ರಾಷ್ಟ್ರೀಯ

ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಪಡೆದೇ ತೀರುತ್ತೇವೆ/ ಅಮಿತ್ ಷಾ ಪ್ರತಿಪಾದನೆ

ಸಮಗ್ರ ನ್ಯೂಸ್: ಭಾರತೀಯ ಜನತಾ ಪಕ್ಷ ಸರ್ಕಾರವು ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಹಿಂಪಡೆಯಲು ಬದ್ಧವಾಗಿದೆ ಎಂದು ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಪಾದಿಸಿದರು. ಮಣಿಶಂಕರ್ ಅಯ್ಯರ್ ಮತ್ತು ಫಾರೂಕ್ ಅಬ್ದುಲ್ಲಾ ಅವರು ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ, ಆದ್ದರಿಂದ ನಾವು ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಬಾರದು ಎಂದು ಹೇಳಿ ನಮ್ಮನ್ನು ಹೆದರಿಸುತ್ತಿದ್ದರು. ರಾಹುಲ್ ಬಾಬಾ, ಮಮತಾ ದೀದಿ, ನೀವು ಎಷ್ಟೇ ಹೆದರಿಸಿದರೂ ಪರವಾಗಿಲ್ಲ. ಪಾಕ್ […]

ಪಾಕ್ ಆಕ್ರಮಿತ ಜಮ್ಮು ಕಾಶ್ಮೀರವನ್ನು ಪಡೆದೇ ತೀರುತ್ತೇವೆ/ ಅಮಿತ್ ಷಾ ಪ್ರತಿಪಾದನೆ Read More »

ಆರ್ಥಿಕ ಹೊಡೆತಕ್ಕೆ ಸಿಲುಕಿದ ಪಾಕ್/ ಸರ್ಕಾರಿ ಉದ್ದಿಮೆಗಳ ಖಾಸಗೀಕರಣದ ಘೋಷಣೆ

ಸಮಗ್ರ ನ್ಯೂಸ್: ಆರ್ಥಿಕ ದಿವಾಳಿತನದತ್ತ ಸಾಗುತ್ತಿರುವ ಪಾಕಿಸ್ತಾನ ಸರ್ಕಾರ ತನ್ನ ಕೊನೆಯ ಮಾರ್ಗ ಎನ್ನುವಂತೆ ದೇಶದಲ್ಲಿನ ಆಯಕಟ್ಟಿನ ಪ್ರಮುಖ ಉದ್ಯಮಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸರ್ಕಾರಿ ಉದ್ದಿಮೆಗಳ ಕಂಪನಿಗಳನ್ನು ಖಾಸಗೀಕರಣ ಮಾಡುವ ಘೋಷಣೆ ಮಾಡಿದೆ. ಖಾಸಗೀಕರಣ ಸಚಿವಾಲಯ ಮತ್ತು ಖಾಸಗೀಕರಣ ಆಯೋಗಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸಿದ ಬಳಿಕ, ಸರ್ಕಾರಿ ಕಂಪನಿಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಷರೀಫ್ ಘೋಷಿಸಿದರು. ಎನ್ ಆರ್ ವೈ ನ್ಯೂಸ್‍ನ ವರದಿಯ ಪ್ರಕಾರ, ಇದರಲ್ಲಿ ವಿದ್ಯುತ್ ವಿತರಣಾ

ಆರ್ಥಿಕ ಹೊಡೆತಕ್ಕೆ ಸಿಲುಕಿದ ಪಾಕ್/ ಸರ್ಕಾರಿ ಉದ್ದಿಮೆಗಳ ಖಾಸಗೀಕರಣದ ಘೋಷಣೆ Read More »

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅವರು ಸಲ್ಲಿಸಿದ ಅಫಿಡವಿಟ್​ನಲ್ಲಿ ತಮ್ಮ ಆಸ್ತಿ ವಿವರಗಳನ್ನು ನೀಡಿದ್ದಾರೆ. ಅದರ ಪ್ರಕಾರ ಅವರು ಒಟ್ಟು 3 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಎರಡು ಬಾರಿ ಪ್ರಧಾನಿ ಆಗಿರುವ ಬಳಿಕವೂ ಅವರು ಯಾವುದೇ ಭೂಮಿ, ಮನೆ ಅಥವಾ ಕಾರುಗಳನ್ನು ಹೊಂದಿಲ್ಲ. ಅವರು ತಮ್ಮ ಉಳಿಕೆಯ ಎಲ್ಲ ಮಾಹಿತಿಗಳನ್ನು ಚುನಾವಣಾ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ. ಅಫಿಡವಿಟ್​ನಲ್ಲಿ

ವಾರಾಣಸಿ ಲೋಕ ಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ Read More »

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ

ಸಮಗ್ರ ನ್ಯೂಸ್ : ಐದು ತಿಂಗಳ ಮಗುವನ್ನು ನಾಯಿಯೊಂದು ಕಚ್ಚಿ ಕೊಂದಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ.

ಹೈದರಾಬಾದ್: ಐದು ತಿಂಗಳ ಮಗುವನ್ನು ಕೊಂದು ಹಾಕಿದ ನಾಯಿ Read More »

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ

ಸಮಗ್ರ ನ್ಯೂಸ್: ಮುಂಬೈನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಫಲಕ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಜೊತೆಗೆ 59 ಜನರು ಗಾಯಗೊಂಡಿದ್ದಾರೆ. ಎನ್​​ಡಿಆರ್​ಎಫ್ ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಇದರಂತೆ ಧೂಳು ಗಾಳಿಗೆ ಅನೇಕ ಕಡೆಗಳಲ್ಲಿ ಅನಾಹುತಗಳು ಸಂಭವಿಸಿವೆ. ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ

ಮುಂಬೈನಲ್ಲಿ ಧೂಳು ಗಾಳಿಗೆ ಹೋರ್ಡಿಂಗ್ ಕುಸಿತ| ಮೂವರು ಸಾವು, 59 ಮಂದಿಗೆ ಗಾಯ Read More »

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಇಂದು ನಡೆಯುತ್ತಿದೆ.. ಹೈದರಾಬಾದ್‌ ಬಿಜೆಪಿ ಲೋಕಸಭಾ ಅಭ್ಯರ್ಥಿ ಮಾಧವಿ ಲತಾಮತಗಟ್ಟೆಯಲ್ಲಿ ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ಮಾಡಿ ವಿವಾದಕ್ಕೀಡಾಗಿದ್ದಾರೆ. ಈ ವಿಡಿಯೋ ವೈರಲ್‌ಆಗಿದ್ದು, ಪ್ರತಿಸ್ಪರ್ಧಿ ಎಐಎಂಐಎಂ ಪಕ್ಷಮುಖಂಡ ಅಸಾದುದ್ದೀನ್‌ ಓವೈಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಲತಾ, ಇಂದು ಅಜಂಪುರದಲ್ಲಿರುವ ಅಮೃತ ವಿದ್ಯಾಲಯ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ವಿವಿಧ ಮತಗಟ್ಟೆಗಳಿಗೆ ಭೇಟಿ ಕೊಟ್ಟಿದ್ದರು. ಈ

ಹೈದರಾಬಾದ್‌: ಬುರ್ಖಾ ಧರಿಸಿದ್ದ ಮತದಾರರ ಗುರುತಿನ ಚೀಟಿ ಪರಿಶೀಲನೆ ನಡೆಸಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ Read More »

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು

ಸಮಗ್ರ ನ್ಯೂಸ್: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆಯೇರಿಕೆ, ವಿದ್ಯುತ್‌ ಹಾಗೂ ವಿವಿಧ ಸಮಸ್ಯೆಗಳ ವಿರುದ್ಧ ಸಿಡಿದೆದ್ದು ಜನತೆ ನಡೆಸುತ್ತಿರುವ ಹಿಂಸಾತ್ಮಕ ಹೋರಾಟ 3ನೇ ದಿನಕ್ಕೆ ಕಾಲಿಟ್ಟಿದೆ. ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಭಾರಿ ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಮತ್ತು ಪೊಲೀಸರು ಸೇರಿ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಜಫ್ಫರಾಬಾದ್ ಮತ್ತು ರಾವಲ್‌ಕೋಟ್‌ನಲ್ಲಿ ಸ್ಥಳೀಯರು ಭದ್ರತಾ ಪಡೆಗಳ ನಡುವೆ ಘರ್ಷಣೆಗೆ ಇಳಿದಿದ್ದು, ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸುವ ಪೋಸ್ಟರ್‌ಗಳನ್ನು ಜನರು ಹಾಕಿದ್ದಾರೆ. ‘ಇದು ಪಾಕಿಸ್ತಾನ ಸರ್ಕಾರವು

ಪಿಒಕೆ ಪ್ರಾಂತ್ಯದಲ್ಲಿ ಪಾಕಿಸ್ತಾನ ವಿರುದ್ಧ ದಂಗೆ| ಭಾರತದತ್ತ ವಾಲುತ್ತಿರುವ ನಾಗರೀಕರು Read More »

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ

ಭಿಕ್ಷುಕರಿಗೆ (ಆಹಾರ+ನೀರು+ಬಟ್ಟೆ) ನೀಡಿ.  ಆದರೆ ನಗದಾಗಿ ಒಂದು ರೂಪಾಯಿಯನ್ನು ಕೊಡಬೇಡಿ. ಯಾವುದೇ ರೀತಿಯ ವ್ಯಕ್ತಿ (ಹೆಣ್ಣು/ಗಂಡು/ವೃದ್ಧ/ಅಂಗವಿಕಲ/ಮಕ್ಕಳು) ಭಿಕ್ಷೆ ಬೇಡಿದರೆ ಹಣದ ಬದಲು (ಆಹಾರ+ನೀರು+ಬಟ್ಟೆ) ಕೊಟ್ಟರೆ. ಇದರ ಪರಿಣಾಮವಾಗಿ, ಅಂತರರಾಷ್ಟ್ರೀಯ / ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ, ‘ಭಿಕ್ಷುಕರ’ ಗುಂಪುಗಳು ಒಡೆಯುತ್ತವೆ ಮತ್ತು ನಂತರ ಮಕ್ಕಳ ಅಪಹರಣವು ನಿಲ್ಲುತ್ತದೆ. ಪ್ರಾರಂಭಿಸಿ ಪೋಸ್ಟ್ ಅನ್ನು ಹಂಚಿಕೊಳ್ಳಿ. *ದಯವಿಟ್ಟು ಭಿಕ್ಷುಕನಿಗೆ ಒಂದು ರೂಪಾಯಿ ಕೊಡಬೇಡಿ.ನಿಮಗೆ ಮನಸ್ಸಿದ್ದರೆ ಬಿಸ್ಕತ್ತುಗಳನ್ನು ಕಾರಿನಲ್ಲಿ ಇಟ್ಟುಕೊಳ್ಳಿ. ಆದರೆ ನಗದು ಕೊಡಬೇಡಿ*

ಇಂದಿನಿಂದ ನಗದು ಭಿಕ್ಷಾಟನೆ ಸ್ಥಗಿತ Read More »

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ

ಸಮಗ್ರ ನ್ಯೂಸ್ : ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7 ಗಂಟೆಗೆ ತೆರೆದರೆ, ಗಂಗೋತ್ರಿ ದೇವಾಲಯವು ಮಧ್ಯಾಹ್ನ 12.20 ತೆರೆಯುತ್ತದೆ. ಮೇ 12 ರಂದು ಬೆಳಗ್ಗೆ 6 ಗಂಟೆಗೆ ಉತ್ತರಾಖಂಡದ ಚಾರ್ಧಾಮ್ ಯಾತ್ರೆಯ ಭಾಗವಾಗಿರುವ ಬದರಿನಾಥ್ ಅನ್ನು ತೆರೆಯಲಿದೆ. 6 ತಿಂಗಳಿಗೆ ಒಮ್ಮೆ ತೆರೆಯುವ ಈ ಯಾತ್ರಾ ಸ್ಥಳಗಳಿಗೆ ದೇಶ-ವಿದೇಶಗಳಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಾರೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಹಾಗೂ ಬದರಿನಾಥ್ ಹೀಗೆ

ಉತ್ತರಾಖಂಡ: ಹಿಂದೂಗಳ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭ Read More »

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ

ಸಮಗ್ರ ನ್ಯೂಸ್ : ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ, ಭಾರತ ಮತ್ತು ನೆರೆ ರಾಷ್ಟ್ರಗಳಲ್ಲಿ ಧರ್ಮದ ಆಧಾರದಲ್ಲಿ ಜನಸಂಖ್ಯೆ ಹೆಚ್ಚಳ ಆಗಿರುವ ವರದಿಯನ್ನು ಪ್ರಕಟ ಮಾಡಿದೆ. 1950 ಮತ್ತು 2015ರ ನಡುವೆ 167 ದೇಶಗಳಲ್ಲಿರುವ ಧರ್ಮಗಳನ್ನು ಅಧ್ಯಯನ ಮಾಡಿ ಜನಸಂಖ್ಯಾ ಹೆಚ್ಚಳ ಕುರಿತು ವರದಿ ಬಿಡುಗಡೆ ಮಾಡಿದೆ. ಲೋಕಸಭಾ ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ಮಧ್ಯೆ ಈ ವರದಿ ಮತ್ತೊಂದು

ನವದೆಹಲಿ: ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ- ಆರ್ಥಿಕ ಸಲಹಾ ಮಂಡಳಿ Read More »