ರಾಜ್ಯ

ಅಂತ್ಯೋದಯ ಪಡಿತರದಾರರಿಗೆ ಶಾಕ್ ನೀಡಿದ ಕೇಂದ್ರ| ಪ್ರತಿ ಸದಸ್ಯರಿಗೆ 7 ಕೆ.ಜಿ ಅಕ್ಕಿ ನೀಡಲು ಚಿಂತನೆ

ಸಮಗ್ರ ನ್ಯೂಸ್: ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ದಾರರಿಗೆ ನೀಡಲಾಗುತ್ತಿರುವ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ. ಇನ್ನು ಮುಂದೆ ಕುಟುಂಬದ ಆಧಾರದ ಬದಲಿಗೆ, ಪ್ರತಿ ವ್ಯಕ್ತಿಗೆ 7 ಕೆಜಿ ಅಕ್ಕಿ ಅಥವಾ ಗೋಧಿ ನೀಡುವ ಹೊಸ ನಿಯಮ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದುವರೆಗೆ ಅಂತ್ಯೋದಯ ಅನ್ನ ಯೋಜನೆಯಡಿ ಕುಟುಂಬದಲ್ಲಿ ಎಷ್ಟು ಸದಸ್ಯರಿದ್ದರೂ ತಿಂಗಳಿಗೆ 35 ಕೆಜಿ ಉಚಿತ ರೇಷನ್ ನೀಡಲಾಗುತ್ತಿತ್ತು. ಆದರೆ ಹೊಸ

ಅಂತ್ಯೋದಯ ಪಡಿತರದಾರರಿಗೆ ಶಾಕ್ ನೀಡಿದ ಕೇಂದ್ರ| ಪ್ರತಿ ಸದಸ್ಯರಿಗೆ 7 ಕೆ.ಜಿ ಅಕ್ಕಿ ನೀಡಲು ಚಿಂತನೆ Read More »

ಮಂಡ್ಯದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ಪ್ರವಾಸಿಗರು ಸಾವು

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ನಡೆದ ಘೋರ ದುರಂತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು ಈಜಲು ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನದಿಯ ಆಳ ಮತ್ತು ಸುಳಿಯ ಅರಿವಿಲ್ಲದೆ ಈಜಲು ಮುಂದಾದ ಯುವಕರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯು ಮೃತ ಯುವಕರ ಕುಟುಂಬಸ್ಥರು ಮತ್ತು ಸ್ಥಳೀಯರಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ. ಮಾಹಿತಿಯಂತೆ, ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಈ ನಾಲ್ವರು ಯುವಕರು

ಮಂಡ್ಯದ ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ಪ್ರವಾಸಿಗರು ಸಾವು Read More »

ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ|ಎಲ್ಐಸಿ ಹಣಕ್ಕಾಗಿ ಸಹೋದರನ ಕೊಲೆ!!

ಸಮಗ್ರ ನ್ಯೂಸ್: ಹಣದ ದುರಾಸೆ ಮನುಷ್ಯನನ್ನು ಎಷ್ಟರಮಟ್ಟಿಗೆ ಕುರುಡಾಗಿಸುತ್ತದೆ ಎಂಬುದಕ್ಕೆ ತುಮಕೂರಿನಲ್ಲಿ ನಡೆದ ಈ ಭೀಕರ ಹತ್ಯೆ ಪ್ರಕರಣವೇ ಸಾಕ್ಷಿ. ಜೀವ ವಿಮೆ (LIC) ಹಣದ ಆಸೆಗೆ ಬಿದ್ದ ಅಣ್ಣನೊಬ್ಬ, ಸುಪಾರಿ ಹಂತಕರ ನೆರವಿನೊಂದಿಗೆ ಸ್ವಂತ ತಮ್ಮನನ್ನೇ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಅಪಘಾತ ಎಂದು ಬಿಂಬಿಸಲು ಯತ್ನಿಸಿದ ವಿಲಕ್ಷಣ ಘಟನೆಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಭೇದಿಸಿದ್ದಾರೆ. ಬೈಕ್ ಅಪಘಾತ ಎಂದು ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಅಣ್ಣ ಹನುಮಂತರಾಜು ಸೇರಿದಂತೆ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ

ರಾಜ್ಯದಲ್ಲೊಂದು ಬೆಚ್ಚಿಬೀಳಿಸುವ ಘಟನೆ|ಎಲ್ಐಸಿ ಹಣಕ್ಕಾಗಿ ಸಹೋದರನ ಕೊಲೆ!! Read More »

ದೇಶದ 111 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ| ಕೇಂದ್ರ ಕೃಷಿ ಸಚಿವ ಚೌಹಾಣ್ ಆತಂಕ

ಸಮಗ್ರ ನ್ಯೂಸ್: ದೇಶದಲ್ಲಿ ಮುಂಗಾರು ಮಳೆ ಕೊರತೆ ಮತ್ತು ಕೆಲವು ರಾಜ್ಯಗಳಲ್ಲಿ ಅತಿವೃಷ್ಟಿಯ ಅನಿಶ್ಚಿತತೆ ಒಟ್ಟಿಗೇ ಎದುರಾಗಿದೆ. ಎಲ್ ನಿನೋ ಪ್ರಭಾವದಿಂದಾಗಿ ದೇಶದಲ್ಲಿ ಸದ್ಯ ಶೇಕಡಾ 43 ರಷ್ಟು ಮುಂಗಾರು ಮಳೆ ಕೊರತೆ ಉಂಟಾಗಿದ್ದು, ಇದರಿಂದಾಗಿ ಬಿತ್ತನೆ ಕಾರ್ಯಕ್ಕೆ ಭಾರಿ ಹಿನ್ನಡೆಯಾಗಿದೆ.‌ ದೇಶದ ಒಟ್ಟು 111 ಜಿಲ್ಲೆಗಳು ತೀವ್ರ ಬೆಳೆ ಹಾನಿಯ ಅಪಾಯವನ್ನು ಎದುರಿಸುತ್ತಿವೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಂಗಳವಾರ ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಸಕ್ತ ವರ್ಷ ದೇಶದಲ್ಲಿ ಎಲ್-ನಿನೋ ಎಫೆಕ್ಟ್ ಭೀತಿ

ದೇಶದ 111 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ| ಕೇಂದ್ರ ಕೃಷಿ ಸಚಿವ ಚೌಹಾಣ್ ಆತಂಕ Read More »

ಪುತ್ತೂರು: ನಾಪತ್ತೆಯಾಗಿದ್ದ ‘ಚಿನ್ನು’ ಪತ್ತೆ ಮಾಡಿದಾತನಿಗೆ ₹50 ಸಾವಿರ ಚೆಕ್ ನೀಡಿದ ಮಾಲೀಕ

ಸಮಗ್ರ ನ್ಯೂಸ್: ಸಾಕು ನಾಯಿಗಳೆಂದರೆ ಕೇವಲ ಪ್ರಾಣಿಗಳಲ್ಲ, ಅವು ಮನೆಯ ಒಂದು ಅವಿಭಾಜ್ಯ ಅಂಗ ಎಂಬುದನ್ನು ಪುತ್ತೂರಿನ ಶ್ವಾನಪ್ರೇಮಿಯೊಬ್ಬರು ಸಾಬೀತುಪಡಿಸಿದ್ದಾರೆ. ಇತ್ತೀಚೆಗೆ ನಾಪತ್ತೆಯಾಗಿದ್ದ ತಮ್ಮ ಪ್ರೀತಿಯ ದೇಸಿ ತಳಿಯ ನಾಯಿಯನ್ನು ಹುಡುಕಿಕೊಟ್ಟ ಸ್ಥಳೀಯ ವ್ಯಕ್ತಿಗೆ, ಮಾಲೀಕರು ಕೊಟ್ಟ ಮಾತಿನಂತೆ ₹50 ಸಾವಿರ ನಗದು ಬಹುಮಾನದ ಚೆಕ್ ವಿತರಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಬಕ ಸಮೀಪದ ಪೋಳ್ಯ ನಿವಾಸಿ, ಪ್ರಸಿದ್ಧ ಶ್ವಾನಪ್ರೇಮಿ ಗಣೇಶ್ ಕೇರ ಅವರ ಮನೆಯ ‘ಚಿನ್ನು’ ಹೆಸರಿನ ದೇಸಿ ತಳಿಯ

ಪುತ್ತೂರು: ನಾಪತ್ತೆಯಾಗಿದ್ದ ‘ಚಿನ್ನು’ ಪತ್ತೆ ಮಾಡಿದಾತನಿಗೆ ₹50 ಸಾವಿರ ಚೆಕ್ ನೀಡಿದ ಮಾಲೀಕ Read More »

ಹವಾಮಾನ ಆಧಾರಿತ ಬೆಳೆವಿಮೆ| ವಿಮಾ ಪಾವತಿಗೆ ಜು.31 ಕೊನೆ ದಿನ

ಸಮಗ್ರ ನ್ಯೂಸ್: 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಅಡಿಕೆ, ಮಾವು, ಕಾಳು ಮೆಳಸು, ಶುಂಠಿ ಬೆಳೆಗಳಿಗೆ ವಿಮೆ ದರವನ್ನು ನಿಗದಿಪಡಿಸಲಾಗಿದ್ದು, ರೈತರು ನಿಗದಿತ ಅವಧಿಯೊಳಗೆ ಪಾವತಿಸಬಹುದು ಎಂದು ತೋಟಗಾರಿಕೆ ಇಲಾಖೆ ತಿಳಿಸಿದೆ. ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ ಶುಂಠಿ ಬೆಳೆಗಳಿಗೆ ರೈತರು ವಿಮೆ ಮಾಡಿಸಬಹುದಾಗಿದೆ. ಆಸಕ್ತ ರೈತರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಗ್ರಾಮ ಒನ್ ಅಥವಾ ಬ್ಯಾಂಕುಗಳಲ್ಲಿ ವಿಮೆ

ಹವಾಮಾನ ಆಧಾರಿತ ಬೆಳೆವಿಮೆ| ವಿಮಾ ಪಾವತಿಗೆ ಜು.31 ಕೊನೆ ದಿನ Read More »

ಚುರುಕುಗೊಂಡ ಮುಂಗಾರು| ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು  (Weather) ಹಾಗೂ ಬಲವಾದ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ

ಚುರುಕುಗೊಂಡ ಮುಂಗಾರು| ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »

ಜನರ ಸಮಸ್ಯೆ ಆಲಿಸಲು ಹೊಸ ಇಲಾಖೆ ಘೋಷಿಸಿದ ಸಿಎಂ| ‘ಪ್ರಜಾಸೇವೆ’ಯಲ್ಲಿ ಸಿಗಲಿದೆ ಪರಿಹಾರ

ಸಮಗ್ರ ನ್ಯೂಸ್: ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ. ದು. ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು

ಜನರ ಸಮಸ್ಯೆ ಆಲಿಸಲು ಹೊಸ ಇಲಾಖೆ ಘೋಷಿಸಿದ ಸಿಎಂ| ‘ಪ್ರಜಾಸೇವೆ’ಯಲ್ಲಿ ಸಿಗಲಿದೆ ಪರಿಹಾರ Read More »

ಕಡಬ: ಆಲಂಕಾರಿನಲ್ಲಿ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ| ಹೆಣಗಳ ನಡುವೆ ಅತ್ತೂ ಅತ್ತು ನಿದ್ದೆಗೆ ಜಾರಿದ ಕಂದಮ್ಮ!!

ಸಮಗ್ರ ನ್ಯೂಸ್: ಪತ್ನಿಯನ್ನು ಕೊಂದು ಪತಿ‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶನಿವಾರ ಅಪರಾಹ್ನ ಕಡಬ ಠಾಣಾ ವ್ಯಾಪ್ತಿಯ ಆಲಂಕಾರು ಎಂಬಲ್ಲಿ ನಡೆದಿದೆ. ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಮೂಲತಃ ಕಾರ್ಕಳ ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತಾ ದಂಪತಿಯು ಆಲಂಕಾರು ಕಜೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಶನಿವಾರದಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತ್ನಿಯನ್ನು ಕೊಂದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ದಂಪತಿಗೆ ಎರಡು

ಕಡಬ: ಆಲಂಕಾರಿನಲ್ಲಿ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ| ಹೆಣಗಳ ನಡುವೆ ಅತ್ತೂ ಅತ್ತು ನಿದ್ದೆಗೆ ಜಾರಿದ ಕಂದಮ್ಮ!! Read More »

ಬಂಟ್ವಾಳ: ಕಾರು – ಸ್ಕೂಟರ್ ನಡುವೆ ಅಪಘಾತ; ಸವಾರ ಸಾವು

ಸಮಗ್ರ ನ್ಯೂಸ್: ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಜಿಪನಡು ಸಮೀಪದ ದೇರಾಜೆ ಎಂಬಲ್ಲಿ ಗುರುವಾರ ಸಂಜೆ ಸಂಭವಿಸಿದೆ. ಸಜಿಪನಡು ಸಮೀಪದ ಮಡ್ಯಲಚ್ಚಿಲ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಹ್ಮದ್ ಅಸೀರ್ (22) ಮೃತಪಟ್ಟ ದುರ್ದೈವಿ ಸವಾರ. ಗುರುವಾರ ಸಂಜೆ ವೇಳೆ ಅಹ್ಮದ್ ಅಸೀರ್ ಅವರು ತಮ್ಮ ಆಕ್ಟಿವಾ ಸ್ಕೂಟರ್‌ನಲ್ಲಿ ಸಜಿಪ ಕಡೆಯಿಂದ ಬೇಂಕೆ ಕಡೆಗೆ ಸಂಚರಿಸುತ್ತಿದ್ದರು. ಈ ವೇಳೆ ದೇರಾಜೆ ತಲುಪುತ್ತಿದ್ದಂತೆ ಎದುರಿನಿಂದ

ಬಂಟ್ವಾಳ: ಕಾರು – ಸ್ಕೂಟರ್ ನಡುವೆ ಅಪಘಾತ; ಸವಾರ ಸಾವು Read More »