ರಾಷ್ಟ್ರೀಯ

ಜಮಾತ್-ಎ-ಇಸ್ಲಾಮಿ ಮೇಲೆ ಮುಂದಿನ 5 ವರ್ಷಗಳವರೆಗೆ ನಿಷೇಧ/ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 5 ವರ್ಷಗಳವರೆಗೆ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಈ ಕುರಿತು ಅಮಿತ್ ಶಾ ಟ್ವಿಟ್ ಮಾಡಿದ್ದು, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧ ಶೂನ್ಯ ಸಹಿಷ್ಣುತೆಯ ಪ್ರಧಾನಿ ನರೇಂದ್ರ ಮೋದಿಯವರ ನೀತಿಯನ್ನು ಅನುಸರಿಸಿ ಸರ್ಕಾರವು ಜಮ್ಮು ಕಾಶ್ಮೀರದ ಜಮಾತ್-ಎ-ಇಸ್ಲಾಮಿ ಮೇಲಿನ ನಿಷೇಧವನ್ನ ಐದು ವರ್ಷಗಳವರೆಗೆ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರದ ಭದ್ರತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧ ಸಂಘಟನೆಯು ತನ್ನ ಚಟುವಟಿಕೆಗಳನ್ನು ಮುಂದುವರಿಸುತ್ತಿರುವುದು ಕಂಡುಬಂದಿದೆ. […]

ಜಮಾತ್-ಎ-ಇಸ್ಲಾಮಿ ಮೇಲೆ ಮುಂದಿನ 5 ವರ್ಷಗಳವರೆಗೆ ನಿಷೇಧ/ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ Read More »

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಬೌಲರ್ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ದೀರ್ಘಕಾಲದ ಗಾಯದಿಂದಾಗಿ ಶಮಿ ಲಂಡನ್‍ನಲ್ಲಿ ಸ್ನಾಯುವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಮುಂಬರುವ ಐಪಿಎಲ್ 2024 ಮತ್ತು ಟಿ20 ವಿಶ್ವಕಪ್ 2024 ಸೇರಿದಂತೆ ಹಲವಾರು ಟೂರ್ನಿಗಳಿಂದ ಹೊರಗುಳಿಯಲಿದ್ದಾರೆ. ‘ನಾನು ಯಶಸ್ವಿಯಾಗಿ ಪಾದದ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖನಾಗಲು ಒಂದಷ್ಟು ಸಮಯ ಬೇಕಾಗುತ್ತದೆ. ಆದರೆ, ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸವಿದೆ’ ಎಂದು ಪೋಟೋಗಳ ಸಮೇತ

ಸರ್ಜರಿಗೆ ಒಳಗಾಗಿರುವ ಮೊಹಮ್ಮದ್ ಶಮಿ/ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಮೋದಿ Read More »

ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.ಸುಪ್ರೀಂ ಕೋರ್ಟ್‍ನಲ್ಲಿ, ದೀಪಾವಳಿ ಸಮಯದಲ್ಲಿ ಪಟಾಕಿ ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ಹಿಂದೆ ಕ್ರಿಶ್ಚಿಯನ್ ಮಿಷನರಿಗಳಿಗೆ ಸೇರಿದ ಎನ್‍ಜಿಒಗಳ ಕೈವಾಡ ಇದೆ ಎಂದು ಅಣ್ಣಾಮಲೈ ಸಂದರ್ಶನವೊಂದರಲ್ಲಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಅಣ್ಣಾಮಲೈ ವಿರುದ್ಧ ಸೇಲಂ ಮೂಲದ ಸಾಮಾಜಿಕ ಕಾರ್ಯಕರ್ತ ವಿ. ಪಿಯೂಷ್ ಅವರು ಈ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ವಜಾ ಮಾಡುವಂತೆ

ದ್ವೇಷ ಭಾಷಣ/ ಅಣ್ಣಾಮಲೈಗೆ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್ Read More »

ಸುಳ್ಳು ಜಾಹೀರಾತು/ ಪತಂಜಲಿ ಕಂಪನಿಗೆ ಶಾಕ್ ನೀಡಿದ ಸುಪ್ರೀಂ

ಸಮಗ್ರ ನ್ಯೂಸ್: ಬಾಬಾ ರಾಮ್‍ದೇವ್ ಮಾಲೀಕತ್ವದ ಪತಂಜಲಿ ಆರ್ಯುವೇದ ಕಂಪನಿಯ ಸುಳ್ಳು ಜಾಹೀರಾತಿನ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದು, ಪತಂಜಲಿ ಕಂಪನಿಯ ಜಾಹೀರಾತುಗಳಿಂದ ಇಡೀ ದೇಶವನ್ನೇ ಅವರು ದಾರಿ ತಪ್ಪಿಸುತ್ತಿದ್ದಾರೆ . ಇದು ನಿಜಕ್ಕೂ ದುರಾದೃಷ್ಟದ ಸಂಗತಿ. ಕೇಂದ್ರ ಸರ್ಕಾರ ಈ ಕುರಿತಾಗಿ ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ. ಇದರ ಜೊತೆಗೆ, ಸುಳ್ಳು ಮಾಹಿತಿ ನೀಡುವ ಔಷಧಗಳ, ಎಲೆಕ್ಟ್ರಾನಿಕ್

ಸುಳ್ಳು ಜಾಹೀರಾತು/ ಪತಂಜಲಿ ಕಂಪನಿಗೆ ಶಾಕ್ ನೀಡಿದ ಸುಪ್ರೀಂ Read More »

ಮಿಸ್ ವರ್ಲ್ಡ್ 2024|ಭಾರತವನ್ನು ಪ್ರತಿನಿಧಿಸಲಿರುವ ಕರಾವಳಿ ಮೂಲದ ಸಿನಿ ಶೆಟ್ಟಿ

ಸಮಗ್ರ ನ್ಯೂಸ್: 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ.ಸಿನಿ ಶೆಟ್ಟಿ ಅಕೌಂಟಿಂಗ್ ಮತ್ತು ಫೈನಾನ್ಸ್‌ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ವಿಶ್ವ ಸುಂದರಿ ಚಾಂಪಿಯನ್‌ ಶಿಪ್ ಮಾರ್ಚ್ 9 ರಂದು ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌

ಮಿಸ್ ವರ್ಲ್ಡ್ 2024|ಭಾರತವನ್ನು ಪ್ರತಿನಿಧಿಸಲಿರುವ ಕರಾವಳಿ ಮೂಲದ ಸಿನಿ ಶೆಟ್ಟಿ Read More »

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು

ಸಮಗ್ರ ನ್ಯೂಸ್:ಬಿಹಾರ ಟ್ರಕ್, ಜೀಪ್ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಂಬತ್ತು ಜನ ಸಾವನ್ನಪ್ಪಿದ ಘಟನೆ ಬಿಹಾರದ ಕೈಮೂರ್ ನಲ್ಲಿ ನಡೆದಿದೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್, ಚಾಲಕನ ನಿಯಂತ್ರಣ ತಪ್ಪಿ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್ ಮತ್ತು ಬೈಕ್ ಎರಡೂ ಪಕ್ಕದ ರಸ್ತೆಗೆ ದೂಡಲ್ಪಟ್ಟಿವೆ. ನಂತರ, ವೇಗವಾಗಿ ಬಂದ ಟ್ರಕ್ ಅವುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ,

ಬಿಹಾರದಲ್ಲಿ ಸರಣಿ ಅಪಘಾತ|9 ಮಂದಿ ಮೃತ್ಯು Read More »

ಬದುಕಿನ ಯಾತ್ರೆ ಮುಗಿಸಿದ ಗಾಯಕ‌ ಪಂಕಜ್ ಉದಾಸ್

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ನಿಧನರಾಗಿದ್ದಾರೆ. 72 ನೇ ವಯಸ್ಸಿನಲ್ಲಿ ಪಂಕಜ್ ಉದಾಸ್ ಕೊನೆಯುಸಿರೆಳೆದಿದ್ದಾರೆ. ಉಧಾಸ್ ಕುಟುಂಬದವರು ಟ್ವೀಟ್ ಮೂಲಕ ಅವರ ನಿಧನದ ಬಗ್ಗೆ ಮಾಹಿತಿ ನೀಡಿದ್ದಾರೆ. “ದೀರ್ಘಕಾಲದ ಅನಾರೋಗ್ಯದಿಂದಾಗಿ ಫೆಬ್ರವರಿ 26, 2024 ರಂದು ಪದ್ಮಶ್ರೀ ಪಂಕಜ್ ಉಧಾಸ್ ಅವರ ದುಃಖದ ನಿಧನದ ಬಗ್ಗೆ ತಿಳಿಸಲು ತುಂಬಾ ಭಾರವಾದ ಹೃದಯದಿಂದ ನಾವು ದುಃಖಿತರಾಗಿದ್ದೇವೆ” ಎಂದು ಅವರ ಕುಟುಂಬ ತಮ್ಮ ಟ್ವೀಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಂಕಜ್ ಅವರ ನಿಧನದಿಂದಾಗಿ ಭಾರತೀಯ

ಬದುಕಿನ ಯಾತ್ರೆ ಮುಗಿಸಿದ ಗಾಯಕ‌ ಪಂಕಜ್ ಉದಾಸ್ Read More »

ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ/ ಹಿಂದುಗಳಿಗೆ ಮತ್ತೆ ಜಯ

ಸಮಗ್ರ ನ್ಯೂಸ್: ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಅನುಮತಿ ನೀಡಿದ ಆದೇಶ ಪ್ರಶ್ನಿಸಿ ಮಸೀದಿಯನ್ನು ನಿರ್ವಹಿಸುವ ಸಂಸ್ಥೆಯಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿರುವ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹಿಂದುಗಳಿಗೆ ಮತ್ತೆ ಜಯ ಸಿಕ್ಕಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ಆದೇಶದಂತೆ ಪೂಜೆ ಮುಂದುವರಿಸಲಾಗುತ್ತದೆ ಎಂದು ತಿಳಿಸಿರುವ ಹೈಕೋರ್ಟ್, ಭಕ್ತರು ಪೂಜೆ ಸಲ್ಲಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಜೊತೆಗೆ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್‍ಗೆ ಅರ್ಚಕರನ್ನು ನಾಮನಿರ್ದೇಶನ

ಜ್ಞಾನವಾಪಿಯ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ/ ಹಿಂದುಗಳಿಗೆ ಮತ್ತೆ ಜಯ Read More »

ರೈಲು ನಿಲ್ದಾಣಗಳ ಪುನರಾಭಿವೃದ್ಧಿ/ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ಅಮೃತ ಭಾರತ ಯೋಜನೆಯಡಿಯಲ್ಲಿ ಕರ್ನಾಟಕದ 11 ನಿಲ್ದಾಣಗಳೂ ಒಳಗೊಂಡಂತೆ ದೇಶದ 553 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ರೈಲು ನಿಲ್ದಾಣಗಳ ಬಳಿ ಸಿಟಿ ಸೆಂಟರ್ ಹಾಗೂ ರೂಫ್‍ಟಾಪ್ ಪ್ಲಾಜಾಗಳನ್ನು ನಿರ್ಮಿಸುವ ಮೂಲಕ ನಿಲ್ದಾಣಗಳನ್ನು ಉನ್ನತವಾಗಿ ಅಭಿವೃದ್ಧಿಪಡಿಸುವ ಯೋಜನೆ ಇದಾಗಿದೆ. ಕರ್ನಾಟಕದ ಕೆಂಗೇರಿ, ರಾಮನಗರ, ಚನ್ನಪಟ್ಟಣ, ಮಂಡ್ಯ, ಕೃಷ್ಣರಾಜಪುರಂ, ವೈಟ್‍ಫೀಲ್ಡ್, ಮಾಲೂರು, ಬಂಗಾರಪೇಟೆ, ಕುಪ್ಪಂ, ಮಲ್ಲೇಶ್ವರಂ ಮತ್ತು ತುಮಕೂರು ರೈಲು ನಿಲ್ದಾಣಗಳು ಈ

ರೈಲು ನಿಲ್ದಾಣಗಳ ಪುನರಾಭಿವೃದ್ಧಿ/ ಇಂದು ಪ್ರಧಾನಿ ಮೋದಿ ಶಂಕುಸ್ಥಾಪನೆ Read More »

ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ನಮೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಗುಜರಾತ್ ಪ್ರವಾಸದ ಎರಡನೇ ದಿನದಲ್ಲಿದ್ದಾರೆ. ಇಂದು ಅಲ್ಲಿಂದ ಸ್ಕೂಬಾ ಡೈವಿಂಗ್ ಮೂಲಕ ದ್ವಾರಕೆಗೆ ತೆರಳಿದ್ದಾರೆ. ಕೃಷ್ಣನ ದ್ವಾರಕೆ ಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶ್ರೀಕೃಷ್ಣ ದ್ವಾರಕೆಯ ರಾಜನಾಗಿದ್ದ, ಇಲ್ಲಿನ ಇತಿಹಾಸ ತಿಳಿದು ಅವರು ದ್ವಾರಕಾದಲ್ಲಿ ಸುದರ್ಶನ ಸೇತುವನ್ನು ಉದ್ಘಾಟಿಸಿದರು, ಇದು ದೇಶದ ಅತಿ ಉದ್ದದ ಕೇಬಲ್ ಬೆಂಬಲಿತ ಸೇತುವೆಯಾಗಿದೆ. 6 ವರ್ಷಗಳ ಹಿಂದೆ ಈ ಸೇತುವೆಯ ಶಂಕುಸ್ಥಾಪನೆ ಮಾಡಲು ನನಗೆ ಅವಕಾಶ ಸಿಕ್ಕಿತ್ತು ಎಂದು

ಕೃಷ್ಣನ ದ್ವಾರಕೆಯನ್ನು ಕಣ್ತುಂಬಿಕೊಳ್ಳಲು ನವಿಲುಗರಿಗಳ ಹಿಡಿದು ಸಮುದ್ರದಾಳಕ್ಕೆ ಹಾರಿದ ನಮೋ Read More »