ದೇಶ-ವಿದೇಶ

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ

ಸಮಗ್ರ ನ್ಯೂಸ್: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷೆ ಬರೆಯುವ ಮಕ್ಕಳಿಗೆ ಬಿಸಿಯೂಟ ನೀಡಲು ನಿರ್ಧರಿಸಿದೆ. ರಾಜ್ಯಾದ್ಯಂತ ಮಾ.25 ರಿಂದ ಏಪ್ರಿಲ್ 10ರವರೆಗೆ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಬಿಸಿಯೂಟ ಪೂರೈಕೆ ಮಾಡಬೇಕು ಎಂದು ಹೇಳಿದೆ. ಉತ್ತಮ ಆರೋಗ್ಯ, ಶುದ್ಧ ಕುಡಿಯುವ ನೀರು ಹಾಗೂ ನೈರ್ಮಲ್ಯದ ಕಡೆ ಗಮನ ಇಡುವಂತೆ ಸರ್ಕಾರ ಸೂಚನೆ ನೀಡಿದೆ.

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್/ ಪರೀಕ್ಷೆ ನಂತರ ಬಿಸಿಯೂಟ ಪೂರೈಕೆ Read More »

ನೀರಿನ ಸಂಗ್ರಹಣಾ ಮಟ್ಟ ಕುಸಿತ/ ಆತಂಕ ಸೃಷ್ಟಿಸಿದ ಕೇಂದ್ರೀಯ ಜಲ ಆಯೋಗದ ವರದಿ

ಸಮಗ್ರ ನ್ಯೂಸ್: ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದಲ್ಲಿ ನೀರಿನ ಸಂಗ್ರಹಣಾ ಮಟ್ಟ ಆತಂಕಕಾರಿ ಮಟ್ಟದಲ್ಲಿ ಕುಸಿದಿದೆ ಎಂಬ ಆಘಾತಕಾರಿ ಅಂಶ ಕೇಂದ್ರೀಯ ಜಲ ಆಯೋಗವು ಬಿಡುಗಡೆ ಮಾಡುವ ವಾರದ ಬುಲೆಟಿನ್‍ನಲ್ಲಿ ಪ್ರಸ್ತಾಪವಾಗಿದೆ. ಹಿಮಾಚಲ ಪ್ರದೇಶ, ಪಂಜಾಬ್, ಮಧ್ಯಪ್ರದೇಶ, ತ್ರಿಪುರಾ, ರಾಜಸ್ಥಾನ, ಬಿಹಾರ, ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್, ಛತ್ತೀಸಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಸಹಿತ ಹಲವು ರಾಜ್ಯಗಳಲ್ಲಿಯೂ ಇದೇ ಸ್ಥಿತಿ ಇದೆ ಎಂದು ಆಯೋಗ ತಿಳಿಸಿದೆ. ದೇಶದಲ್ಲಿರುವ 150 ಪ್ರಮುಖ ಜಲಾಶಯಗಳಲ್ಲಿ

ನೀರಿನ ಸಂಗ್ರಹಣಾ ಮಟ್ಟ ಕುಸಿತ/ ಆತಂಕ ಸೃಷ್ಟಿಸಿದ ಕೇಂದ್ರೀಯ ಜಲ ಆಯೋಗದ ವರದಿ Read More »

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆ-1ಯು ಮಾ.25ರಿಂದ ಪ್ರಾರಂಭವಾಗುತ್ತಿದ್ದು, ರಾಜ್ಯಾದ್ಯಂತ 2,750 ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಒಟ್ಟು ವಿದ್ಯಾರ್ಥಿಗಳ ನೋಂದಣಿಯಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳಾಗಿದ್ದಾರೆ. 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 4,41,910 ಬಾಲಕರು ಮತ್ತು 4,28,058 ಬಾಲಕಿಯರು ಪರೀಕ್ಷೆಯನ್ನು ಬರೆಯುತ್ತಿದ್ದು, ಈ ಬಾರಿ 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಮಾ.25ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಶುರು Read More »

ಮಾಸ್ಕೋದಲ್ಲಿ ಗುಂಡಿನ ದಾಳಿ/ 40ಕ್ಕೂ ಅಧಿಕ ಜನರ ಸಾವು

ಸಮಗ್ರ ನ್ಯೂಸ್: ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಮೂರು ಜನ ಬಂದೂಕುಧಾರಿಗಳು ಸಭೆ-ಸಮಾರಂಭಗಳು ನಡೆಯುವ ಸಿಟಿ ಕ್ರಾಕಸ್ ಹಾಲ್‍ಗೆ ನುಗ್ಗಿ ಅಂಧಾದುಂಧಿ ದಾಳಿ ನಡೆಸಿ ಬೆಂಕಿ ಹಚ್ಚಿದ್ದು, ಸುಮಾರು 40ಕ್ಕೂ ಅಧಿಕ ಜನರು ಸಾವನ್ನಪ್ಪಿರುವ ಭೀಕರ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಹಾಲ್‍ನಲ್ಲಿ ಸಮಾರಂಭವೊಂದು ನಡೆಯುತ್ತಿದ್ದಾಗ ಸುಮಾರು 3 ಬಂದೂಕುಧಾರಿಗಳು ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ್ದು ಅಲ್ಲದೇ ಹಾಲ್‍ಗೆ ಬೆಂಕಿ ಹಚ್ಚಿದ್ದಾರೆ. ಆಗ ಭಯಗ್ರಸ್ತ ಜನರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಈ ವೇಳೆ ಅನೇಕರು ಅಸುನೀಗಿ ಹಲವರು ಗಾಯಗೊಂಡಿದ್ದಾರೆ

ಮಾಸ್ಕೋದಲ್ಲಿ ಗುಂಡಿನ ದಾಳಿ/ 40ಕ್ಕೂ ಅಧಿಕ ಜನರ ಸಾವು Read More »

ಭಾರತ-ಭೂತಾನ್ ರೈಲು ಸೇವೆ/ ಒಪ್ಪಂದಕ್ಕೆ ಸಹಿ ಹಾಕಿದ ಉಭಯ ಪ್ರಧಾನಿಗಳು

ಸಮಗ್ರ ನ್ಯೂಸ್: ಭೂತಾನ್ ಮತ್ತು ಭಾರತದ ನಡುವೆ ಇಂಧನ, ವ್ಯಾಪಾರ, ಡಿಜಿಟಲ್ ಸಂಪರ್ಕ, ಬಾಹ್ಯಾಕಾಶ ಮತ್ತು ಕೃಷಿ ಕ್ಷೇತ್ರಗಳ ನಡುವಿನ ವಿನಿಯಮದ ಒಪ್ಪಂದಕ್ಕೆ ಉಭಯ ದೇಶಗಳ ಪ್ರಧಾನಿಗಳು ಸಹಿ ಹಾಕಿದ್ದಾರೆ. ಭೂತಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಭೂತಾನ್ ಮತ್ತು ಭಾರತದ ನಡುವೆ ರೈಲು ಸಂಪರ್ಕ ಸ್ಥಾಪಿಸುವ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದ್ದು, ಈ ಮೂಲಕ ನೆರೆಯ ದೇಶಗಳ ನಡುವೆ ರೈಲು ಸಂಚಾರ ಆರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಬೆ ಅವರ ಉಪಸ್ಥಿತಿಯಲ್ಲಿ

ಭಾರತ-ಭೂತಾನ್ ರೈಲು ಸೇವೆ/ ಒಪ್ಪಂದಕ್ಕೆ ಸಹಿ ಹಾಕಿದ ಉಭಯ ಪ್ರಧಾನಿಗಳು Read More »

17 ಶಾಲೆಗಳ ಮಾನ್ಯತೆ ರದ್ದು/ ಕಠಿಣ ಕ್ರಮ ಕೈಗೊಂಡ ಸಿಬಿಎಸ್‍ಇ

ಸಮಗ್ರ ನ್ಯೂಸ್: ಸಂಯೋಜಿತವಲ್ಲದ ಶಾಲೆಗಳು, ನಕಲಿ ವಿದ್ಯಾರ್ಥಿಗಳು, ಅನರ್ಹ ಅಭ್ಯರ್ಥಿಗಳನ್ನು ಪ್ರಸ್ತುತ ಪಡಿಸುತ್ತಿವೆ ಮತ್ತು ದಾಖಲೆಗಳನ್ನ ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ಉದ್ದೇಶದಿಂದ 17 ಶಾಲೆಗಳ ಮಾನ್ಯತೆಯನ್ನು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ರದ್ದುಗೊಳಿಸಿದೆ. ಇದರ ಜೊತೆಗೆ ಇನ್ನು 3 ಶಾಲೆಗಳನ್ನು ಕೆಳದರ್ಜೆಗೆ ಇಳಿಸಿದೆ. ‘ಈ ಶಾಲೆಗಳು ನಕಲಿ ವಿದ್ಯಾರ್ಥಿಗಳು, ಅನರ್ಹ ಅಭ್ಯರ್ಥಿಗಳನ್ನು ಪ್ರಸ್ತುತಪಡಿಸುವ ಮತ್ತು ದಾಖಲೆಗಳನ್ನ ಸರಿಯಾಗಿ ನಿರ್ವಹಿಸದ ವಿವಿಧ ದುಷ್ಕೃತ್ಯಗಳನ್ನು ಮಾಡುತ್ತಿರುವುದನ್ನು ಕಂಡುಕೊಂಡ ನಂತರ ಸಿಬಿಎಸ್‍ಇ 17 ಶಾಲೆಗಳನ್ನು ಅಮಾನತುಗೊಳಿಸಿದೆ, ಇನ್ನು 3 ಶಾಲೆಗಳನ್ನು

17 ಶಾಲೆಗಳ ಮಾನ್ಯತೆ ರದ್ದು/ ಕಠಿಣ ಕ್ರಮ ಕೈಗೊಂಡ ಸಿಬಿಎಸ್‍ಇ Read More »

ನಿಯಮ ಉಲ್ಲಂಘನೆ/ ಏರ್ ಇಂಡಿಯಾಕ್ಕೆ 80 ಲಕ್ಷ ದಂಡ

ಸಮಗ್ರ ನ್ಯೂಸ್: ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ವಿಮಾನದ ಕರ್ತವ್ಯದ ಸಮಯ ಮಿತಿಗಳು ಮತ್ತು ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಗಾಗಿ ಏರ್ ಇಂಡಿಯಾಕ್ಕೆ 80 ಲಕ್ಷ ರೂ. ದಂಡ ವಿಧಿಸಿದೆ. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ಜನವರಿಯಲ್ಲಿ ಏರ್ ಇಂಡಿಯಾದ ಸ್ಪಾಟ್ ಆಡಿಟ್ ಅನ್ನು ನಡೆಸಿತ್ತು. ಆಗ ಸಂಗ್ರಹಿಸಲಾಗಿದ್ದ ಸಾಕ್ಷಾಧಾರಗಳು ಆಧಾರದ ಮೇಲೆ ದಂಡ ವಿಧಿಸಿದೆ. ಫೈಟ್ ಡ್ಯೂಟಿ ಟೈಮ್ ಲಿಮಿಟೇಷನ್ (ಎಫ್‍ಡಿಟಿಎಲ್) ಮತ್ತು ವಿಮಾನ ಸಿಬ್ಬಂದಿಯ ಆಯಾಸ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದ

ನಿಯಮ ಉಲ್ಲಂಘನೆ/ ಏರ್ ಇಂಡಿಯಾಕ್ಕೆ 80 ಲಕ್ಷ ದಂಡ Read More »

ಪಬ್ಲಿಕ್ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗುವ ಸಾಧ್ಯತೆ/ ಸುಪ್ರೀಂ ಮೆಟ್ಟಿಲೇರಲು ರುಪ್ಸಾ ನಿರ್ಧಾರ

ಸಮಗ್ರ ನ್ಯೂಸ್: 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಮತ್ತೆ ಸಮಸ್ಯೆ ಎದುರಾಗುವ ಸಾಧ್ಯತೆ ಕಾಣುತ್ತಿದೆ. ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಆದರೆ ಈ ಆದೇಶದ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ರುಪ್ಸಾ) ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧರಿಸಿದೆ. ಹೀಗಾಗಿ ಮತ್ತೆ ಸುಪ್ರೀಂಕೋರ್ಟ್ ನಿರ್ಧಾರದ ಮೇಲೆ ಪರೀಕ್ಷೆ ಭವಿಷ್ಯ ನಿಂತಿದೆ. ನ್ಯಾ. ಸೋಮಶೇಖರ್ ಹಾಗೂ ನ್ಯಾ. ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಪಬ್ಲಿಕ್ ಪರೀಕ್ಷೆಗೆ

ಪಬ್ಲಿಕ್ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗುವ ಸಾಧ್ಯತೆ/ ಸುಪ್ರೀಂ ಮೆಟ್ಟಿಲೇರಲು ರುಪ್ಸಾ ನಿರ್ಧಾರ Read More »

ಕೇಜ್ರಿವಾಲ್ ಮದ್ಯ ನೀತಿ ಪ್ರಕರಣ/ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಸಮಗ್ರ ನ್ಯೂಸ್: ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇತ್ತ ಬಂಧಿತರಾಗಿರುವ ಪ್ರತಿವಾದಿಯು ಮುಖ್ಯಮಂತ್ರಿ ಕಚೇರಿಯನ್ನು ಹೊಂದಿದ್ದಾರೆ. ಅವರು ಕಸ್ಟಡಿಯಲ್ಲಿರುವ ಕಾರಣ ಸಾರ್ವಜನಿಕ ಸೇವಕರಾಗಿ ತಮ್ಮ ಕರ್ತವ್ಯಗಳು ಮತ್ತು ಜವಾಬ್ದಾರಿಗಳನ್ನು ನಿವರ್ಹಿಸೋದು ಸಾಧ್ಯವಾಗೋದಿಲ್ಲ. ಈ ಕಾರಣಕ್ಕಾಗಿ ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಬಿಡಬಾರದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಆದರೆ ಆಮ್ ಆದ್ಮಿ ಪಕ್ಷದ ನಾಯಕರು ಕೇಜ್ರಿವಾಲ್ ಅವರು

ಕೇಜ್ರಿವಾಲ್ ಮದ್ಯ ನೀತಿ ಪ್ರಕರಣ/ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ದೆಹಲಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ Read More »

ಕೇಜ್ರಿವಾಲ್ ಅರೆಸ್ಟ್/ ಸ್ವಯಂಕೃತ ಅಪರಾಧ ಎಂದ ಅಣ್ಣಾ ಹಜಾರೆ

ಸಮಗ್ರ ನ್ಯೂಸ್: ಅಕ್ರಮ ಮದ್ಯ ನೀತಿ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಬಂಧನದ ಕುರಿತು ಲೋಕಪಾಲ್ ಹೋರಾಟದಲ್ಲಿ ಮುಂಚೂಣಿಯಲ್ಲಿ ಇದ್ದ ಸಾಮಾಜಿಕ ಹೋರಾಟಗಾರ, ಅರವಿಂದ್ ಕೇಜಿವಾಲ್ ಆಪ್ತರಾಗಿರುವ ಅಣ್ಣಾ ಹಜಾರೆ ಪ್ರತಿಕ್ರಿಯೆ ನೀಡಿದ್ದು, “ನನ್ನ ಜೊತೆ ಹಲವು ಹೋರಾಟದಲ್ಲಿ ಪಾಲ್ಗೊಂಡಿರುವ ಅರವಿಂದ್ ಕೇಜ್ರವಾಲ್ ಮದ್ಯದ ವಿರುದ್ಧ ಧ್ವನಿ ಎತ್ತಿದ್ದರು. ಹೋರಾಟ ಮಾಡಿದ್ದರು. ಆದರೆ ಈಗ ಅದೇ ಮದ್ಯ ನೀತಿ ಮಾಡಿ ಬಂಧನವಾಗಿದ್ದಾರೆ. ಕೇಜ್ರವಾಲ್ ಬಂಧನದಿಂದ ಬೇಸರವಾಗಿದೆ. ಈ ಬಂಧನ ಕೇಜಿವಾಲ್ ಸ್ವಯಂಕೃತ” ಎಂದಿದ್ದಾರೆ. ಈಗ ಅವರೇನು

ಕೇಜ್ರಿವಾಲ್ ಅರೆಸ್ಟ್/ ಸ್ವಯಂಕೃತ ಅಪರಾಧ ಎಂದ ಅಣ್ಣಾ ಹಜಾರೆ Read More »