ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಅಲ್ಲು ಅರ್ಜುನ್ ಶ್ರೇಷ್ಠ ನಟ| ‘777 ಚಾರ್ಲಿ’ ಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ
ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ 2021ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನ ಪ್ರಕಟಿಸಿದೆ. 69ನೇ ರಾಷ್ಟ್ರೀಯ ಪ್ರಶಸ್ತಿಗಳನ್ನು ತೀರ್ಪುಗಾರರ ಸದಸ್ಯರು ವಾಚಿಸಿದರು. ಅಲ್ಲು ಅರ್ಜುನ್ ರಾಷ್ಟ್ರೀಯ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದು, 69 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತೆಲುಗು ನಾಯಕರೊಬ್ಬರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಕ್ಷಿತ್ ಶೆಟ್ಟಿ ನಟನೆ ಹಾಗೂ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರಕ್ಕಾಗಿ ಮೀಸಲಿಟ್ಟ ರಾಷ್ಟ್ರೀಯ ಪ್ರಶಸ್ತಿಯು










