ರಾಜ್ಯ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ದಫನ ಮಾಡಿದ್ದೇನೆಂದಾತ ಕೋರ್ಟ್ ಗೆ ಶರಣು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು ನೀಡಿದ್ದ ಈ ವ್ಯಕ್ತಿ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ತಾನು ಧರ್ಮಸ್ಥಳದಲ್ಲಿ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಶವ ದಫನ ಮಾಡಿದ್ದೇನೆಂದಾತ ಕೋರ್ಟ್ ಗೆ ಶರಣು Read More »

ಸರ್ಕಾರಿ‌ ಶಾಲಾ ಮಕ್ಕಳಿಗೆ ಉಚಿತ ‌ಬಸ್ | ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ ಓದುತ್ತಿದ್ದಾರೆ. ಎಲ್ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ

ಸರ್ಕಾರಿ‌ ಶಾಲಾ ಮಕ್ಕಳಿಗೆ ಉಚಿತ ‌ಬಸ್ | ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ Read More »

ಕೊಟ್ಟಿಗೆಹಾರ: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದ ಗೋಕಳ್ಳರು| ಆರು ಮಂದಿಯ ಬಂಧನ

ಸಮಗ್ರ ನ್ಯೂಸ್: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದು ಕೊಂದ ಆರೋಪಿಗಳನ್ನು ಬಾಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಕೊಟ್ಟಿಗೆಯೊಂದರಲ್ಲಿ ಹಸು ಕಟ್ಟಲಾಗಿತ್ತು. ಅಸ್ಸಾಂ ಮೂಲದ ಕಾಫಿತೋಟದ ಕಾರ್ಮಿಕರು ಕೊಟ್ಟಿಗೆಯಿಂದ ಹಸವನ್ನು ಕದ್ದೊಯ್ದು ಕೊಂದಿದ್ದಾರೆ. ಬಳಿಕ, ಹಸು ಮಾಂಸವನ್ನು ಬೇರ್ಪಡಿಸುವಾಗ ಪೊಲೀಸರು ದಾಳಿ ಮಾಡಿದ್ದು, 6 ಮಂದಿಯನ್ನು ಬಂಧಿಸಿದ್ದಾರೆ. ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್ ಹಾಗೂ ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಸೆರೆ ಬಂಧಿತರು. ಬಾಳೂರು

ಕೊಟ್ಟಿಗೆಹಾರ: ಮಾಂಸಕ್ಕಾಗಿ ಕೊಟ್ಟಿಗೆಯಲ್ಲಿದ್ದ ಹಸುವನ್ನು ಕದ್ದೊಯ್ದ ಗೋಕಳ್ಳರು| ಆರು ಮಂದಿಯ ಬಂಧನ Read More »

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಸಾಕ್ಷ್ಯನಾಶದ ಆತಂಕ| FIR ಆಗಿ 6‌ದಿನ ಕಳೆದರೂ ತನಿಖೆಯಾಗದ ಹಿನ್ನಲೆ ಡಿಜಿಗೆ ಸಾರ್ವಜನಿಕ ಹಿತಾಸಕ್ತಿ ಪತ್ರ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಸಂಭವಿಸಿದ ಹಲವಾರು ಕೊಲೆ ಹಾಗೂ ಅತ್ಯಾಚಾರ ಕೊಲೆ ಪ್ರಕರಣಗಳ ಕುರಿತಂತೆ ಜುಲೈ 3ರಂದು ವ್ಯಕ್ತಿಯೊಬ್ಬ ತಾನು ಹೂತಿದ್ದ ಶವಗಳನ್ನು ಹೊರತೆಗೆದು ತೋರಿಸಲು ಸಿದ್ಧ ಎಂದು ಹೇಳಿ ಎಫ್‌ಐಆರ್‌ ದಾಖಲಿಸಿದ್ದರು. ಧರ್ಮಸ್ಥಳದಲ್ಲಿ ನಡೆದ ಹಲವಾರು ಅತ್ಯಾಚಾರ ಹಾಗೂ ಕೊಲೆಗಳ ಶವಗಳನ್ನು ತಾನೇ ಹೂತಿಟ್ಟಿದ್ದು, ತನಗೆ ಪಾಪಪ್ರಜ್ಞೆ ಕಾಡುತ್ತಿರುವ ಕಾರಣ ಹೂತಿಟ್ಟ ಸ್ಥಳಗಳನ್ನು ತೋರಿಸುವುದಾಗಿ ತಿಳಿಸಿದ್ದರು. ಹೀಗೆ ಎಫ್‌ಐಆರ್‌ ದಾಖಲಾಗಿ 6 ದಿನಗಳು ಕಳೆದರೂ ಸರಿಯಾದ ರೀತಿಯ ತನಿಖೆ ನಡೆಯುತ್ತಿಲ್ಲ ಎಂದು ಆರೋಪಿಸಿ

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಸಾಕ್ಷ್ಯನಾಶದ ಆತಂಕ| FIR ಆಗಿ 6‌ದಿನ ಕಳೆದರೂ ತನಿಖೆಯಾಗದ ಹಿನ್ನಲೆ ಡಿಜಿಗೆ ಸಾರ್ವಜನಿಕ ಹಿತಾಸಕ್ತಿ ಪತ್ರ Read More »

ರಾಜ್ಯಾದ್ಯಂತ ಜು.16ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣವಿದ್ದರೂ, ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾದರೂ, ಕೆಲವು ಸ್ಥಳಗಳಲ್ಲಿ ತುಂತುರು

ರಾಜ್ಯಾದ್ಯಂತ ಜು.16ರವರೆಗೆ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಎನ್ಐಎ ನಿಂದ ರಾಜ್ಯದಲ್ಲಿ ದಿಢೀರ್ ದಾಳಿ| ಮೂವರು ಶಂಕಿತ ಉಗ್ರರು ವಶಕ್ಕೆ

ಸಮಗ್ರ ನ್ಯೂಸ್: ರಾಷ್ಟ್ರೀಯ ತನಿಖಾ ದಳ(ಎನ್​ಐಎ) ರಾಜ್ಯದಲ್ಲಿ ದಿಢೀರ್ ಬೇಟೆಯಾಡಿದೆ. ರಾಜ್ಯದ ಪ್ರಮುಖ ನಗರಗಳಾದ ಬೆಂಗಳೂರು, ಕೋಲಾರದಲ್ಲಿ ಒಟ್ಟು ಐದು ಕಡೆ ದಾಳಿ ಮಾಡಿದ್ದು, ಮೂವರು ಶಂಕಿತ ಉಗ್ರರನ್ನು ಬಂಧಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎಎಸ್ಐ ಆಗಿದ್ದ ಚಾಂದ್ ಪಾಷಾ ಹಾಗೂ ಅನೀಸ್‌ ಫಾತಿಮಾ ಎನ್ನುವರನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರ ಚಟುವಟಿಕೆಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರನ್ನು ಬಂಧಿಸಲಾಗಿದ್ದು, ದಾಳಿ ವೇಳೆ ಎನ್​ಐಎ

ಎನ್ಐಎ ನಿಂದ ರಾಜ್ಯದಲ್ಲಿ ದಿಢೀರ್ ದಾಳಿ| ಮೂವರು ಶಂಕಿತ ಉಗ್ರರು ವಶಕ್ಕೆ Read More »

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆ ಶಾಲಾ ಕಾಲೇಜುಗಳಿಗೆ ಜು .7ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆ- ಬಿರುಗಾಳಿ ಇರುವ ಹಿನ್ನೆಲೆ ಜುಲೈ 7 ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ

ಭಾರೀ ಮಳೆ ಹಿನ್ನಲೆ| ಕೊಡಗು ಜಿಲ್ಲೆ ಶಾಲಾ ಕಾಲೇಜುಗಳಿಗೆ ಜು .7ರಂದು ರಜೆ ಘೋಷಣೆ Read More »

ಪುತ್ತೂರು: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೌರ್ಜನ್ಯ ನಡೆಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಪುರುಷೋತ್ತಮ (43) ಹಾಗೂ ರಾಮಚಂದ್ರ (38) ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಬಾಲಕನ ತಂದೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಅಪ್ರಾಪ್ತರು ಒಂದೇ ಧರ್ಮಕ್ಕೆ ಸೇರಿದವರು. ಘಟನೆಯ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಮಗ ಮತ್ತು ಬಾಲಕಿಗೆ ಇಬ್ಬರು

ಪುತ್ತೂರು: ನೈತಿಕ ಪೊಲೀಸ್ ಗಿರಿ; ಇಬ್ಬರು ಅರೆಸ್ಟ್ Read More »

ಜುಲೈ 14 ಮತ್ತು 15ರಂದು VIP ದರ್ಶನ ರದ್ದು/ ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟನೆ

ಸಮಗ್ರ ನ್ಯೂಸ್‌: ಪವಿತ್ರ ಆಣಿವಾರ ಆಸ್ಥಾನಂ ಪರ್ವದಿನದ ಹಿನ್ನೆಲೆಯಲ್ಲಿ ಜುಲೈ 14 ಮತ್ತು 15ರಂದು ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಪ್ರಮುಖ ಬದಲಾವಣೆಗಳನ್ನು ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟಿಸಿದೆ. ಈ ಎರಡು ದಿನಗಳಲ್ಲಿ ಸಾಮಾನ್ಯ ಭಕ್ತರಿಗೆ ನಿರ್ದಿಷ್ಟವಾದ VIP ಬ್ರೇಕ್ ದರ್ಶನವನ್ನು ರದ್ದುಗೊಳಿಸಲಾಗಿದ್ದು, ಪ್ರೋಟೋಕಾಲ್ ಗಣ್ಯರನ್ನು ಹೊರತುಪಡಿಸಿ ಯಾವುದೇ ಶಿಫಾರಸು ಪತ್ರಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಟಿಟಿಡಿ ಸ್ಪಷ್ಟಪಡಿಸಿದೆ. ಜುಲೈ 15ರಂದು ದೇವಸ್ಥಾನದಲ್ಲಿ ನಡೆಯಲಿರುವ ಕೋಯಿಲ್ ಆಳ್ವಾರ್ ತಿರುಮಂಜನಂ ಎಂಬ ವಿಶೇಷ ಶುದ್ದೀಕರಣ ಕ್ರಮಕ್ಕೆ ಪೂರ್ವಭಾವಿಯಾಗಿ ಈ

ಜುಲೈ 14 ಮತ್ತು 15ರಂದು VIP ದರ್ಶನ ರದ್ದು/ ತಿರುಮಲ ತಿರುಪತಿ ದೇವಸ್ಥಾನಂ (TTD) ಪ್ರಕಟನೆ Read More »

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌/ ಐದು ಆ್ಯಪ್​ಗಳಲ್ಲಿ ಸಿಗಲಿದೆ ಟಿಕೆಟ್‌

ಸಮಗ್ರ ನ್ಯೂಸ್‌: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್​​ಡಿಸಿ (ಓಪನ್‌ ನೆಟ್‌ವರ್ಕ್‌ ಫಾರ್‌ ಡಿಜಿಟಲ್‌ ಕಾಮರ್ಸ್‌) ಮೂಲಕ ಐದು ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್‌ ಸೌಕರ್ಯ ಕಲ್ಪಿಸಲಿದೆ. ಮೆಟ್ರೋ ಪ್ರಯಾಣಿಕರು ಸುಲಭವಾಗಿ ಟಿಕೆಟ್‌ ಖರೀದಿಸಲು ಮೆಟ್ರೋ ಟಿಕೆಟ್ ಅನ್ನು ಮೈಲ್ಸ್ ಆ್ಯಂಡ್ ಕಿಲೋಮೀಟರ್ ಟುಮ್ಯಾಕೋ, ರೆಡ್ ಬಸ್, ಔಟ್ ಪಾಥ್, ಹೈವೇ ಡಿಲೈಟ್ ಸೇರಿ ಒಟ್ಟು ಐದು ಆ್ಯಪ್​​ಗಳ ಮೂಲಕ ಖರೀದಿಸಬಹುದಾಗಿದೆ. ಈ ಆ್ಯಪ್​ಗಳು ಮೆಟ್ರೋ ಟಿಕೆಟ್ ಬುಕ್ ಮಾಡಿದರೆ, ಶೇ 20-30 ರಷ್ಟು

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌/ ಐದು ಆ್ಯಪ್​ಗಳಲ್ಲಿ ಸಿಗಲಿದೆ ಟಿಕೆಟ್‌ Read More »