ಹರ್ಯಾಣದಲ್ಲಿ ಬಿಜೆಪಿಗೆ ಮುಖಭಂಗ| ಸೈನಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಪಕ್ಷೇತರ ಶಾಸಕರು| ತೂಗುಯ್ಯಾಲೆಯಲ್ಲಿ ಹರ್ಯಾಣ ಸರ್ಕಾರ
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಕಾವಿನ ನಡುವೆ ಹರಿಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ರಾಜ್ಯದಲ್ಲಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವುದಾಗಿ ಮೂವರು ಪಕ್ಷೇತರ ಶಾಸಕರು ಮಂಗಳವಾರ ಘೋಷಿಸಿದ್ದಾರೆ. ಮೂವರು ಶಾಸಕರಾದ ಸೋಂಬಿರ್ ಸಾಂಗ್ವಾನ್, ರಣಧೀರ್ ಗೊಲ್ಲೆನ್ ಮತ್ತು ಧರಂಪಾಲ್ ಗೊಂಡರ್ ಅವರು ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು. ಇದರಿಂದ ಸೈನಿ ಸರ್ಕಾರವು ಬಹುಮತ ಕಳೆದುಕೊಂಡಿದ್ದು, ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದೆ. ಸರ್ಕಾರ ಪತನದ ಸನಿಹದಲ್ಲಿದ್ದು, […]