‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!
ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು […]