ಕೇರಳದಲ್ಲಿ ಇಬ್ಬರು ನಕ್ಸಲರನ್ನು ವಶಕ್ಕೆ ಪಡೆದ ಕರ್ನಾಟಕ ಪೊಲೀಸ್| ನಕ್ಸಲ್ ಮುಕ್ತ ರಾಜ್ಯಕ್ಕೆ ನಕ್ಸಲರನ್ನು ಕರೆತಂದ ಕಾರಣವೇನು?
ಸಮಗ್ರ ನ್ಯೂಸ್: ಮೂರು ನಕ್ಸಲ್/ಚಟುವಟಿಕೆ ಪ್ರಕರಣ ದಾಖಲಾದ ಸಂಬಂಧ ಇಬ್ಬರು ನಕ್ಸಲ್ ನಾಯಕರನ್ನು ಬೆಳ್ತಂಗಡಿ ಪೊಲೀಸರು ಕೇರಳ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಇಬ್ಬರು ನಕ್ಸಲರನ್ನು ಎರಡು ದಿನ ಕಸ್ಟಡಿಗೆ ಪಡೆದು ಮೂರು ಪ್ರಕರಣಗಳ ಬಗ್ಗೆ ತನಿಖೆ ನಡೆಸಲಿದ್ದಾರೆ. 8-11-2021 ರಂದು ಕೇರಳ ರಾಜ್ಯದ ಪೊಲೀಸರು ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ ಮತ್ತು ಚಿಕ್ಕಮಗಳೂರು ಜಿಲ್ಲೆಯ […]










