ರಾಜ್ಯ

ಕೊನೆಗೂ ಅಂತಿಮಗೊಂಡ ಸಂಪುಟ ವಿಸ್ತರಣೆ| ನೂತನ ಸಚಿವರಿಂದ ಇಂದೇ ಪ್ರಮಾಣವಚನ

ಸಮಗ್ರ ನ್ಯೂಸ್: ಗಜಪ್ರಸವದಂತೆ ವಿಳಂಬಗೊಂಡಿದ್ದ ಕರ್ನಾಟಕದ ಎರಡನೇ ಸುತ್ತಿನ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ನೂತನ ಸಚಿವರ ಪಟ್ಟಿಯನ್ನು (Cabinet expansion) ಹೈಕಮ್ಯಾಂಡ್‌ ಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ರವಾನಿಸಿದ್ದು , ಇಂದು ಸಂಜೆ 4.05 ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ನೂತನ ಸಚಿವರ ಹೆಸರು ಹೀಗಿದೆ: ಪಿಎಂ ನರೇಂದ್ರ ಸ್ವಾಮಿ ಶಿವರಾಜ್‌ ತಂಗಡಗಿ ರುದ್ರಪ್ಪ ಲಮಾಣಿ ಕೆ ಎಸ್‌ ಬಸವಂತಪ್ಪ ಬಿ. ನಾಗೇಂದ್ರ ಟಿ ರಘುಮೂರ್ತಿ ಜಮೀರ್‌ ಅಹ್ಮದ್‌

ಕೊನೆಗೂ ಅಂತಿಮಗೊಂಡ ಸಂಪುಟ ವಿಸ್ತರಣೆ| ನೂತನ ಸಚಿವರಿಂದ ಇಂದೇ ಪ್ರಮಾಣವಚನ Read More »

ಭಾರೀ ಮಳೆ ಹಿನ್ನೆಲೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಆ.03) ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಅವರು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read More »

ಕರ್ನಾಟಕದಲ್ಲಿ ಮುಂದಿನ ಏಳು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಕರ್ನಾಟಕದಲ್ಲಿ ಮುಂದಿನ ಏಳು ದಿನ ಭಾರೀ ಮಳೆ ಮುನ್ಸೂಚನೆ Read More »

ಮುಂದುವರಿದ ಭಾರೀ ಮಳೆ| ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀದಿಂದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಭಾರೀ ಮಳೆಗೆ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತಿಭಾರೀ ಮಳೆಯೊಂದಿಗೆ

ಮುಂದುವರಿದ ಭಾರೀ ಮಳೆ| ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ ಘೋಷಣೆ Read More »

ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ವ್ಯತ್ಯಯ

ಸಮಗ್ರ ನ್ಯೂಸ್: ಭಾರಿ ಮಳೆಯಿಂದಾಗಿ ಪಶ್ಚಿಮ ಘಟ್ಟ ಪ್ರದೇಶದ ಯಡಕುಮೇರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ ರೈಲು ಹಳಿಯ ಬಳಿ ಶನಿವಾರ ರಾತ್ರಿ ಭೂಕುಸಿತ ಸಂಭವಿಸಿದ್ದು, ರೈಲು ಸೇವೆಗಳು ಅಸ್ತವ್ಯಸ್ತಗೊಂಡವು. ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಶನಿವಾರ ಹೊರಟಿದ್ದ (ರೈಲು ಸಂಖ್ಯೆ 17378) ವಿಜಯಪುರ ಎಕ್ಸ್‌ಪ್ರೆಸ್ ರೈಲನ್ನು ಭೂಕುಸಿತ ಉಂಟಾದ ಸ್ಥಳದ ಸಮೀಪದಲ್ಲಿ ನಿಲ್ಲಿಸಲಾಗಿದೆ. ಮುರುಡೇಶ್ವರದಿಂದ ಬೆಂಗಳೂರಿಗೆ (ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌) ಹೊರಟಿದ್ದ ಎಕ್ಸ್‌ಪ್ರೆಸ್ ರೈಲು ( 16586) ಶಿರಿಬಾಗಿಲು ರೈಲು ನಿಲ್ದಾಣವನ್ನು ರಾತ್ರಿ 8.50ಕ್ಕೆ ತಲುಪಿದೆ. ಕೊಯಿಕ್ಕೋಡ್‌ನಿಂದ ಬೆಂಗಳೂರಿಗೆ

ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ವ್ಯತ್ಯಯ Read More »

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು

ಸಮಗ್ರ ನ್ಯೂಸ್: ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನಯ್ ಕುಲಕರ್ಣಿ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದು, ಈ ಒಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ನೀಡಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ಅರ್ಜಿ ವಿತರಣೆ ನಡೆಸಿದ ಹೈಕೋರ್ಟ್ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಹೈಕೋರ್ಟ್ ಜಾಮೀನು ನೀಡಿದ್ದು ಐದು ಲಕ್ಷ ಬಾಂಡ್ ಹಾಗೂ ಶೂರಿಟಿ

ಯೋಗೇಶ್ ಗೌಡ ಕೊಲೆ ಪ್ರಕರಣ| ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು Read More »

ರಾಜ್ಯದ 66.64 ಲಕ್ಷ ಮತದಾರರು ಪಟ್ಟಿಯಿಂದ ಹೊರಗುಳಿಯುವ ಭೀತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಈಗ ಅಂತಿಮ ಹಾಗೂ ಅತ್ಯಂತ ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಪ್ರಕ್ರಿಯೆಯ ಅಂತ್ಯಕ್ಕೆ ಸುಮಾರು 86.64 ಲಕ್ಷ (ಶೇ.15.63) ಮತದಾರರ ಹೆಸರುಗಳು ಕರಡು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗುವ ಭೀತಿ ಎದುರಾಗಿದೆ. ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ‘ಬಿಎಲ್‌ಒ’ಗಳು ನಡೆಸಿದ ಮನೆ-ಮನೆ ಸಮೀಕ್ಷೆಯಲ್ಲಿ ಇಷ್ಟೊಂದು ಬೃಹತ್‌ ಸಂಖ್ಯೆಯ ‘ಎಎಸ್‌ಡಿಡಿಒ’ (ಅನುಮಾನಾಸ್ಪದ/ಸ್ಥಳಾಂತರಗೊಂಡ/ಮೃತ/ದ್ವಿಪ್ರತಿ) ಮತದಾರರು ಪತ್ತೆಯಾಗಿದ್ದಾರೆ. ಜೂನ್‌ 30ರಿಂದ ಆರಂಭಗೊಂಡಿದ್ದ ಈ ಬೃಹತ್‌ ಪರಿಷ್ಕರಣೆ

ರಾಜ್ಯದ 66.64 ಲಕ್ಷ ಮತದಾರರು ಪಟ್ಟಿಯಿಂದ ಹೊರಗುಳಿಯುವ ಭೀತಿ Read More »

ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮತ್ತೆ ಚೇತರಿಕೆ ಲಕ್ಷಣ ಕಂಡ ಮುಂಗಾರು

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಜುಲೈ 29ರಿಂದ 31ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್

ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮತ್ತೆ ಚೇತರಿಕೆ ಲಕ್ಷಣ ಕಂಡ ಮುಂಗಾರು Read More »

ಸಿಐಡಿ ವರದಿಯನ್ನು ಭಾಷಾಂತರಿಸಿದ್ದು ಬಿಟ್ರೆ ಮತ್ತೇನು ಮಾಡಿದ್ದೀರಿ? ಸೌಜನ್ಯ ಪ್ರಕರಣ ವಿಚಾರದಲ್ಲಿ ಸಿಬಿಐಗೆ ಚಾಟಿ ಬೀಸಿದ ಸುಪ್ರೀಂ

ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ

ಸಿಐಡಿ ವರದಿಯನ್ನು ಭಾಷಾಂತರಿಸಿದ್ದು ಬಿಟ್ರೆ ಮತ್ತೇನು ಮಾಡಿದ್ದೀರಿ? ಸೌಜನ್ಯ ಪ್ರಕರಣ ವಿಚಾರದಲ್ಲಿ ಸಿಬಿಐಗೆ ಚಾಟಿ ಬೀಸಿದ ಸುಪ್ರೀಂ Read More »

ರಾಜ್ಯದಲ್ಲಿ ‌ಮತ್ತೆ ಚುರುಕಾದ ಮುಂಗಾರು| ಏಳು ದಿನಗಳವರೆಗೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪುಷ್ಯ ಮಳೆ ಚುರುಕಾಗಿದ್ದು, ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆ ಜೊತೆಗೆ ಜೋರಾದ ಗಾಳಿ ಮುನ್ಸೂಚನೆ ನೀಡಲಾಗಿದೆ. ಇನ್ನು,

ರಾಜ್ಯದಲ್ಲಿ ‌ಮತ್ತೆ ಚುರುಕಾದ ಮುಂಗಾರು| ಏಳು ದಿನಗಳವರೆಗೆ ಮಳೆ ಸಾಧ್ಯತೆ Read More »