ರಾಜ್ಯ

ಧರ್ಮಸ್ಥಳ ಪ್ರಕರಣ ಕುರಿತು ‌ಮಾನಹಾನಿಕರ ವರದಿ ಪ್ರಕಟಿಸದಂತೆ ಮಾಧ್ಯಮ ನಿರ್ಬಂಧ| ಸುಪ್ರೀಂ ಮೊರೆಹೋದ ಯೂಟ್ಯೂಬ್ ಚಾನಲ್

ಸಮಗ್ರ ನ್ಯೂಸ್: ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿರುವ ವಿರೇಂದ್ರ ಹೆಗ್ಗಡೆ ಮತ್ತು ಅವರ ಸೋದರ ಡಿ. ಹರ್ಷೇಂದ್ರ ಕುಮಾರ್‌ ಬಗ್ಗೆ ಯಾವುದೇ ಸುದ್ದಿ ಪ್ರಕಟಿಸಿದಂತೆ ಬೆಂಗಳೂರು ಸಿವಿಲ್‌ ನ್ಯಾಯಾಲಯ ನೀಡಿರುವ “ಗ್ಯಾಗ್‌ ಆದೇಶ” ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆಹೋಗಲಾಗಿದೆ. ಬೆಂಗಳೂರು ನ್ಯಾಯಾಲಯದ ಆದೇಶ ಹಿಂದೆಂದೂ ನೀಡದಂತಹ ಆತಂಕಕಾರಿ ಆದೇಶವಾಗಿದೆ. ಇದು ವಾಕ್‌ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯ ಎರಡಕ್ಕೂ ಧಕ್ಕೆ ತರುವ ವಿಷಯವಾಗಿದೆ .ನ್ಯಾಯ ಪ್ರಕ್ರಿಯೆಯ ಮೂಲಭೂತ ತತ್ವಗಳ ಮೇಲೆ ನಡೆಸಿರುವ ಹಲ್ಲೆಯಾಗಿದೆ ಎಂದು ಥರ್ಡ್‌ ಐ ತನ್ನ ಅರ್ಜಿಯಲ್ಲಿ

ಧರ್ಮಸ್ಥಳ ಪ್ರಕರಣ ಕುರಿತು ‌ಮಾನಹಾನಿಕರ ವರದಿ ಪ್ರಕಟಿಸದಂತೆ ಮಾಧ್ಯಮ ನಿರ್ಬಂಧ| ಸುಪ್ರೀಂ ಮೊರೆಹೋದ ಯೂಟ್ಯೂಬ್ ಚಾನಲ್ Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ರದ್ದತಿಗೆ ಚಿಂತನೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ವಿತರಣೆ ವ್ಯವಸ್ಥೆಯನ್ನು ನಿಲ್ಲಿಸಲು ಚಿಂತಿಸಲಾಗಿದೆ ಎಂದು ಶಾಸಕ ಅಶೋಕ ರೈ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಿರ್ವಹಣೆಗೆ ಹಣದ ಕೊರತೆ ಎದುರಾಗಿದ್ದು, ಈ ಹಿನ್ನಲೆ ಮುಂದಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದ ಅನ್ನಪ್ರಸಾದ ಸೇವೆಯನ್ನು ನಿಲ್ಲಿಸಲು ಸೂಚಿಸಲಾಗಿದ್ದು, ಅನ್ನಪ್ರಸಾದ ಬೇಕಾದಲ್ಲಿ ಬೇಕಾದಲ್ಲಿ ಹಣ ಕೊಟ್ಟು ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ರದ್ದತಿಗೆ ಚಿಂತನೆ Read More »

ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ| ಮುಂದೆ ಈ ಹುದ್ದೆ ಅಲಂಕರಿಸುವವರು ಯಾರು?

ಸಮಗ್ರ ನ್ಯೂಸ್: ಜಗದೀಪ್‌ ಧನಕರ್‌ ರಾಜೀನಾಮೆಯಿಂದಾಗಿ ತೆರವಾಗುವ ಉಪರಾಷ್ಟ್ರಪತಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. 74 ವರ್ಷದ ಧನಕರ್‌ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು. ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಉಪ

ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ| ಮುಂದೆ ಈ ಹುದ್ದೆ ಅಲಂಕರಿಸುವವರು ಯಾರು? Read More »

ಜಾಗ ವಿವಾದದ ಕಾರಣ ನನ್ನ ತಂದೆಯನ್ನು ಕೊಲೆ ಮಾಡಲಾಗಿದೆ| ಧರ್ಮಸ್ಥಳದ ವಿರುದ್ಧ ಕೇರಳದಲ್ಲಿ ದೂರು ನೀಡಿದ ವ್ಯಕ್ತಿ

ಸಮಗ್ರ ನ್ಯೂಸ್: ಜಾಗದ ವಿವಾದದ ಹಿನ್ನಲೆಯಲ್ಲಿ ತನ್ನ ತಂದೆಯನ್ನು ವಾಹನ ಅಪಘಾತದ ಮೂಲಕ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಈ ಹಿಂದೆ ಧರ್ಮಸ್ಥಳ ಹಾಗೂ ಬೆಳ್ತಂಗಡಿ ತಾಲೂಕಿನ‌ ಇತರೆಡೆಗಳಲ್ಲಿ ವಾಸವಾಗಿದ್ದ, ಈಗ ಕೇರಳದಲ್ಲಿ ವಾಸವಾಗಿರುವ ಅನೀಶ್ ಜೋಯಿ ಎಂಬವರು ಕೇರಳದ ತಳಿಪರಂಬ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಅಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ್ದು, ಪೊಲೀಸರು ಇದರ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ವಾಸಿಸುತ್ತಿದ್ದ ವೇಳೆ ಅನೀಶ್ ಅವರ ತಂದೆ

ಜಾಗ ವಿವಾದದ ಕಾರಣ ನನ್ನ ತಂದೆಯನ್ನು ಕೊಲೆ ಮಾಡಲಾಗಿದೆ| ಧರ್ಮಸ್ಥಳದ ವಿರುದ್ಧ ಕೇರಳದಲ್ಲಿ ದೂರು ನೀಡಿದ ವ್ಯಕ್ತಿ Read More »

ಧರ್ಮಸ್ಥಳದಲ್ಲಿ ಭಾರೀ ಹೈಡ್ರಾಮಾ| ನ್ಯಾಯಕ್ಕಾಗಿ ಪಾದಯಾತ್ರೆ ಮಾಡಿದವರಿಗೆ ಭಕ್ತರಿಂದ ತಡೆ

ಸಮಗ್ರ ನ್ಯೂಸ್: ಧರ್ಮಸ್ಥಳ ಇದೀಗ ಇಡೀ ರಾಷ್ಟ್ರದ ಗಮನ ಸೆಳೆಯುತ್ತಿದ್ದು, ಅನಾಮಿಕ ವ್ಯಕ್ತಿಯೊಬ್ಬನ ದೂರಿನ ಬೆನ್ನಲ್ಲೇ ಇದೀಗ ಎಸ್ ಐಟಿ ರಚನೆಯಾಗಿದ್ದು, ಈ ನಡುವೆ ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಕಲಬುರ್ಗಿಯಿಂದ ಪಾದಯಾತ್ರೆಯಲ್ಲಿ ಬಂದಿದ್ದೇವೆ ಎಂದು ಹೇಳಿಕೊಂಡು ಧರ್ಮಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಮಂದಿ ಯುವಕರು ಬಂದಿದ್ದು, ಇವರನ್ನು ಸ್ಥಳೀಯರು ಅಡ್ಡಗಟ್ಟಿದ್ದು ಭಾರೀ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸೌಜನ್ಯಳಿಗೆ ನ್ಯಾಯ ಎಂಬ ಧ್ಯೆಯದೊಂದಿಗೆ ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ರುದ್ರವಾಡಿ ಗ್ರಾಮದ ಶರಣಪ್ಪ ನೇತೃತ್ವದ ತಂಡವು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿತ್ತು.

ಧರ್ಮಸ್ಥಳದಲ್ಲಿ ಭಾರೀ ಹೈಡ್ರಾಮಾ| ನ್ಯಾಯಕ್ಕಾಗಿ ಪಾದಯಾತ್ರೆ ಮಾಡಿದವರಿಗೆ ಭಕ್ತರಿಂದ ತಡೆ Read More »

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಎಸ್ಐಟಿ ತಂಡದಿಂದ ಇಬ್ಬರು ಅಧಿಕಾರಿಗಳು ಹೊರಕ್ಕೆ?

ಸಮಗ್ರ ನ್ಯೂಸ್: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. SIT ತಂಡ ರಚಿಸಿ ಅರ್ಧ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ. ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ ಅನ್ನೋ ಮಾಹಿತಿ‌ ಉನ್ನತ ಮೂಲಗಳಿಂದ ತಿಳಿದುಬಂದಿದೆ. ತನಿಖೆಯಿಂದ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಎಸ್ಐಟಿ ತಂಡದಿಂದ ಇಬ್ಬರು ಅಧಿಕಾರಿಗಳು ಹೊರಕ್ಕೆ? Read More »

ಧರ್ಮಸ್ಥಳ‌ ಶವ ಹೂತಿಟ್ಟ ಪ್ರಕರಣ| ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲು ನಡೆದಿವೆ ಎನ್ನಲಾದ ನೂರಾರು ಕೊಲೆ, ಅಸಹಜ ಸಾವು, ಅತ್ಯಾಚಾರ ಶಂಕೆ ಹಾಗೂ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಎಸ್​​​ಐಟಿ ರಚನೆ ಮಾಡಿದೆ. ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್​ ಅಧಿಕಾರಗಳು ಈ ವಿಶೇಷ ತನಿಖಾ ತಂಡದಲ್ಲಿದ್ದಾರೆ. ಈ ತಂಡದಲ್ಲಿ ಅನುಚೇತ್, ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್​​​​​​ ಪ್ರಕರಣದ ಬಗ್ಗೆ ಎಸ್​​​​ಐಟಿ ತನಿಖೆ ಶುರು

ಧರ್ಮಸ್ಥಳ‌ ಶವ ಹೂತಿಟ್ಟ ಪ್ರಕರಣ| ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ Read More »

ಚಿಕ್ಕಮಗಳೂರು: ಹುಡುಗಿ ಕೈಕೊಟ್ಟು ಹೋದಳೆಂದು ಅರೆಹುಚ್ಚನಾದ ಯುವಕ

ಸಮಗ್ರ ನ್ಯೂಸ್: ಪ್ರೀತಿ ವಿಫಲವಾದ ದುಃಖದಲ್ಲಿಯೇ ಅರೆಹುಚ್ಚನಾದ ಯುವಕ, ತನ್ನ ತಲೆಗೆ ಬಾಟಲಿಯಿಂದ ಹೊಡೆದುಕೊಂಡಿದ್ದಾನೆ. ತನ್ನ ತಲೆಯಲ್ಲಿ ರಕ್ತ ಹರಿಯುತ್ತಿದ್ದರೂ, ಸುಮ್ಮನೆ ಕುಳಿತಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್‌ಪೋಸ್ಟ್ ಬಳಿ ಗುರುವಾರ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಯುವಕ, ಕೆಲ ತಿಂಗಳ ಹಿಂದೆ ಕಾಫಿತೋಟದ ಕೆಲಸಕ್ಕಾಗಿ ಚಿಕ್ಕಮಗಳೂರು ಬಂದಿದ್ದರು. ಕೆಲಸದಲ್ಲಿಯೇ ಇಲ್ಲಿಯ ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದರು. ಆದರೆ, ಕಾಲಕ್ರಮೇಣ ಹುಡುಗಿ ಕೈಕೊಟ್ಟು ಬೇರೆ ಯಾರೊಂದಿಗೋ ಮದುವೆಯಾಗಿದ್ದಾಳೆ. ಈ ಘಟನೆಯು ಯುವಕನ ಮನಸ್ಸಿಗೆ ಆಘಾತ ಉಂಟುಮಾಡಿ,

ಚಿಕ್ಕಮಗಳೂರು: ಹುಡುಗಿ ಕೈಕೊಟ್ಟು ಹೋದಳೆಂದು ಅರೆಹುಚ್ಚನಾದ ಯುವಕ Read More »

ಧರ್ಮಸ್ಥಳ ಪ್ರಕರಣಗಳ‌ ತನಿಖೆಯನ್ನು ಎನ್ಐಎ‌ಗೆ ವಹಿಸಲು ರಾಜ್ಯಸಭಾ ಸದಸ್ಯರಿಂದ ಅಮಿತ್ ಷಾಗೆ‌ ಪತ್ರ

ಸಮಗ್ರ ನ್ಯೂಸ್: ರಾಜ್ಯದ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ದಶಕಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವ ಸರಣಿ ಅಪರಾಧಗಳು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐ ನಾಯಕ ಪಿ. ಸಂದೋಷ್ ಕುಮಾರ್ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗಂಭೀರ ಸ್ವರೂಪದ ಪತ್ರ ಬರೆದಿದ್ದಾರೆ. 500ಕ್ಕೂ ಹೆಚ್ಚು ಶವಗಳನ್ನು ತಾನೇ ವಿಲೇವಾರಿ ಮಾಡಿರುವುದಾಗಿ ದೇವಾಲಯದ ಮಾಜಿ ನೌಕರನೊಬ್ಬ

ಧರ್ಮಸ್ಥಳ ಪ್ರಕರಣಗಳ‌ ತನಿಖೆಯನ್ನು ಎನ್ಐಎ‌ಗೆ ವಹಿಸಲು ರಾಜ್ಯಸಭಾ ಸದಸ್ಯರಿಂದ ಅಮಿತ್ ಷಾಗೆ‌ ಪತ್ರ Read More »

ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ

ಸಮಗ್ರ ನ್ಯೂಸ್: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ರೋಹನ್ ಸಲ್ಡಾನಾ ಎಂಬಾತನನ್ನ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅನೇಕ ವರ್ಷಗಳಿಂದ 200 ಕೋಟಿಗೂ ಅಧಿಕ ವಂಚನೆ ಮಾಡಿದ್ದಾನೆ. ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲೀಕ, ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ಇದೇ ರೋಹನ್‌ನನ್ನ ಪರಿಚಯಿಸಿಕೊಟ್ಟಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು ರೋಹನ್ ಉದ್ಯಮಿ

ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ Read More »