ರಾಜ್ಯ

ರಾಜ್ಯದಲ್ಲಿ ಗೋವಿನ ಮೇಲೆ ಮತ್ತೊಂದು ವಿಕೃತಿ| ಹರಕೆಗೆ ಬಿಟ್ಟ ಕರುವಿನ ಬಾಲ ಕತ್ತರಿಸಿದ ದುರುಳುರು!!

ಸಮಗ್ರ ನ್ಯೂಸ್: ದೇವಸ್ಥಾನದಲ್ಲಿ ಹರಕೆಗೆ ಬಿಟ್ಟ ಕರುವಿನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಾಯಗೊಳಿಸಿ ವಿಕೃತಿ ಮೆರೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ‌ನಡೆದಿದೆ. ಕರುವಿನ ಹಿಂಬದಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಬಾಲ ತುಂಡಾಗುವ ಸ್ಥಿತಿಯಲ್ಲಿದೆ. ಸದ್ಯ ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದಲ್ಲಿ ಗೋವಿನ ಮೇಲೆ ಮತ್ತೊಂದು ವಿಕೃತಿ| ಹರಕೆಗೆ ಬಿಟ್ಟ ಕರುವಿನ ಬಾಲ ಕತ್ತರಿಸಿದ ದುರುಳುರು!! Read More »

ದೆಹಲಿ ವಿಧಾನಸಭಾ ಚುನಾವಣೆ/ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

ಸಮಗ್ರ ನ್ಯೂಸ್‌: ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐದು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹೆಸರಿಸಿದೆ. ಈ ಪಟ್ಟಿಯಲ್ಲಿ ಸುರೇಂದರ್ ಕುಮಾರ್ ಮತ್ತು ರಾಹುಲ್ ಧನಕ್ ಸೇರಿದ್ದಾರೆ. ಕುಮಾರ್ ಅವರು ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಾದ ಬವಾನಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಧನಕ್ ಅವರು ಕರೋಲ್ ಬಾಗ್‌ನಿಂದ (ಎಸ್‌ಸಿಗೆ ಮೀಸಲು) ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಪಟ್ಟಿಯಲ್ಲಿರುವ ಇತರ ಮೂರು ಹೆಸರುಗಳಲ್ಲಿ ರೋಹಿಣಿಯಿಂದ ಅಭ್ಯರ್ಥಿ ಸುಮೇಶ್ ಗುಪ್ತಾ, ತುಘಲಕಾಬಾದ್‌ನಿಂದ ವೀರೇಂದ್ರ ಬಿದುರಿ ಮತ್ತು ಬದರ್‌ಪುರದಿಂದ ಅರ್ಜುನ್

ದೆಹಲಿ ವಿಧಾನಸಭಾ ಚುನಾವಣೆ/ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌ Read More »

ಕೊಟ್ಟಿಗೆಹಾರ:ಸುದ್ದಿ ಮಾಡಲು ಹೋಗಿ ಸುದ್ದಿಯಾದ ಯೂಟ್ಯೂಬರ್

ಸಮಗ್ರ ನ್ಯೂಸ್: ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬರು ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಕೊಟ್ಟಿಗೆಹಾರದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಟ್ಟ ಕಡೆಯ ಗ್ರಾಮವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಮಂಗಳವಾರ ಸಂಜೆ ಗ್ರಾಮಕ್ಕೆ ಹೋಗಿದ್ದಾನೆ. ಗ್ರಾಮಕ್ಕೆ ಹೋಗಲು ರಸ್ತೆ ಇಲ್ಲದ ಕಾರಣ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಒಂದು ಏಕಾಏಕಿ ದಾಳಿಗೆ ಮುಂದಾಗಿದೆ. ಯೂಟ್ಯೂಬರ್ ಅಭಿಷೇಕ್ ಕೂದಲೆಳೆ ಅಂತರದಲ್ಲಿ ಕಂದಕಕ್ಕೆ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾನೆ. ಆನೆಯನ್ನು

ಕೊಟ್ಟಿಗೆಹಾರ:ಸುದ್ದಿ ಮಾಡಲು ಹೋಗಿ ಸುದ್ದಿಯಾದ ಯೂಟ್ಯೂಬರ್ Read More »

ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ

ಸಮಗ್ರ ನ್ಯೂಸ್: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ. ಬಾಲಕೃಷ್ಣ ರೈ ಪೊರ್ದಾಲ್ಸಹಶಿಕ್ಷಕರು, ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು, ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು. ರಂಗ ಕಲಾವಿದನಾಗಿ,ಸುಮಾರು 250ಕ್ಕಿಂತಲೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿರುವರು. ರಂಗ

ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ Read More »

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಹಾಸನ, ಚಾಮರಾಜನಗರ,

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ Read More »

ಕಡಬ ತಾಲೂಕಿನ ವಿವಿಧೆಡೆ ವಾರದೊಳಗೆ ಸೋಲಾರ್ ಪಾರ್ಕ್ ಸ್ಥಾಪನೆಗೆ ಜಾಗ ಗುರುತಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ

ಸಮಗ್ರ ನ್ಯೂಸ್: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ

ಕಡಬ ತಾಲೂಕಿನ ವಿವಿಧೆಡೆ ವಾರದೊಳಗೆ ಸೋಲಾರ್ ಪಾರ್ಕ್ ಸ್ಥಾಪನೆಗೆ ಜಾಗ ಗುರುತಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ Read More »

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ| ಆಸ್ಪತ್ರೆಗೆ ದಾಖಲಾದ ಸಚಿವೆ

ಸಮಗ್ರ ನ್ಯೂಸ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ| ಆಸ್ಪತ್ರೆಗೆ ದಾಖಲಾದ ಸಚಿವೆ Read More »

ಬೆಳ್ತಂಗಡಿ: ಮುಸ್ಲಿಂ ಯುವತಿಯ ಮದುವೆಯಾದ ಹಿಂದೂ ಯುವಕ

ಸಮಗ್ರ ನ್ಯೂಸ್: ನಾಪತ್ತೆಯಾಗಿದ್ದ ಮುಸ್ಲಿಂ ಯುವತಿಯೊಬ್ಬಳು ಹಿಂದೂ ಯುವಕನೊಂದಿಗೆ ಹಿಂದೂ ಸಂಪ್ರದಾಯದಂತೆ ಮದುವೆಯಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಪಟ್ರಮೆ ಗ್ರಾಮದಲ್ಲಿ ನಡೆದಿದೆ. ಹರೀಶ್ ಗೌಡ (24) ಮತ್ತು ಸುಹಾನ (19) ಪ್ರೀತಿಸಿ ಮದುವೆಯಾದ ಹಿಂದೂ-ಮುಸ್ಲಿಂ ಜೋಡಿ. ಹರೀಶ್ ಗೌಡ ಹಾಗೂ ಸುಹಾನ ಫೇಸ್‌ಬುಕ್‌ನಲ್ಲಿ ಪರಿಚಿತರಾಗಿದ್ದರು‌. ಬಳಿಕ ಇಬ್ಬರೂ ಪ್ರೀತಿಯ ಬಲೆಗೆ ಬಿದ್ದಿದ್ದರು. ಇತ್ತೀಚೆಗೆ ಕಂಪ್ಯೂಟರ್ ಕ್ಲಾಸ್‌ಗೆ ಹೋಗಿದ್ದ ಸುಹಾನ ನಾಪತ್ತೆ ಆಗಿದ್ದಳು. ಆದ್ದರಿಂದ ಆಕೆಯ ಮನೆಯವರು ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ

ಬೆಳ್ತಂಗಡಿ: ಮುಸ್ಲಿಂ ಯುವತಿಯ ಮದುವೆಯಾದ ಹಿಂದೂ ಯುವಕ Read More »

ಬಿಗ್ ಬಾಸ್ ನಿಂದ ಹೊರಬಿದ್ದ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಸೀಸನ್ 11 ರ ಫಿನಾಲೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗಲೇ ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಿಂದ ಹೊರಗಡೆ ಬಂದಿದ್ದಾರೆ. ಬಿಗ್ ಬಾಸ್ ಮನೆಯ ಅತ್ಯಂತ ಪ್ರಬಲ ಸ್ಪರ್ಧಿ ಅಂತಾ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಅರು ಬಿಗ್ ಬಾಸ್ ಮನೆಯಿಂದ ಹೊರಗಡೆ ಬಂದಿರೋದು ಅವರ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಫಿನಾಲೆಗೆ ಬರ್ತಾರೆ ಅಂತಾ ಎಲ್ಲರೂ ಅಂದುಕೊಂಡಿದ್ದರು. ಆದರೆ ಅದಕ್ಕಿಂತ ಮೊದಲೇ ಅವರು

ಬಿಗ್ ಬಾಸ್ ನಿಂದ ಹೊರಬಿದ್ದ ಚೈತ್ರಾ ಕುಂದಾಪುರ Read More »

ಮಡಿಕೇರಿ: ಹಾಡುಹಗಲೇ ಕಾರು ಕಳವುಗೈದ ಚೋರ| ಕೆಲವೇ ಗಂಟೆಗಳಲ್ಲೇ ಆರೋಪಿ ಅಂದರ್

ಸಮಗ್ರ ನ್ಯೂಸ್: ಮಡಿಕೇರಿ ನಗರದ ಹೃದಯ ಭಾಗದಲ್ಲಿ ಹಾಡಹಗಲೇ ಕಾರು ಕಳ್ಳತನ ಮಾಡಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಜಿಪಿಎಸ್ ಆಧಾರದಲ್ಲಿ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮಡಿಕೇರಿ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದರು. ನಾಪೋಕ್ಲು ನಿವಾಸಿ ರಫೀಕ್(30) ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಕಾರನ್ನು ವಶಕ್ಕೆ ಪಡೆಯಲಾಗಿದೆ. ಅಂಬೆಕಲ್ ನವೀನ್ ಕುಶಾಲಪ್ಪ ಎಂಬವರು ಜನರಲ್ ತಿಮ್ಮಯ್ಯ ವೃತ್ತದಿಂದ ಮಂಗಳೂರು ರಸ್ತೆ ಕಡೆಗೆ ತೆರಳುವ ಮಾರ್ಗದ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ತಮ್ಮ ಫೋಟೋ

ಮಡಿಕೇರಿ: ಹಾಡುಹಗಲೇ ಕಾರು ಕಳವುಗೈದ ಚೋರ| ಕೆಲವೇ ಗಂಟೆಗಳಲ್ಲೇ ಆರೋಪಿ ಅಂದರ್ Read More »