ರಾಜ್ಯ

4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿರೋಧ

ಸಮಗ್ರ ನ್ಯೂಸ್‌: ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿದೆ. ಕನ್ನಡವನ್ನು ಬದಿಗಿಡಲಾಗುತ್ತಿರುವ ಈ ಉಪಕ್ರಮವನ್ನು ಕೆಡಿಎ ಒಪ್ಪುವುದಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಇತರ ಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಆದರೆ ಈ ಪ್ರಕ್ರಿಯೆಯಲ್ಲಿ ಕನ್ನಡವನ್ನು ಬದಿಗಿಡುವುದು

4,134 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ: ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ವಿರೋಧ Read More »

ಧರ್ಮಸ್ಥಳ‌ ಗ್ರಾಮದಲ್ಲಿ ನಡೆದ ಕೊಲೆಗಳ‌ ಕುರಿತು ದ.ಕ ಎಸ್ಪಿಗೆ ಪತ್ರ ಬರೆದ ಅನಾಮಧೇಯ ವ್ಯಕ್ತಿ| 6 ಪುಟಗಳ ಸುಧೀರ್ಘ ಪತ್ರದಲ್ಲಿದೆ ಬೆಚ್ಚಿಬೀಳಿಸುವ ಸಂಗತಿ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಸದ್ರಿ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದ್ದು

ಧರ್ಮಸ್ಥಳ‌ ಗ್ರಾಮದಲ್ಲಿ ನಡೆದ ಕೊಲೆಗಳ‌ ಕುರಿತು ದ.ಕ ಎಸ್ಪಿಗೆ ಪತ್ರ ಬರೆದ ಅನಾಮಧೇಯ ವ್ಯಕ್ತಿ| 6 ಪುಟಗಳ ಸುಧೀರ್ಘ ಪತ್ರದಲ್ಲಿದೆ ಬೆಚ್ಚಿಬೀಳಿಸುವ ಸಂಗತಿ Read More »

ಭಾರೀ ಮಳೆ ಹಿನ್ನಲೆ| ಜು.4ರ‌ ಇಂದು ದ.ಕ ಜಿಲ್ಲೆಯ ಬಂಟ್ವಾಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ೫ ತಾಲೂಕಿನ ಶಾಲೆ , ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ತಹಶೀಲ್ದಾರರು ಮತ್ತು ಬಂಟ್ವಾಳ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಅರ್ಚನಾ ಭಟ್ ರಜೆ ಘೋಷಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನಲ್ಲಿ ನಾಳೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ

ಭಾರೀ ಮಳೆ ಹಿನ್ನಲೆ| ಜು.4ರ‌ ಇಂದು ದ.ಕ ಜಿಲ್ಲೆಯ ಬಂಟ್ವಾಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ೫ ತಾಲೂಕಿನ ಶಾಲೆ , ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಉಡುಪಿ ಜಿಲ್ಲೆಯ ‌ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ

ಸಮಗ್ರ ನ್ಯೂಸ್: ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಮತ್ತು ಅಹವಾಲು ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಜಿಲ್ಲಾಮಟ್ಟದಲ್ಲಿ ಪರಿಶೀಲಿಸಿ ಸರಕಾರಕ್ಕೆ ವರದಿ ಸಲ್ಲಿಸಲು ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಕಾರ್ಯದರ್ಶಿಗಳ ನೇಮಕಾತಿ ಸರಕಾರ ಮಾಡಲಿದೆ. ಅದರಂತೆ ಉಡುಪಿ ಜಿಲ್ಲೆಗೆ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ನೇಮಿಸಿ ಆದೇಶ ಹೊರಪಡಿಸಿದೆ.ಈ ಹಿಂದೆ ಸತ್ಯವತಿ ಅವರು ಉಸ್ತುವಾರಿ ಕಾರ್ಯದರ್ಶಿಯಾಗಿದ್ದು, ಅವರು ಇತ್ತೀಚೆಗೆ ನಿವೃತ್ತಿ ಹೊಂದಿದ್ದರಿಂದ ಹುದ್ದೆ ತೆರವಾಗಿತ್ತು. ಉಸ್ತುವಾರಿ ಕಾರ್ಯದರ್ಶಿಗಳು ಆಗಿಂದಾಗ್ಗೆ ಜಿಲ್ಲೆಗೆ ಭೇಟಿ ನೀಡಿ ಸಭೆ

ಉಡುಪಿ ಜಿಲ್ಲೆಯ ‌ಉಸ್ತುವಾರಿ ಕಾರ್ಯದರ್ಶಿಯಾಗಿ ರೋಹಿಣಿ ಸಿಂಧೂರಿ Read More »

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಇಂದು ಸುಳ್ಯ, ಕಡಬ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಎರಡು ತಾಲೂಕುಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು(ಜು. ೩) ರಜೆ ಘೋಷಣೆ ಮಾಡಲಾಗಿದೆ. ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜು.3ರ ಬುಧವಾರ ರಜೆ ಘೋಷಿಸಲಾಗಿದೆ.ಉಭಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶಿಸಿದ್ದಾರೆ.ನೀರು ಇರುವ ತಗ್ಗು ಪ್ರದೇಶ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ| ಇಂದು ಸುಳ್ಯ, ಕಡಬ ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಜ್ಯದಲ್ಲಿ ಒಂದೇ ದಿನ 6 ಮಂದಿ ಹೃದಯಾಘಾತಕ್ಕೆ ಬಲಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೃದಯಾಘಾತಕ್ಕೆ ಮಂಗಳವಾರ(ಜು.1) ಮತ್ತೆ ಆರು ಜನ ಬಲಿಯಾಗಿದ್ದಾರೆ. ಈ ಪೈಕಿ ಹಾಸನ ಜಿಲ್ಲೆಯಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಹೊಳೆನರಸೀಪುರದ ಸಂಜಯ್, ಹಾಸನ ತಾಲೂಕು ಕೊಮ್ಮೇನಹಳ್ಳಿ ಹರ್ಷಿತಾ ಹಾಗೂ ಬೇಲೂರು ತಾಲೂಕಿನ ರವಿಕುಮಾರ್ ಮೃತರು. ಶಿವಮೊಗ್ಗ ಹೊರವಲಯದಲ್ಲಿ ಶ್ರೀನಿಧಿ ಎಂಬ ವಿದ್ಯಾರ್ಥಿ, ಚಿಕ್ಕಮಗಳೂರು ಹಾಗೂ ತುಮಕೂರಿನಲ್ಲಿ ಇಬ್ಬರು ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಸೋಮನಹಳ್ಳಿಯ ಸಂಜಯ್ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ಎದೆನೋವು ಎಂದು ಆಸ್ಪತ್ರೆಗೆ ಹೋಗಿದ್ದರು.ಸೋಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ

ರಾಜ್ಯದಲ್ಲಿ ಒಂದೇ ದಿನ 6 ಮಂದಿ ಹೃದಯಾಘಾತಕ್ಕೆ ಬಲಿ Read More »

ಹಾಸನ: ಹೃದಯಾಘಾತ ಪ್ರಕರಣ ಕುರಿತು ವರದಿ ಸಲ್ಲಿಸಲು ಸೂಚನೆ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದ ಅನೇಕ ಪ್ರಕರಣಗಳು ಈಚೆಗೆ ವರದಿಯಾಗಿವೆ. ಆ ಜಿಲ್ಲೆಯಲ್ಲೇ ಏಕೆ ಅಷ್ಟೊಂದು ಹೃದಯಾಘಾತಗಳು ಸಂಭವಿಸುತ್ತಿವೆ ಎಂಬ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದೇನೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ವರದಿ ಸಲ್ಲಿಕೆಯಾದ ಬಳಿಕ ಇದರ ಹಿಂದಿನ ಸತ್ಯಾಸತ್ಯತೆ ಗೊತ್ತಾಗಲಿದೆ. ಈಗಿನ ಜೀವನ ಶೈಲಿ, ಆಹಾರ ಪದ್ದತಿ, ಮೊಬೈಲ್ ಅತಿ ಬಳಕೆ ಮತ್ತು

ಹಾಸನ: ಹೃದಯಾಘಾತ ಪ್ರಕರಣ ಕುರಿತು ವರದಿ ಸಲ್ಲಿಸಲು ಸೂಚನೆ – ದಿನೇಶ್ ಗುಂಡೂರಾವ್ Read More »

ಕಾಶ್ಮೀರದಲ್ಲಿ ಹೊಸ ರಾಜಕೀಯ ಮೈತ್ರಿ

ಸಮಗ್ರ ನ್ಯೂಸ್: ಕಾಶ್ಮೀರದಲ್ಲಿ ಮೂರು ಪ್ರಾದೇಶಿಕ ರಾಜಕೀಯ ಪಕ್ಷಗಳು ‘ಪೀಪಲ್ಸ್ ಅಲೈಯನ್ಸ್ ಫಾರ್ ಚೇಂಜ್’ ಎಂಬ ಹೊಸ ರಾಜಕೀಯ ಮೈತ್ರಿಕೂಟವನ್ನು ರಚಿಸಿದೆ. ಈ ಮೈತ್ರಿಕೂಟದಲ್ಲಿ ಶಾಸಕ ಸಜ್ಜದ್ ಗನಿ ಲೋನ್ ನೇತೃತ್ವದ ಪೀಪಲ್ಸ್ ಕಾನ್ಸರೆನ್ಸ್, ಮಾಜಿ ಶಾಸಕ ಹಕೀಮ್ ಮೊಹಮ್ಮದ್ ಯಾಸಿನ್ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್(ಪಿಡಿಎಫ್) ಮತ್ತು ಈಗ ನಿಷೇಧಿತ ಜಮಾತ್-ಇ-ಇಸ್ಲಾಮಿಯ ಮಾಜಿ ಸದಸ್ಯರನ್ನು ಒಳಗೊಂಡ ಹೊಸದಾಗಿ ರಚಿಸಲಾದ ರಾಜಕೀಯ ಪಕ್ಷ ಜಸ್ಟೀಸ್ & ಡೆವಲಪ್‌ಮೆಂಟ್ ಫ್ರಂಟ್‌(ಜೆಡಿಎಫ್) ಸೇರಿವೆ. ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಫ್‌ ಅಧ್ಯಕ್ಷ ಶಮೀಮ್

ಕಾಶ್ಮೀರದಲ್ಲಿ ಹೊಸ ರಾಜಕೀಯ ಮೈತ್ರಿ Read More »

ಚಿಕ್ಕಮಗಳೂರು : ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್

ಸಮಗ್ರ ನ್ಯೂಸ್: ನಿರಂತರ ಮಳೆ, ಭಾರೀ ಮಂಜು ಕವಿಯುತ್ತಿರೋ ಕಾರಣದಿಂದ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜ ಪ್ರವಾಸಿ ತಾಣಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಲಾಗಿದೆ. ಪ್ರವಾಸಿಗರ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯು ಈ ನಿರ್ಧಾರ ಕೈಗೊಳ್ಳಲಾಗಿದೆ, ಪ್ರವಾಸಿಗರು 7 ಕಿ.ಮೀ. ಚಾರಣ ಹೋಗಿ ಎತ್ತಿನಭುಜದ ಸೌಂದರ್ಯ ಸವಿಯುತ್ತಿದ್ದರು. ಆದರೆ ಕಾಡುಪ್ರಾಣಿಗಳ ಕಾಟ, ಭಾರೀ ಮಳೆ , ಜಾರುವ ಪ್ರದೇಶದವಾದ್ದರಿಂದ ಚಾರಣ ಮಾಡುವ ವೇಳೆ ಅನಾಹುತವಾದ್ರೆ ರಕ್ಷಣೆ ಮಾಡೋದು ಭಾರೀ ಕಷ್ಟಸಾಧ್ಯ ಎಂದು ಅರಣ್ಯ ಇಲಾಖೆ ತಿಳಿಸಿದೆ. 1-07-2025 ರಿಂದ 31-07-2025

ಚಿಕ್ಕಮಗಳೂರು : ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ Read More »

ಬಿಗ್ ಬಾಸ್ ಗೆ ಕಿಚ್ಚನದ್ದೇ ನಿರೂಪಣೆ| ಸುದ್ದಿ ರಿವೀಲ್ ಮಾಡಿದ ಸುದೀಪ್

ಸಮಗ್ರ ನ್ಯೂಸ್: ಬಿಗ್ ಬಾಸ್ 12 ಸೀಸನ್ ನಿರೂಪಣೆಗೆ ಕೊನೆಗೂ ಒಪ್ಪಿಕೊಂಡಿರುವ ನಟ ಕಿಚ್ಚ ಸುದೀಪ್ ಅವರು ಇದೀಗ ತಾವೇ ಈ ಸೀಸನ್ ಹೋಸ್ಟ್ ಮಾಡುವುದರ ಬಗ್ಗೆ ಖಚಿತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಆಯೋಜಕರು ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. ಇನ್ನು ನಿರೂಪಣೆ ಮಾಡಲ್ಲ ಅಂದಿದ್ದು ನಿಜ. ನನಗೆ ಅನಿಸಿದ್ದನ್ನು ಅಂದು ಹೇಳಿದ್ದೆ. ಆದರೆ ಅಭಿಮಾನಿಗಳ ಪ್ರತಿಕ್ರಿಯೆ ನೋಡಿ ತಮ್ಮ ಹೃದಯ ಸ್ಪರ್ಶಿಸಿತು ಎಂದು ಸುದೀಪ್ ಅವರು ಇದೀಗ ಹೇಳಿಕೆ ನೀಡಿದ್ದು, ಕಾರ್ಯಕ್ರಮ ಆಯೋಜಕರೂ ಸುದೀಪ್ ಅವರ ಮನವೊಲಿಸುವಲ್ಲಿ

ಬಿಗ್ ಬಾಸ್ ಗೆ ಕಿಚ್ಚನದ್ದೇ ನಿರೂಪಣೆ| ಸುದ್ದಿ ರಿವೀಲ್ ಮಾಡಿದ ಸುದೀಪ್ Read More »