ಶಿಕ್ಷಣ

ರಾಜ್ಯದ ಟಾಪರ್ ಅನನ್ಯಾಗೆ ಮೂರು ಲಕ್ಷ ನಗದು ಹಾಗೂ ಉಚಿತ ಶಿಕ್ಷಣ – ಮೋಹನ್ ಆಳ್ವಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿನಿ ಅನನ್ಯಾ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಅನನ್ಯಾ 600 ಕ್ಕೆ 600 ಅಂಕ ಪಡೆದುಕೊಂಡಿದ್ದು, ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮೂರು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಅವರ ಮುಂದಿನ ಶಿಕ್ಷಣವನ್ನು ಸಂಸ್ಥೆಯಿಂದ ಉಚಿತವಾಗಿ ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ. ಕೊಡಗಿನ ಕುಶಾಲನಗರದ […]

ರಾಜ್ಯದ ಟಾಪರ್ ಅನನ್ಯಾಗೆ ಮೂರು ಲಕ್ಷ ನಗದು ಹಾಗೂ ಉಚಿತ ಶಿಕ್ಷಣ – ಮೋಹನ್ ಆಳ್ವಾ Read More »

ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ| ಮೂರೂ ವಿಭಾಗಗಳಲ್ಲೂ ಶಾರದಾ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ಶ್ರೀ ಶಾರದ ಪದವಿ ಪೂರ್ವ ಕಾಲೇಜು ಮೂರೂ ವಿಭಾಗಗಳಲ್ಲೂ ಶೇ.100 ಫಲಿತಾಂಶ ಪಡೆದುಕೊಂಡಿದೆ. ವಿಜ್ಞಾನ ವಿಭಾಗದಲ್ಲಿ 31 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ತೇರ್ಗಡೆಯಾಗಿದ್ದು ಶೇ.100 ಫಲಿತಾಂಶ ಬಂದಿದೆ. 10 ಮಂದಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ಚೈತನ್ಯ ಯು ಶೇ.561 ಅಂಕದೊಂದಿಗೆ ಸಂಸ್ಥೆಗೆ ಅಗ್ರಸ್ಥಾನಿಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 25 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ತೇರ್ಗಡೆಯಾಗಿ ಶೇ.100 ಫಲಿತಾಂಶ ಬಂದಿದೆ. 8 ಮಂದಿ ವಿಶೇಷ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಕಲಾವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 34

ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ| ಮೂರೂ ವಿಭಾಗಗಳಲ್ಲೂ ಶಾರದಾ ಪಿಯು ಕಾಲೇಜಿಗೆ ಶೇ.100 ಫಲಿತಾಂಶ Read More »

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಬಿಸಿಯ ನಡುವೆ ವಿದ್ಯಾರ್ಥಿಗಳ ಭವ್ಯ ಭವಿಷ್ಯದ ಮಹತ್ತರ ಘಟ್ಟ ಪಿಯುಸಿ ಫಲಿತಾಂಶ ಇವತ್ತು ಪ್ರಕಟ ಆಗುತ್ತಿದೆ. 11 ಗಂಟೆಗೆ ವೆಬ್​ಸೈಟ್​ನ ಪರದೆ ಮೇಲೆ ಭವಿಷ್ಯ ಕಾಣಲಿದೆ. ಪರೀಕ್ಷೆ ಬರೆದ 7 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಫಲಿತಾಂಶ ಬೆಳಗ್ಗೆ 11 ಗಂಟೆಗೆ ವೆಬ್​ಸೈಟ್​ನಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಬೆಳಗ್ಗೆ 10 ಗಂಟೆಗೆ ಕರ್ನಾಟಕ‌ ಶಾಲಾ ಪರೀಕ್ಷೆ

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್ Read More »

Karnataka PUC result| ನಾಳೆಯೇ(ಎ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಈ ಜಾಲತಾಣಗಳಲ್ಲಿ ಸಿಗಲಿದೆ ರಿಸಲ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ

Karnataka PUC result| ನಾಳೆಯೇ(ಎ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಈ ಜಾಲತಾಣಗಳಲ್ಲಿ ಸಿಗಲಿದೆ ರಿಸಲ್ಟ್ Read More »

ಎ.24 ಅಥವಾ 25ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್

ಸಮಗ್ರ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು ಏಪ್ರಿಲ್‌ 24 ಅಥವಾ 25ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಮೂಲಗಳು ತಿಳಿಸಿವೆ. ರಾಜ್ಯದ 1,109 ಕೇಂದ್ರಗಳಲ್ಲಿ ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆಗಳು ನಡೆದಿದ್ದವು. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಸಿಕೊಂಡು ಮೌಲ್ಯಮಾಪನ ಕಾರ್ಯವನ್ನು ಮಂಡಳಿ ಸುಸೂತ್ರವಾಗಿಪೂರ್ಣಗೊಳಿಸಿದೆ. ಪ್ರತಿ ವಿಷಯದಲ್ಲಿ ಬಹು ಆಯ್ಕೆ ಸೇರಿದಂತೆ ಒಂದು ಅಂಕದ

ಎ.24 ಅಥವಾ 25ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್ Read More »

ಇಂದು‌ ಯುಜಿಸಿ ನೆಟ್ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಇಂದು(ಎ.13) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್(UGC NET) ಫಲಿತಾಂಶ ಪ್ರಕಟವಾಗಲಿದೆ ಎಂದು UGC ಅಧ್ಯಕ್ಷ ಜಗದೀಶ್ ಕುಮಾರ್ ತಿಳಿಸಿದ್ದಾರೆ. 83 ವಿಷಯಗಳಿಗೆ ಐದು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿತ್ತು. 8.34 ಲಕ್ಷ ಅಭ್ಯರ್ಥಿಗಳು ಈ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ. ಅಭ್ಯರ್ಥಿಗಳು ರಾಷ್ಟ್ರೀಯ ಪರೀಕ್ಷಾ ಏಜನ್ಸಿ (NTA) ಅಧಿಕೃತ ವೆಬ್‌ಸೈಟ್ ugcntet.nta.nic.in ಅಥವಾ ntaresults.nic.in ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಸಬಹುದಾಗಿದೆ.

ಇಂದು‌ ಯುಜಿಸಿ ನೆಟ್ ಫಲಿತಾಂಶ ಪ್ರಕಟ Read More »

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು| 16 ಶಿಕ್ಷಕರು ಸಸ್ಪೆಂಡ್

ಸಮಗ್ರ ನ್ಯೂಸ್: ಕಲಬುರಗಿ, ಕೊಪ್ಪಳ ಜಿಲ್ಲೆಯ ಮೂರು ಪರೀಕ್ಷಾ ಕೇಂದ್ರಗಳ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಮಾಡಲು ಸಹಕರಿಸಿದ ಆರೋಪದ ಮೇಲೆ 16 ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 3 ರಂದು ಎಸ್.ಎಸ್.ಎಲ್.ಸಿ. ಗಣಿತ ವಿಷಯದ ಪರೀಕ್ಷೆ ನಡೆದಿದ್ದು, ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಇಶಾ ಪಂತ್ ಬಂದೋಬಸ್ತ್ ಪರಿಶೀಲನೆಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಮೈಕ್ರೋ ಜೆರಾಕ್ಸ್ ಪುಸ್ತಕ ಮತ್ತು ಟಿಪ್ಪಣಿ ಚೀಟಿಗಳಿಂದ ಸಾಮೂಹಿಕ ನಕಲು ಮಾಡಿ ಅವುಗಳನ್ನು ಎಸೆದಿರುವುದು ಕಂಡುಬಂದಿತ್ತು. ಪರೀಕ್ಷಾ ಕೇಂದ್ರದಲ್ಲಿ

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು| 16 ಶಿಕ್ಷಕರು ಸಸ್ಪೆಂಡ್ Read More »

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ

ಸಮಗ್ರ ನ್ಯೂಸ್: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಾ.31ರಂದು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ https://result.dkpucpa.com/ ಭೇಟಿ ನೀಡಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ Read More »

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಮಂಡಳಿಯನ್ನು ಒಂದು ಮಾಡಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂಬುದಾಗಿ ಮರು ನಾಮಕರಣ ಮಾಡಲಾಗಿತ್ತು. ಈ ಬೆನ್ನಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ ಎಂದು ಮರು ಪದನಾಮೀಕರಿಸಿ ಸರ್ಕಾರ ಆದೇಶಿಸಿದೆ. ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಸಾರ್ವಜನಿಕ ಶಿಕ್ಷಣ ಆಯುಕ್ತರು ಹಾಗೂ ಅದರ ಅಧೀನದಲ್ಲಿ ಬರುವ

ಸಾರ್ವಜನಿಕ ಶಿಕ್ಷಣ ಇಲಾಖೆ ಇನ್ಮುಂದೆ ಶಾಲಾ ಶಿಕ್ಷಣ ಇಲಾಖೆ Read More »

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಾರ್ಚ್​ 9 ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಉಚಿತ ಬಸ್​ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ Read More »