ರಷ್ಯಾದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾದ ಮೋದಿ/ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರದಾನ ಮಾಡಿದ ವ್ಲಾದಿಮಿರ್ ಪುತಿನ್
ಸಮಗ್ರ ನ್ಯೂಸ್: ರಷ್ಯಾದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಸೇಂಟ್ ಆಂಡೂದಿ ಅಪೊಸ್ಟಲ್ ದಿ ಫಸ್ಟ್ ಕಾಲ್’ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ 2019ರಲ್ಲಿ ಘೋಷಿಸಲಾಗಿದ್ದು, ಮಂಗಳವಾರ ಮಾಸ್ಕೋ ಕ್ರೆಮಿನ್ ನ ಸೇಂಟ್ ಕ್ಯಾಥರೀನ್ ಹಾಲ್ ನಲ್ಲಿ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಸಾಂಪ್ರದಾಯಿಕವಾಗಿ ಪ್ರದಾನ ಮಾಡಿದರು. ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧಗಳ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಈ ಗೌರವವನ್ನು ಭಾರತದ ಪ್ರಧಾನಿಗೆ










