ದೇಶ-ವಿದೇಶ

HSPR ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಹಾಗಿದ್ರೆ ಈ ಸುದ್ದಿ ಓದ್ಲೇಬೇಕು…

ಸಮಗ್ರ ನ್ಯೂಸ್: ಎಲ್ಲಾ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ ಹಾಗೂ ಈ ತಿಂಗಳು 31ರವರೆಗೆ ಗಡುವು ಸಹ ನೀಡಿತ್ತು. ಆದರೂ ಕಾರಣಾಂತರಗಳಿಂದ ತಮ್ಮ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕದ ವಾಹನ ಸವಾರರಿಗೆ ಗುಡ್‌ನ್ಯೂಸ್ ನೀಡಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಸದವರ ವಿರುದ್ಧ ಜೂನ್ 12ರವರೆಗೆ ಯಾವುದೇ ರೀತಿಯ ಕ್ರಮವಿಲ್ಲ. ಈ ಬಗ್ಗೆ ಸ್ವತಃ ರಾಜ್ಯ ಸರ್ಕಾರವೇ ಹೈಕೋರ್ಟ್‌ಗೆ ತಿಳಿಸಿದೆ. ಹೀಗಾಗಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ […]

HSPR ನಂಬರ್ ಪ್ಲೇಟ್ ಅಳವಡಿಸಿಲ್ಲವೇ? ಹಾಗಿದ್ರೆ ಈ ಸುದ್ದಿ ಓದ್ಲೇಬೇಕು… Read More »

ವಿವಾದಿತ ಕೆರಗೋಡು ಅರ್ಜುನ ಸ್ಥಂಭದಲ್ಲಿ ಹಾರಾಡಿತು ನೂತನ ತ್ರಿವರ್ಣ ಧ್ವಜ

ಸಮಗ್ರ ನ್ಯೂಸ್: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜ ತೆರವುಗೊಳಿಸಿದ್ದ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಆಸ್ಪದ ಕಾರಣವಾಗಿತ್ತು. ಇದೀಗ ಇದೇ ಸ್ಥಳದಲ್ಲಿ ಹಳೆಯ ತ್ರಿವರ್ಣ ಧ್ವಜ ತೆಗೆದು ಹೊಸ ಧ್ವಜವನ್ನು ಹಾರಿಸಲಾಗಿದೆ. ಕೆರಗೋಡು ಗ್ರಾಮದಲ್ಲಿನ 108 ಅಡಿಯ ಅರ್ಜುನ ಸ್ತಂಭದಲ್ಲಿದ್ದ ಹನುಮ ಧ್ವಜವನ್ನು ತೆರವುಗೊಳಿಸಿ ಸರ್ಕಾರ ತ್ರಿವರ್ಣ ಧ್ವಜ ಹಾರಿಸಿದೆ. ಹನುಮ ಧ್ವಜ ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು, ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ, ಕೆರಗೋಡು ಅರ್ಜುನ ಸ್ತಂಭದಲ್ಲಿದ್ದ ಹಳೆ ತ್ರಿವರ್ಣ

ವಿವಾದಿತ ಕೆರಗೋಡು ಅರ್ಜುನ ಸ್ಥಂಭದಲ್ಲಿ ಹಾರಾಡಿತು ನೂತನ ತ್ರಿವರ್ಣ ಧ್ವಜ Read More »

ನೇಪಾಳದಲ್ಲಿ ವಿಶ್ವಾಸಮತ ಗೆದ್ದ ಪ್ರಚಂಡ

ಸಮಗ್ರ ನ್ಯೂಸ್: ಭಾರತದ ನೆರೆಯ ರಾಷ್ಟ್ರ ನೇಪಾಳದಲ್ಲಿ ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಮತ್ತೊಮ್ಮೆ ಸಂಸತ್ತಿನಲ್ಲಿ ವಿಶ್ವಾಸಮತ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಕಳೆದ 18 ತಿಂಗಳಲ್ಲಿ ಪ್ರಚಂಡ ನಾಲ್ಕನೇ ಬಾರಿ ವಿಶ್ವಾಸಮತ ಗೆದ್ದಂತೆ ಆಗಿದೆ. ಮೈತ್ರಿಪಕ್ಷವಾಗಿದ್ದ ಜನತಾ ಸಮಾಜಬದಿ ಪಕ್ಷವು ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಹಿನ್ನೆಲೆಯಲ್ಲಿ, ಸರ್ಕಾರದ ಬಲವನ್ನು ಸಾಬೀತುಪಡಿಸಲು ಪ್ರಚಂಡ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದರು. ಈ ವೇಳೆ 275 ಸದಸ್ಯ ಬಲದ ಸಂಸತ್‍ನಲ್ಲಿ ಕಮ್ಯುನಿಸ್ಟ್ ಪಾರ್ಟಿಯ ನಾಯಕ ಪ್ರಚಂಡ 157 ಮತ

ನೇಪಾಳದಲ್ಲಿ ವಿಶ್ವಾಸಮತ ಗೆದ್ದ ಪ್ರಚಂಡ Read More »

ಕೋವ್ಯಾಕ್ಸಿನ್ ಬಗ್ಗೆ ತಪ್ಪು ಮಾಹಿತಿ ‌ನೀಡಿದವರ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ICMR

ಸಮಗ್ರ ನ್ಯೂಸ್: ವಯಸ್ಕರು ಮತ್ತು ಹದಿಹರೆಯದವರಲ್ಲಿ ಕೋವಾಕ್ಸಿನ್ ನ ದೀರ್ಘಕಾಲೀನ ಸುರಕ್ಷತಾ ವಿಶ್ಲೇಷಣೆಯ ಬಗ್ಗೆ ಇತ್ತೀಚೆಗೆ ಪ್ರಕಟವಾದ ಬಿಎಚ್ ಯು ಅಧ್ಯಯನವನ್ನು ಅದರ ಕಳಪೆ ವಿಧಾನ ಮತ್ತು ವಿನ್ಯಾಸಕ್ಕಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಳ್ಳಿಹಾಕಿದೆ ಮತ್ತು ಲೇಖನವು ಪತ್ರಿಕೆಯಲ್ಲಿ ಐಸಿಎಂಆರ್ ಅನ್ನು ತಪ್ಪಾಗಿ ಮತ್ತು ದಾರಿತಪ್ಪಿಸುತ್ತದೆ ಎಂದು ಹೇಳಿದೆ. ಐಸಿಎಂಆರ್ ಮಹಾನಿರ್ದೇಶಕ ಡಾ.ರಾಜೀವ್ ಬಹ್ಲ್ ಅವರು ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್ಯು) ಅಧ್ಯಯನವನ್ನು ಕಳಪೆಯಾಗಿ ವಿನ್ಯಾಸಗೊಳಿಸಲಾಗಿದೆ ಮತ್ತು ನಿರ್ಣಾಯಕ ನ್ಯೂನತೆಗಳನ್ನು ಹೊಂದಿದೆ ಎಂದು

ಕೋವ್ಯಾಕ್ಸಿನ್ ಬಗ್ಗೆ ತಪ್ಪು ಮಾಹಿತಿ ‌ನೀಡಿದವರ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದ ICMR Read More »

ಇಬ್ರಾಹಿಂ ರೈಸಿ ನಿಧನ/ ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಖರ್ ನೇಮಕ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ಇರಾನ್ ನ ಮೊದಲ ಉಪಾಧ್ಯಕ್ಷ ಮೊಹಮ್ಮದ್ ಮೊಖರ್ ಅವರನ್ನು ದೇಶದ ಹಂಗಾಮಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇರಾನ್ ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೋಮವಾರ ಈ ಘೋಷಣೆ ಮಾಡಿದ್ದಾರೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮಿರ್ ಬೊಲ್ಲಾಹಿಯಾನ್, ಪೂರ್ವ ಅರ್ಬೈಜಾನ್ ಪ್ರಾಂತ್ಯದ ಗವರ್ನರ್ ಮತ್ತು ಇತರ ಅಧಿಕಾರಿಗಳು ಮತ್ತು ಅಂಗರಕ್ಷಕರನ್ನು ಹೊತ್ತ ಹೆಲಿಕಾಪ್ಟರ್ ಭಾನುವಾರ

ಇಬ್ರಾಹಿಂ ರೈಸಿ ನಿಧನ/ ಇರಾನ್ ಹಂಗಾಮಿ ಅಧ್ಯಕ್ಷರಾಗಿ ಮೊಹಮ್ಮದ್ ಮೊಖರ್ ನೇಮಕ Read More »

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ನ ಪಡೆದುಕೊಂಡ ನಂತರ ಮೊದಲ ಬಾರಿಗೆ ಭಾರತದಲ್ಲಿ ಮತದಾನ ಮಾಡಿದ್ದಾರೆ. ನಂತರ ಮಾತನಾಡಿದ ಅಕ್ಷಯ್, ಭಾರತದ ಅಭಿವೃದ್ಧಿ ಮತ್ತು ಬಲಿಷ್ಠ ರಾಷ್ಟ್ರಕ್ಕಾಗಿ ಮತದಾನ ಮಾಡಿ ಎಂದಿದ್ದಾರೆ. ಕೆನಡಾ ಪೌರತ್ವ ಪಡೆದಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇತ್ತೀಚೆಗಷ್ಟೇ ಭಾರತದ ಪೌರತ್ನ ಪಡೆದುಕೊಂಡಿದ್ದರು.

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ನಟ ಅಕ್ಷಯ್ ಕುಮಾರ್ Read More »

ರಿಷಿ ಸುನಕ್ ದಂಪತಿಯ ಆಸ್ತಿ 651 ದಶಲಕ್ಷ ಪೌಂಡ್/ ಶ್ರೀಮಂತಿಕೆಯಲ್ಲಿ ಬ್ರಿಟನ್ ದೊರೆಯನ್ನು ಹಿಂದಿಕ್ಕಿದ ಮೂರ್ತಿ ಅಳಿಯ

ಸಮಗ್ರ ನ್ಯೂಸ್: ಭಾರತೀಯ ಮೂಲದ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ, ಬೆಂಗಳೂರಿನ ಪ್ರಖ್ಯಾತ ಐಟಿ ಕಂಪನಿ ಇನ್ಫೋಸಿಸ್‍ನ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ- ಸುಧಾಮೂರ್ತಿಯವರ ಮಗಳು ಅಕ್ಷತಾ ಮೂರ್ತಿ ಅವರ ಒಟ್ಟು ಆಸ್ತಿ ಬ್ರಿಟನ್ ದೊರೆ ಚಾಲ್ರ್ಸ್‍ಗಿಂತಲೂ ಹೆಚ್ಚು ಎಂದು ಬ್ರಿಟನ್‍ನ ದ ಸಂಡೇ ಟೈಮ್ಸ್ ವರದಿ ಮಾಡಿದೆ. ದ ಸಂಡೇ ಟೈಮ್ಸ್ ಇತ್ತೀಚೆಗೆ ಬ್ರಿಟನ್‍ನ 1000 ಶ್ರೀಮಂತರು/ ಶ್ರೀಮಂತ ಕುಟುಂಬಗಳ ಪಟ್ಟಿಯೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಿಷಿ ಸುನಕ್ ದಂಪತಿ 651 ದಶಲಕ್ಷ ಪೌಂಡ್

ರಿಷಿ ಸುನಕ್ ದಂಪತಿಯ ಆಸ್ತಿ 651 ದಶಲಕ್ಷ ಪೌಂಡ್/ ಶ್ರೀಮಂತಿಕೆಯಲ್ಲಿ ಬ್ರಿಟನ್ ದೊರೆಯನ್ನು ಹಿಂದಿಕ್ಕಿದ ಮೂರ್ತಿ ಅಳಿಯ Read More »

ಇಬ್ರಾಹಿಂ ರೈಸಿ ನಿಧನ/ ಸಂತಾಪ ಸೂಚಿಸಿದ ನರೇಂದ್ರ ಮೋದಿ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಡಾ. ಸೆಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬ ಮತ್ತು ಇರಾನ್ ಜನತೆಗೆ ನನ್ನ ಹೃತ್ತೂರ್ವಕ ಸಂತಾಪ. ಈ ದುಃಖದ ಸಮಯದಲ್ಲಿ ಭಾರತವು ಇರಾನ್‌ನೊಂದಿಗೆ ನಿಂತಿದೆ” ಎಂದು ಪ್ರಧಾನಿ ಮೋದಿ ಟ್ವೀಟ್

ಇಬ್ರಾಹಿಂ ರೈಸಿ ನಿಧನ/ ಸಂತಾಪ ಸೂಚಿಸಿದ ನರೇಂದ್ರ ಮೋದಿ Read More »

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಕೊನೆಯುಸಿರು

ಸಮಗ್ರ ನ್ಯೂಸ್: ಅಜರ್‌ಬೈಜಾನ್‌ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ. ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹೊಸೇನ್‌ ಅಮೀರಬ್‌ ದೊಲ್ಲಾಹಿಯನ್‌ ಮತ್ತು ಇರಾನ್‌ನ ಪರಮೋಚ್ಚ ನಾಯಕ ಖೊಮೇನಿಯವರ ಪ್ರತಿನಿಧಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನವಾಗಿದೆ. ಇರಾನ್ ಮಾಧ್ಯಮಗಳ ಪ್ರಕಾರ, ಹೆಲಿಕಾಪ್ಟರ್‌ನ ಅವಶೇಷಗಳು ಪತ್ತೆಯಾದ ಕೆಲವೇ ನಿಮಿಷಗಳಲ್ಲಿ, ಇರಾನ್ ಅಧ್ಯಕ್ಷ ರೈಸಿ

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಕೊನೆಯುಸಿರು Read More »

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಸಮಗ್ರ ನ್ಯೂಸ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ (ಮೇ.19) ರಂದು ವಾಯುವ್ಯ ಇರಾನ್​ನ ಜೋಲ್ಫಾದಲ್ಲಿ ಪತನವಾಗಿದೆ ಎಂದು ಇರಾನ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹವಾಮಾನ ವೈಪರೀತ್ಯ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಅಧ್ಯಕ್ಷ ರೈಸಿ ಜತೆ ಇರಾನ್ ವಿದೇಶಾಂಗ ಸಚಿವ ಹುಸೇನ್ ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವ ಹೂಸೈನ್ ಅಮಿರಾಬ್ದೊಲ್ಹೈನ್ ಇಬ್ಬರು ಪೂರ್ವ ಅಜರ್‌ಬೈಜಾನ್‌ನಲ್ಲಿ ಕಾರ್ಯಕ್ರಮಕ್ಕಾಗಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ದಟ್ಟ ಮಂಜು ಆವರಿಸಿರುವುದರಿಂದ ಹೆಲಿಕಾಪ್ಟರ್ ಅವಘಡದ ಶಂಕೆ ವ್ಯಕ್ತವಾಗಿದ್ದು,

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ Read More »