ರಾಜ್ಯ

ನಾಳೆ(ಆ.5)ಯಿಂದ ಸಾರಿಗೆ ನೌಕರರ ಮುಷ್ಕರ| ರಸ್ತೆಗಿಳಿಯಲ್ಲ ಬಸ್ ಗಳು

ಮಗ್ರ ನ್ಯೂಸ್: ಸಾರಿಗೆ ನೌಕರರ ಮುಷ್ಕರ ನಾಳೇವರಗೆ ತಡೆಹಿಡಿಯುವಂತೆ ಹೈಕೋರ್ಟ್ ಆದೇಶ ನೀಡಿತ್ತು. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿತ್ತು. ಆದರೆ ಹೈಕೋರ್ಟ್ ಆದೇಶದ ನಡುವೆಯೂ ನಾಳೆಯಿಂದ ಅನಿರ್ದಿಷ್ಟಾವದಿ ಮುಷ್ಕರ ಆರಂಭಿಸುವುದು ಖಚಿತ ಎಂದು ಸಾರಿಗೆ ನೌಕರ ಮುಖಂಡ ಅನಂತ ಸುಬ್ಬರಾವ್ ಹೇಳಿದ್ದಾರೆ. ಹೀಗಾಗಿ ನಾಳೆಯಿಂದ ಸಾರಿಗೆ ಬಸ್ ಸೇವೆ ಲಭ್ಯವಿರುವುದಿಲ್ಲ. ಸರ್ಕಾರಿ ಸಾರಿಗೆ ಬಸ್ ಅವಲಂಬಿಸಿರುವರು ಇದೀಗ ಖಾಸಗಿ ವಾಹನಗಳ ಅವಲಂಬಿಸಬೇಕಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರು

ನಾಳೆ(ಆ.5)ಯಿಂದ ಸಾರಿಗೆ ನೌಕರರ ಮುಷ್ಕರ| ರಸ್ತೆಗಿಳಿಯಲ್ಲ ಬಸ್ ಗಳು Read More »

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಡೇಶಿವಾಲಯದ ಹೇಮಂತ್ ಆಚಾರ್ಯ (21) ಅವರ ಮೃತದೇಹ ಬಜಾಲ್ ಮುಗೇರು ಸಮೀಪ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಡೇಶಿವಾಲಯದ ಹೇಮಂತ್ ಆಚಾರ್ಯ ಜುಲೈ 27 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.ಜುಲೈ 28ರಂದು ಈತನ ಸ್ಕೂಟರ್​ ಹಾಗೂ ಮೊಬೈಲ್ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿತ್ತು. ಹೀಗಾಗಿ ಆತ ನದಿಗೆ ಹಾರಿರಬಹುದು ಎಂಬ

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್| ಬಾಲಕಿ ಶವ ಹೂತಿದ್ದನ್ನು ನೋಡಿದ್ದೇನೆ ಎಂದ ಮತ್ತೊಬ್ಬ ಸಾಕ್ಷಿದಾರ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಅಪರಿಚಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ಸಿಕ್ಕಿದ್ದು, ಈಗಾಗಲೇ ಒಬ್ಬ ದೂರುದಾರನ ಹೇಳಿಕೆ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು 6ನೇ ಪಾಯಿಂಟ್ ನಲ್ಲಿ ಮನುಷ್ಯ ದೇಹದ ಅಸ್ತಿಪಂಜರದ ಕೆಲವು ಮೂಳೆಗಳು ದೊರೆತಿವೆ. ಇನ್ನು ನಿನ್ನೆ ಎಸ್‌ಐಟಿ ಕಚೇರಿಗೆ ಮತೊಬ್ಬ ದೂರುದಾರ ಆಗಮಿಸಿ 15 ವರ್ಷದ ಬಾಲಕಿಯ ಶವ ಹೂತಿದ್ದನ್ನು ನಾನು ನೋಡಿದ್ದೇನೆ. ಎಂದು ಅದಕ್ಕೆ ನಾನೇ ಪ್ರತ್ಯಕ್ಷ ಸಾಕ್ಷಿ ಎಂದು ಹೇಳಿಕೆ ನೀಡಿದ್ದು

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್| ಬಾಲಕಿ ಶವ ಹೂತಿದ್ದನ್ನು ನೋಡಿದ್ದೇನೆ ಎಂದ ಮತ್ತೊಬ್ಬ ಸಾಕ್ಷಿದಾರ Read More »

ವಿಟ್ಲ: ದೇವಸ್ಥಾನದಿಂದ ಹುಂಡಿಹಣ ಕಳ್ಳತನ| ಮೂವರು ಅರೆಸ್ಟ್

ಸಮಗ್ರ ನ್ಯೂಸ್: ಧಾರ್ಮಿಕ ಶೃದ್ದಾ ಕೇಂದ್ರಕ್ಕೆ ಸಂಬಂಧಿಸಿದಂತೆ ರಸ್ತೆ ಬದಿಯಲ್ಲಿ ಇಟ್ಟ ಕಾಣಿಕೆ ಡಬ್ಬದಲ್ಲಿದ್ದ ಹಣವನ್ನು ಕದ್ದ ಕಳ್ಳರನ್ನು ವಿಟ್ಲ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವಿಟ್ಲ ಕಸಬಾ ಗ್ರಾಮದ ನಿವಾಸಿಗಳಾದ ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18 , ಮೊಹಮ್ಮದ್‌ ನಬೀಲ್‌(18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು

ವಿಟ್ಲ: ದೇವಸ್ಥಾನದಿಂದ ಹುಂಡಿಹಣ ಕಳ್ಳತನ| ಮೂವರು ಅರೆಸ್ಟ್ Read More »

ಪುತ್ತೂರು: ಅಪ್ರಾಪ್ತ ಬಾಲಕಿಯ ಗರ್ಭಿಣಿಯನ್ನಾಗಿಸಿದವನಿಗೆ 10 ವರ್ಷ ಜೈಲು

ಸಮಗ್ರ ನ್ಯೂಸ್: ಏಳು ವರ್ಷಗಳ ಹಿಂದೆ ಮೈಂದನಡ್ಕದ ಎಂಬಲ್ಲಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಆಕೆ ಗರ್ಭಿಣಿಯಾಗಲು ಕಾರಣನಾಗಿದ್ದ ಆರೋಪಿಗೆ ಪೋಕ್ಸೋ ಪ್ರಕರಣದಲ್ಲಿ 10 ವರ್ಷ ಕಠಿಣ ಜೈಲು ಶಿಕ್ಷೆ ನೀಡಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಜೈಲು ಶಿಕ್ಷೆಗೊಳಗಾದ ಆರೋಪಿಯನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ರಾಜೂರ ದಿಂಡೂರ ನಿವಾಸಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ ಎಂದು ಗುರುತಿಸಲಾಗಿದೆ. 2017ರ ಆಗಸ್ಟ್‌ನಲ್ಲಿ ಈ ಪ್ರಕರಣ ನಡೆದಿದ್ದು,

ಪುತ್ತೂರು: ಅಪ್ರಾಪ್ತ ಬಾಲಕಿಯ ಗರ್ಭಿಣಿಯನ್ನಾಗಿಸಿದವನಿಗೆ 10 ವರ್ಷ ಜೈಲು Read More »

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ| 123 ಕೆಜಿ‌ ಗಾಂಜಾ‌ ವಶ, ಮೂವರ ಬಂಧನ

ಸಮಗ್ರ ನ್ಯೂಸ್: ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಮಾದಕ ದ್ರವ್ಯ ಕಳ್ಳಸಾಗಣೆ ತಡೆ ಕಾರ್ಯಾಚರಣೆಯಲ್ಲಿ 123 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಆಂಧ್ರಪ್ರದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್‌ನ ಮಠದಕೆರೆ ಬಳಿ ಎರಡು ಕಾರುಗಳನ್ನು ಅಡ್ಡಗಟ್ಟಿದ್ದಾರೆ. ಈ ಕಾರುಗಳಲ್ಲಿ ನಿಷೇಧ ವಸ್ತುಗಳನ್ನು ರಾಜ್ಯದ ಗಡಿಗಳಲ್ಲಿ ಕಳ್ಳಸಾಗಣೆ ಮಾಡಲಾಗುತಿತ್ತು ಎಂದು ವರದಿಯಾಗಿದೆ. ಬಂಧಿತ

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ| 123 ಕೆಜಿ‌ ಗಾಂಜಾ‌ ವಶ, ಮೂವರ ಬಂಧನ Read More »

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »

ಪ್ರಣವ್ ರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿಲ್ಲ| ಧರ್ಮಸ್ಥಳ ಪ್ರಕರಣದ ಸತ್ಯಾಂಶವೇ ಮುಖ್ಯ – ಪರಮೇಶ್ವರ್

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರಕಾರ ತೀರ್ಮಾನ ಮಾಡಿತ್ತು. ಅದರಂತೆ ಪ್ರಣವ್ ಮೊಹಾಂತಿಯವರನ್ನು ನೇಮಿಸಿದ್ದೇವೆ. ಕೇಂದ್ರ

ಪ್ರಣವ್ ರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿಲ್ಲ| ಧರ್ಮಸ್ಥಳ ಪ್ರಕರಣದ ಸತ್ಯಾಂಶವೇ ಮುಖ್ಯ – ಪರಮೇಶ್ವರ್ Read More »

ಧರ್ಮಸ್ಥಳ ಪ್ರಕರಣ| ಕೋರ್ಟ್ ಆದೇಶ ಮೀರಿ ಮತ್ತೊಂದು ‌ಚಾನಲ್ ತೆರೆಯೋದ್ಯಾಕೆ? ಕುಡ್ಲ ರಾಂಪೇಜ್‌ಗೆ ಹೈಕೋರ್ಟ್ ಪ್ರಶ್ನೆ

ಸಮಗ್ರ ನ್ಯೂಸ್: ‘ನ್ಯಾಯಾಲಯದ ಆದೇಶಗಳನ್ನು ಏಕೆ ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದೀರಿ’ ಎಂದು ಯೂ ಟ್ಯೂಬರ್‌ಗಳನ್ನು ಪ್ರಶ್ನಿಸಿರುವ ಹೈಕೋರ್ಟ್‌, ‘ಪ್ರತಿಬಂಧಕ ಆದೇಶ ನೀಡಿದ ಮೇಲೂ ಒಂದರ ನಂತರ ಮತ್ತೊಂದು (ಯೂ ಟ್ಯೂಬ್) ಚಾನಲ್‌ ಆರಂಭಿಸುತ್ತಿರುವುದೇಕೆ’ ಎಂದು ಮೌಖಿಕವಾಗಿ ಪ್ರಶ್ನಿಸಿದೆ. ‘ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ’ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’

ಧರ್ಮಸ್ಥಳ ಪ್ರಕರಣ| ಕೋರ್ಟ್ ಆದೇಶ ಮೀರಿ ಮತ್ತೊಂದು ‌ಚಾನಲ್ ತೆರೆಯೋದ್ಯಾಕೆ? ಕುಡ್ಲ ರಾಂಪೇಜ್‌ಗೆ ಹೈಕೋರ್ಟ್ ಪ್ರಶ್ನೆ Read More »

ಧರ್ಮಸ್ಥಳ ಪ್ರಕರಣ| 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿದಾರ| ಇಂದೂ ಮಹಜರು ಮುಂದುವರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮ ವ್ಯಾಪ್ತಿಯ ಹಲವೆಡೆ ಶವಗಳನ್ನು ಹೂತಿರುವುದಾಗಿ ಅನಾಮಿಕ ಹೇಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಸ್‌.ಐ.ಟಿ. (ವಿಶೇಷ ತನಿಖಾ ದಳ) ಅಧಿಕಾರಿಗಳ ಮುಂದೆ ಹಾಜರಾದ ಅನಾಮಿಕ ವ್ಯಕ್ತಿ, 13 ಸ್ಥಳಗಳನ್ನು ಗುರುತಿಸಿದಂತೆ ಸ್ಥಳ ಮಹಜರು ನಡೆಸಲಾಗಿದೆ. ಜು.27 ರಂದು ಮಂಗಳೂರಿನಲ್ಲಿ ಅನಾಮಿಕನ ಸಂಪೂರ್ಣ ಹೇಳಿಕೆ ಪಡೆದು ಪ್ರಕರಣವನ್ನು ಚುರುಕುಗೊಳಿಸಿದ ತನಿಖಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ, ಎಸ್ಪಿ ಸಿ.ಎ.ಸೈಮನ್‌ ಹಾಗೂ ಅಧಿಕಾರಿಗಳ ತಂಡವು ಬೆಳಗ್ಗೆಯೇ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಎಸ್‌.ಐ.ಟಿ. ಕಚೇರಿಗೆ ಆಗಮಿಸಿದ್ದರು. ಅನಾಮಿಕ ತನ್ನ

ಧರ್ಮಸ್ಥಳ ಪ್ರಕರಣ| 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿದಾರ| ಇಂದೂ ಮಹಜರು ಮುಂದುವರಿಕೆ ಸಾಧ್ಯತೆ Read More »