ದೇಶ-ವಿದೇಶ

ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್

ಸಮಗ್ರ ನ್ಯೂಸ್: ತಮಿಳುನಾಡು ಬಹುಜನ ಸಮಾಜ ವಾದಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪೆರಂಬೂರ್‌ನಲ್ಲಿರುವ ಆರ್ಮ್‌ಸ್ಟ್ರಾಂಗ್‌ ಅವರ ನಿವಾಸದ ಬಳಿ ಆರು ಮಂದಿ ಅಪರಿಚಿತ ದಾಳಿಕೋರರು ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹತ್ಯೆಯ ಉದ್ದೇಶವನ್ನು ಕೂಲಂಕುಶವಾಗಿ ವಿಚಾರಣೆ ನಡೆಸಲಾಗುತ್ತದೆ ಎಂದು ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್‌ ಹೇಳಿದ್ದಾರೆ. ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆಗೈದ ಬಳಿಕ ಆರೋಪಿಗಳು ಪರಾರಿಯಾಗುತ್ತಿರುವ […]

ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್ Read More »

ಭಾರೀ ಮಳೆ/ ಸ್ಥಗಿತಗೊಂಡ ಅಮರನಾಥ ಯಾತ್ರೆ

ಸಮಗ್ರ ನ್ಯೂಸ್‌: ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಲ್ವಾಲ್ ಮತ್ತು ಪಹಲ್ಲಾಮ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದ ಕಾರಣ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದುವರೆಗೆ 1.50 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು 3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗದ ದರ್ಶನವನ್ನು ಪಡೆದಿದ್ದಾರೆ. ಸುಮಾರು 4.5 ಲಕ್ಷಕ್ಕೂ

ಭಾರೀ ಮಳೆ/ ಸ್ಥಗಿತಗೊಂಡ ಅಮರನಾಥ ಯಾತ್ರೆ Read More »

ಭಾರತದಲ್ಲಿ ರಸ್ತೆಗಿಳಿದ ವಿಶ್ವದ ಮೊದಲ ಸಿಎನ್ ಜಿ‌ ಬೈಕ್| ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಡ್ ಸ್ಟೋರಿ…

ಸಮಗ್ರ ನ್ಯೂಸ್: ಭಾರತದಲ್ಲಿ ವಿಶ್ವದ ಮೊದಲ CNG ಬೈಕ್ ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಯಾಗಿದೆ. ಬಜಾಜ್ CNG ಬೈಕ್ ಅನ್ನು ಬಿಡುಗಡೆ ಮಾಡಿದ ವಿಶ್ವದ ಮೊದಲ ದ್ವಿಚಕ್ರ ವಾಹನ ತಯಾರಕ ಕಂಪನಿ. ಇಡೀ ವಾಹನ ಲೋಕದ ಗಮನ ಈಗ ಈ ಕಂಪನಿಯತ್ತ ಹೊರಳುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಬೈಕ್ ಅನ್ನು ಭಾರತಕ್ಕೆ ಪರಿಚಯಿಸಿದ್ದು, ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ಇದರ ನಿರೀಕ್ಷೆಗಳು ಹಲವು ಪಟ್ಟು ಹೆಚ್ಚುತ್ತಿವೆ. ಸಿಎನ್‌ಜಿ ಚಾಲಿತ ಕಾರುಗಳು ಬಂದು ದಶಕಕ್ಕೂ ಹೆಚ್ಚು ಆದರೂ, ಸಿಎನ್‌ಜಿ-ಚಾಲಿತ

ಭಾರತದಲ್ಲಿ ರಸ್ತೆಗಿಳಿದ ವಿಶ್ವದ ಮೊದಲ ಸಿಎನ್ ಜಿ‌ ಬೈಕ್| ಏನಿದರ ವಿಶೇಷತೆ? ಇಲ್ಲಿದೆ ಡೀಟೈಲ್ಡ್ ಸ್ಟೋರಿ… Read More »

NEET PG ಪರೀಕ್ಷೆಯ ದಿನಾಂಕ ಪ್ರಕಟ

ಸಮಗ್ರ ನ್ಯೂಸ್‌: ನೀಟ್‌ ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ಮುಂದೂಡಲಾಗಿದ್ದ ದಿನಾಂಕವನ್ನು ಇದೀಗ ಘೋಷಿಸಲಾಗಿದ್ದು, ಪರೀಕ್ಷೆಯು ಆಗಸ್ಟ್ 11 ರಂದು ನಡೆಯಲಿದೆ. ಪರೀಕ್ಷೆಯು ಆಗಸ್ಟ್ 11 ರಂದು ಬೆಳಿಗ್ಗೆ ಮತ್ತು ಮಧ್ಯಾಹ್ನದ ಎರಡು ಪಾಳಿಗಳಲ್ಲಿ ನಡೆಯಲಿದೆ. ಈ ಹಿಂದೆ ಜೂನ್ 23ಕ್ಕೆ ನೀಟ್ ಪರೀಕ್ಷೆ ನಿಗದಿಯಾಗಿತ್ತು. ಅಕ್ರಮ ಚಟುವಟಿಕೆಗಳ ವರದಿಯಿಂದಾಗಿ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿತ್ತು.

NEET PG ಪರೀಕ್ಷೆಯ ದಿನಾಂಕ ಪ್ರಕಟ Read More »

ಬ್ರಿಟನ್ ಚುನಾವಣೆಯಲ್ಲಿ ಸೋಲೊಪ್ಪಿಕೊಂಡ ರಿಷಿ‌ ಸುನಕ್| ಅಧಿಕಾರ ಹಸ್ತಾಂತರ ಮಾಡಲು ನಿರ್ಧಾರ

ಸಮಗ್ರ ನ್ಯೂಸ್: ಬ್ರಿಟನ್‌ನ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ರಿಷಿ ಸುನಾಕ್‌ ಅವರು ಸೋಲೊಪ್ಪಿಕೊಂಡಿದ್ದಾರೆ. ವಿಪಕ್ಷ ಲೇಬರ್‌ ಪಾರ್ಟಿ 300ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಿದ್ದರೆ ರಿಷಿ ಸುನಾಕ್‌ ಅವರ ಕನ್ಸರ್ವೇಟಿವ್‌ ಪಕ್ಷ 61 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. “ಲೇಬರ್‌ ಪಾರ್ಟಿ ಚುನಾವಣೆ ಗೆದ್ದಿದೆ. ನಾನು ಸರ್‌ ಕೀರ್‌ ಸ್ಟಾರ್ಮರ್‌ ಅವರಿಗೆ ಕರೆ ಮಾಡಿ ವಿಜಯಕ್ಕೆ ಶುಭಾಶಯ ಸಲ್ಲಿಸಿದ್ದೇನೆ. ಇಂದು ಅಧಿಕಾರವನ್ನು ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ಹಸ್ತಾಂತರಿಸಲಾಗುವುದು. ಇದು ನಮ್ಮ ದೇಶದ ಸುಭದ್ರತೆ ಮತ್ತು ಭವಿಷ್ಯದ ಬಗ್ಗೆ ನಮ್ಮೆಲ್ಲರಲ್ಲೂ

ಬ್ರಿಟನ್ ಚುನಾವಣೆಯಲ್ಲಿ ಸೋಲೊಪ್ಪಿಕೊಂಡ ರಿಷಿ‌ ಸುನಕ್| ಅಧಿಕಾರ ಹಸ್ತಾಂತರ ಮಾಡಲು ನಿರ್ಧಾರ Read More »

₹29 ಗಳಿಗೆ ದೊರೆಯುತ್ತಿದ್ದ ಭಾರತ್ ಅಕ್ಕಿ ಮಾರಾಟ ಸ್ಥಗಿತ

ಸಮಗ್ರ ನ್ಯೂಸ್: ಜುಲೈನಿಂದ ಭಾರತ್ ಅಕ್ಕಿ ಯೋಜನೆಯನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. 5 ಕೆಜಿ ಮತ್ತು 10 ಕೆಜಿ ಪ್ಯಾಕ್‌ಗಳಲ್ಲಿ ದೊರೆಯುತ್ತಿದ್ದ ಸಬ್ಸಿಡಿ ಅಕ್ಕಿ ಈಗ ಆನ್‌ಲೈನ್‌ನಲ್ಲಿಯೂ ಲಭ್ಯವಿಲ್ಲ. ಫೆಬ್ರವರಿಯಲ್ಲಿ ಕೇಂದ್ರ ಸರ್ಕಾರವು ಆರ್ಥಿಕವಾಗಿ ಅಸ್ಥಿರ ಮತ್ತು ಆರ್ಥಿಕವಾಗಿ ದುರ್ಬಲ ಸಮಾಜದ ವರ್ಗಗಳನ್ನು ಬೆಂಬಲಿಸಲು ಪ್ರತಿ ಕಿಲೋಗ್ರಾಂಗೆ 29 ಬೆಲೆ ರೂ.ಗೆ ಭಾರತ್ ರೈಸ್ ಅನ್ನು ಪರಿಚಯಿಸಿತ್ತು. ಸಬ್ಸಿಡಿ ಭಾರತ್ ರೈಸ್ ಅನ್ನು NAFED, NCCF ಮತ್ತು ಕೇಂದ್ರೀಯ ಭಂಡಾರ್‌ನಿಂದ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಆನ್‌ಲೈನ್‌ನಲ್ಲಿ

₹29 ಗಳಿಗೆ ದೊರೆಯುತ್ತಿದ್ದ ಭಾರತ್ ಅಕ್ಕಿ ಮಾರಾಟ ಸ್ಥಗಿತ Read More »

ಇದು ವಿಶ್ವದ ಮೊದಲ ಪ್ರಕರಣ| ಮೆಟ್ಟಿಲುಗಳಿಂದ‌ ಜಿಗಿದು ರೋಬೋಟ್ ಆತ್ಮಹತ್ಯೆ!!

ಸಮಗ್ರ ನ್ಯೂಸ್: ಮಾನಸಿಕವಾಗಿ ನೊಂದ ಜನರು ಹೆಚ್ಚಾಗಿ ಆತ್ಮಹತ್ಯೆಯನ್ನೆ ಆಯ್ಕೆ ಮಾಡಿಕೊಳ್ಳುತ್ತಾರೆ. ಇದು ಜಗತ್ತನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಒಂದು. ಆದರೆ ನಾವು ಇದುವರೆಗೂ ಮನುಷ್ಯರು ಸಾವಿಗೆ ಶರಣಾಗುವುದನ್ನು ನೋಡಿದ್ದೇವೆ ಆದರೆ ಇಲ್ಲಿ ಜಗತ್ತಿನಲ್ಲೇ ಮೊದಲ ಬಾರಿಗೆ ಹೊಸ ಕೇಸ್‌ ಕೇಳಿಬಂದಿದೆ. ದಕ್ಷಿಣ ಕೊರಿಯಾದಲ್ಲಿ ರೋಬೋಟ್ ಆತ್ಮಹತ್ಯೆಗೆ ಶರಣಾಗಿದೆ. ಮಧ್ಯ ದಕ್ಷಿಣ ಕೊರಿಯಾದ ಪುರಸಭೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಬೋಟ್​ ಮೆಟ್ಟಿಲುಗಳ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಬಳಿಕ ರೋಬೋಟ್​ನ ಭಾಗಗಳನ್ನು ಸಂಗ್ರಹಿಸಲಾಗಿದೆ. ಮತ್ತು

ಇದು ವಿಶ್ವದ ಮೊದಲ ಪ್ರಕರಣ| ಮೆಟ್ಟಿಲುಗಳಿಂದ‌ ಜಿಗಿದು ರೋಬೋಟ್ ಆತ್ಮಹತ್ಯೆ!! Read More »

ಜಾರ್ಖಂಡ್ ಸಿಎಂ ಆಗಿ‌ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ರಾಂಚಿಯ ರಾಜಭವನದಲ್ಲಿ ಗುರುವಾರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಸೊರೆನ್ ಅವರನ್ನು ಆಹ್ವಾನಿಸಿದ ಕೆಲವೇ ಗಂಟೆಗಳ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಒಂದು ದಿನದ ನಂತರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಸೊರೆನ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್

ಜಾರ್ಖಂಡ್ ಸಿಎಂ ಆಗಿ‌ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ Read More »

ಅಯೋಧ್ಯೆಯ ಅರ್ಚಕರಿಗೆ ಡ್ರೆಸ್ ಕೋಡ್/ ಮೊಬೈಲ್ ಫೋನ್ ಬಳಕೆಗೂ ಸಂಪೂರ್ಣ ನಿಷೇಧ

ಸಮಗ್ರ ನ್ಯೂಸ್‌: ಅಯೋಧ್ಯೆಯ ರಾಮಮಂದಿರ ಟ್ರಸ್ಟ್, ರಾಮನ ಗರ್ಭಗುಡಿಯಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಡ್ರೆಸ್ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ. ರಾಮಲಲ್ಲಾ ಆವರಣದಲ್ಲಿ ಕೆಲಸ ಮಾಡುವವರಿಗೆ ಶೀಘ್ರ ಡ್ರೆಸ್ ಕೋಡ್ ಶೀಘ್ರ ಜಾರಿಯಾಗಲಿದೆ. ಇದರ ಜೊತೆಗೆ ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅರ್ಚಕರು

ಅಯೋಧ್ಯೆಯ ಅರ್ಚಕರಿಗೆ ಡ್ರೆಸ್ ಕೋಡ್/ ಮೊಬೈಲ್ ಫೋನ್ ಬಳಕೆಗೂ ಸಂಪೂರ್ಣ ನಿಷೇಧ Read More »

ಹತ್ರಾಸ್ ಕಾಲ್ತುಳಿತ ಪ್ರಕರಣ| ನೂರರ ಗಡಿ ದಾಟಿದ ಸಾವಿನ ಸಂಖ್ಯೆ| ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಅಲ್ಲದೇ, ಹಲವರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಹತ್ರಾಸ್ ಜಿಲ್ಲೆಯ ಸಿಕಂದರಾ ರಾವು ತಹಸಿಲ್‌ನ ರತಿಭಾನ್‌ಪುರ ಗ್ರಾಮದಲ್ಲಿ ಧಾರ್ಮಿಕ ಬೋಧಕ ಹಾಗೂ ಅವರ ಪತ್ನಿ ಉದ್ದೇಶಿಸಿ ಮಾತನಾಡುತ್ತಿದ್ದ ಸತ್ಸಂಗದ ಕಾರ್ಯಕ್ರಮದಲ್ಲಿ ಈ ಕಾಲ್ತುಳಿತ ಸಂಭವಿಸಿದೆ. ಈ ನಡುವೆ ಆಸ್ಪತ್ರೆಯಲ್ಲಿ ಹೆಣಗಳ ರಾಶಿ ಕಂಡು ಪೊಲೀಸ್‌ ಕಾನ್‌ಸ್ಟೇಬಲ್‌ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇಟಾಹ್ ಜಿಲ್ಲೆಯ ಅವಘರ್

ಹತ್ರಾಸ್ ಕಾಲ್ತುಳಿತ ಪ್ರಕರಣ| ನೂರರ ಗಡಿ ದಾಟಿದ ಸಾವಿನ ಸಂಖ್ಯೆ| ಹೆಣಗಳ ರಾಶಿ ನೋಡಿ ಹೃದಯಾಘಾತದಿಂದ ಪೊಲೀಸ್ ಸಾವು Read More »