ರಾಜ್ಯ

ದುರ್ಬಲಗೊಂಡ ಮುಂಗಾರು| ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಯ ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯೂ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದುರ್ಬಲಗೊಂಡ ಮುಂಗಾರು| ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ Read More »

ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ

ಸಮಗ್ರ ನ್ಯೂಸ್: ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ (74) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸೈಯದ್ ಯಾಸೀನ್ ಅವರು ಪತ್ನಿ, ನಾಲ್ಕು ಜನ ಗಂಡು ಮಕ್ಕಳು ಹಾಗೂ ಅಪಾರ ಬಂಧು – ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫ‌ರ್ ಷರೀಫ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು

ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ Read More »

ಸ್ವರ ನಿಲ್ಲಿಸಿದ ಗಾನಕೋಗಿಲೆ| ಮೇರು ಗಾಯಕಿ ಎಸ್.ಜಾನಕಿ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಖ್ಯಾತಿಯ ಎಸ್. ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಎಸ್ .ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅವರು 48,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ, 1957ರಿಂದಲೂ ಚಿತ್ರಗಳಿಗೆ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಹಲವಾರು ಭಾರತೀಯ ಭಾಷೆಗಳಲ್ಲಿ ಅವರು ಹಾಡಿದ್ದಾರೆ. ಹಲವು ವರ್ಷಗಳಿಂದ ಅವರು ಮೈಸೂರಿನಲ್ಲಿಯೇ ನೆಲೆಸಿದ್ದರು. 20ಕ್ಕೂ ಹೆಚ್ಚು

ಸ್ವರ ನಿಲ್ಲಿಸಿದ ಗಾನಕೋಗಿಲೆ| ಮೇರು ಗಾಯಕಿ ಎಸ್.ಜಾನಕಿ ಇನ್ನಿಲ್ಲ Read More »

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026 ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ದಸರಾ ಮಹೋತ್ಸವ ಇದಾಗಿದ್ದು, ನಾಡ ಹಬ್ಬ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೈಸೂರು ದಸರಾ ಕುರಿತ ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂಸವಾರಿಗೆ ದಿನಾಂಕ ನಿಗದಿಪಡಿಸಲಾಯಿತು. ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ

ನಾಡಹಬ್ಬ ದಸರಾಗೆ ಮುಹೂರ್ತ ಫಿಕ್ಸ್| ಅ.11ರಂದು ಉದ್ಘಾಟನೆ Read More »

‘ಇಂದಿರಾ ಕಿಟ್’ ಸಿಗೋದು ಡೌಟ್| 10ಕೆಜಿ ಅಕ್ಕಿ ಮುಂದುವರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ಬದಲಿಗೆ ತೊಗರಿಬೇಳೆ, ಅಡುಗೆ ಎಣ್ಣೆ ಒಳಗೊಂಡ ‘ಇಂದಿರಾ ಕಿಟ್’ ನೀಡುವ ಪ್ರಸ್ತಾವನೆಯನ್ನು ಕೈಬಿಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಜಟಿಲ ಷರತ್ತುಗಳಿಂದಾಗಿ ಕಳೆದ 8 ತಿಂಗಳಿಂದ ಟೆಂಡರ್ ಪ್ರಕ್ರಿಯೆ ನನೆಗುದಿಗೆ ಬಿದ್ದಿರುವುದು ಹಾಗೂ ಮಾಸಿಕ 550 ಕೋಟಿ ರೂ.ಗಳ ಹೆಚ್ಚುವರಿ ಬಜೆಟ್ ಹೊಂದಿಸುವುದು ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ

‘ಇಂದಿರಾ ಕಿಟ್’ ಸಿಗೋದು ಡೌಟ್| 10ಕೆಜಿ ಅಕ್ಕಿ ಮುಂದುವರಿಕೆ ಸಾಧ್ಯತೆ Read More »

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ

ಸಮಗ್ರ ನ್ಯೂಸ್: ಕರ್ನಾಟಕದ ಪಶ್ಚಿಮ ಘಟ್ಟಗಳ ಭಾಗ, ಕರಾವಳಿ, ಹಲವು ಒಳನಾಡು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಇದೀಗ ತಗ್ಗಿದೆ. ರಾಜ್ಯಾದ್ಯಂತ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಸೇರಿ ಕೇವಲ 7 ಜಿಲ್ಲೆಗಳಲ್ಲಿ ಮಾತ್ರವೇ ಭಾರೀ ಮಳೆ ನಿರೀಕ್ಷೆ ಇದೆ. ಉಳಿದಂತೆ ಒಣಹವೆ ಮುಂದುವರಿಯುವ ಸಾಧ್ಯತೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ರಾಜ್ಯದ ಪ್ರಾದೇಶಿಕ ಕೇಂದ್ರ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಸಾಧಾರಣದಿಂದ ಭಾರೀ, ಅತೀ ಭಾರೀ ಮಳೆ ಕಂಡಿದ್ದ ರಾಜ್ಯದ ವಿವಿಧ

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ Read More »

ರಾಜ್ಯದ ಸರ್ಕಾರಿ ಬಸ್ ಗಳಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಸಂಪೂರ್ಣ ನಿಷೇದ| ತಪ್ಪಿದಲ್ಲಿ ಬೀಳಲಿದೆ ಭಾರೀ ದಂಡ

ಸಮಗ್ರ ನ್ಯೂಸ್: ರಾಜ್ಯದ ಪ್ರಯಾಣಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ಸಾರಿಗೆ ಇಲಾಖೆಯ ಎಲ್ಲಾ ನಿಗಮಗಳ ಸಾರ್ವಜನಿಕ ಬಸ್ಸುಗಳಲ್ಲಿ ಗುಟ್ಕಾ, ತಂಬಾಕು ಸೇವನೆ ಹಾಗೂ ಧೂಮಪಾನ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಸಾರಿಗೆ ಸಚಿವರು ಆದೇಶಿಸಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಶ್ರೀ ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯದ ಸಾರ್ವಜನಿಕ ಬಸ್ಸುಗಳಲ್ಲಿ ತಂಬಾಕು, ಗುಟ್ಕಾ ತಿನ್ನುವುದು ಹಾಗೂ ಧೂಮಪಾನ ಮಾಡುವುದರಿಂದ ಇತರೆ ಪ್ರಯಾಣಿಕರಿಗೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿ,

ರಾಜ್ಯದ ಸರ್ಕಾರಿ ಬಸ್ ಗಳಲ್ಲಿ ಧೂಮಪಾನ, ತಂಬಾಕು, ಗುಟ್ಕಾ ಸೇವನೆ ಸಂಪೂರ್ಣ ನಿಷೇದ| ತಪ್ಪಿದಲ್ಲಿ ಬೀಳಲಿದೆ ಭಾರೀ ದಂಡ Read More »

ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ‌ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ನಿರೀಕ್ಷಿತ ಮಳೆ ಆಗದೇ ಕೇವಲ ತಂಪು ವಾತಾವರಣ ನಿರ್ಮಾಣವಾಗಿದೆ. ಇನ್ನೂ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಅಬ್ಬರಿಸಿದ್ದ ಮುಂಗಾರು ಮಳೆ ಏಕಾಎಕಿ ದುರ್ಬಲಗೊಂಡಿದೆ. ಭಾರೀ ಮಳೆ ಬಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೆ ಬಿಸಿಲಿನ ವಾತಾವರಣ ಸೃಷ್ಟಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಇಂದಿನ ಮುನ್ಸೂಚನೆ ಪ್ರಕಾರ, ಶುಕ್ರವಾರವರೆಗೆ ಮಾತ್ರವೇ ರಾಜ್ಯದಲ್ಲಿ ಮಳೆ ಆಗಲಿದೆ. ‘ರೆಡ್

ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ‌ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ Read More »

ರಾ.ಹೆದ್ದಾರಿ 275ರ ಮಾಣಿ – ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿ ಅನುದಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗೆ ಕೇಂದ್ರ ಸರ್ಕಾರ 49.22 ಕೋಟಿ ರು.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳವಾರ ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ದೆಹಲಿಯಲ್ಲಿ

ರಾ.ಹೆದ್ದಾರಿ 275ರ ಮಾಣಿ – ಸಂಪಾಜೆ ರಸ್ತೆ ದುರಸ್ತಿಗೆ 49.22 ಕೋಟಿ ಅನುದಾನ Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜುಲೈ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಅತಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯೆತ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 50-60 ಕಿ.ಮೀ. ವೇಗದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಬೆಳಗಾವಿ ಘಟ್ಟ ಪ್ರದೇಶ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ Read More »