ಹಿಂದೂಗಳನ್ನು ಕೊಂದಾತ ಹಿಂದೂ ಹೋರಾಟಗಾರ ಹೇಗಾಗುತ್ತಾನೆ? | ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ಸಮಗ್ರ ನ್ಯೂಸ್: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಖಂಡಿಸಲು ಸುದ್ದಿಗೋಷ್ಠಿ ಕರೆದಿದ್ದ ಸುಳ್ಯದ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ತಡವರಿಸಿ ಸುದ್ದಿಗೋಷ್ಠಿಯನ್ನೇ ಅವಸರದಲ್ಲಿ ಮುಗಿಸಿದ ಘಟನೆ ರವಿವಾರ ಮಂಗಳೂರಿನಲ್ಲಿ ನಡೆಯಿತು. ರವಿವಾರ ಮಧ್ಯಾಹ್ನ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದಿದ್ದ ಭಾಗೀರಥಿ ಮುರುಳ್ಯ ಅವರು, ಸುಹಾಸ್ ಶೆಟ್ಟಿ ಕೊಲೆಯನ್ನು ಖಂಡಿಸಿ ಮಾತನಾಡಿದರು. ಸುಹಾಸ್ ಶೆಟ್ಟಿ ಹಿಂದುತ್ವಕ್ಕಾಗಿ ಹೋರಾಡಿದ ಯುವಕ. ಆತನನನ್ನು ರೌಡಿಶೀಟರ್ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದರು. ಸುಹಾಸ್ ಶೆಟ್ಟಿ […]