ರಾಜ್ಯ

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶುಕ್ರವಾರ ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಬಿದರ್ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ Read More »

ಮಂಗಳೂರು: ಉಳ್ಳಾಲ ಬಸ್ ಅಪಘಾತದಲ್ಲಿ ಚಾಲಕನೇ ಇರಲಿಲ್ಲ!! ಪ್ರಕರಣಕ್ಕೆ ‌ಮೇಜರ್ ಟ್ವಿಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಡಿಪೋದ ಕೆಎಸ್‌ಆರ್‌ಟಿಸಿ ಬಸ್ ತಲಪಾಡಿ ಬಸ್ ನಿಲ್ದಾಣದಲ್ಲಿ ಆಟೋಗೆ ಗುದ್ದಿ 5 ಜನರ ಸಾವಿಗೆ ಕಾರಣವಾಗಿದೆ. ಇದೀಗ ಮಾಧ್ಯಮಗಳಿಗೆ ಸಿಕ್ಕಿರುವ ಸಿಸಿಟಿವಿ ಕ್ಯಾಮೆರಾದ ವಿಡಿಯೋ ದೃಶ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಇಳಿಜಾರಿನಲ್ಲಿ ಹಿಂದಕ್ಕೆ ಬಂದು ನಿಂತಿದ್ದ ಹಿಂಬದಿಯಿಂದಲೇ ಜೋರಾಗಿ ಗುದ್ದಿರುವುದು ಕಾಣುತ್ತದೆ. ಆದರೆ, ಹೀಗೆ ಹಿಂದಕ್ಕೆ ಬರುತ್ತಿರುವ ಬಸ್ಸಿನಲ್ಲಿ ಡ್ರೈವರ್ರೇ ಇರಲಿಲ್ಲ ಎಂಬುದನ್ನು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ. ಮಂಗಳೂರು-1ನೇ ಘಟಕದ ವಾಹನ ಸಂಖ್ಯೆ:KA19 F3407 ಮಾರ್ಗಸಂಖ್ಯೆ 129/130 ಕಾಸರಗೋಡು – ಮಂಗಳೂರು ಮಾರ್ಗದಲ್ಲಿ

ಮಂಗಳೂರು: ಉಳ್ಳಾಲ ಬಸ್ ಅಪಘಾತದಲ್ಲಿ ಚಾಲಕನೇ ಇರಲಿಲ್ಲ!! ಪ್ರಕರಣಕ್ಕೆ ‌ಮೇಜರ್ ಟ್ವಿಸ್ಟ್ Read More »

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಆ.29ರಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಭಾರೀ ಮಳೆ ಕಾರಣದಿಂದ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರು ನದಿತೀರಗಳಿಗೆ, ಸಮುದ್ರ ಕಿನಾರೆಗಳತ್ತ ತೆರಳದಂತೆ ಸೂಚಿಸಲಾಗಿದೆ.

ಭಾರೀ ಮಳೆ ಹಿನ್ನಲೆ| ದ.ಕ ಜಿಲ್ಲೆಯಾದ್ಯಂತ ಆ.29ರಂದು ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ|

ಸಮಗ್ರ ನ್ಯೂಸ್: ಅಮೆರಿಕದ ಟ್ಯಾರಿಫ್​ಗಳಿಂದ ಅತಿಹೆಚ್ಚು ಬಾಧಿತವಾಗುವ ಸೆಕ್ಟರ್​ಗಳಲ್ಲಿ ಜವಳಿ ಉದ್ಯಮವೂ ಒಂದು. ಭಾರತದ ಜವಳಿ ಉದ್ಯಮಕ್ಕೆ ಅತಿದೊಡ್ಡ ಮಾರುಕಟ್ಟೆ ಅಮೆರಿಕವೇ ಆಗಿದೆ. ಶೇ. 60ಕ್ಕಿಂತಲೂ ಹೆಚ್ಚು ಟ್ಯಾರಿಫ್ಹೆಚ್ಚಳ ಆಗುತ್ತಿರುವುದರಿಂದ ಬಾಂಗ್ಲಾದೇಶ, ವಿಯೆಟ್ನಾಂ ಇತ್ಯಾದಿ ದೇಶಗಳ ಸರಕುಗಳೊಂದಿಗೆ ಭಾರತದ ಉದ್ಯಮಗಳು ಪೈಪೋಟಿ ನೀಡಲು ಆಗುವುದಿಲ್ಲ. ಹೀಗಾಗಿ ಹಲವು ಬಿಲಿಯನ್ ಡಾಲರ್ ಮೊತ್ತದ ವ್ಯಾಪಾರ ಕಳೆದುಕೊಳ್ಳುವ ಭೀತಿಯಲ್ಲಿ ಭಾರತದ ಜವಳಿ ಉದ್ಯಮ ಇದೆ. ಇದನ್ನು ತಪ್ಪಿಸಲು ಭಾರತ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಮೆರಿಕಕ್ಕೆ ಪರ್ಯಾಯವಾದ ಮಾರುಕಟ್ಟೆಯನ್ನು ಸೃಷ್ಟಿಸಿಕೊಳ್ಳಲು

ಅಮೇರಿಕಾದ ಸುಂಕಬಾಧೆ ತಡೆಯಲು 40 ದೇಶಗಳತ್ತ ಮಾರುಕಟ್ಟೆ ಹುಡುಕಲು ಹೊರಟ ಭಾರತ| Read More »

ಮಂಗಳೂರು: ಬಸ್ – ಆಟೊ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮಂಗಳೂರು ಸಮೀಪದ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ 1.30ರ ಸುಮಾರಿಗೆ ಕಾಸರಗೋಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನ ಬ್ರೇಕ್ ವಿಫಲಗೊಂಡ ಪರಿಣಾಮ ನಿಯಂತ್ರಣ ತಪ್ಪಿ ಬಸ್ ಶೆಲ್ಟರ್‌ಗೆ ಢಿಕ್ಕಿ ಹೊಡೆದಿದೆ. ನಿಲ್ದಾಣದಲ್ಲಿ ಬಸ್ ಕಾಯುತ್ತಿದ್ದ ನಾಲ್ವರು (ಮೂರು ಮಹಿಳೆಯರು, ಒಬ್ಬ ಪುರುಷ) ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಒಂದೇ ಕುಟುಂಬದವರು

ಮಂಗಳೂರು: ಬಸ್ – ಆಟೊ ನಡುವೆ ಭೀಕರ ಅಪಘಾತ| ಮಗು ಸೇರಿ ಐವರು ಸ್ಥಳದಲ್ಲೇ ಸಾವು Read More »

ಮಂಗಳೂರಿನ ‘ಮಂಗಲ ಕಲಶ’ ಮರುಸ್ಥಾಪನೆ

ಸಮಗ್ರ ನ್ಯೂಸ್: ಮಹಾವೀರ ವೃತ್ತದಲ್ಲಿ (ಪಂಪ್‌ವೆಲ್‌) ಮೇಲ್ಸೇತುವೆ ಕಾಮಗಾರಿ ಸಲುವಾಗಿ ತೆರವುಗೊಳಿಸಿದ್ದ ಭಾರಿ ಗಾತ್ರದ ‘ಮಂಗಲ ಕಲಶ’ದ ಆಕೃತಿಯನ್ನು ಮರುಸ್ಥಾಪಿಸಲಾಗುತ್ತಿದೆ. ಅದನ್ನು ಸೋಮವಾರ (ಆ. 25) ರಾತ್ರಿ ಪೀಠದ ಮೇಲೆ ತಂದಿರಿಸಲಾಯಿತು. ಪಂಪ್‌ವೆಲ್‌ನಲ್ಲಿ ವಿಸ್ತಾರವಾದ ವೃತ್ತವನ್ನು ನಿರ್ಮಿಸಿ, ಅದಕ್ಕೆ ಮಹಾವೀರ ವೃತ್ತ ಎಂದು 2003ರಲ್ಲಿ ನಾಮಕರಣ ಮಾಡಲಾಗಿತ್ತು. ಆ ವೃತ್ತದ ಕೇಂದ್ರದಲ್ಲಿ ಕಲಶದ ಆಕೃತಿಯನ್ನು ಸ್ಥಾಪಿಸಲಾಗಿತ್ತು. ಮಂಗಳೂರು ಜೈನ್ ಸೊಸೈಟಿ ಹಾಗೂ ಜೈನ ಸಮುದಾಯದವರು ಅದರ ಉಸ್ತುವಾರಿ ವಹಿಸಿದ್ದರು. ರಾಷ್ಟ್ರೀಯ ಹೆದ್ದಾರಿ 66ರ ಮೇಲ್ಸೇತುವೆಯು ಈ ವೃತ್ತದ

ಮಂಗಳೂರಿನ ‘ಮಂಗಲ ಕಲಶ’ ಮರುಸ್ಥಾಪನೆ Read More »

ದಾಂಪತ್ಯಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ

ಸಮಗ್ರ ನ್ಯೂಸ್: ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಅದ್ಧೂರಿಯಾಗಿ ಆರಂಭಿಸಿದ್ದಾರೆ. ಇಂದು ಬೆಳಗ್ಗೆ 10:56ಕ್ಕೆ ಬೆಂಗಳೂರಿನಲ್ಲಿ ರೋಷನ್ ಅವರು ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿ, ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ದಾಂಪತ್ಯ ಬಂಧನದ ಸಮಾರಂಭವು ಕನ್ನಡ ಚಿತ್ರರಂಗದ ಸ್ಟಾರ್ ಸೆಲೆಬ್ರಿಟಿಗಳ ಉಪಸ್ಥಿತಿಯಿಂದ ಮತ್ತಷ್ಟು ರಂಗುಗೊಂಡಿತು. ಸಂಭ್ರಮ ಬೈ ಸ್ವಾನ್‌ಲೈನ್ಸ್ ಸ್ಟುಡಿಯೋಸ್‌ನಲ್ಲಿ ನಡೆದ ಈ ಮದುವೆ, ಕನ್ನಡಿಗರ ಸಾಂಪ್ರದಾಯಿಕ ಆಚರಣೆಗಳ ಜೊತೆಗೆ ಆಧುನಿಕ ಸೊಗಡನ್ನು ಸಂಯೋಜಿಸಿತ್ತು. ಅರಿಶಿಣ ಶಾಸ್ತ್ರದಿಂದ

ದಾಂಪತ್ಯಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.‌30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.‌30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.‌28ರವರೆಗೂ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ರಾಮನಗರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಭಾರಿ ಮಳೆ ರಕ್ಷಣೆಗೆ ದನಗಳಿಗೆ ರೈನ್ ಕೋಟ್ ಹಾಕಿ ಮೇಯಲು ಬಿಟ್ಟ ಮಾಲೀಕ| ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಕೊಡಗಿನಲ್ಲಿ ಕೆಲ ದಿನಗಳಿಂದ ಮಳೆಗಾಲದ ಮಾಮೂಲಿ ಮಳೆಯಂತೆ ಧಾರಾಕಾರ ಮಳೆಯಾಗುತ್ತಿದ್ದು, ಈ ವೇಳೆ ಕಾಡಿಗೆ ಮೇಯಲು ಬಿಟ್ಟ ಹಸುಗಳಿಗೆ ಹಸುಗಳ ಮಾಲೀಕರು ಅವುಗಳು ಒದ್ದೆಯಾಗದಂತೆ ಪ್ಲಾಸ್ಟಿಕ್ ರೈನ್‌ಕೋಟ್ ಹಾಕಿದಂತಹ ವಿಶೇಷ ಘಟನೆ ನಡೆದಿದ್ದು, ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Coorgthekashmirofkarnataka ಎಂಬ ಇನ್ಸ್ಟಾ ಗ್ರಾಮ್ ಪೇಜ್‌ನಿಂದ ಈ ವೀಡಿಯೋವನ್ನು ಪೋಸ್ಟ್ ಮಾಡಲಾಗಿದ್ದು, ವೀಡಿಯೋದಲ್ಲಿ ಬಯಲಿನಲ್ಲಿ ಮೇಯುತ್ತಿರುವ ಎರಡು ಹಸುಗಳಿಗೆ ಒದ್ದೆಯಾಗದಂತೆ ಪ್ಲಾಸ್ಟಿಕ್ ಗೊರಬೆಯನ್ನು ಹಾಕಿರುವುದನ್ನು ಕಾಣಬಹುದಾಗಿದೆ. ನಾಪೋಕ್ಲು ಭಾಗಮಂಡಲ ರಸ್ತೆಯ

ಭಾರಿ ಮಳೆ ರಕ್ಷಣೆಗೆ ದನಗಳಿಗೆ ರೈನ್ ಕೋಟ್ ಹಾಕಿ ಮೇಯಲು ಬಿಟ್ಟ ಮಾಲೀಕ| ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ Read More »

ರಾಜ್ಯಾದ್ಯಂತ ಭಾರೀ ಮಳೆ| 3 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು(ಆ.28) ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದು ಇಂದು ಕೂಡ ವರುಣಾರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ, ಶಿವಮೊಗ್ಗ ಹಾಗು ಉತ್ತರಕನ್ನಡ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಯ ಟಿಕೆ ಸ್ವರೂಪ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ

ರಾಜ್ಯಾದ್ಯಂತ ಭಾರೀ ಮಳೆ| 3 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು(ಆ.28) ರಜೆ ಘೋಷಣೆ Read More »