ರಾಜ್ಯ

ವಾಹನ ಸವಾರರಿಗೆ ಗುಡ್ ನ್ಯೂಸ್..HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ಮುಂದಕ್ಕೆ

ಸಮಗ್ರ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಹಲವು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೂ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮುಂದಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ನವೆಂಬರ್ 30ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಮತ್ತೆ […]

ವಾಹನ ಸವಾರರಿಗೆ ಗುಡ್ ನ್ಯೂಸ್..HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ಮುಂದಕ್ಕೆ Read More »

ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು| ಗಾಯಗೊಂಡ ಮಹಿಳೆ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿ ಎಡಬದಿಯಲ್ಲಿ ಕುಳಿತ್ತಿದ್ದ ಮಹಿಳೆಗೆ ತಲೆ ಭಾಗಕ್ಕೆ ಗಂಭೀರ ಏಟಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು| ಗಾಯಗೊಂಡ ಮಹಿಳೆ ಸ್ಥಿತಿ ಗಂಭೀರ Read More »

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.!

ಸಮಗ್ರ ನ್ಯೂಸ್: ಉತ್ತರಾಖಂಡದ ಅರಾ ಜಿಲ್ಲೆಯ ರಾಮ್ನಗ‌ರ್ ಬಳಿ ಸೋಮವಾರ ಬೆಳಿಗ್ಗೆ ಬಸ್‌ ಕಮರಿಗೆ ಬಿದ್ದ ಪರಿಣಾಮ ಮಕ್ಕಳು ಸೇರಿ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕ‌ರ್ ಸಿಂಗ್ ಧಾಮಿ ಹೇಳಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.! Read More »

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ದೇಶದಲ್ಲಿ ಕೆಲವು ದಿನಗಳ ಹಿಂದಷ್ಟೇ ‘ಡಾನಾ’ ಚಂಡಮಾರುತ ಅಬ್ಬರಿಸಿ ಕೊನೆಗೊಂಡಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಚಂಡಮಾರುತ ಪರಿಚಲನೆ ಸಮುದ್ರ ಮಟ್ಟದಲ್ಲಿ ಸೃಷ್ಟಿಯಾಗಿದೆ. ಇದು ಏನೇನು ಅವಾಂತರ ಸೃಷ್ಟಿ ಮಾಡಲಿದೆಯೋ ಎಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ. ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ತಮಿಳುನಾಡು ಕರಾವಳಿ ಮತ್ತು ಪಕ್ಕದ ಶ್ರೀಲಂಕಾದ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಇದೆ.

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ Read More »

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್

ಸಮಗ್ರ ನ್ಯೂಸ್: ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್ Read More »

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28 ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ | ತಿಮ್ಮಯ್ಯ ತಿಳಿಸಿದ್ದಾರೆ. ಎ.ಜೆ ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾಮಾನ್ಯ ಗಾಯಗಳೊಂದಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹಾಗೂ ಓರ್ವರು

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ Read More »

ಗ್ಯಾರಂಟಿ ಯೋಜನೆ’ ಬಗ್ಗೆ ಲಘುವಾಗಿ ಮಾತನಾಡಬೇಡಿ : ರಾಜ್ಯದ ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ.!

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.ಗ್ಯಾರಂಟಿ ಯೋಜನೆ ಬಗ್ಗೆ ಲಘುವಾಗಿ ಮಾತನಾಡಬೇಡಿ.ಶಕ್ತಿ ಯೋಜನೆ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಮಹಿಳಾ ಮತಗಳ ಮೇಲೆ ಪರಿಣಾಮ ಬೀರಲಿದೆ. ಮಹಾರಾಷ್ಟ್ರದಲ್ಲಿ ಗ್ಯಾರಂಟಿ ಯೋಜನೆ ಜಾರಿಯಾಗಬೇಕಿದೆ ಎಂದು ಸೂಚನೆ ನೀಡಿದ್ದಾರೆ.ಗ್ಯಾರಂಟಿ ಯೋಜನೆಗಳ ಬಗ್ಗೆ ಸರ್ಕಾರದ ಬದ್ಧತೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುವ ಹೇಳಿಕೆಗಳ ಬಗ್ಗೆ ಕರ್ನಾಟಕದ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅ.31 ರಂದು ನಿರಾಕರಿಸಿದ್ದಾರೆ. ಖರ್ಗೆ ಈ ವಿಚಾರವನ್ನು

ಗ್ಯಾರಂಟಿ ಯೋಜನೆ’ ಬಗ್ಗೆ ಲಘುವಾಗಿ ಮಾತನಾಡಬೇಡಿ : ರಾಜ್ಯದ ‘ಕೈ’ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆ ಸಂದೇಶ.! Read More »

ವಿಜಯಪುರದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು, ಸಂಭ್ರಮ, ಸಡಗರರಿಂದ ಅದ್ದೂರಿಯಾಗಿ ಆಚರಿಸಲಾಯಿತು.ನಗರದ ಡಾ.ಬಿ.ಆ‌ರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು. ಭಾರತಕ್ಕೆ ಬಲವಾಗಿ ಚಿರಕಾಲ ಬೆಳಗಲಿ ಕನ್ನಡದ ದೀಪ, ಉಳಿಸೋಣ, ಬೆಳೆಸೋಣ ಕನ್ನಡ ಎಂದು ಹೇಳಿದರು.ಪೊಲೀಸ್, ಸೈಟ್ ಮತ್ತು ಗೈಡ್ಸ್, ಎನ್ ಸಿಸಿ, ಎನ್ ಎಸ್ ಎಸ್, ಗೃಹ

ವಿಜಯಪುರದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸಂಭ್ರಮ Read More »

ಕನ್ನಡ ರಾಜ್ಯೋತ್ಸವ| ಶುಭಕೋರಿದ ಪ್ರಧಾನಿ ಮೋದಿ

ಸಮಗ್ರ ನ್ಯೂಸ್ : ಇಂದು ಕನ್ನಡ ರಾಜ್ಯೋತ್ಸವ, ಕನ್ನಡಿಗರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವದಂದು ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ತಮ್ಮ ಶುಭಾಶಯವನ್ನು ಕನ್ನಡದಲ್ಲಿಯೇ ಪೋಸ್ಟ್ ಮಾಡಿರುವ ಅವರು, ‘ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ”, ಎಂದು ತಿಳಿಸಿದ್ದಾರೆ. “ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ

ಕನ್ನಡ ರಾಜ್ಯೋತ್ಸವ| ಶುಭಕೋರಿದ ಪ್ರಧಾನಿ ಮೋದಿ Read More »

ವರ್ಕ್ಸ್ ಬೋರ್ಡನಿಂದ ಆಸ್ತಿ ಕಬಳಿಕೆಗೆ ಯತ್ನ :ಸುರೇಶ್ ತೆರದಾಳ್ ಅವರ ಕುಟುಂಬಕ್ಕೆ ಮಾನವೀಯತೆಯೇ ಮುಳುವಾಯಿತೇ?

ಸಮಗ್ರ ನ್ಯೂಸ್: ವಿಜಯಪುರದ ಹೊನ್ನುಟಗಿ ಗ್ರಾಮದಲ್ಲಿ ಸೌಹಾರ್ದತೆಯಿಂದ ಮುಸ್ಲಿಂ ಸಮುದಾಯದ ಅಂತ್ಯಸಂಸ್ಕಾರಕ್ಕಾಗಿ ಸುರೇಶ್ ತೆರದಾಳ್ ಅವರು ತುಸು ಜಾಗ ನೀಡಿದ್ದ ಹಿನ್ನೆಯಲ್ಲಿ, ಹಿಂದೂ ಕುಟುಂಬಕ್ಕೆ ವಕ್ಸ್ ಬೋರ್ಡ್ ನಿಂದ ಆಸ್ತಿಯ ಹಕ್ಕು ಪಡೆಯಲು ನೋಟಿಸ್ ನೀಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.ಈ ಜಾಗದ ಹಕ್ಕಿಗೆ ಯಾವುದೇ ದಾಖಲೆ ನೀಡದ ಕಾರಣದಿಂದ, ಈಗ ವಕ್ಸ್ ಬೋರ್ಡ್ ಈ ಜಾಗ ಸೇರಿದಂತೆ 13.8 ಎಕರೆ ಭೂಮಿಯನ್ನು ತನ್ನದಾಗಿ ಘೋಷಿಸಿದೆ. ಸರ್ಕಾರವು ರೈತರ ಜಮೀನುಗಳನ್ನು ತೆಗೆದುಕೊಳ್ಳುವುದಿಲ್ಲವೆಂದು ಹೇಳಿದಂತೆಯೇ, ಅವರ ಜಮೀನಿನ ಪಹಣಿಯಲ್ಲಿ ವರ್ಕ್ಸ್

ವರ್ಕ್ಸ್ ಬೋರ್ಡನಿಂದ ಆಸ್ತಿ ಕಬಳಿಕೆಗೆ ಯತ್ನ :ಸುರೇಶ್ ತೆರದಾಳ್ ಅವರ ಕುಟುಂಬಕ್ಕೆ ಮಾನವೀಯತೆಯೇ ಮುಳುವಾಯಿತೇ? Read More »