ಲುಲು ಗ್ರೂಪ್ಸ್ ನಿಂದ ಕರ್ನಾಟಕದಲ್ಲಿ 2 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದ| 10 ಸಾವಿರ ಉದ್ಯೋಗ ಸೃಷ್ಟಿ ಸಾಧ್ಯತೆ
ಸಮಗ್ರ ನ್ಯೂಸ್: ಅಬುದಾಬಿಯ ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ₹ 2 ಸಾವಿರ ಕೋಟಿ ಹೂಡಿಕೆ ಮಾಡಲು ಮುಂದಾಗಿದ್ದು, ಈ ಕುರಿತಂತೆ ಒಪ್ಪಂದಕ್ಕೆ ಗುರುವಾರ ಸಹಿ ಹಾಕಲಾಯಿತು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಒಕ್ಕೂಟದ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಲುಲು ಗ್ರೂಪ್ ಇಂಟರ್‌ನ್ಯಾಷನಲ್‌ನ ನಿರ್ದೇಶಕ ಎ.ವಿ. ಅನಂತರಾಮನ್ ಮತ್ತು ರಾಜ್ಯ ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಸಹಿ ಹಾಕಿದರು. ಲುಲು










