ರಾಜ್ಯ

ಜಾತಿ ಗಣತಿ ಜಾರಿ/ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಎಂದು ಮುಖ್ಯಮಂತ್ರಿ

ಸಮಗ್ರ ನ್ಯೂಸ್‌: ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಜಾರಿಗೊಳಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿ ಗಣತಿ ವರದಿ ಕುರಿತು ಇಂದು ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ […]

ಜಾತಿ ಗಣತಿ ಜಾರಿ/ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಎಂದು ಮುಖ್ಯಮಂತ್ರಿ Read More »

ಪೋಕ್ಸೋ ಪ್ರಕರಣ: ಚಿತ್ರದುರ್ಗ ಜೈಲಿನಿಂದ ಮುರುಘಾಶ್ರೀ ಬಿಡುಗಡೆ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೊಳಿಸಲು ನ್ಯಾಯಾಲಯ ಆದೇಶ ಹೊರಡಿಸಿದೆ. ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.

ಪೋಕ್ಸೋ ಪ್ರಕರಣ: ಚಿತ್ರದುರ್ಗ ಜೈಲಿನಿಂದ ಮುರುಘಾಶ್ರೀ ಬಿಡುಗಡೆ Read More »

ಕರಾವಳಿಯ ಅತೀದೊಡ್ಡ ಡ್ರಗ್‌ ಜಾಲ ಬಯಲಿಗೆ| ಸೈಬೀರಿಯಾ ಪ್ರಜೆಯ ಬಂಧನ| 6 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಬೃಹತ್‌ ಡ್ರಗ್‌ ಜಾಲವೊಂದು ಸೋಮವಾರ ಬಯಲಿಗೆ ಬಂದಿದೆ. ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್‌ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಸೈಬಿರಿಯನ್‌ ಪ್ರಜೆ ಪೀಟರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 6 ಕೆಜಿ ಡ್ರಗ್‌ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಇದು ಅತಿದೊಡ್ಡ ಡ್ರಗ್‌ ವಶಕ್ಕೆ ಪಡೆದ ಪ್ರಕರಣ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಎಂಡಿಎಂಎ ಮಾರಾಟದ ವೇಳೆ ಹೈದರ್‌ ಅಲಿ ಎಂಬಾತನನ್ನು

ಕರಾವಳಿಯ ಅತೀದೊಡ್ಡ ಡ್ರಗ್‌ ಜಾಲ ಬಯಲಿಗೆ| ಸೈಬೀರಿಯಾ ಪ್ರಜೆಯ ಬಂಧನ| 6 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ Read More »

ಅಬ್ಬರಿಸಿದ ಹಿಂಗಾರು ಮಳೆ| ವಿವಿಧೆಡೆ ಮಳೆ ಅವಘಡಕ್ಕೆ ಮೂವರು ಬಲಿ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಭಾನುವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಹಿಂಗಾರು ಮಳೆ ಸುರಿದಿದ್ದು, ಮಳೆ ಸಂಬಂಧಿ ಅವಘಡಗಳಿಗೆ ಮೂವರು ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿ ಬಲ್ಲಾಡಿ ಗ್ರಾಮದಲ್ಲಿ ಮಳೆ ಸಂದರ್ಭ ಮನೆಯಿಂದ ಹೊರಬಂದ ಚಂದ್ರು ಗೌಡ್ತಿ (90) ಎಂಬುವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರದಲ್ಲಿ ಭಾನುವಾರ ಮಧ್ಯಾಹ್ನ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಗ್ರಾಮದ ಬಣಕಾರ ನಾರಪ್ಪ (62) ಮತ್ತು ಬಣಕಾರ

ಅಬ್ಬರಿಸಿದ ಹಿಂಗಾರು ಮಳೆ| ವಿವಿಧೆಡೆ ಮಳೆ ಅವಘಡಕ್ಕೆ ಮೂವರು ಬಲಿ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆಗೈಯ್ಯುವವರು ಈ ಬಾರಿ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯ. ಮಂಡಲ-ಮಕರವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಕೇರಳ ಸರಕಾರ ಈ ಸಲ ಯಾತ್ರಾರ್ಥಿಗಳಿಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.ಪ್ರತಿದಿನ 80,000 ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಭಕ್ತರು ಶಬರಿಮಲೆ ದೇಗುಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕ್ಕಿಂಗ್ ಮಾಡಬೇಕಾಗುತ್ತದೆ.ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ. ಈ ಸಲ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯ ಇರುವುದಿಲ್ಲ.ಬುಕ್ಕಿಂಗ್ ರಹಿತರಾಗಿ

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ Read More »

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ/ ಇಂದು ೧೮ನೇ ಕಂತಿನ ಹಣ ಬಿಡುಗಡೆ

ಸಮಗ್ರ ನ್ಯೂಸ್‌: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 18 ನೇ ಕಂತನ್ನು ಮಹಾರಾಷ್ಟ್ರದ ವಾಶಿಮ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಈ ಕಂತನ್ನು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಲಾಭ ವರ್ಗಾವಣೆ(ಡಿಬಿಟಿ) ಮೂಲಕ ವಿತರಿಸಲಾಗುವುದು. ಫೆಬ್ರವರಿ 2019 ರಲ್ಲಿ ಪ್ರಾರಂಭವಾದ ಪಿಎಂ-ಕಿಸಾನ್ ಯೋಜನೆಯು ಭೂಹಿಡುವಳಿ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ, ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗಿದೆ. ಈ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ/ ಇಂದು ೧೮ನೇ ಕಂತಿನ ಹಣ ಬಿಡುಗಡೆ Read More »

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ದಸರಾ ಹಬ್ಬದ ಅಂಗವಾಗಿ ಹೊರ ರಾಜ್ಯಗಳಿಂದ ಮೈಸೂರಿಗೆ ಬರುವ ಪ್ರವಾಸಿ ವಾಹನಗಳಿಗೆ ಅಕ್ಟೋಬ‌ರ್ 4 ರಿಂದ 12 ರವರೆಗೆ ಪ್ರವೇಶ ತೆರಿಗೆ ವಿನಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶಿಸಿದೆ. ಹೊರ ರಾಜ್ಯದ ಹಳದಿ ಬೋರ್ಡ್ ವಾಹನಗಳಿಗೆ ಪ್ರವೇಶ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.ರಾಜ್ಯ ಪ್ರವೇಶಕ್ಕೆ ಮೊದಲು ಗಡಿಭಾಗದಲ್ಲಿ ವಿಶೇಷ ರಹದಾರಿ ಪಡೆಯಬೇಕಿದೆ. ಮೈಸೂರು ನಗರ ಮತ್ತು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯ ವೀಕ್ಷಸಲು ಬರುವ ಪ್ರವಾಸಿ ವಾಹನಗಳಿಗೆ ಮಾತ್ರ ತೆರಿಗೆ ವಿನಾಯಿತಿ

ಮೈಸೂರು ದಸರಾ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ: ಸಾರಿಗೆ ಇಲಾಖೆ ಆದೇಶ Read More »

ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು

ಸಮಗ್ರ ನ್ಯೂಸ್: ದಸರಾ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಸರಿದೂಗಿಸಲು ಕಾರವಾರ ಮತ್ತು ಮೈಸೂರು ನಡುವೆ ಕೊಂಕಣ ರೈಲ್ವೆ ವಿಶೇಷ ರೈಲು ವ್ಯವಸ್ಥೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. 06569 ಸಂಖ್ಯೆಯ ರೈಲು ಇದೇ 10ರಂದು ಮಧ್ಯರಾತ್ರಿ 12.30ಕ್ಕೆ ಯಶವಂತಪುರದಿಂದ ಹೊರಡಲಿದ್ದು 11ರಂದು ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. 06570 ಸಂಖ್ಯೆಯ ರೈಲು 11ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮರುದಿನ 4.40ಕ್ಕೆ ಮೈಸೂರು ತಲುಪಲಿದೆ. ಯಶವಂತಪುರದಿಂದ ಹೊರಡುವ ರೈಲಿಗೆ ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌,

ದಸರಾ ಹಿನ್ನೆಲೆ| ಬೆಂಗಳೂರು – ಮಂಗಳೂರು – ಕಾರವಾರ ಮತ್ತು ಮೈಸೂರು – ಕಾರವಾರ ನಡುವೆ ವಿಶೇಷ ರೈಲು Read More »

ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಛತ್ತೀಸ್ಗಢದ ದಂತೇವಾಡ ಜಿಲ್ಲೆಯ ಅಬುಜ್ಮದ್ನಲ್ಲಿ ಶುಕ್ರವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಕನಿಷ್ಠ 20 ಮಾವೋವಾದಿಗಳನ್ನ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಂತೇವಾಡ ಮತ್ತು ನಾರಾಯಣಪುರದ ಜಿಲ್ಲಾ ರಿಸರ್ವ್ ಗಾರ್ಡ್ಗಳು (DRG) ಅಬುಜ್ಮದ್ನಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ವಿವಿಧ ಪೊಲೀಸ್ ಶಿಬಿರಗಳಿಂದ ಕಾರ್ಯಾಚರಣೆಗೆ ಹೊರಟರು. “ಗೋವೆಲ್-ನೆಂಡೂರ್-ತುಲ್ತುಲಿ ಎಂಬ ಮೂರು ಗ್ರಾಮಗಳ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ” ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಮೂರು

ಛತ್ತೀಸ್ ಘಡ: ಎನ್ ಕೌಂಟರ್ ಗೆ 20 ಮಾವೋವಾದಿಗಳು ಬಲಿ Read More »

ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್.. ಖಾತೆಗೆ ಬೀಳಲಿದೆ 4 ಸಾವಿರ ರೂ.

ಸಮಗ್ರ ನ್ಯೂಸ್: ಎಲ್ಲೆಡೆ ನವರಾತ್ರಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಆದರೆ ಗೃಹ ಲಕ್ಷ್ಮೀಯರು ಮಾತ್ರ ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಂದಿಲ್ಲ ಎಂಬ ಪಿಸುಮಾತುಗಳನ್ನು ಆಡುತ್ತಿದ್ದಾರೆ. ಅಷ್ಟೇ ಅಲ್ಲದೆ ಸರ್ಕಾರದ ವಿರುದ್ಧ ಮಹಿಳೆಯರು ಮುನಿಸಿಕೊಂಡಿದ್ದಾರೆ. ಆದರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀಯರಿಗೆ ಗುಡ್ನ್ಯೂಸ್ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಎರಡು ಹಂತದಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ

ಗೃಹ ಲಕ್ಷ್ಮೀಯರಿಗೆ ಗುಡ್ ನ್ಯೂಸ್.. ಖಾತೆಗೆ ಬೀಳಲಿದೆ 4 ಸಾವಿರ ರೂ. Read More »