ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಹಲೋಕ ತ್ಯಜಿಸಿದ್ದಾರೆ. ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ನಾಯಕರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಆಸ್ಪತ್ರೆಗೆ […]
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ Read More »