ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ| “ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ”ಎಂದ ಪ್ರಧಾನಿ
ಚಂಡೀಗಢ: ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದ ವೇಳೆ ಭಾರೀ ಭದ್ರತಾ ಲೋಪವಾಗಿದೆ. ಬಟಿಂಡಾದಲ್ಲಿ ಇಂದು ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈಓವರ್‌ನಲ್ಲಿ ಸುಮಾರು 20 […]










