ಶಿಕ್ಷಣ

ಶಿಕ್ಷಕರ ವರ್ಗಾವಣೆಗೆ `ಕೌನ್ಸೆಲಿಂಗ್’ | ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ

ಸಮಗ್ರ ನ್ಯೂಸ್: 2022-23ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು , ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರ ಸಾಮಾನ್ಯ ವರ್ಗಾವಣೆಗೆ ಕೌನ್ಸೆಲಿಂಗ್ ಗೆ ಮಂಗಳವಾರದಿಂದ ಚಾಲನೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಆರೇಳು ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಲಾಗಿದ್ದು, ತಕ್ಷಣದಿಂದಲೇ ಕೌನ್ಸೆಲಿಂಗ್ ಪ್ರಾರಂಭಗೊಳ್ಳಲಿದೆ. ಪುನಾರಂಭದ ಬಗ್ಗೆ ಬಹಳ ಒತ್ತಡ ಇದ್ದ […]

ಶಿಕ್ಷಕರ ವರ್ಗಾವಣೆಗೆ `ಕೌನ್ಸೆಲಿಂಗ್’ | ಶಿಕ್ಷಣ ಸಚಿವರಿಂದ ಮುಖ್ಯ ಮಾಹಿತಿ Read More »

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ?

ಸಮಗ್ರ ನ್ಯೂಸ್: ಮೇ, ಜೂನ್ 2023ರಂದು ನಡೆಸಲಾದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜೂ.20ರ ಮಂಗಳವಾರದಂದು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 23-05-2023 ರಿಂದ 03-06-2023ರಂದು ನಡೆಸಲಾಗಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಮುಕ್ತಾಯವಾಗಿದ್ದು, ಈ ಹಿನ್ನಲೆಯಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ

ಇಂದು ದ್ವಿತೀಯ PUC ಪೂರಕ ಪರೀಕ್ಷೆ ಫಲಿತಾಂಶ| ರಿಸಲ್ಟ್ ನೋಡೋದು ಹೇಗೆ‌ ಗೊತ್ತಾ? Read More »

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ…

ಸಮಗ್ರ ನ್ಯೂಸ್: 2023-24ನೇ ಸಾಲಿನ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ನಡೆದಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಇಂದು(ಜೂನ್ 15) ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್​ ಅವರು ಬೆಂಗಳೂರಿನ ಮಲ್ಲೇಶ್ವರಂನ ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್​ಗೆ- 2,03,381 ವಿದ್ಯಾರ್ಥಿಗಳು ಆಯ್ಕೆಯಾಗಿದ್ದರೆ, ಕೃಷಿ ವಿಜ್ಞಾನ ಕೋರ್ಸಿಗೆ- 1,64,187, ಪಶುಸಂಗೋಪನೆ- 166756, ಯೋಗ ಮತ್ತು ನ್ಯಾಚುರೋಪತಿಗೆ- 2,06191, ಬಿ.ಪಾರ್ಮ್ ಮತ್ತು ಡಿ.ಪಾರ್ಮ್ ಕೋರ್ಸ್ ಗೆ-

ಸಿಇಟಿ ಫಲಿತಾಂಶ ಪ್ರಕಟ|ಈ ಬಾರಿಯೂ ಬಾಲಕಿಯರೇ ಮೇಲುಗೈ| ಫಲಿತಾಂಶ ನೋಡೋದು ಹೀಗೆ… Read More »

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್; ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಳೆದ ಮೇ ತಿಂಗಳಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (KCET-2023) ಫಲಿತಾಂಶ ಜೂನ್.15ರ ಗುರುವಾರದ ನಾಳೆ ಬೆಳಿಗ್ಗೆ ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಅವರು ಇಲ್ಲಿನ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿ ಆವರಣದಲ್ಲಿ ಬೆಳಿಗ್ಗೆ 9:30ಕ್ಕೆ ಫಲಿತಾಂಶ ಪ್ರಕಟಿಸಲಿದ್ದಾರೆ. ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಳೆ(ಜೂ.15) ಸಿಇಟಿ ಫಲಿತಾಂಶ ಪ್ರಕಟ Read More »

‘ನೀಟ್’ ಫಲಿತಾಂಶ; ಧ್ರುವ ಅಡ್ವಾಣಿ ರಾಜ್ಯಕ್ಕೆ ಫಸ್ಟ್

ಸಮಗ್ರ ನ್ಯೂಸ್: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬೆಂಗಳೂರಿನ ಜಿ.ಆರ್‌.ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಧ್ರುವ ಅಡ್ವಾಣಿ ರಾಜ್ಯಕ್ಕೆ ಮೊದಲಿಗರಾಗಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ ಅಗ್ರ 5ನೇ ರ್‍ಯಾಂಕ್‌ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಷಯದಲ್ಲಿ (ಸಿಬಿಎಸ್‌ಸಿ) ಶೇ 99.4 ಗಳಿಸಿದ್ದ ಧ್ರವ ಅಡ್ವಾಣಿ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಎಐಐಎಂಎಸ್‌) ಸೇರುವ ಗುರಿ ಹೊಂದಿದ್ದಾರೆ. ಕರ್ನಾಟಕದ ಮತ್ತೊಬ್ಬ ವಿದ್ಯಾರ್ಥಿ ಎಸ್‌.ಎಚ್‌.ಭೈರೇಶ್‌ ಅಖಿಲ

‘ನೀಟ್’ ಫಲಿತಾಂಶ; ಧ್ರುವ ಅಡ್ವಾಣಿ ರಾಜ್ಯಕ್ಕೆ ಫಸ್ಟ್ Read More »

ಜೂ.14ರಂದು ಹೊರ ಬೀಳಲಿದೆ ಸಿಇಟಿ ಫಲಿತಾಂಶ

ಸಮಗ್ರ ನ್ಯೂಸ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು (ಕೆಸಿಇಟಿ) ಜೂನ್ 12 ರಂದು ಘೋಷಿಸಲು ಯೋಜಿಸಿತ್ತು. ಆದರೆ ಇದೀಗ ಜೂನ್ 14 ರಂದು ರಿಸಲ್ಟ್ ಹೊರಬೀಳಲಿದೆ ಎಂದು ಕೆಇಎ ಮೂಲವು ಮಾಧ್ಯಮಗಳಿಗೆ ತಿಳಿಸಿದೆ. “ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಸೋಮವಾರ ಅಂದರೆ ಜೂನ್ 12 ರಂದು ಬಿಡುಗಡೆ ಮಾಡುವುದಾಗಿ ನಿಗದಿಪಡಿಸಲಾಗಿತ್ತು. ಆದರೆ ಕೆಲವು ಆಂತರಿಕ ತಪಾಸಣೆಗಳ ಕಾರಣ ಫಲಿತಾಂಶವನ್ನು ಜೂನ್ 14 ರಂದು ಪ್ರಕಟಿಸಲಾಗುವುದು” ಎಂದು ಕೆಇಎ ಅಧಿಕಾರಿಯೊಬ್ಬರು

ಜೂ.14ರಂದು ಹೊರ ಬೀಳಲಿದೆ ಸಿಇಟಿ ಫಲಿತಾಂಶ Read More »

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ

ಸಮಗ್ರ ನ್ಯೂಸ್: 2023 -24ನೇ ಶೈಕ್ಷಣಿಕ ಸಾರಿಗೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಬಡ್ತಿ, ನಿಧನ, ವಯೋ ನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ತಿಳಿಸಲಾಗಿದೆ. ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ, ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ

ಪ.ಪೂ ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ಇಲಾಖೆ ಸೂಚನೆ Read More »

ಇಂದಿನಿಂದ ರಾಜ್ಯದಲ್ಲಿ ಶೈಕ್ಷಣಿಕ ವರ್ಷಾರಂಭ| ”ಶಾಲೆಗೆ ಹೊರಡುವೆವು ನಾವು”

ಸಮಗ್ರ ನ್ಯೂಸ್: ಬೇಸಿಗೆ ರಜೆ ಮುಕ್ತಾಯವಾಗಿದ್ದು, ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಆರಂಭವಾಗಲಿವೆ. 2023 -24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿರಲಿದ್ದು, ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಈಗಾಗಲೇ ಶಾಲೆ ಪ್ರಾರಂಭೋತ್ಸವಕ್ಕೆ ಎಲ್ಲಾ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಮವಾರ ಮತ್ತು ಮಂಗಳವಾರ ಶಾಲೆಯ ಕೊಠಡಿ, ಶೌಚಾಲಯ, ಕಾಂಪೌಂಡ್, ಆವರಣ ಎಲ್ಲವನ್ನು ಹಿರಿಯ ವಿದ್ಯಾರ್ಥಿಗಳು

ಇಂದಿನಿಂದ ರಾಜ್ಯದಲ್ಲಿ ಶೈಕ್ಷಣಿಕ ವರ್ಷಾರಂಭ| ”ಶಾಲೆಗೆ ಹೊರಡುವೆವು ನಾವು” Read More »

ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ

ಸಮಗ್ರ ನ್ಯೂಸ್: ಇಲ್ಲಿನ ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಜೂನ್ 7ರೊಳಗೆ ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಅಥವಾ ಈ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಂಸ್ಥೆಯಲ್ಲಿ ನಿಗದಿತ ಪ್ರಮಾಣದಲ್ಲಿ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೆ ಇದ್ದಲ್ಲಿ ಪುರುಷ ಅಭ್ಯರ್ಥಿಗಳಿಗೆ ಪ್ರವೇಶ ಪಡೆಯಲು ಅಕಾಶವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2216360, 9880119147

ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅರ್ಜಿಗೆ ಆಹ್ವಾನ Read More »

ಕಾಲೇಜು ಪ್ರವೇಶಾತಿಗೆ ‘ಏಕರೂಪ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ

ಸಮಗ್ರ ನ್ಯೂಸ್: ಉನ್ನತ ಶಿಕ್ಷಣ ಇಲಾಖೆಯು 2023-24 ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಅವುಗಳ ಸಂಯೋಜಿತ ಕಾಲೇಜುಗಳಲ್ಲಿ ಪದವಿ ಕೋರ್ಸುಗಳ ಪ್ರವೇಶ ಪ್ರಕ್ರಿಯೆ, ಪರೀಕ್ಷೆ ಮತ್ತು ಫಲಿತಾಂಶ ಪ್ರಕಟಣೆಗೆ ಏಕರೂಪ ಶೈಕ್ಷಣಿಕ ವೇಳಾಪಟ್ಟಿ ಪ್ರಕಟಿಸಿದೆ. ಪ್ರಸ್ತುತ ಸಾಲಿನಲ್ಲಿ ಮೇ.22 ರಿಂದ ಜುಲೈ 15 ರೊಳಗೆ ಪದವಿ ಕಾಲೇಜುಗಳ ಪ್ರಥಮ ಸೆಮಿಸ್ಟರ್ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಜು.17 ರಿಂದ ತರಗತಿಗಳನ್ನು ಆರಂಭಿಸಿ, ನವೆಂಬರ್ 18 ಕ್ಕೆ ಮುಕ್ತಾಯಗೊಳಿಸಬೇಕು. ನವೆಂಬರ್ 20 ರಿಂದ ಪರೀಕ್ಷೆಗಳನ್ನು

ಕಾಲೇಜು ಪ್ರವೇಶಾತಿಗೆ ‘ಏಕರೂಪ ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ Read More »