ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ| ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ
ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಚಾಲನೆ ಸಿಗಲಿದ್ದು, ಉದ್ಘಾಟನೆಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮಿಸಲಿದ್ದಾರೆ. ಇಂದು ಬೆಳಿಗ್ಗೆ 6.15ಕ್ಕೆ ರಾಷ್ಟ್ರಪತಿ ಮುರ್ಮು ಅವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ನಂತರ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. 10 ಗಂಟೆಗೆ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಚಾಲನೆ| ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಉದ್ಘಾಟನೆ Read More »










