ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ| ರಾಜ್ಯದಲ್ಲಿ ಮೋಡಕವಿದ ವಾತಾವರಣ|
ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇದೆ. ತಮಿಳುನಾಡು ಮತ್ತು […]









