ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆ ಕುಸಿತ| 17 ಮಂದಿ ದುರ್ಮರಣ
ಸಮಗ್ರನ್ಯೂಸ್: ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆಯೊಂದು ಕುಸಿದು ಬಿದ್ದು 17 ಮಂದಿ ಮೃತಪಟ್ಟಿರುವ ಘಟನೆ ಮಿಝೋರಾಂನಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ಇದ್ದು, ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ. ಸೇತುವೆ ಕುಸಿದಾಗ ಸುಮಾರು 35 ರಿಂದ 40 ಕಟ್ಟಡ ಕಾರ್ಮಿಕರು ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಿಝೋರಾಂ ನ ಐಝಾಲ್ ನಿಂದ ಸುಮಾರು 21 ಕಿ.ಮೀ. ದೂರದಲ್ಲಿರುವ ಸಾಯಿರಾಂಗ್ ಪ್ರದೇಶದಿಂದ ಈ ಘಟನೆ ವರದಿಯಾಗಿದೆ. ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ […]
ನಿರ್ಮಾಣ ಹಂತದಲ್ಲಿದ್ದ ರೈಲ್ವೇ ಸೇತುವೆ ಕುಸಿತ| 17 ಮಂದಿ ದುರ್ಮರಣ Read More »










