ರಾಜ್ಯ

ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ

ಸಮಗ್ರ ನ್ಯೂಸ್: ಫೇಸ್ ಬುಕ್ ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲಿ ನಡೆದಿದೆ. ಪ್ರವೀಣ್ ಗೌಡ ಬೇಲೂರು ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ತನಗೆ ಹಲವರು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹಾಗೂ ತನಗೆ ಕಿರುಕುಳ ನೀಡುತ್ತಿರುವವರ ಹೆಸರನ್ನು ರೆಕಾರ್ಡ್ ಮಾಡಿಟ್ಟು ಪ್ರವೀಣ್ ಗೌಡ ಸಾವಿಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್.ವಿ.ಎಂ.ಸ್ಕೂಲ್ ಬಳಿ ಪ್ರವೀಣ್ ನೇಣಿಗೆ ಕೊರಳೊಡ್ಡಿದ್ದಾರೆ. ಸಾವಿಗೂ ಮುನ್ನ […]

ಪೇಸ್ ಬುಕ್ ನಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಕಾರ್ಯಕರ್ತ Read More »

ವಕ್ಫ್ ತಿದ್ದುಪಡಿ ಮಸೂದೆ ಅರ್ಜಿ ವಿಚಾರಣೆ| ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಆದೇಶ

ಸಮಗ್ರ ನ್ಯೂಸ್: ಮುಂದಿನ ವಿಚಾರಣೆಯವರೆಗೆ ‘ಬಳಕೆದಾರರಿಂದ ವಕ್ಫ್’ ಸೇರಿದಂತೆ ಅಸ್ತಿತ್ವದಲ್ಲಿರುವ ವಕ್ಫ್‌ಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025 ರ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಎ.17ರಂದು ವಿಚಾರಣೆ ನಡೆಸಿತು. ಕೇಂದ್ರವು ಏಳು ದಿನಗಳಲ್ಲಿ ಪ್ರತಿಕ್ರಿಯಿಸುತ್ತದೆ ಎಂಬ ಸಾಲಿಸಿಟರ್ ಜನರಲ್ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ದಾಖಲಿಸುತ್ತದೆ. ಸುಪ್ರೀಂ ಕೋರ್ಟ್ ಹೇಳುತ್ತದೆ, ಕೌನ್ಸಿಲ್ ಮತ್ತು ಮಂಡಳಿಗೆ ಯಾವುದೇ ನೇಮಕಾತಿಗಳನ್ನು ಮಾಡಲಾಗುವುದಿಲ್ಲ ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯಕ್ಕೆ

ವಕ್ಫ್ ತಿದ್ದುಪಡಿ ಮಸೂದೆ ಅರ್ಜಿ ವಿಚಾರಣೆ| ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಆದೇಶ Read More »

ಹವಾಮಾನ ಸಮಾಚಾರ|ಮೂರು ದಿನ‌ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ.18, 20, 21ರಂದು ಕರಾವಳಿ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು “ಎಲ್ಲೋ ಅಲರ್ಟ್‌’ ಘೋಷಿಸಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರು ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗುರುವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಮೋಡ ಹೆಚ್ಚಿದ್ದರೂ ಮಳೆಯಾಗಲಿಲ್ಲ. ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ

ಹವಾಮಾನ ಸಮಾಚಾರ|ಮೂರು ದಿನ‌ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ Read More »

ಎ.18:ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ| ಮಂಗಳೂರು – ಬೆಂಗಳೂರು ರಾ.ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಕಾಯಿದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18ರಂದು ಮಂಗಳೂರಿನ ಅಡ್ಯಾರ್‌ ಕಣ್ಣೂರು ಬಳಿ ಇರುವ ಷಾ ಗಾರ್ಡನ್‌ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದ್ದು ಅಡ್ಯಾರು ಕಣ್ಣೂರು ರಾಷ್ಟ್ರೀಯ ಹೆದ್ದಾರಿ 73ರಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಅಂದು ಮಧ್ಯಾಹ್ನ 12ರಿಂದ ರಾತ್ರಿ 9ರವರೆಗೆ ವಾಹನಗಳು (ಸ್ಥಳೀಯ, ತುರ್ತು ಹಾಗೂ ಅತ್ಯಗತ್ಯ ಕಾರಣಗಳಿಗೆ ಬರುವ ವಾಹನಗಳನ್ನು ಹೊರತು

ಎ.18:ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ| ಮಂಗಳೂರು – ಬೆಂಗಳೂರು ರಾ.ಹೆದ್ದಾರಿ 73ರಲ್ಲಿ ಸಂಚಾರ ಬದಲಾವಣೆ Read More »

ಮಹಿಳೆ ಜೊತೆ ಯುವಕನ ಅಸಭ್ಯ ವರ್ತನೆ: ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಪರಾರಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಾಮುಕರ ಅಟ್ಟಹಾಸ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಲೇ ಇದೆ. ಇದೀಗ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಕಾಮುಕನೊಬ್ಬ ಮಹಿಳೆಯೊಬ್ಬರನ್ನು ಕಂಡಾಗ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದಲ್ಲದೆ, ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ. ಇದನ್ನು ಪ್ರಶ್ನಿಸಿದ ಮಹಿಳೆಯ ಪತಿ ಹಾಗೂ ಸ್ಥಳೀಯರ ಮೇಲೆ ಬೇಕಾಬಿಟ್ಟಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.  ಘಟನೆಯಲ್ಲಿ ಒಟ್ಟಾರೆ 7 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ಭಾನುವಾರ ಏಪ್ರಿಲ್ 13

ಮಹಿಳೆ ಜೊತೆ ಯುವಕನ ಅಸಭ್ಯ ವರ್ತನೆ: ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿ ಪರಾರಿ Read More »

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಅರೆಸ್ಟ್ ..!

ಸಮಗ್ರ ನ್ಯೂಸ್: ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿ ನಂತರ ಜಾಮೀನು ಕೂಡ ಸಿಕ್ಕಿತ್ತು. ಇದೀಗ ರಜತ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಇತ್ತ ವಿನಯ್ ಗಾಗಿ ಹುಡುಕಾಟ ನಡೆದಿದೆ. ರಜತ್ ಅರೆಸ್ಟ್ ಆಗಲು ಕಾರಣವೇನು? ರಜತ್ ಹಾಗೂ ವಿನಯ್ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ರೀಲ್ಸ್

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಮತ್ತೆ ಅರೆಸ್ಟ್ ..! Read More »

ಕುಕ್ಕೆ ಸುಬ್ರಹ್ಮಣ್ಯ: ಮತ್ತೆ ನಂ.1 ಸ್ಥಾನ ಕಾಯ್ದುಕೊಂಡ ಸುಬ್ರಹ್ಮಣ್ಯ| ಈ ಆರ್ಥಿಕ ವರ್ಷದಲ್ಲಿ 155 ಕೋಟಿಗೆ ಏರಿದ ದೇಗುಲದ ಆದಾಯ

ಸಮಗ್ರ ನ್ಯೂಸ್: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ತಾನೇ ರಾಜ್ಯಕ್ಕೆ ಶ್ರೀಮಂತ ದೇವಸ್ಥಾನ ಎಂಬುದನ್ನು ಸಾಬೀತುಪಡಿಸಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155.95 ಕೋಟಿ (155,95,19,567)ರೂ. ಗಳಿಗೆ ಏರಿಕೆಯಾಗಿದ್ದು, ಕಳೆದ ವರ್ಷಕ್ಕಿಂತ 9.94 ಕೋಟಿ ರೂ. ಏರಿಕೆಯಾಗಿದೆ. ಕಳೆದ ವರ್ಷ 146.01 ಕೋಟಿ ಆಗಿತ್ತು. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು ಆದಾಯ 155. 95 ಕೋಟಿ ರೂ. ಬಂದಿದ್ದು,

ಕುಕ್ಕೆ ಸುಬ್ರಹ್ಮಣ್ಯ: ಮತ್ತೆ ನಂ.1 ಸ್ಥಾನ ಕಾಯ್ದುಕೊಂಡ ಸುಬ್ರಹ್ಮಣ್ಯ| ಈ ಆರ್ಥಿಕ ವರ್ಷದಲ್ಲಿ 155 ಕೋಟಿಗೆ ಏರಿದ ದೇಗುಲದ ಆದಾಯ Read More »

ಪೋಷಕರಿಗೆ ಗುಡ್ ನ್ಯೂಸ್ ನೀಡಿದ ಶಾಲಾ‌ ಶಿಕ್ಷಣ ಇಲಾಖೆ| 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲ

ಸಮಗ್ರ ನ್ಯೂಸ್: ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ, ಪೋಷಕರಿಗೆ ಗುಡ್‌ ನ್ಯೂಸ್‌ ನೀಡಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1 ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಇದಕ್ಕೂ ಮುನ್ನ ರಾಜ್ಯ ಪಠ್ಯಕ್ರಮದಲ್ಲಿ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕಾಗಿರುವುದು ಕಡ್ಡಾಯವಾಗಿತ್ತು. ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಅದರೊಂದಿಗೆ ಶಾಲಾ ಮಕ್ಕಳ ವಯೋಮಿತಿ

ಪೋಷಕರಿಗೆ ಗುಡ್ ನ್ಯೂಸ್ ನೀಡಿದ ಶಾಲಾ‌ ಶಿಕ್ಷಣ ಇಲಾಖೆ| 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲ Read More »

ಮೇ.1ರಿಂದ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ| ಇನ್ಮುಂದೆ ಟೋಲ್ ಪ್ಲಾಜಾಗಳಲ್ಲಿ ಕಾಯುವ ಅವಶ್ಯಕತೆ ಇಲ್ಲ!

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೆದ್ದಾರಿಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಟೋಲ್ ಸಂಗ್ರಹಿಸುವ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಮೇ 1ರಿಂದ ಜಾರಿಗೆ ತರಲಾಗುತ್ತಿದೆ ಎಂದು ತಿಳಿದುಬಂದಿದೆ. ಅಂದರೆ, ಟೋಲ್ ಪ್ಲಾಜಾಗಳಲ್ಲಿ ವಾಹನ ಚಾಲಕರು ತಮ್ಮ ವಾಹನವನ್ನು ನಿಲ್ಲಿಸದೆ, ಸುಮ್ಮನೆ ಪ್ಲಾಜಾ ಮೂಲಕ ಸಾಗಿದರೂ ಸಾಕು, ವಾಹನ ಚಾಲಕರ ಖಾತೆಯಿಂದ ಹಣ ಕಡಿತವಾಗುತ್ತದೆ. ಹೊಸ ಟೋಲ್ ನೀತಿಯ ಜಾರಿಯಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರಿಗೆ ವಾಹನ ನಿಲ್ಲಿಸುವ ಅವಶ್ಯಕತೆ

ಮೇ.1ರಿಂದ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ| ಇನ್ಮುಂದೆ ಟೋಲ್ ಪ್ಲಾಜಾಗಳಲ್ಲಿ ಕಾಯುವ ಅವಶ್ಯಕತೆ ಇಲ್ಲ! Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಮಂಗಳವಾರ ಮತ್ತೆ ನಾಲ್ವರ ವಿರುದ್ಧ ಚಾರ್ಜ್ ಸಲ್ಲಿಸಿದೆ. ಅವರಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ಎನ್‌ಐಎ ತನ್ನ ಎರಡನೇ ಪೂರಕ ಚಾರ್ಜ್‌ಶೀಟ್‌ನಲ್ಲಿ ಅಬ್ದುಲ್ ನಾಸಿರ್, ನೌಶಾದ್, ಅಬ್ದುಲ್ ರಹಮಾನ್ ಮತ್ತು ಅತೀಕ್ ಅಹ್ಮದ್ ವಿರುದ್ಧ ಆರೋಪ ಹೊರಿಸಿದೆ. ಇದರೊಂದಿಗೆ, ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಲಾದ ಒಟ್ಟು ಆರೋಪಿಗಳ ಸಂಖ್ಯೆ 27ಕ್ಕೆ ಏರಿದ್ದು, ಇದರಲ್ಲಿ ಆರು ಮಂದಿ ತಲೆಮರೆಸಿಕೊಂಡಿದ್ದಾರೆ. ಆರೋಪಪಟ್ಟಿ ಸಲ್ಲಿಸಲಾದ ನಾಲ್ವರಲ್ಲಿ ಮೂವರು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನಾಲ್ವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA Read More »