ದೇಶ-ವಿದೇಶ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಉಡುಪಿ ಪ್ರಥಮ, ದ.ಕ ದ್ವಿತೀಯ| ಹೆಣ್ಮಕ್ಕಳದ್ದೇ ಮೇಲುಗೈ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಫಲಿತಾಂಶ ಇನ್ನು ಕೆಲವೇ ನಿಮಿಷಗಳಲ್ಲಿ ವೆಬ್‌ಸೈಟ್‌ ಗಳಲ್ಲಿ ಪ್ರಕಟವಾಗಲಿದೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಎಂದಿನಂತೆ ಉಡುಪಿ ಜಿಲ್ಲೆ ಪ್ರಥಮ‌ಸ್ಥಾನ‌ ಪಡೆದಿದ್ದು, ದ.ಕ ಜಿಲ್ಲೆ ದ್ವಿತೀಯ ಸ್ಥಾನದಲ್ಲಿದೆ. ಈ ಬಾರಿಯೂ ಸಹ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ,‌ ವಾಣಿಜ್ಯ ವಿಭಾಗದಲ್ಲಿ ದೀಪಾಶ್ರೀ, ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್, ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ […]

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಉಡುಪಿ ಪ್ರಥಮ, ದ.ಕ ದ್ವಿತೀಯ| ಹೆಣ್ಮಕ್ಕಳದ್ದೇ ಮೇಲುಗೈ Read More »

ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ

ಸಮಗ್ರ ನ್ಯೂಸ್: ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಇಂದು (ಎ.8) ಕಡಿಮೆಯಾಗಿದೆ. 22 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆ 8,285 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ದರ 9,038 ರೂಪಾಯಿ ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂ. ಕಡಿಮೆ ಆಗಿದೆ. ಈ ಮೂಲಕ ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಂತಾಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ

ಬಂಗಾರದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಇಂಧನ ದರ ಮತ್ತಷ್ಟು ತುಟ್ಟಿ‌| ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ₹2 ಹೆಚ್ಚಿಸಿದ ಕೇಂದ್ರ|

ಸಮಗ್ರ ನ್ಯೂಸ್: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದರೊಂದಿಗೆ ಮುಂದಿನ ದಿನದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕೂಡ ಹೆಚ್ಚಳವಾಗಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಶೀಘ್ರವೇ ಹೆಚ್ಚಳವಾಗಲಿದೆ. ಈ ಮೂಲಕ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳದ ಬಿಸಿ ಮುಟ್ಟಲಿದೆ. ಏಪ್ರಿಲ್‌ ತಿಂಗಳ ಆರಂಭದಲ್ಲಿಯೇ ರಾಜ್ಯ ಸರ್ಕಾರ

ಇಂಧನ ದರ ಮತ್ತಷ್ಟು ತುಟ್ಟಿ‌| ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅಬಕಾರಿ ಸುಂಕ ₹2 ಹೆಚ್ಚಿಸಿದ ಕೇಂದ್ರ| Read More »

2025-26ನೇ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ| ಎ.11ರಿಂದ‌ ಬೇಸಿಗೆ ರಜೆ; ಮೇ.29ರಿಂದ ಶಾಲಾರಂಭ

ಸಮಗ್ರ ನ್ಯೂಸ್: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ 2025-26ನೆ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದೆ. ಎ.11ರಿಂದ ಬೇಸಿಗೆ ರಜೆ ಆರಂಭವಾಗಲಿದೆ. ಮೇ 29ರಿಂದ ಶಾಲೆಗಳು ಪುನಾರಾರಂಭಗೊಳ್ಳಲಿವೆ. 2025-26ನೆ ಸಾಲಿನ ಶಾಲಾ ಕರ್ತವ್ಯದ ದಿನಗಳ ಮೊದಲನೆ ಅವಧಿಯು ಮೇ 29ರಿಂದ ಸೆ.19ರವರೆಗೆ ಇರಲಿದೆ. ದಸರಾ ರಜೆ ಸೆ.20ರಿಂದ ಅ.7ರವರೆಗೆ ಇರುತ್ತದೆ. ಶಾಲಾ ಕರ್ತವ್ಯದ ದಿನಗಳ ಎರಡನೆ ಅವಧಿಯು ಅ.8ರಿಂದ 2026ರ ಎ.10ರವರೆಗೆ ಇರಲಿದೆ. ಬೇಸಿಗೆ ರಜೆಯು ಎ.11ರಿಂದ ಎ.28ರವರೆಗೆ ಇರುತ್ತದೆ.

2025-26ನೇ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ| ಎ.11ರಿಂದ‌ ಬೇಸಿಗೆ ರಜೆ; ಮೇ.29ರಿಂದ ಶಾಲಾರಂಭ Read More »

ರಾಜ್ಯಸಭೆಯಲ್ಲಿ ‌ತಡರಾತ್ರಿ 2.35ಕ್ಕೆ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ

ಸಮಗ್ರ ನ್ಯೂಸ್: ಲೋಕಸಭೆಯು ಅಂಗೀಕರಿಸಿದ ಒಂದು ದಿನದ ನಂತರ ರಾಜ್ಯಸಭೆಯು ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ರಾಜ್ಯಸಭೆಯು ಏಪ್ರಿಲ್ 3-4 ರ ಮಧ್ಯರಾತ್ರಿ ವಿವಾದಾತ್ಮಕ ವಕ್ಫ್(ತಿದ್ದುಪಡಿ) ಮಸೂದೆ- 2025 ಅನ್ನು ಅಂಗೀಕರಿಸಿತು, ಬಿಸಿ ಚರ್ಚೆಯ ನಂತರ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಬದಲಾವಣೆಗಳನ್ನು ಪ್ರಸ್ತಾಪಿಸುವ ಮಸೂದೆಯನ್ನು ‘ಪರವಾಗಿ'(ಹೌದು) 128 ಮತ್ತು ‘ವಿರುದ್ಧ’ (ಇಲ್ಲ) 95 ಮತಗಳಿಂದ ಅಂಗೀಕರಿಸಲಾಯಿತು. ಸರ್ಕಾರವು ಇದನ್ನು ಏಕೀಕೃತ ವಕ್ಫ್ ನಿರ್ವಹಣಾ ಸಬಲೀಕರಣ, ದಕ್ಷತೆ ಮತ್ತು ಅಭಿವೃದ್ಧಿ (UMEED) ಮಸೂದೆ ಎಂದು ಮರುನಾಮಕರಣ ಮಾಡಲು

ರಾಜ್ಯಸಭೆಯಲ್ಲಿ ‌ತಡರಾತ್ರಿ 2.35ಕ್ಕೆ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ Read More »

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ವಿಧೇಯಕ ಮಂಡನೆ ಆರಂಭಗೊಂಡಿದೆ. ಗೃಹಸಚಿವ ಅಮಿತ್ ಶಾ ಈ ಬಗ್ಗೆ ಮಾತನಾಡಿ ವಕ್ಫ್ ಮಸೂದೆ ಮಂಡನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು. ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಮುಸ್ಲಿಂ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ವಕ್ಫ್ ತಿದ್ದುಪಡಿ ಮಸೂದೆ ಕುರಿತ ಚರ್ಚೆಗೆ ಕಾರ್ಯಕಲಾಪಗಳ ಸಲಹಾ ಸಮಿತಿ

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ Read More »

ಲಕ್ಷದ ಸನಿಹಕ್ಕೆ ಬಂಗಾರದ ದರ| ಇಂದಿನ ಧಾರಣೆ ಎಷ್ಟಿದೆ ಗೊತ್ತಾ?

ಸಮಗ್ರ ನ್ಯೂಸ್: ಬಂಗಾರದ ದರ ಏ. 1ರಂದು ಹೊಸ ದಾಖಲೆಯ ಎತ್ತರಕ್ಕೇರಿದೆ. ಪ್ರತಿ 10 ಗ್ರಾಮ್‌ ಚಿನ್ನದ ದರ ಬರೋಬ್ಬರಿ 91,000 ರೂ.ಗೆ ಜಿಗಿದಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್‌ನ ಪ್ರತಿ ಗ್ರಾಮ್‌ ಬಂಗಾರದ ದರ 9,284 ರುಪಾಯಿಗೆ ಏರಿಕೆಯಾಗಿದೆ. ಜಾಗತಿಕ ಆರ್ಥಿಕ ಪರಿಸ್ಥಿತಿಯ ಅನಿಶ್ಚಿತತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಘೋಷಿಸಿರುವ ಟಾರಿಫ್‌ ವಾರ್ ಜತೆಗೆ ಹಣದುಬ್ಬರ ಕೂಡ ಪ್ರಭಾವ ಬೀರಿದೆ. ನಾನಾ ದೇಶಗಳ ಸೆಂಟ್ರಲ್‌ ಬ್ಯಾಂಕ್‌ಗಳು ಕೂಡ ಬಂಗಾರದ ಖರೀದಿಯನ್ನು ಹೆಚ್ಚಿಸಿವೆ. ವಿಶ್ಲೇಷಕರ ಪ್ರಕಾರ

ಲಕ್ಷದ ಸನಿಹಕ್ಕೆ ಬಂಗಾರದ ದರ| ಇಂದಿನ ಧಾರಣೆ ಎಷ್ಟಿದೆ ಗೊತ್ತಾ? Read More »

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಇನ್ನಿಲ್ಲ!!? ಸೋಶಿಯಲ್ ಮೀಡಿಯಾದಲ್ಲಿ ಸಾವಿನ ಸುದ್ದಿ ವೈರಲ್

ಸಮಗ್ರ ನ್ಯೂಸ್: ಭಾರತದಿಂದ 2019ರಲ್ಲಿ ಪಲಾಯನಗೈದು ‘ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ’ ಎಂಬ ಸಾರ್ವಭೌಮ ರಾಷ್ಟ್ರ ಸ್ಥಾಪಿಸಿರುವುದಾಗಿ ಘೋಷಿಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ನಿಧನ ಹೊಂದಿದ್ದಾನೆ ಎನ್ನುವ ಸುದ್ದಿಯೊಂದನ್ನು ನಿತ್ಯಾನಂದನ ಸಹೋದರಿಯ ಮಗ ಸುಂದರೇಶ್ವರನ್ ವಿಡಿಯೋ ಮೂಲಕ ಬಹಿರಂಗಪಡಿಸಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸ್ವಯಂ ಘೋಷಿತ ಆಧ್ಯಾತ್ಮಿಕ ಗುರು ನಿತ್ಯಾನಂದ ಸ್ವಾಮಿಯವರ ನಿಧನದ ಸುದ್ದಿ ವೈರಲ್ ಆಗಿದೆ. ನಿತ್ಯಾನಂದ ಎರಡು ದಿನಗಳ ಹಿಂದೆ ನಿಧನರಾದರು ಎಂದು ಅವರ ಸೋದರಳಿಯ ಸುಂದರೇಶ್ವರನ್ ವೀಡಿಯೊದಲ್ಲಿ ಬಹಿರಂಗಪಡಿಸಿದ್ದಾರೆ. ಅವರು

ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಇನ್ನಿಲ್ಲ!!? ಸೋಶಿಯಲ್ ಮೀಡಿಯಾದಲ್ಲಿ ಸಾವಿನ ಸುದ್ದಿ ವೈರಲ್ Read More »

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್, ಥೈಲ್ಯಾಂಡ್| ಶತಕ‌ ದಾಟಿದ ಸಾವಿನ ಸಂಖ್ಯೆ| ಮುಂದುವರಿದ ಮರಣ ಮೃದಂಗ

ಸಮಗ್ರ ನ್ಯೂಸ್: ಥೈಲ್ಯಾಂಡ್ ಭೂಕಂಪಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಈಗ 144ಕ್ಕೆ ಏರಿದೆ. ಮ್ಯಾನ್ಮಾರ್‌, ಥೈಲ್ಯಾಂಡ್‌ನಲ್ಲಿ ಸಾವಿನ ಸುದ್ದಿಗಳು ಏರಿಕೆಯಾಗುತ್ತಿದ್ದು, ಮತ್ತು 700 ಕ್ಕೂ ಹೆಚ್ಚು ಮಂದಿ ಗಾಯಗೊಂಡ ವರದಿಯಾಗಿವೆ. ಸಾವಿನ ಸಂಖ್ಯೆ 1000ಗಡಿ ದಾಟುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಮ್ಯಾನ್ಮಾರ್‌ನಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಸತತ ಭೂಕಂಪಗಳು ಸಂಭವಿಸಿವೆ. ಭೂಕಂಪದ ಕೇಂದ್ರಬಿಂದುವು ಮೋನಿವಾ ನಗರದಿಂದ ಸುಮಾರು 50 ಕಿಲೋಮೀಟರ್ ಪೂರ್ವಕ್ಕೆ ಮಧ್ಯ ಮ್ಯಾನ್ಮಾರ್‌ನಲ್ಲಿದೆ ಎಂದು

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಮಯನ್ಮಾರ್, ಥೈಲ್ಯಾಂಡ್| ಶತಕ‌ ದಾಟಿದ ಸಾವಿನ ಸಂಖ್ಯೆ| ಮುಂದುವರಿದ ಮರಣ ಮೃದಂಗ Read More »

ಕೇಂದ್ರ ಸರ್ಕಾರಿ‌ ನೌಕರರಿಗೆ ಗುಡ್ ನ್ಯೂಸ್| ತುಟ್ಟಿಭತ್ಯೆ ಶೇ.2ರಷ್ಟು ಏರಿಸಿ ಸಚಿವ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಹಣದುಬ್ಬರವನ್ನು ಸರಿದೂಗಿಸಲು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪಾವತಿಯನ್ನು ಶೇಕಡಾ 2 ರಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಶುಕ್ರವಾರ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಅನ್ನು ಶೇಕಡಾ 53 ರಿಂದ 55 ಕ್ಕೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (ಡಿಆರ್) ಅನ್ನು ಶೇಕಡಾ 2 ರಿಂದ 55 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಬೊಕ್ಕಸಕ್ಕೆ 6614.04 ಕೋಟಿ ರೂ.ಗಳ

ಕೇಂದ್ರ ಸರ್ಕಾರಿ‌ ನೌಕರರಿಗೆ ಗುಡ್ ನ್ಯೂಸ್| ತುಟ್ಟಿಭತ್ಯೆ ಶೇ.2ರಷ್ಟು ಏರಿಸಿ ಸಚಿವ ಸಂಪುಟ ಅನುಮೋದನೆ Read More »