ದೇಶ-ವಿದೇಶ

SSLC; ಮಧ್ಯ ವಾರ್ಷಿಕ ಪರೀಕ್ಷಾ ಫಲಿತಾಂಶ ಅ. 25 ಕ್ಕೆ

ಸಮಗ್ರ ನ್ಯೂಸ್: ಹತ್ತನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅ. 25ರಂದು ಪ್ರಕಟಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಪ್ರಕಟಿಸುವ ಬಗ್ಗೆ ಈ ಮೊದಲು ಚಿಂತನೆ ನಡೆಸಲಾಗಿತ್ತು.ಆದರೆ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ದಸರಾ ರಜೆಯ ಅವಧಿಯಲ್ಲಿ ಮೌಲ್ಯಮಾಪನ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ರಜಾ ಅವಧಿ ಮುಕ್ತಾಯಗೊಂಡ ಬಳಿಕ ನಡೆಸುವಂತೆ ಮಂಡಳಿ ಸೂಚಿಸಿದೆ.

SSLC; ಮಧ್ಯ ವಾರ್ಷಿಕ ಪರೀಕ್ಷಾ ಫಲಿತಾಂಶ ಅ. 25 ಕ್ಕೆ Read More »

ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟ‌ರ್ ಪತನ, ಮೂವರ ಸಾವು

ಸಮಗ್ರ ನ್ಯೂಸ್:ಅ.2-ಖಾಸಗಿ ಹೆಲಿಕಾಪ್ಟ‌ರ್ ಪತನಗೊಂಡು ಇಬ್ಬರು ಪೈಲಟ್‌ಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಬವ್‌ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದಲ್ಲಿ ಸಂಭವಿಸಿದೆ.ಹೆಲಿಕಾಪ್ಟ‌ರ್ ಪತನಗೊಂಡು ಕೂಡಲೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದೆ.ಬೆಳಗ್ಗೆ 6.45ಕ್ಕೆ ಈ ಘಟನೆ ನಡೆದಿದೆ ಎಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ತಿಳಿಸಿದ್ದಾರೆ. ಪೂಣೆ ಬಳಿಯ ಆಕ್ಸ್ ಫರ್ಡ್ ಗಾಲ್ಫ್ ಕೋರ್ಸ್‌ನಲ್ಲಿರುವ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಟೇಕ್ ಆಫ್‌ಆಗಿ ಮುಂಬೈನ ಜುಹುಗೆ ತೆರಳುವಾಗ ಏಕಾಏಕಿ ನಿಯಂತ್ರಣ ಕಳೆದುಕೊಂಡು ಕೆಳಗೆ ಇಳಿದು ನೆಲಕ್ಕೆ ಅಪ್ಪಳಿಸಿದೆ ಎಂದು ಹಿಂಜೆವಾಡಿ ಪೊಲೀಸ್ ಠಾಣೆಯ

ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟ‌ರ್ ಪತನ, ಮೂವರ ಸಾವು Read More »

ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್

ಸಮಗ್ರ ನ್ಯೂಸ್: ಇಸ್ರೇಲ್ ಮೇಲೆ 100ಕ್ಕೂ ಹೆಚ್ಚು ಕ್ಷಿಪಣಿಗಳಿಂದ ಇರಾನ್ ದಾಳಿ ನಡೆಸಿದೆ.  ಇಸ್ರೇಲ್‌ ವಿರುದ್ಧ ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ ನಡೆಸಲು ತಯಾರಿ ನಡೆಸುತ್ತಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದ್ದು, ಇಸ್ರೇಲ್‌ನಾದ್ಯಂತ ಸೈರನ್‌ ಮೊಳಗಿದೆ. ಗಾಜಾ ಪಟ್ಟಿಯಿಂದ ಆರಂಭವಾದ ಸಂಘರ್ಷ ವಿಶ್ವವೇ ಆತಂಕಕ್ಕೆ ಒಳಗಾಗುವಂತೆ ಮಾಡಿದ್ದಲ್ಲದೆ. ತನಗೆ ಎದುರಾಗಿ ಯಾರೇ ನಿಂತರೂ ಹೊಡೆದುರುಳಿಸುತ್ತೇನೆ ಎಂದು ಇಸ್ರೇಲ್ ಮುನ್ನುಗ್ಗುತ್ತಿದೆ. ಲೆಬನಾನ್‌ನಲ್ಲಿ ಹಿಜ್ಬುಲ್ಲಾ ನಾಯಕನನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆಸಿದ್ದ ಇಸ್ರೇಲ್, ಶತ್ರುಗಳ ಗುಂಪಿನ ನಾಯಕನನ್ನು

ಇಸ್ರೇಲ್ ಮೇಲೆ 100 ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದ ಇರಾನ್ Read More »

ಇಂದು ಬಾನಂಗಳದಲ್ಲಿ ಸೂರ್ಯಗ್ರಹಣ| ಎಲ್ಲೆಲ್ಲಿ ಗೋಚರಿಸಲಿದೆ ಖಗೋಳ ವಿದ್ಯಮಾನ?

ಸಮಗ್ರ ನ್ಯೂಸ್: ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ವರ್ಷದ ಎರಡನೇ ಸೂರ್ಯಗ್ರಹಣವು 2024 ರ ಅಕ್ಟೋಬರ್ 2 ರಂದು ಸಂಭವಿಸಲಿದೆ. ಇಂದು ಹಿಂದೂ ಕ್ಯಾಲೆಂಡರ್ ನಲ್ಲಿ ಅಮಾವಾಸ್ಯೆ ತಿಥಿ. ಗ್ರಹಣವು ರಾತ್ರಿ 9:13 ಕ್ಕೆ ಪ್ರಾರಂಭಗೊಂಡು ಮತ್ತು ಆಗಸ್ಟ್ 3 ರಂದು ಮುಂಜಾನೆ 3:17 ಕ್ಕೆ ಕೊನೆಗೊಳ್ಳುತ್ತದೆ. ಸಂಪೂರ್ಣ ಸೂರ್ಯಗ್ರಹಣವು ಸುಮಾರು 6 ಗಂಟೆ

ಇಂದು ಬಾನಂಗಳದಲ್ಲಿ ಸೂರ್ಯಗ್ರಹಣ| ಎಲ್ಲೆಲ್ಲಿ ಗೋಚರಿಸಲಿದೆ ಖಗೋಳ ವಿದ್ಯಮಾನ? Read More »

ಅ.03 ರಿಂದ ರಾಜ್ಯದಲ್ಲಿ ಶಾಲೆಗಳಿಗೆ ದಸರಾ ರಜೆ

ಸಮಗ್ರ ನ್ಯೂಸ್: ಶಾಲಾ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆ ಸಿಗಲಿದೆ. ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು

ಅ.03 ರಿಂದ ರಾಜ್ಯದಲ್ಲಿ ಶಾಲೆಗಳಿಗೆ ದಸರಾ ರಜೆ Read More »

5,8 ಹಾಗು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಸ್ತಾವ ಕುರಿತು ‘ಸುಪ್ರೀಂ’ ಅಸಮಾಧಾನ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಸ್ತಾವದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ಏನನ್ನೂ ಮಾಡದಂತೆ ಸೆ.30 ರಂದು ಎಚ್ಚರಿಸಿದೆ. 8, 9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಉಪ ನಿರ್ದೇಶಕರು ಸೆಪ್ಟೆಂಬರ್ 4 ಮತ್ತು 15ರಂದು ಜ್ಞಾಪನಾ ಪತ್ರಗಳನ್ನು ಹೊರಡಿಸಿದ್ದರು. ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವ ಯಾವುದನ್ನೂ ಮಾಡಬಾರದು. ಹೀಗಾದರೆ

5,8 ಹಾಗು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಸ್ತಾವ ಕುರಿತು ‘ಸುಪ್ರೀಂ’ ಅಸಮಾಧಾನ Read More »

ಭೂಮಿಗೆ ಬರ್ತಾ ಇದಾರೆ ಸುನೀತಾ ವಿಲಿಯಮ್ಸ್| ಯಾವಾಗ? ಹೇಗೆ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಕೋಟಿ ಕೋಟಿ ಭಾರತೀಯರು & ಇಡೀ ಪ್ರಪಂಚವೇ ಕಾಯುತ್ತಿರುವ ಘಳಿಗೆ ಇದೀಗ ಬಂದಿದ್ದು, ಬಾಹ್ಯಾಕಾಶ ಅಧ್ಯಯನಕ್ಕೆ ತೆರಳಿ ಅಲ್ಲೇ ಸಿಲುಕಿಕೊಂಡಿದ್ದ ಸುನಿತಾ ವಿಲಿಯಮ್ಸ್ ಅವರು ಇದೀಗ ಮರಳಿ ಭೂಮಿಗೆ ಬರುತ್ತಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿರುವ ಸುನಿತಾ ವಿಲಿಯಮ್ಸ್ ಅವರನ್ನ ಈಗ ಭೂಮಿಗೆ ಕರೆದುಕೊಂಡು ಬರಲು ‘ಸ್ಪೇಸ್ ಎಕ್ಸ್’ ಆಕಾಶಕ್ಕೆ ತಲುಪಿದೆ. ಭಾರತ ಮೂಲದ ನಂಟು ಹೊಂದಿರುವ ಬಾಹ್ಯಾಕಾಶ ವಿಜ್ಞಾನಿ ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ಬರುತ್ತಿದ್ದಾರೆ. ಹಾಗಾದ್ರೆ ಇವರು ಇಷ್ಟುದಿನ ಎಲ್ಲಿ ಇದ್ದರು?

ಭೂಮಿಗೆ ಬರ್ತಾ ಇದಾರೆ ಸುನೀತಾ ವಿಲಿಯಮ್ಸ್| ಯಾವಾಗ? ಹೇಗೆ? ಇಲ್ಲಿದೆ ಡೀಟೈಲ್ಸ್ Read More »

ಅ.2 ರಂದು ಗಾಂಧಿ ಜಯಂತಿ/ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ

ಸಮಗ್ರ ನ್ಯೂಸ್‌: ಅ.2 ರಂದು ಗಾಂಧಿ ಜಯಂತಿಯನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ನಾಡ ಹಬ್ಬಗಳನ್ನು ಮತ್ತು ಪ್ರಮುಖ ಜಯಂತಿಗಳನ್ನು ಆಯಾ ದಿನದಂದು ಕಡ್ಡಾಯವಾಗಿ ಗೌರವಪೂರ್ವಕವಾಗಿ ಆಚರಿಸಲು ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಉಲ್ಲೇಖ-01 ರಂತೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಲಾಗಿರುತ್ತದೆ.

ಅ.2 ರಂದು ಗಾಂಧಿ ಜಯಂತಿ/ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ Read More »

ಇಸ್ರೇಲ್ ದಾಳಿಗೆ ಹಿಜ್ಜುಲ್ಲ ಕೇಂದ್ರ ಕಚೇರಿ ಧ್ವಂಸ

ಸಮಗ್ರ ನ್ಯೂಸ್:ಇಸ್ರೇಲ್ ಮತ್ತು ಹಿಜ್ಜುಲ್ಲ ನಡುವಿನ ಸಮರದಿಂದಾಗಿ ಸೆ.20 ರಂದು ಸಂಜೆ ಇಸ್ರೇಲ್ ವಾಯುಪಡೆ ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿ ಭಾರಿ ದಾಳಿ ನಡೆಸಿ ಹಿಜ್ಜುಲ್ಲದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ.ಅಲ್ಲಿಯ ಮುಖ್ಯಸ್ಥನಾದ ಹಸನ್ ನಸ್ರಲ್ಲಾ ತಪ್ಪಿಸಿಕೊಂಡಿದ್ದಾನೆ.ದಾಳಿಗೆ 8 ಬಲಿಯಾಗಿ 76 ಮಂದಿಗೆ ಗಾಯಗೊಂಡಿದ್ದಾರೆ. ಅವರು ಅಂತಹ ದಾಳಿಯಿಂದ ಬದುಕುಳಿದಿದ್ದಾರೆಂದು ಇಸ್ರೇಲ್ ದಾಳಿಯಲ್ಲಿ ಆರು ಕಟ್ಟಡಗಳು ಧ್ವಂಸಗೊಂಡಿವೆ ಎಂದು ಹಿಜ್ಜುಲ್ಲಗೆ ನಿಕಟವಾದ ಮೂಲವೊಂದು ತಿಳಿಸಿದೆ.ಹಿಜ್ಜುಲ್ಲ ಮತ್ತು ಇಸ್ರೇಲ್ ನಡುವಿನ ಸುಮಾರು ಒಂದು ವರ್ಷದ ಸಂಘರ್ಷದಲ್ಲಿ ಬೈರುತ್‌ನಲ್ಲಿ ನಡೆದ ಅತಿದೊಡ್ಡ ದಾಳಿ

ಇಸ್ರೇಲ್ ದಾಳಿಗೆ ಹಿಜ್ಜುಲ್ಲ ಕೇಂದ್ರ ಕಚೇರಿ ಧ್ವಂಸ Read More »

ಟಾಟ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ

ಸಮಗ್ರ ನ್ಯೂಸ್: ತಮಿಳುನಾಡಿನ ಹೊಸೂರು ಸಮೀಪದ ಕೂತನಹಳ್ಳಿಯ ಟಾಟಾ ಫ್ಯಾಕ್ಟರಿಯ ಕೆಮಿಕಲ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗಾಹುತಿಯಾದ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು, ಸಿಬ್ಬಂದಿಗಳು ಹೊರಗೋಡಿ ಬಂದಿದ್ದಾರೆ. ದಟ್ಟ ಹೊಗೆಯಿಂದಾಗಿ ಕೆಲ ಮಹಿಳಾ ಸಿಬ್ಬಂದಿಗಳಿಗೆ ಉಸಿರಾಟದ ತೊಂದರೆ ಎದುರಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ರಾಯಕೋಟೆ, ಡಂಕನಿಕೋಟೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಟಾಟ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ Read More »