ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಸಮಗ್ರ ನ್ಯೂಸ್ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್ ವಜಾಗೊಳಿಸಿದೆ. ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ








