ರಾಜ್ಯ

ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಸರಣಿ ಹತ್ಯೆ, ಸಾಮೂಹಿಕ ಅಂತ್ಯಸಂಸ್ಕಾರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಈ ವಿಚಾರವಾಗಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ

ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ Read More »

ಅತ್ಯಧಿಕ ಹಾಲು ಸಂಗ್ರಹ/ ದಾಖಲೆ ನಿರ್ಮಿಸಿದ ಕೆಎಂಎಫ್

ಸಮಗ್ರ ನ್ಯೂಸ್‌: ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೂಲಕ ಕೆಎಂಎಫ್ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ. ಕಳೆದ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಆದರೆ ಈ ವರ್ಷದ ಮೇ ತಿಂಗಳಾಂತ್ಯದಿಂದ ನಿತ್ಯ ಕೋಟಿಗಿಂತಲೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಕೆಎಂಎಫ್‌ನಲ್ಲಿ ದಿನನಿತ್ಯ 1.05 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ವಾತಾವರಣ

ಅತ್ಯಧಿಕ ಹಾಲು ಸಂಗ್ರಹ/ ದಾಖಲೆ ನಿರ್ಮಿಸಿದ ಕೆಎಂಎಫ್ Read More »

ಕೋಲ್ಕತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ| ಬಾಗಲಕೋಟೆಯ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಮೂಲದ ವಿದ್ಯಾರ್ಥಿ ಪರಮಾನಂದ ಜೈನ್ ಎನ್ನುವ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜು.12ರ ರಾತ್ರಿ ಪರಮಾನಂದನನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾದ ಪರಮಾನಂದ ಐಐಎಂ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾನೆ. ಹಾಸ್ಟೆಲಿಗೆ ಯುವತಿಯನ್ನು ಕರೆಸಿಕೊಂಡು, ಮತ್ತು ಬರುವ ಪಾನಿಯ ಕೊಡಿಸಿ ಪರಮಾನಂದ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.ಜುಲೈ 12ರಂದು ಆರೋಪಿ ಪರಮಾನಂದನನ್ನು

ಕೋಲ್ಕತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ| ಬಾಗಲಕೋಟೆಯ ಯುವಕ ಅರೆಸ್ಟ್ Read More »

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ

ಸಮಗ್ರ ನ್ಯೂಸ್: ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್ಟಿಸಿ ಶಾಕ್ ನೀಡಿದೆ. ಪ್ರತಿಭಟನೆ ನಡೆಸದಂತೆ ಕೆಎಸ್‌ಆರ್ಟಿಸಿ ವತಿಯಿಂದ ಎಸ್ಮಾ ಜಾರಿ ಮಾಡಲಾಗಿದೆ. ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 5

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ Read More »

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಅತ್ಯಾಚಾರ, ಹತ್ಯೆ ಮತ್ತು ಕಾಡಿನಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ಸಾಕ್ಷಿ ಫಿರ್ಯಾದಿಗೆ ರಾಜ್ಯ ಸರಕಾರವು ತತ್‌ಕ್ಷಣವೇ ಭದ್ರತೆ ಒದಗಿಸಬೇಕು. ಈ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಆಗ್ರಹಿಸಿದ್ದಾರೆ. ಮೇಲಿನ ಅಪರಾಧಗಳ ಸಂಬಂಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಬಳಿಕವೂ ತನಿಖೆ ಸರಿಯಾಗಿ ಆಗುತ್ತಿಲ್ಲ.

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ Read More »

ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇಲ್ಲ/ ವೈಫೈ ಅಳವಡಿಸಲು ಮುಂದಾದ ಬಿಎಂಆರ್‌ಸಿಎಲ್

ಸಮಗ್ರ ನ್ಯೂಸ್‌: ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿರುವ ನಮ್ಮ ಮೆಟ್ರೋದ ಸುರಂಗ ಮಾರ್ಗಗಳಲ್ಲಿ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ. ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಅಡ್ವಾನ್‌ನ್ಸ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್

ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇಲ್ಲ/ ವೈಫೈ ಅಳವಡಿಸಲು ಮುಂದಾದ ಬಿಎಂಆರ್‌ಸಿಎಲ್ Read More »

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಯಾರನ್ನೂ ರಕ್ಷಿಸುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಧರ್ಮಸ್ಥಳದ ಮಾಜಿ ನೈರ್ಮಲ್ಯ ಸಿಬ್ಬಂದಿಯೊಬ್ಬರು ತಾವು ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತಿರುವುದಾಗಿ ಹೇಳಿಕೆ ದಾಖಲಿಸಿದ ಬೆನ್ನಲ್ಲೇ ಇದೀಗ ನಾಪತ್ತೆ, ಅಸ್ವಾಭಾವಿಕ ಸಾವುಗಳು ಮತ್ತು ಲೈಂಗಿಕ ದೌರ್ಜನ್ಯಗಳ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಯಾರನ್ನೂ ಬೆಂಬಲಿಸುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಾವು ಪ್ರಕರಣವನ್ನು ಸಂವೇದನಾಶೀಲಗೊಳಿಸಲು ಬಯಸುವುದಿಲ್ಲ, ಆದರೆ ನಾವು ಖಂಡಿತವಾಗಿಯೂ

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್ Read More »

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ?

ಸಮಗ್ರ ನ್ಯೂಸ್: ಖ್ಯಾತ ನಿರೂಪಕಿ ನಟಿ ಅನುಶ್ರೀ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲ ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಅನ್ನೋರಿಗೆ ಸಿಹಿಸುದ್ದಿ ಸಿಕ್ಕಿದೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಆಗಸ್ಟ್ 28ಕ್ಕೆ ಮದುವೆ ಆಗಲಿದ್ದಾರೆ. ಕೊಡಗು ಮೂಲದ ಕಾರ್ಪೋರೇಟ್ ಉದ್ಯಮಿ ಜೊತೆ ಅನುಶ್ರೀ ಮದುವೆ ನಡೆಯಲಿದೆ. ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ?

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ? Read More »

ಬೆಂಗಳೂರು ಕಾಲ್ತುಳಿತಕ್ಕೆ‌ RCB, ವಿರಾಟ್ ಕೊಹ್ಲಿಯೇ ಕಾರಣ| ಕರ್ನಾಟಕ ಸರ್ಕಾರದಿಂದ ವರದಿ

ಸಮಗ್ರ ನ್ಯೂಸ್: 11 ಜನರ ಸಾವಿಗೆ ಕಾರಣವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಅವರಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ಕರ್ನಾಟಕ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಆರ್‌ಸಿಬಿಯನ್ನು ದೂಷಿಸಿದ್ದು, ಇದೇ ವರದಿಯಲ್ಲಿ ವಿರಾಟ್ ಕೊಹ್ಲಿ ಹೆಸರನ್ನೂ ಉಲ್ಲೇಖಿಸಲಾಗಿದೆ. ಕ್ರೀಡಾಂಗಣದಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಅಭಿಮಾನಿಗಳನ್ವು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ತಂಡದ ಆಡಳಿತ ಮಂಡಳಿ ರಾಜ್ಯ ಸರ್ಕಾರವನ್ನಾಗಲೀ ಅಥವಾ ಪೊಲೀಸ್

ಬೆಂಗಳೂರು ಕಾಲ್ತುಳಿತಕ್ಕೆ‌ RCB, ವಿರಾಟ್ ಕೊಹ್ಲಿಯೇ ಕಾರಣ| ಕರ್ನಾಟಕ ಸರ್ಕಾರದಿಂದ ವರದಿ Read More »

ಆ.5ರಿಂದ ಅನಿರ್ಧಿಷ್ಟಾವಧಿ‌ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರ ಸಂಘ| ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಮಗ್ರ ನ್ಯೂಸ್: ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಸಮಿತಿ ಪದಾಧಿಕಾರಿಗಳೊಂದಿಗೆ ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು,

ಆ.5ರಿಂದ ಅನಿರ್ಧಿಷ್ಟಾವಧಿ‌ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರ ಸಂಘ| ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ Read More »