ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆ| ಮೊದಲ ಬಾರಿಗೆ ಉನ್ನತ ಹುದ್ದೆ ಅಲಂಕರಿಸಿದ ಭಾರತ|
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್ಎಸ್ಸಿ) ಅಧ್ಯಕ್ಷ ಸ್ಥಾನವನ್ನು ಭಾರತ ಭಾನುವಾರ ವಹಿಸಿಕೊಂಡಿದೆ. ಮುಂದಿನ ಒಂದು ತಿಂಗಳ ಕಾಲ ಭಾರತ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಯಲಿದೆ. ಈ ಅವಧಿಯಲ್ಲಿ ಹಲವು ಮಹತ್ವದ ವಿಷಯಗಳನ್ನು ಚರ್ಚೆಗೆ ಎತ್ತಿಕೊಳ್ಳಲು ಭಾರತ ನಿರ್ಧರಿಸಿದೆ. ಇನ್ನೊಂದು ವಿಶೇಷವೆಂದರೆ ಆ.9ರಂದು ಭದ್ರತಾ ಮಂಡಳಿಯ ಸಭೆ ಆಯೋಜನೆಯಾಗಿದ್ದು, ಸಭೆಯ ಅಧ್ಯಕ್ಷರಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕಾರ್ಯನಿರ್ವಹಿಸಲಿದ್ದಾರೆ. ಈ ಮೂಲಕ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ದೇಶದ ಮೊದಲ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. 1992ರಲ್ಲಿ […]