ರಾಜ್ಯ

ಕಾರ್ ರೇಸ್ ಚಾಂಪಿಯನ್ ಬಲ್ಲಾಳ್ ಸಾವು

ಸಮಗ್ರ ನ್ಯೂಸ್ :ಬೈಕ್‌ಗೆ ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಢಿಕ್ಕಿಯಾಗಿ ಬೈಕ್ ಚಲಾಯಿಸುತ್ತಿದ್ದ ಕಾರು ರೇಸ್ ಚಾಂಪಿಯನ್ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಡಿ. 09 ರಂದು ಸಂಜೆ 4.30ರ ಸುಮಾರಿಗೆ ಸಂಭವಿಸಿದೆ. ರಂಜಿತ್ ಬಲ್ಲಾಳ್ ಮಂಗಳೂರು ಮೂಲದ ಕೆ.ಬಿ. ಯುವರಾಜ ಬಲ್ಲಾಳ್ ಅವರ ಪುತ್ರ. ಇವರು ಕುಟುಂಬಸ್ಥರೊಂದಿಗೆ 3 ದಿನಗಳ ಹಿಂದೆ ಗೋವಾಗೆ ಪ್ರವಾಸಕ್ಕೆ ತೆರಳಿದ್ದರು. ರಂಜಿತ್ […]

ಕಾರ್ ರೇಸ್ ಚಾಂಪಿಯನ್ ಬಲ್ಲಾಳ್ ಸಾವು Read More »

ಕರ್ನಾಟಕ ಸರ್ಕಾರದ ವಿರುದ್ಧ ಸಿಡಿದೆದ್ದ ಏಕನಾಥ್

ಸಮಗ್ರ ನ್ಯೂಸ್ : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ಕರ್ನಾಟಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಮರಾಠಿ ಭಾಷಿಗರು ಸಮಾವೇಶ ಏರ್ಪಡಿಸಿದ್ದರು. ಈ ದೇಶದಲ್ಲಿ ಎಲ್ಲಿ ಬೇಕಾದರೂ ವಾಸ ಮಾಡಬಹುದು, ಎಲ್ಲಿ ಬೇಕಾದರೂ ಹೋಗಬಹುದು, ಸಮ್ಮೇಳನ ಆಯೋಜಿಸಬಹುದು.ಆದರೆ ಕರ್ನಾಟಕ ಸರ್ಕಾರ ದಬ್ಬಾಳಿಕೆಯ ಚಕ್ರವನ್ನು ಬೀಸಿ ಸಮ್ಮೇಳನವನ್ನು ಆಯೋಜಿಸಿದ್ದ ಮೇಯ‌ರ್, ಶಾಸಕರು ಸೇರಿದಂತೆ ಮರಾಠಿ ಏಕೀಕರಣ ಸಮಿತಿಯ 100ಕ್ಕೂ ಹೆಚ್ಚು ಮರಾಠಿ ಭಾಷಿಕ ಸಹೋದರ-ಸಹೋದರಿಯರನ್ನು ಬಂಧಿಸಿದೆ ಎಂದು ವಾಗ್ದಾಳಿ ನಡೆಸಿದರು. ದೇಶಕ್ಕಾಗಿ ಹೋರಾಡಿದ ವೀರ

ಕರ್ನಾಟಕ ಸರ್ಕಾರದ ವಿರುದ್ಧ ಸಿಡಿದೆದ್ದ ಏಕನಾಥ್ Read More »

ಮಾಜಿ ಸಿಎಂ ಎಸ್.ಎಂ ಕೃಷ್ಣ ವಿಧಿವಶ| ರಾಜ್ಯ ಸರ್ಕಾರದಿಂದ 3 ದಿನ ಶೋಕಾಚರಣೆ| ಡಿ.11ರಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಸಮಗ್ರ ನ್ಯೂಸ್: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಡಿಸೆಂಬರ್ 11 ರಂದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಈ ಮೂಲಕ

ಮಾಜಿ ಸಿಎಂ ಎಸ್.ಎಂ ಕೃಷ್ಣ ವಿಧಿವಶ| ರಾಜ್ಯ ಸರ್ಕಾರದಿಂದ 3 ದಿನ ಶೋಕಾಚರಣೆ| ಡಿ.11ರಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು (ಡಿಸೆಂಬರ್‌ 10 ) ಬೆಳಗಿನ ಜಾವ 2.30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ Read More »

ಮಹಾಮೇಳಾವ್ ಕಿತಾಪತಿ: ಎಂಇಎಸ್ ಮುಖಂಡರು ವಶಕ್ಕೆ

ಸಮಗ್ರ ನ್ಯೂಸ್ : ಚಳಿಗಾಲ ಅಧಿವೇಶನ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ಹಮ್ಮಿಕೊಂಡಿದ್ದ ಮಹಾಮೇಳಾವ್ ಪ್ರತಿಭಟನೆ ನಡೆಸಲು ಬಂದಿದ್ದ ಎಂಇಎಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಡಿ.09ರಂದು ಪೊಲೀಸರು ವಶಕ್ಕೆ ಪಡೆದರು. ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಬಂದಿದ್ದ ಎಂಇಎಸ್ ಕಾರ್ಯಕರ್ತರು ಜೈ ಮಹಾರಾಷ್ಟ್ರ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಘೋಷಣೆ ಕೂಗಿದರು.ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದುಕೊಂಡರು. ಬೆಳಗಾವಿ ನಗರ ಸೇರಿದಂತೆ ವಿವಿಧ ಹಳ್ಳಿಗಳಿಂದ ಐದಾರು ಜನರ ಗುಂಪು ಕಟ್ಟಿಕೊಂಡು ಬರುತ್ತಿದ್ದ ಕಾರ್ಯಕರ್ತರನ್ನು

ಮಹಾಮೇಳಾವ್ ಕಿತಾಪತಿ: ಎಂಇಎಸ್ ಮುಖಂಡರು ವಶಕ್ಕೆ Read More »

ಜಮ್ಮು-ಕಾಶ್ಮೀರ: ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ IED ಪತ್ತೆ, ತಪ್ಪಿದ ದೊಡ್ಡ ದುರಂತ!

ಸಮಗ್ರ ನ್ಯೂಸ್ : ಜಮ್ಮು-ಕಾಶ್ಮೀರದ ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸಕಾಲಿಕ ಪತ್ತೆಯೊಂದಿಗೆ ದೊಡ್ಡ ದುರಂತವನ್ನು ತಪ್ಪಿಸಲಾಗಿದೆ.ಬಾರಾಮುಲ್ಲಾ ಜಿಲ್ಲೆಯ ಪಟ್ಟನ್ ಪ್ರದೇಶದ ಪಲ್ಲಲ್ಲಾನ್ ಎಂಬಲ್ಲಿ ಹೆದ್ದಾರಿ ರಸ್ತೆಯ ಪಕ್ಕದಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದಾಗ ಅನುಮಾನಾಸ್ಪದ ವಸ್ತುವೊಂದನ್ನು ಗುರುತಿಸಿದ್ದಾರೆ. ಪರಿಶೀಲನೆ ನಡೆಸಿದಾಗ ಶಂಕಾಸ್ಪದ ವಸ್ತು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಎಂಬುದ ದೃಢವಾಗಿದೆ. ಇದೀಗ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.ಬಾಂಬ್ ನಿಷ್ಕ್ರಿಯ ದಳವು ನಿಯಂತ್ರಿತ

ಜಮ್ಮು-ಕಾಶ್ಮೀರ: ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ IED ಪತ್ತೆ, ತಪ್ಪಿದ ದೊಡ್ಡ ದುರಂತ! Read More »

ಎಂಇಎಸ್ ಪುಂಡರನ್ನು ವಶಕ್ಕೆ ಪಡೆದ ಪೊಲೀಸರು

ಸಮಗ್ರ ನ್ಯೂಸ್ : ಅಧಿವೇಶನದ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರತಿವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಾಡದ್ರೋಹಿ ಎಂಇಎಸ್ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್ ಆಯೋಜನೆ ಮಾಡುತ್ತದೆ. ಈ ಬಾರಿಯು ಎಂಇಎಸ್ ಮಹಾಮೇಳಾವ್ ಆಯೋಜನೆ ಮಾಡಿದೆ.ಹಾಗಾಗಿ ಜಿಲ್ಲಾಡಳಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧ ಹೇರಿತು. ಆದರೆ ಜಿಲ್ಲಾಡಳಿತ ನಿಷೇದ ಹೇರಿದರು ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿ ಮಹಾಮೇಳಾವ್ ಆಚರಣೆಗೆ ಮುಂದಾಗಿದೆ ಈ ವೇಳೆ

ಎಂಇಎಸ್ ಪುಂಡರನ್ನು ವಶಕ್ಕೆ ಪಡೆದ ಪೊಲೀಸರು Read More »

ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್ ಬಿಸಿನೆಸ್ ಪಾರ್ಟ್ನರ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದ ಚಂಪಾಷಷ್ಠಿ ರಥೋತ್ಸವದಲ್ಲಿ ಅಮೆರಿಕಾದ ಡೊನಾಲ್ಡ್ ಟ್ರಂಪ್ ಅವರ ಬಿಸಿನೆಸ್ ಪಾರ್ಟ್ನರ್ ಶಶಿಭೂಷಣ್ ಭಾಗವಹಿಸಿದ್ದಾರೆ. ಅವರು ಅಮೆರಿಕಾದಲ್ಲಿ 3000 ಕೋಟಿ ರೂಪಾಯಿ ವೆಚ್ಚದಲ್ಲಿ 500 ಎಕರೆ ಜಾಗದಲ್ಲಿ ಶಂಕರಾಚಾರ್ಯರ ಆಧ್ಯಾತ್ಮಿಕ ಕೇಂದ್ರ ನಿರ್ಮಿಸುವ ಯೋಜನೆಯನ್ನು ಹೊಂದಿದ್ದಾರೆ ಎಂದು ತಿಳಿಸಿದರು. ಮಂಗಳೂರು, ಡಿ.7ರಂದು ಚಂಪಾಷಷ್ಠಿ ಹಿನ್ನೆಲೆಯಲ್ಲಿ ಶನಿವಾರ (ಡಿಸೆಂಬರ್ 07) ಕುಕ್ಕೆ ಸುಬ್ರಮಣ್ಯದಲ್ಲಿ ರಥೋತ್ಸವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಮಣ್ಯಕ್ಕೆ ಅಮೆರಿಕಾದ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್ ಅವರ

ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ ಡೊನಾಲ್ಡ್ ಟ್ರಂಪ್ ಬಿಸಿನೆಸ್ ಪಾರ್ಟ್ನರ್ Read More »

ಪದಗ್ರಹಣದ ಬೆನ್ನಲ್ಲೇ ದೊಡ್ಡ ನಿರ್ಧಾರ ತೆಗೆದುಕೊಂಡ ಫಡ್ನವಿಸ್ ಸರ್ಕಾರ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಫಡ್ನವಿಸ್, ‘ಲಾಡ್ಲಿ ಬೆಹನಾ ಯೋಜನೆ’ಯನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ.ರಾಜ್ಯದ ಆರ್ಥಿಕ ಪರಿಸ್ಥಿತಿಗಳನ್ನು ಪರಿಗಣಿಸಿ ಇದರ ಮೊತ್ತವನ್ನು 1500 ರೂ. ನಿಂದ 2100 ರೂ.ಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.ಕಳೆದ ಎರಡೂವರೆ ವರ್ಷಗಳಲ್ಲಿ ನಾವು ಮಹಾರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಅಲ್ಲದೇ ಇನ್ನು ಮುಂದೆ ಕೂಡ ಮಹಾರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಮಹಾರಾಷ್ಟ್ರದ ಒಳಿತಿಗಾಗಿ ನಾವು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ನಾವು ನಮ್ಮ

ಪದಗ್ರಹಣದ ಬೆನ್ನಲ್ಲೇ ದೊಡ್ಡ ನಿರ್ಧಾರ ತೆಗೆದುಕೊಂಡ ಫಡ್ನವಿಸ್ ಸರ್ಕಾರ Read More »

ರಾಜ್ಯದ ಜನತೆಗೆ ಬಿಲ್ ಶಾಕ್ ನೀಡಲು ಸಿದ್ದತೆ ಮಾಡಿಕೊಂಡ ಎಸ್ಕಾಂ| ಕೆಇಆರ್ ಸಿ‌‌ ಗೆ ದರ ಏರಿಕೆ ಮಾಡಲು ಪ್ರಸ್ತಾಪ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಲೆ ಏರಿಕೆಗೆ ತತ್ತರಿಸಿರುವ ಜನ ಸಾಮಾನ್ಯರಿಗೆ ಈಗ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಎಸ್ಕಾಂಗಳು ಮುಂದಾಗಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ವಿದ್ಯುತ್ ದರ ಏರಿಕೆ ಮಾಡಲು ಒಪ್ಪಿಗೆ ಸೂಚಿಸುವಂತೆ ಪ್ರಸ್ತಾಪ ಸಲ್ಲಿಸಿವೆ. ಕೆಇಆರ್‌ಸಿಗೆ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮತ್ತು ಸೆಸ್ಕಾಂನಂತಹ ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರವನ್ನು ಹೆಚ್ಚಿಸುವಂತೆ ಕೋರಿ ಪ್ರಸ್ತಾವನೆಗಳನ್ನು ಸಲ್ಲಿಸಿವೆ. ವಿದ್ಯುತ್ ಖರೀದಿಗೆ ತಗಲುವ ವೆಚ್ಚ

ರಾಜ್ಯದ ಜನತೆಗೆ ಬಿಲ್ ಶಾಕ್ ನೀಡಲು ಸಿದ್ದತೆ ಮಾಡಿಕೊಂಡ ಎಸ್ಕಾಂ| ಕೆಇಆರ್ ಸಿ‌‌ ಗೆ ದರ ಏರಿಕೆ ಮಾಡಲು ಪ್ರಸ್ತಾಪ Read More »