ರಾಷ್ಟ್ರೀಯ

ನಾಳೆ ಪ್ರಧಾನಿ ಮೋದಿ ಹುಟ್ಟುಹಬ್ಬ| ಹುಟ್ಟಿದ ಪ್ರತೀ ಮಗುವಿಗೂ ಸಿಗಲಿದೆ ಚಿನ್ನದ ಉಂಗುರ, 720 ಕೆ.ಜಿ ಮೀನು!!

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 (ನಾಳೆ)ರಂದು ತಮಿಳುನಾಡಿನ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಘಟಕವು ನಾಳೆ ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಗುತ್ತದೆ. ಸ್ಥಳೀಯ ಘಟಕದ ಪ್ರಕಾರ, ಸೆಪ್ಟೆಂಬರ್ […]

ನಾಳೆ ಪ್ರಧಾನಿ ಮೋದಿ ಹುಟ್ಟುಹಬ್ಬ| ಹುಟ್ಟಿದ ಪ್ರತೀ ಮಗುವಿಗೂ ಸಿಗಲಿದೆ ಚಿನ್ನದ ಉಂಗುರ, 720 ಕೆ.ಜಿ ಮೀನು!! Read More »

ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ

ಸಮಗ್ರ ನ್ಯೂಸ್: ಯೋಗಿ ಆದಿತ್ಯನಾಥ್ ರವರ ರಾಜ್ಯ ಉತ್ತರ ಪ್ರದೇಶದ ಲಖೀಂಪುರಖೇರಿಯಲ್ಲಿ ಇಬ್ಬರು ದಲಿತ ಸಹೋದರಿಯರು ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಈ ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಆರು ಮಂದಿಯನ್ನು ಬಂಧಿಸಲಾಗಿದೆ. 15 ಮತ್ತು 17 ವರ್ಷದ ಈ ಹೆಣ್ಣುಮಕ್ಕಳನ್ನು ಇಬ್ಬರು ಆರೋಪಿಗಳು ಮದುವೆ ಮಾಡಿಕೊಳ್ಳುವುದಾಗಿ ಹೇಳಿ, ನಾಲ್ವರ ಜತೆಗೆ ಸೇರಿಕೊಂಡು ಅತ್ಯಾಚಾರ ಎಸಗಿ, ಕತ್ತುಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಯೋಗಿನಾಡಲ್ಲಿ ದಲಿತ ಅಪ್ರಾಪ್ತ ಸಹೋದರಿಯರ ಮೇಲೆ ಅತ್ಯಾಚಾರವೆಸಗಿ ಕೊಲೆ| ಮತ್ತೊಂದು ಕರಾಳ ಘಟನೆಗೆ ಸಾಕ್ಷಿಯಾಯ್ತು ಲಖೀಂಪುರ Read More »

ನಿಮ್ಮ ಫೋನ್‌ನಲ್ಲಿ ಈ ಆ್ಯಪ್ ಗಳು ಡೇಂಜರ್!

ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಅಪಯಾಕಾರಿ, ಅಕ್ರಮ ಆಯಪ್‌ಗಳಿಗೆ ಪ್ರವೇಶವಿಲ್ಲ. ಆದರೆ ಹಲವು ಬಾರಿ ಹ್ಯಾಕರ್‌ಗಳು ಗೂಗಲ್ ಪ್ಲೇ ಸ್ಟೋರ್ ಕಣ್ತಪ್ಪಿಸಿ ಅಪಾಯಾಕಾರಿ ಆಯಪ್‌ಗಳನ್ನು ಸೇರಿಸುತ್ತಾರೆ. ಹೀಗಾಗಿ ಹ್ಯಾಕರ್‌ಗಳು ಸೇರಿಸಿದ 35ಕ್ಕೂ ಹೆಚ್ಚು ಆಯಪ್‌ಗಳು ಅತ್ಯಂತ ಅಪಾಯಕಾರಿ ಎಂದು ಸೈಬರ್ ಸೆಕ್ಯೂರಿಟಿ ಟೆಕ್ನಾಲಜಿ ಸಂಸ್ಥೆ ಹೇಳಿದೆ. ಆಯಂಡ್ರಾಯ್ಡ್ ಗೂಗಲ್ ಪ್ಲೇ ಸ್ಟೋರ್‌ನಲ್ಲಿರುವ 35 ಆಯಪ್ ಕುರಿತು ಗೂಗಲ್‌ಗೆ ಮಾಹಿತಿ ನೀಡಲಾಗಿದೆ. ಈ ಆಯಪ್‌ಗೆ ನಿರ್ಬಂಧ ವಿಧಿಸಲು ಸೈಬರ್ ಸೆಕ್ಯೂರಿಟಿ ಟೆಕ್ನಾಲಜಿ ಸಂಸ್ಥೆ ಸೂಚಿಸಿದೆ. ಸೈಬರ್ ಸೆಕ್ಯೂರಿಟಿ ಟೆಕ್ನಾಲಜಿ ಕಂಪನಿ

ನಿಮ್ಮ ಫೋನ್‌ನಲ್ಲಿ ಈ ಆ್ಯಪ್ ಗಳು ಡೇಂಜರ್! Read More »

ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು

ಸಮಗ್ರ ನ್ಯೂಸ್: ಜ್ಞಾನವ್ಯಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶೃಂಗಾರ ಗೌರಿ ಹಾಗೂ ಶಿವಲಿಂಗದ ದರ್ಶನ ಮತ್ತು ಪ್ರತಿನಿತ್ಯ ಪೂಜೆ ಸಲ್ಲಿಸಲು ಅವಕಾಶ ಕೋರಿ ರಾಖಿಸಿಂಗ್ ಸೇರಿ ನಾಲ್ವರು ಮಹಿಳೆಯರು ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ಕೋರ್ಟ್‌ ‘ಗ್ರೀನ್‌ ಸಿಗ್ನಲ್‌’ ನೀಡಿದೆ. ಪ್ರಸಿದ್ಧ ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ನಗರದ ಜ್ಞಾನವಾಪಿ ಮಸೀದಿಯೊಳಗೆ ಪೂಜಿಸುವ ಹಕ್ಕನ್ನು ಕೋರಿ ಐವರು ಹಿಂದೂ ಮಹಿಳೆಯರು ದಾಖಲಿಸಿರುವ ಪ್ರಕರಣವನ್ನು ಆಲಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ವಾರಣಾಸಿಯ ಹಿರಿಯ ನ್ಯಾಯಾಧೀಶರ ನ್ಯಾಯಾಲಯವು ಇಂದು ನಿರ್ಧರಿಸಿದ್ದಾರೆ. ಜಿಲ್ಲಾ

ಜ್ಞಾನವ್ಯಾಪಿ ಮಸೀದಿ ವಿವಾದ| ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಅಸ್ತು Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಮತ್ತೆ ಭಾರೀ ಮಳೆ ಸಾಧ್ಯತೆ; ಪ್ರವಾಹ ಭೀತಿಯಲ್ಲಿ ಹಲವು ರಾಜ್ಯಗಳು!!

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಹಲವು ರಾಜ್ಯಗಳಲ್ಲಿ ಮತ್ತೆ ಪ್ರವಾಹ ಭೀತಿಯನ್ನು ಉಂಟುಮಾಡಿದೆ. ಶನಿವಾರದಿಂದಲೇ ಒಡಿಶಾ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಧಾರಾಕಾರ ಮಳೆ ಆರಂಭವಾಗಿದ್ದು, ಇನ್ನೂ 5 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಮಳೆ, ಪ್ರವಾಹ, ಭೂಕುಸಿತದಂತಹ ದುರಂತಗಳಿಂದ ಕಂಗಾಲಾಗಿದ್ದ ಜನರನ್ನು ಮತ್ತೆ ಆತಂಕಕ್ಕೆ ನೂಕಿದೆ. ಒಡಿಶಾದಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಮತ್ತೆ ಭಾರೀ ಮಳೆ ಸಾಧ್ಯತೆ; ಪ್ರವಾಹ ಭೀತಿಯಲ್ಲಿ ಹಲವು ರಾಜ್ಯಗಳು!! Read More »

‘ರಾಷ್ಟ್ರೀಯ ಧರ್ಮಗ್ರಂಥ’ವಾಗಿ ‘ಶ್ರೀಮದ್ ಭಗವದ್ಗೀತೆ’! ಶೀಘ್ರದಲ್ಲೇ ಕೇಂದ್ರ ಸರ್ಕಾರ ಘೋಷಣೆ ಸಾಧ್ಯತೆ

ಸಮಗ್ರ ನ್ಯೂಸ್: ರಾಷ್ಟ್ರಗೀತೆ, ರಾಷ್ಟ್ರಗೀತೆ, ರಾಷ್ಟ್ರ ಧ್ವಜದಂತೆಯೇ ಶೀಘ್ರದಲ್ಲೇ ರಾಷ್ಟ್ರ ಗ್ರಂಥ ಬರಲಿದೆ. ಭಾರತ ಸರ್ಕಾರವು ಶ್ರೀಮದ್ ಭಗವದ್ಗೀತೆಯನ್ನ ರಾಷ್ಟ್ರೀಯ ಗ್ರಂಥವೆಂದು ಘೋಷಿಸಬಹುದು. ಇದನ್ನು ಜಾರಿಗೆ ತರುವ ಪ್ರಯತ್ನವನ್ನ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸುತ್ತಿದೆ. ಇದಕ್ಕಾಗಿ, ಭಾರತ ಸರ್ಕಾರವು ವಿವಿಧ ಸಚಿವಾಲಯಗಳಿಂದ ಅಭಿಪ್ರಾಯವನ್ನ ತೆಗೆದುಕೊಳ್ಳುತ್ತಿದೆ. ಗಮನಾರ್ಹವಾಗಿ, ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಅವರು ಕಳುಹಿಸಿದ ಪತ್ರದ ಆಧಾರದ ಮೇಲೆ ಸರ್ಕಾರವು ಈ ಅಭ್ಯಾಸ ನಡೆಸಿದೆ. ಮಹಾರಾಷ್ಟ್ರದ ಬಿಜೆಪಿ ಸಂಸದ ಗೋಪಾಲ್ ಶೆಟ್ಟಿ ಜುಲೈ 5ರಂದು ಕೇಂದ್ರ

‘ರಾಷ್ಟ್ರೀಯ ಧರ್ಮಗ್ರಂಥ’ವಾಗಿ ‘ಶ್ರೀಮದ್ ಭಗವದ್ಗೀತೆ’! ಶೀಘ್ರದಲ್ಲೇ ಕೇಂದ್ರ ಸರ್ಕಾರ ಘೋಷಣೆ ಸಾಧ್ಯತೆ Read More »

ನವೀಕೃತ ‘ಸೆಂಟ್ರಲ್ ವಿಸ್ತಾ’ ಇಂದು ಉದ್ಘಾಟನೆ| ಕರ್ತವ್ಯ ಪಥಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ನವೀಕೃತ ಸೆಂಟ್ರಲ್ ವಿಸ್ತಾದ ಕೆಲವು ಭಾಗ, ಕರ್ತವ್ಯ ಪಥ ಹಾಗೂ ಇಂಡಿಯಾ ಗೇಟ್ ಸನಿಹ ಪ್ರತಿಸ್ಠಾಪಿಸಲಾಗಿರುವ ನೇತಾಜಿ ಸಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು, ಇಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ. ನವೀಕೃತ ಸೆಂಟ್ರಲ್ ವಿಸ್ತಾ ಬಹುತೇಕ ಸಿದ್ಧವಾಗಿದ್ದು, ಮೋದಿ ವಿಜಯ್ ಚೌಕ್ ನಿಂದ ಇಂಡಿಯಾ ಗೇಟ್ ವರೆಗಿನ ಭಾಗವನ್ನು ಇಂದು ಉದ್ಘಾಟಿಸಲಿದ್ದಾರೆ. ಈ ನವೀಕೃತ ಸೆಂಟ್ರಲ್ ವಿಸ್ತಾದಲ್ಲಿ ರಾಜ್ಯವಾರು ಆಹಾರ ಮಳಿಗೆಗಳು, ಕೆಂಪು ಗ್ರಾನೈಟ್ ಪಾದಚಾರಿ ಮಾರ್ಗಗಳು, ಸುತ್ತಲೂ ಹಸಿರು ಉದ್ಯಾನವನಗಳು ಪ್ರಮುಖ

ನವೀಕೃತ ‘ಸೆಂಟ್ರಲ್ ವಿಸ್ತಾ’ ಇಂದು ಉದ್ಘಾಟನೆ| ಕರ್ತವ್ಯ ಪಥಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ Read More »

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬರೆದ ಚೆಕ್ಕನ್ನು ಅಮಾನ್ಯ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಶಾಖೆಗೆ 85,177 ರೂ.ದಂಡ ಪರಿಹಾರ ಪಾವತಿಸುವಂತೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶ ನೀಡಿದೆ. ವಾದಿರಾಜಾಚಾರ್ಯ ಇನಾಮದಾರ ಎಂಬುವರು ತಮ್ಮ ಉಳಿತಾಯ ಖಾತೆ(Account)ಯಲ್ಲಿದ್ದ ಹಣ ಹಿಂಪಡೆಯಲು ಕನ್ನಡದಲ್ಲಿ ಬರೆದ ಚೆಕ್ ಅನ್ನು ಬ್ಯಾಂಕ್ ಗೆ ನೀಡಿದ್ದು, ಈ ವೇಳೆಯಲ್ಲಿ, ಹಳಿಯಾಳದ ಎಸ್‌ಬಿಐ ಶಾಖೆ ತಿರಸ್ಕರಿಸಿತ್ತು. ಬ್ಯಾಂಕ್ ಕಾರ್ಯವೈಖರಿ ವಿರುದ್ದ ನ್ಯಾಯಕ್ಕಾಗಿ, ಜಿಲ್ಲಾ ಗ್ರಾಹಕರ

ಕನ್ನಡದಲ್ಲಿ ಬರೆದ ಚೆಕ್ ಅಮಾನ್ಯ ಮಾಡಿದ ಸ್ಟೇಟ್ ಬ್ಯಾಂಕ್| ಬರೋಬ್ಬರಿ 85 ಸಾವಿರ ದಂಡ ವಿಧಿಸಿದ ಗ್ರಾಹಕರ‌ ಆಯೋಗ Read More »

ಇಂದು(ಸೆ.7) NEET ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ವೈದ್ಯಕೀಯ ಮತ್ತು ದಂತ ವೈದ್ಯಕೀಯ, ಆಯುಷ್ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ನೀಟ್ ಫಲಿತಾಂಶ ಇಂದು(ಸೆ.7) ಪ್ರಕಟವಾಗಲಿದೆ ವಿದ್ಯಾರ್ಥಿಗಳು ಫಲಿತಾಂಶವನ್ನು ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದ್ದು, ಇದಕ್ಕಾಗಿ neet.nta.nic.in ಗೆ ಭೇಟಿ ನೀಡಬೇಕಾಗುತ್ತದೆ. ತಮ್ಮ ಲಾಗಿನ್ ಐಡಿ, ಜನ್ಮ ದಿನಾಂಕ ಹಾಗೂ ನೋಂದಣಿ ಸಂಖ್ಯೆ ನಮೂದಿಸಿ ಫಲಿತಾಂಶ ಪಡೆಯಬಹುದಾಗಿದೆ ಎಂದು ತಿಳಿಸಲಾಗಿದೆ. ಜುಲೈ 17ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ಬರೆಯಲು 18 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಅದರ ಫಲಿತಾಂಶ ಇಂದು ಪ್ರಕಟವಾಗಲಿದೆ. ತಾತ್ಕಾಲಿಕ ಕೀ ಉತ್ತರಗಳನ್ನು

ಇಂದು(ಸೆ.7) NEET ಫಲಿತಾಂಶ ಪ್ರಕಟ Read More »

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ತೀವ್ರ ಹೃದಯಾಘಾತದಿಂದ ಮಂಗಳವಾರ ರಾತ್ರಿ ವಿಧಿವಶರಾಗಿದ್ದಾರೆ. ಮಂಗಳವಾರ ರಾತ್ರಿ ಡಾಲರ್ಸ್‌ ಕಾಲೋನಿ ನಿವಾಸದಲ್ಲಿ ಸಚಿವ ಉಮೇಶ್‌ ಕತ್ತಿ (61) ಅವರಿಗೆ ಹೃದಯಾಘಾತವಾಗಿದ್ದು, ತಕ್ಷಣ ಅವರನ್ನು ಎಂ. ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಉಮೇಶ್ ಕತ್ತಿ ನಿಧನರಾದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ದಂಡು ಎಂ. ಎಸ್‌. ರಾಮಯ್ಯ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಆರೋಗ್ಯ ಸಚಿವ

ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ಸಾವು Read More »