ದೇಶ-ವಿದೇಶ

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ

ಸಮಗ್ರ ನ್ಯೂಸ್: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜೆಎಂಎಂ ಸಂಸ್ಥಾಪಕ ಶಿಬು ಸೊರೆನ್ ದೀರ್ಘಕಾಲದ ಅನಾರೋಗ್ಯದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು ಅಂತ ತಿಳಿದು ಬಂದಿದೆ. ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೆನ್ ಅವರು ತಮ್ಮ 81 ನೇ ವಯಸ್ಸಿನಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಯಲ್ಲಿ ದೀರ್ಘಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಮಗ ಮತ್ತು ಪ್ರಸ್ತುತ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪ್ರಸ್ತುತ ದೆಹಲಿಯಲ್ಲಿದ್ದಾರೆ.

ಜಾರ್ಖಂಡ್ ನ ಮಾಜಿ ಸಿಎಂ ಶಿಬು ಸೊರೇನ್ ನಿಧನ Read More »

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »

ಭಾರತಕ್ಕೆ ಬಿಗ್ ಶಾಕ್ ನೀಡಿದ ಅಮೇರಿಕಾ| 6 ಪೆಟ್ರೋಲಿಯಂ ಕಂಪನಿಗಳಿಗೆ ನಿರ್ಬಂಧ ಹೇರಿಕೆ

ಸಮಗ್ರ ನ್ಯೂಸ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ದೊಡ್ಡ ಹೊಡೆತವನ್ನು ನೀಡಿದ್ದಾರೆ. ಭಾರತದ 6 ಪೆಟ್ರೋಲಿಯಂ ಕಂಪನಿಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದೆ. ನಿಷೇಧಕ್ಕೊಳಗಾಗಿರುವ ಭಾರತದ 6 ಕಂಪನಿಗಳು ಇರಾನ್ ಜೊತೆ ವ್ಯವಹಾರ ನಡೆಸುತ್ತಿದ್ದವು ಎಂದು ಅಮೆರಿಕದ ವಿದೇಶಾಂಗ ಸಚಿವಾಲಯ ಹೇಳುತ್ತಿದೆ. NDTV ವರದಿಯ ಪ್ರಕಾರ, ಇರಾನ್ ದೇಶ ತನ್ನ ಆದಾಯ ಬಹುದೊಡ್ಡ ಭಾಗವನ್ನು ಪ್ರಾದೇಶಿಕ ಸಂಘರ್ಷ ಉತ್ತೇಜಿಸಲು ಖರ್ಚು ಮಾಡುತ್ತಿದೆ. ಇರಾನ್ ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಅಮೆರಿಕ ಆರೋಪಿಸಿದೆ. ಮಧ್ಯಪ್ರಾಚ್ಯದಲ್ಲಿ ಸಂಘರ್ಷವನ್ನು ಉತ್ತೇಜಿಸುವ ಕೆಲಸವನ್ನು ಇರಾನ್

ಭಾರತಕ್ಕೆ ಬಿಗ್ ಶಾಕ್ ನೀಡಿದ ಅಮೇರಿಕಾ| 6 ಪೆಟ್ರೋಲಿಯಂ ಕಂಪನಿಗಳಿಗೆ ನಿರ್ಬಂಧ ಹೇರಿಕೆ Read More »

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಿದ್ದಾರೆ. ಜೊತೆಗೆ ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಗುಪ್ತಚರ ವೈಫಲ್ಯವನ್ನು ಪ್ರಶ್ನಿಸಿದ್ದಾರೆ. ಇಂತಹ ಭೀಕರ ಭಯೋತ್ಪಾದಕ ದಾಳಿ ನಡೆಯಲಿದೆ ಮತ್ತು ಪಾಕಿಸ್ತಾನದಲ್ಲಿ ಅದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಯಾವುದೇ ಸರ್ಕಾರಿ ಸಂಸ್ಥೆಗೆ ತಿಳಿದಿರಲಿಲ್ಲವೇ?”

‘ಉಗ್ರರಿಂದ ನಾನು ಅಪ್ಪನನ್ನು ಕಳೆದುಕೊಂಡೆ’| ಇಡೀ ಗಾಂಧಿ ಕುಟುಂಬವನ್ನೇ ದೂಷಿಸುವ ನೀವು 11ವರ್ಷಗಳಿಂದ ಏನು ಮಾಡಿದ್ದೀರಿ?| ಲೋಕಸಭೆಯಲ್ಲಿ ಪ್ರಿಯಾಂಕಾ ವಾಗ್ದಾಳಿ Read More »

ನಿಮಿಷ ಪ್ರಿಯಾ ಗಲ್ಲು ರದ್ದಾಗಿಲ್ಲ – ವರದಿ

ಸಮಗ್ರ ನ್ಯೂಸ್: ಯೆಮೆನ್‌ ದೇಶದಲ್ಲಿ ಶಿಕ್ಷೆಗೆ ಒಳಗಾಗಿರುವ ಕೇರಳದ ನರ್ಸ್‌ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್‌ ಅಧಿಕಾರಿಗಳು ಸಂಪೂರ್ಣವಾಗಿ ರದ್ದು ಮಾಡಿದ್ದಾರೆ ಎಂದು ವರದಿಯಾಗಿತ್ತು. ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬುಬಕರ್ ಮುಸ್ಲಿಯಾರ್ ಅವರ ಕಚೇರಿ ಸೋಮವಾರ (ಜು.28) ಈ ಬಗ್ಗೆ ಮಾಹಿತಿ ನೀಡಿತ್ತು. ಆದರೆ ಇದೀಗ ವಿದೇಶಾಂಗ ಸಚಿವಾಲಯವು ಈ ಸುದ್ದಿಯನ್ನು ತಿರಸ್ಕರಿಸಿದೆ. “ನಿಮಿಷಾ ಪ್ರಿಯಾ ಪ್ರಕರಣದ ಕುರಿತು ಕೆಲವು ವ್ಯಕ್ತಿಗಳು ಹಂಚಿಕೊಂಡಿರುವ ಮಾಹಿತಿಯು ತಪ್ಪಾಗಿದೆ” ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ

ನಿಮಿಷ ಪ್ರಿಯಾ ಗಲ್ಲು ರದ್ದಾಗಿಲ್ಲ – ವರದಿ Read More »

ನರ್ಸ್ ನಿಮಿಷ ಪ್ರಿಯಾ ಗಲ್ಲು ರದ್ದುಗೊಳಿಸಿದ‌ ಯೆಮನ್| ಅಧಿಕೃತ ಸುದ್ದಿ‌ ಹಂಚಿಕೊಂಡ ಕಾಂತಪುರಂ ಮುಸ್ಲಿಯಾರ್

ಸಮಗ್ರ ನ್ಯೂಸ್: ಯೆಮೆನ್ ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಅಧಿಕೃತವಾಗಿ ರದ್ದುಪಡಿಸಲಾಗಿದೆ. ಈ ಶುಭ ಸುದ್ದಿಯನ್ನು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಹಂಚಿಕೊಂಡಿದೆ. “ಈ ಹಿಂದೆ ಅಮಾನತುಗೊಂಡಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ಸಂಪೂರ್ಣವಾಗಿ ರದ್ದುಪಡಿಸಲಾಗಿದೆ” ಎಂದು ಗ್ರ್ಯಾಂಡ್ ಮುಫ್ತಿ ಕಚೇರಿಯ ಹೇಳಿಕೆ ತಿಳಿಸಿದೆ. ಗ್ರ್ಯಾಂಡ್ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲೈಯರ್ ಮಧ್ಯಪ್ರವೇಶಿಸಿ ಮರುಪರಿಶೀಲಿಸುವಂತೆ ಯೆಮೆನ್ ಅಧಿಕಾರಿಗಳನ್ನು ವಿನಂತಿಸಿದ

ನರ್ಸ್ ನಿಮಿಷ ಪ್ರಿಯಾ ಗಲ್ಲು ರದ್ದುಗೊಳಿಸಿದ‌ ಯೆಮನ್| ಅಧಿಕೃತ ಸುದ್ದಿ‌ ಹಂಚಿಕೊಂಡ ಕಾಂತಪುರಂ ಮುಸ್ಲಿಯಾರ್ Read More »

ಇಂದು ಕಾರ್ಗಿಲ್ ವಿಜಯ ದಿವಸ್| ತ್ಯಾಗ ಬಲಿದಾನದ ಒಂದು ಮೆಲುಕು

ಸಮಗ್ರ ಸ್ಪೆಷಲ್: ದೇಶದ ಗಡಿ ಭಾಗದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ನಮ್ಮಗಾಗಿ ಬಿಸಿಲು, ಚಳಿ ಹಾಗೂ ಮಳೆ ಎನ್ನದೇ ಸೈನಿಕರು ಹಗಲು-ರಾತ್ರಿ ಶ್ರಮಿಸುತ್ತಿರುತ್ತಾರೆ. ಇಂದು ಕಾರ್ಗಿಲ್ ಯುದ್ಧವು ಭಾರತೀಯ ಇತಿಹಾಸದಲ್ಲಿ ಒಂದು ಕಟುವಾದ ಅಧ್ಯಾಯವಾಗಿ ನಿಂತಿದೆ. ರಾಷ್ಟ್ರದ ಸಾಮೂಹಿಕ ಸ್ಮರಣೆಯಲ್ಲಿ ಶಾಶ್ವತವಾಗಿ ಕೆತ್ತಲಾಗಿದೆ. ಆಪರೇಷನ್ ವಿಜಯ್ ಅನ್ನು ಮುನ್ನಡೆಸಿದ ಕಾರ್ಗಿಲ್ ಯುದ್ಧ ವೀರರ ಶೌರ್ಯ ಮತ್ತು ಶೌರ್ಯಕ್ಕೆ ಇದು ಗೌರವ ಸಲ್ಲಿಸುತ್ತದೆ. ಭಾರೀ ವೆಚ್ಚದಲ್ಲಿ ಭಾರತೀಯ ಸಶಸ್ತ್ರ ಪಡೆಗಳ ವಿಜಯದಲ್ಲಿ ಕೊನೆಗೊಂಡಿತು. ಪ್ರತಿ ವರ್ಷ, ಜುಲೈ

ಇಂದು ಕಾರ್ಗಿಲ್ ವಿಜಯ ದಿವಸ್| ತ್ಯಾಗ ಬಲಿದಾನದ ಒಂದು ಮೆಲುಕು Read More »

ಭಾರೀ ಮಳೆ ಹಿನ್ನೆಲೆ| ಕೊಡಗು ಹಾಗೂ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.26ರ ಶನಿವಾರ ರಜೆ ಘೋಷಿಸಿ ಬೆಳ್ತಂಗಡಿ ತಹಶೀಲ್ದಾರ್‌ ಆದೇಶಿಸಿದ್ದಾರೆ. ಕೊಡಗಿನಲ್ಲೂ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜು.26ರ‌ ಇಂದು ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ‌ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಕೊಡಗು ಹಾಗೂ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ Read More »

ನರ್ಸ್ ನಿಮಿಷ ಪ್ರಿಯಾ ಗಲ್ಲು ಶಿಕ್ಷೆ‌ ರದ್ದು| ಶೀಘ್ರದಲ್ಲೇ ಭಾರತಕ್ಕೆ ವಾಪಾಸ್

ಸಮಗ್ರ ನ್ಯೂಸ್: ಯೆಮೆನ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ಕೇರಳ ಮೂಲದ ನರ್ಸ್ ನಿಮಿಷಾಗೆ ಬಿಗ್ ರಿಲೀಫ್ ಸಿಕ್ಕಿದ್ದು, ಯೆಮೆನ್ ಗಲ್ಲು ಶಿಕ್ಷೆ ರದ್ದುಗೊಳಿಸಿದೆ.ಹಾಗೂ ಶೀಘ್ರವೇ ಅವರನ್ನ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿದೆ. ಯೆಮೆನ್ನಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಲಾಗುವುದು ಎಂದು ಕ್ರಿಶ್ಚಿಯನ್ ಧರ್ಮಪ್ರಚಾರಕ ಕೆಎ ಪಾಲ್ ಈ ಬಗ್ಗೆ ಹೇಳಿಕೊಂಡಿದ್ದಾರೆ. ಕೆಎ ಪಾಲ್ ಪ್ರಧಾನಿ ಮೋದಿಗೂ ಧನ್ಯವಾದ ಹೇಳಿದ್ದಾರೆ. ಯೆಮೆನ್ ರಾಜಧಾನಿ ಸನಾದಲ್ಲಿ ಜೈಲಿನಲ್ಲಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ

ನರ್ಸ್ ನಿಮಿಷ ಪ್ರಿಯಾ ಗಲ್ಲು ಶಿಕ್ಷೆ‌ ರದ್ದು| ಶೀಘ್ರದಲ್ಲೇ ಭಾರತಕ್ಕೆ ವಾಪಾಸ್ Read More »

ಬ್ಲಡ್ ಮನಿ ನಿರಾಕರಿಸಿದ ಮೃತನ ಸಹೋದರ| ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ

ಸಮಗ್ರ ನ್ಯೂಸ್: ಭಾರತದ ಕೇರಳದ ನರ್ಸ್ ನಿಮಿಷಾ ಪ್ರಿಯಾ ಯೆಮೆನ್​​ನಲ್ಲಿ ತನ್ನ ಬ್ಯುಸಿನೆಸ್ ಪಾರ್ಟನರ್ ಕೊಲೆಯ ಅಪರಾಧದಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾರೆ. ಆದರೆ, ಆ ಪ್ರಕರಣದಲ್ಲಿ ಜುಲೈ 16 ಅಂದರೆ ಇಂದು ಗಲ್ಲಿಗೇರಬೇಕಾಗಿದ್ದ ಆಕೆಯ ಮರಣದಂಡನೆಯನ್ನು ಮುಂದೂಡಲಾಗಿತ್ತು. ಬ್ಲಡ್ ಮನಿ ಮೂಲಕ ಈ ಸಮಸ್ಯೆ ಇತ್ಯರ್ಥ ಮಾಡಿಕೊಂಡರೆ ಆಕೆಗೆ ಗಲ್ಲು ಶಿಕ್ಷೆಯನ್ನು ತಪ್ಪಿಸಲು ಕಾನೂನಿನಲ್ಲಿ ಅವಕಾಶವಿತ್ತು. ಆದರೆ, ಆ ಆಯ್ಕೆಯೂ ನಿಮಿಷಾಳಿಗೆ ಇಲ್ಲದಂತಾಗಿದೆ. ಏಕೆಂದರೆ ಮೃತ ವ್ಯಕ್ತಿ ತಲಾಲ್ ಅವರ ಸೋದರ ಬ್ಲಡ್ ಮನಿಗೆ ತಮ್ಮ ಒಪ್ಪಿಗೆಯಿಲ್ಲ

ಬ್ಲಡ್ ಮನಿ ನಿರಾಕರಿಸಿದ ಮೃತನ ಸಹೋದರ| ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ Read More »