದ ಪೂರ್ವ ಕರಾವಳಿಯ ಕಮ್ಚಟ್ಕಾ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ಭೂಕಂಪನ ಸಂಭವಿಸಿದೆ. ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ಮತ್ತು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರಗಳ ಪ್ರಕಾರ, ರಿಕ್ಟರ್ ಮಾಪಕದಲ್ಲಿ 7.4 ತೀವ್ರತೆಯ ಭೂಕಂಪ ದಾಖಲಾಗಿದ್ದು, ಕೇಂದ್ರಬಿಂದು 10 ಕಿಲೋಮೀಟರ್ ಆಳದಲ್ಲಿ ಪತ್ತೆಯಾಗಿದೆ. ಈ ಭೂಕಂಪದ ತೀವ್ರತೆಯಿಂದಾಗಿ ರಷ್ಯಾದ ಕರಾವಳಿ ಪ್ರದೇಶದಲ್ಲಿ ಜನತೆ ಆತಂಕಕ್ಕೊಳಗಾಗಿದ್ದು, ಸುನಾಮಿ ಸಂಭವಿಸುವ ಭೀತಿ ವ್ಯಕ್ತವಾಗಿದೆ. ಕಳೆದ ತಿಂಗಳಲ್ಲೇ ಇದೇ ಪ್ರದೇಶದಲ್ಲಿ 8.8 ತೀವ್ರತೆಯ ಭೂಕಂಪ ಸಂಭವಿಸಿ, ಸುನಾಮಿ ಅಲೆಗಳು ಕರಾವಳಿಯನ್ನು ಅಪ್ಪಳಿಸಿದ್ದವು.

ರಷ್ಯಾದಲ್ಲಿ ಭಾರೀ ಭೂಕಂಪ| ತ್ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ

ಸಮಗ್ರ ನ್ಯೂಸ್: ನೇಪಾಳ ಅಧ್ಯಕ್ಷರ ಕಚೇರಿಯು ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ದೇಶದ ಮಧ್ಯಂತರ ಪ್ರಧಾನಿಯನ್ನಾಗಿ ಶುಕ್ರವಾರ ರಾತ್ರಿ ಘೋಷಿಸುವ ಮೂಲಕ ಹಲವು ದಿನಗಳ ಊಹಾಪೋಹಗಳಿಗೆ ಅಂತ್ಯ ಹಾಡಿದೆ. ಜೆನ್-ಝಡ್ ಪ್ರತಿಭನಾಕಾರರು, ಅಧ್ಯಕ್ಷ ರಾಮಚಂದ್ರ ಪೌದಲ್ ಮತ್ತು ಸೇನಾ ಮುಖ್ಯಸ್ಥ ಅಶೋಕ ರಾಜ್ ಸಿಗ್ದೇಲ್ ಅವರ ನಡುವೆ ಸಹಮತ ಮೂಡಿದ ಬಳಿಕ ಕರ್ಕಿಯವರನ್ನು ಪ್ರಧಾನಿಯಾಗಿ ನೇಮಕಗೊಳಿಸುವ ನಿರ್ಧಾರ ಹೊರಬಿದ್ದಿದೆ. ಕರ್ಕಿ ನೇಪಾಳದ ಮೊದಲ ಪ್ರಧಾನಿಯಾಗಿ ಆಯ್ಕೆಯಾಗುವ ಮೂಲಕ ಇತಿಹಾಸವನ್ನು ನಿರ್ಮಿಸಿದ್ದು, ಉಸ್ತುವಾರಿ ಸರಕಾರದಲ್ಲಿ ಸಣ್ಣ

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಆಯ್ಕೆ Read More »

ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ. ಹಿಂದೂಗಳ ಮೇಲೆ ಎಫ್‌ಐಆರ್‌ ಹಾಕಿಲ್ಲ ಯಾರನ್ನೂ ಬಂಧನ ಮಾಡಿಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿತರಲ್ಲಿ ಇಬ್ಬರು ಚನ್ನಪಟ್ಟಣದವರು, ಉಳಿದವರೆಲ್ಲ ಮದ್ದೂರು ಪಟ್ಟಣದವರು. ಪ್ರಕರಣದಲ್ಲಿ ಸ್ವಲ್ಪ ಮಟ್ಟಿಗೆ ಕಾನೂನು ಸುವ್ಯವಸ್ಥೆಯಲ್ಲಿ ವೈಫಲ್ಯವಾಗಿರುವ ಅನುಮಾನವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿಯುವವರೆಗೂ ಏನೂ ಹೇಳುವುದಿಲ್ಲ. ಈ ಪ್ರಕರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು

ಮದ್ದೂರು ಗಲಾಟೆಗೆ ಮುಸ್ಲಿಮರೇ ಕಾರಣ – ಸಚಿವ ಚೆಲುವರಾಯ ಸ್ವಾಮಿ Read More »

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಸಮಗ್ರ ನ್ಯೂಸ್: ಮಂಗಳವಾರ (ಸೆ.9) ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ ಪಿ ರಾಧಾಕೃಷ್ಣನ್ ಅವರು ಗೆಲುವು ಸಾಧಿಸಿದ್ದು, ವಿರೋಧ ಪಕ್ಷದ ಬಿ ಸುದರ್ಶನ್ ರೆಡ್ಡಿ ಅವರನ್ನು ಸೋಲಿಸಿದ್ದಾರೆ. ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದ ಅನಿವಾರ್ಯವಾದ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ ಅವರಿಗೆ ಮತ ಚಲಾಯಿಸಿದ್ದಾರೆ. ಈ ಮೂಲಕ ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣ ಅವರು ಆಯ್ಕೆಯಾಗಿದ್ದಾರೆ. ಬಿಜು ಜನತಾದಳ (ಬಿಜೆಡಿ), ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್), ಶಿರೋಮಣಿ ಅಕಾಲಿ ದಳ (ಎಸ್‌ಎಡಿ)

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ Read More »

ಶೇ.5 ಮತ್ತು ಶೇ.15ರ ತೆರಿಗೆ ಸ್ಲ್ಯಾಬ್ ಗೆ ಜಿಎಸ್ಟಿ ಮಂಡಳಿ ಅನುಮೋದನೆ| ಸೆ.22ರಿಂದ ನೂತನ ತೆರಿಗೆ ಜಾರಿಗೆ

ಸಮಗ್ರ ನ್ಯೂಸ್: ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿರುವ 5% ಮತ್ತು 18% ರ ಎರಡು ತೆರಿಗೆ ಸ್ಲ್ಯಾಬ್ ದರಗಳಿಗೆ GST ಮಂಡಳಿ ಅನುಮೋದನೆ ನೀಡಿದೆ. GST ದರಗಳ ತರ್ಕಬದ್ಧಗೊಳಿಸುವಿಕೆಯನ್ನು GST ಮಂಡಳಿ ಅನುಮೋದಿಸಿದೆ. ಶೇಕಡ 12 ಮತ್ತು ಶೇಕಡಾ 28 ದರಗಳನ್ನು ರದ್ದುಗೊಳಿಸಲು ಮಂಡಳಿ ಅನುಮೋದನೆ ನೀಡಿದೆ. ಷಾರಾಮಿ ಸರಕುಗಳಿಗೆ ಶೇಕಡಾ 40 ರ ಹೊಸ ಸ್ಲ್ಯಾಬ್ ಅನ್ನು ಕೌನ್ಸಿಲ್ ಅನುಮೋದಿಸಿದೆ. GST ಮಂಡಳಿಯ ನಿರ್ಧಾರವು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ: ದೆಹಲಿಯಲ್ಲಿ 56

ಶೇ.5 ಮತ್ತು ಶೇ.15ರ ತೆರಿಗೆ ಸ್ಲ್ಯಾಬ್ ಗೆ ಜಿಎಸ್ಟಿ ಮಂಡಳಿ ಅನುಮೋದನೆ| ಸೆ.22ರಿಂದ ನೂತನ ತೆರಿಗೆ ಜಾರಿಗೆ Read More »

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ|

ಸಮಗ್ರ ನ್ಯೂಸ್: ಅಮೆರಿಕದ ಟ್ಯಾರಿಫ್​ಗಳಿಂದ ಅತಿಹೆಚ್ಚು ಬಾಧಿತವಾಗುವ ಸೆಕ್ಟರ್​ಗಳಲ್ಲಿ ಜವಳಿ ಉದ್ಯಮವೂ ಒಂದು. ಭಾರತದ ಜವಳಿ ಉದ್ಯಮಕ್ಕೆ ಅತಿದೊಡ್ಡ ಮಾರುಕಟ್ಟೆ ಅಮೆರಿಕವೇ ಆಗಿದೆ. ಶೇ. 60ಕ್ಕಿಂತಲೂ ಹೆಚ್ಚು ಟ್ಯಾರಿಫ್ಹೆಚ್ಚಳ ಆಗುತ್ತಿರುವುದರಿಂದ ಬಾಂಗ್ಲಾದೇಶ, ವಿಯೆಟ್ನಾಂ ಇತ್ಯಾದಿ ದೇಶಗಳ ಸರಕುಗಳೊಂದಿಗೆ ಭಾರತದ ಉದ್ಯಮಗಳು ಪೈಪೋಟಿ ನೀಡಲು ಆಗುವುದಿಲ್ಲ. ಹೀಗಾಗಿ ಹಲವು ಬಿಲಿಯನ್ ಡಾಲರ್ ಮೊತ್ತದ ವ್ಯಾಪಾರ ಕಳೆದುಕೊಳ್ಳುವ ಭೀತಿಯಲ್ಲಿ ಭಾರತದ ಜವಳಿ ಉದ್ಯಮ ಇದೆ. ಇದನ್ನು ತಪ್ಪಿಸಲು ಭಾರತ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಮೆರಿಕಕ್ಕೆ ಪರ್ಯಾಯವಾದ ಮಾರುಕಟ್ಟೆಯನ್ನು ಸೃಷ್ಟಿಸಿಕೊಳ್ಳಲು

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ| Read More »

ದ.ಕ‌‌ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ| ಆ.18ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆ.18ರಂದು ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ‌‌ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ| ಆ.18ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ Read More »

ಗ್ರಾಹಕರಿಗೆ ಶಾಕ್ ನೀಡಿದ‌ ಐಸಿಐಸಿಐ ಬ್ಯಾಂಕ್| ಕನಿಷ್ಠ ಬ್ಯಾಲೆನ್ಸ್ 50 ಸಾವಿರಕ್ಕೆ ಏರಿಕೆ

ಸಮಗ್ರ ನ್ಯೂಸ್: ಭಾರತದ ಎರಡನೇ ಅತಿದೊಡ್ಡ ಬ್ಯಾಂಕ್ ಐಸಿಐಸಿಐ ಬ್ಯಾಂಕ್ ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಎಲ್ಲಾ ಗ್ರಾಹಕ ವಿಭಾಗಗಳಿಗೆ ಮಾಸಿಕ ಕನಿಷ್ಠ ಸರಾಸರಿ ಬ್ಯಾಲೆನ್ಸ್ ಹೆಚ್ಚಿಸಿದೆ. ಆಗಸ್ಟ್ 1 ರಂದು ಅಥವಾ ನಂತರ ತಮ್ಮ ಉಳಿತಾಯ ಖಾತೆಗಳನ್ನು ತೆರೆದ ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿನ ಗ್ರಾಹಕರು ದಂಡವನ್ನು ತಪ್ಪಿಸಲು 50,000 ರೂ. ಮಾಸಿಕ ಸರಾಸರಿ ಬ್ಯಾಲೆನ್ಸ್ ಅನ್ನು ಕಾಯ್ದುಕೊಳ್ಳಬೇಕು ಎಂದು ಬ್ಯಾಂಕಿನ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಅಧಿಸೂಚನೆ ತಿಳಿಸಿದೆ. ಹಳೆಯ ಗ್ರಾಹಕರಿಗೆ ಕನಿಷ್ಠ ಸರಾಸರಿ ಬ್ಯಾಲೆನ್ಸ್

ಗ್ರಾಹಕರಿಗೆ ಶಾಕ್ ನೀಡಿದ‌ ಐಸಿಐಸಿಐ ಬ್ಯಾಂಕ್| ಕನಿಷ್ಠ ಬ್ಯಾಲೆನ್ಸ್ 50 ಸಾವಿರಕ್ಕೆ ಏರಿಕೆ Read More »

ಧರ್ಮಸ್ಥಳ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂಕೋರ್ಟ್ ನಿರಾಕರಣೆ – ವಿಚಾರಣಾಧೀನ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸೂಚನೆ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೆಕೆಂದು ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಯಾವುದೇ ರೀತಿಯ ನಿರ್ಬಂಧ ವಿಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಅಲ್ಲದೆ ಹೊಸದಾಗಿ ಧರ್ಮಸ್ಥಳದ ಅರ್ಜಿಯನ್ನು ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ. ಧರ್ಮಸ್ಥಳ ದೇವಾಲಯದ ಧರ್ಮಾಧಿಕಾರಿಯ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರು ಧರ್ಮಸ್ಥಳ ಸಮಾಧಿ ಪ್ರಕರಣಗಳಿಗೆ

ಧರ್ಮಸ್ಥಳ ಪ್ರಕರಣದ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಸುಪ್ರೀಂಕೋರ್ಟ್ ನಿರಾಕರಣೆ – ವಿಚಾರಣಾಧೀನ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಲು ಸೂಚನೆ Read More »