ರಾಜ್ಯ

ಹೊಸ ಲೋಗೋ ಹೊಸ ಪ್ಲಾನ್‌ಗಳು/ ಖಾಸಗಿ ಸಂಸ್ಥೆಗಳಿಗೆ ನಡುಕ ಹುಟ್ಟಿಸುತ್ತಿರುವ ಬಿಎಸ್‌ಎನ್‌ಎಲ್‌

ಸಮಗ್ರ ನ್ಯೂಸ್‌: ಬಳಕೆದಾರ ಸ್ನೇಹಿ ಮೊಬೈಲ್ ರಿಚಾರ್ಜ್ ಪ್ಲಾನ್‌ಗಳನ್ನು ಘೋಷಿಸುತ್ತಿರುವ ಬಿಎಸ್‌ಎನ್‌ಎಲ್, ಇದೀಗ ಲೋಗೋ ಬದಲಿಸಿಕೊಳ್ಳುವ ಮೂಲಕ ಜನರಿಗೆ ಮತ್ತಷ್ಟು ಹತ್ತಿರವಾಗಲು ಪ್ರಯತ್ನಿಸಿದೆ. ಖಾಸಗಿ ಸಂಸ್ಥೆಗಳಿಗೆ ಟಕ್ಕರ್ ಕೊಡುತ್ತಿರುವ ಭಾರತ್ ಸಂಚಾ‌ರ್ ನಿಗಮ್ ಲಿಮಿಟೆಡ್’ ತನ್ನ ಲೋಗೋ ಅನ್ನು ಬದಲಾಯಿಸಿಕೊಂಡು, ಹೊಸ ಚೈತನ್ಯದೊಂದಿಗೆ ಗ್ರಾಹಕರ ಮುಂದೆ ಬಂದಿದೆ. ಈ ಹೊಸ ಲೋಗೋದಲ್ಲಿ ದೇಶ ಐಕ್ಯತೆ ಸಾರುವ ಭಾರತದ ತ್ರಿವರ್ಣ ಧ್ವಜದ ಮೂರು ಬಣ್ಣಗಳಿವೆ. ಬಿಎಸ್‌ಎನ್‌ಎಲ್ ಕನೆಕ್ಕಿಂಗ್ ಪೀಪಲ್ ಹಾಗೇ ಉಳಿಸಿಕೊಳ್ಳಲಾಗಿದೆ. ಅದರೊಂದಿಗೆ ‘ಸುರಕ್ಷಿತ, ವಿಶ್ವಾಸಾರ್ಹ, ಕೈಗೆಟುಕುವ ಘೋಷವಾಕ್ಯದೊಂದಿಗೆ […]

ಹೊಸ ಲೋಗೋ ಹೊಸ ಪ್ಲಾನ್‌ಗಳು/ ಖಾಸಗಿ ಸಂಸ್ಥೆಗಳಿಗೆ ನಡುಕ ಹುಟ್ಟಿಸುತ್ತಿರುವ ಬಿಎಸ್‌ಎನ್‌ಎಲ್‌ Read More »

ಸನ್ಯಾಸತ್ವ ಸ್ವೀಕಾರ ಮಾಡಿದ ಯುವತಿಯರು- ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ

ಸಮಗ್ರ ನ್ಯೂಸ್: ಮದುವೆ ವಯಸ್ಸಿಗೆ ಬಂದ ಯುವತಿಯರಿಬ್ಬರು ಸನ್ಯಾಸತ್ವ ಸ್ವೀಕಾರ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಮಾನಸಿ ಕುಮಾರಿ, ಭಕ್ತಿ ಕುಮಾರಿ ಈ ಇಬ್ಬರು ಜೈನ ದೀಕ್ಷೆ ಪಡೆಯಲು ನಿರ್ಧಾರ ಮಾಡಿದ್ದಾರೆ. ಮಾನಸಿ ಕುಮಾರಿ MA ಸೈಕಾಲಜಿ ಹಾಗೂ ಗೋಕಾಕ್‌ನ ಭಕ್ತಿ ಕುಮಾರಿ ಬಿಎ, ಎಲ್‌ಎಲ್‌ಬಿ ಮಾಡಿದ್ದಾರೆ. ಇವರೊಬ್ಬರು ಜೈನ ದೀಕ್ಷೆ ಪಡೆಯುವ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ ಆಯೋಜಿಸಲಾಗಿತ್ತು. ಸಂಭ್ರಮದಲ್ಲಿ ಭಾಗಿಯಾದ ಇಬ್ಬರ ಕುಟುಂಬಸ್ಥರು ಅಭಿನಂದನೆ ತಿಳಿಸಿದರು.ಇವರಿಬ್ಬರ ಸನ್ಯಾಸತ್ವ ಸ್ವೀಕಾರ ಕಾರ್ಯಕ್ರಮವು ನವೆಂಬರ್ 17ಕ್ಕೆ ಜಾರ್ಖಂಡ್‌ನಲ್ಲಿ ನಡೆಯಲಿದೆ.

ಸನ್ಯಾಸತ್ವ ಸ್ವೀಕಾರ ಮಾಡಿದ ಯುವತಿಯರು- ದಾವಣಗೆರೆಯಲ್ಲಿ ಅದ್ಧೂರಿ ಸಮಾರಂಭ Read More »

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಮೂವರ ಶವ ಹೊರಕ್ಕೆ.. ಮುಂದುವರೆದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಧಾರಾಕಾರ ಮಳೆಯಿಂದ ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ. ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದುಬಂದಿದೆ. ಕಟ್ಟಡ ಕೆಲಸ ಮುಗಿದಿದ್ದು, ಪೇಂಟಿಂಗ್ ಕೆಲಸದಲ್ಲಿ ಕಾರ್ಮಿಕರು ನಿರತರಾಗಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯ ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆದಿದ್ದಾರೆ. ಇನ್ನು ಮೂವರನ್ನು ರಕ್ಷಣೆ ಮಾಡಿದ್ದು, ಇನ್ನುಳಿದಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಮೂವರ ಶವ ಹೊರಕ್ಕೆ.. ಮುಂದುವರೆದ ಕಾರ್ಯಾಚರಣೆ Read More »

ವಿದೇಶದಲ್ಲಿ ಉದ್ಯೋಗ ಬೇಕೇ? ಅ. 26-27 ರಂದು ನೇರ ಸಂದರ್ಶನ

ಸಮಗ್ರ ನ್ಯೂಸ್: ಭಾರತ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಅತ್ಯಂತ ಹೆಸರುವಾಸಿಯಾಗಿರುವ NESTO HYPERMARKETನ ಅಧೀನ ಸಂಸ್ಥೆಯಾಗಿರುವ MOVE & PICK SUPERMARKET ಕಂಪನಿಯು ಅವಕಾಶ ನೀಡಿದೆ. ಈ ಭಾರಿ ಕರ್ನಾಟಕದ ಕನ್ನಡಿಗರಿಗೆ ಹೆಚ್ಚಿನ ಅವಕಾಶದೊಂದಿಗೆ ಉದ್ಯೋಗವಕಾಶಕ್ಕಾಗಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಅ. 26 ಮತ್ತು 27 ರಂದು ಭಾರತ ಸರ್ಕಾರಾದ ವಿದೇಶಾಂಗ ಇಲಾಖೆಯ ಮಾನ್ಯತೆ ಪಡೆದ ನೂರ್ international ಸಂಸ್ಥೆಯಲ್ಲಿ ನಡೆಯಲಿದೆ. ಸೇಲ್ಸ್ ಹಾಗು ಸೂಪರ್ ಮಾರ್ಕೆಟ್ ನಲ್ಲಿ ಕೆಲಸದ ಅನುಭವವಿರುವ ಹಾಗೂ ಇಂಗ್ಲಿಷ್ ಮಾತನಾಡಬಲ್ಲ 21

ವಿದೇಶದಲ್ಲಿ ಉದ್ಯೋಗ ಬೇಕೇ? ಅ. 26-27 ರಂದು ನೇರ ಸಂದರ್ಶನ Read More »

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 15 ಜನ ಅಸ್ವಸ್ಥ

ಸಮಗ್ರ ನ್ಯೂಸ್:ಕಲುಷಿತ ನೀರು ಸೇವಿಸಿ ಇಬ್ಬರು ಸಾವನಪ್ಪಿದ್ದು, 15 ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ನಡೆದಿದೆ. ಗ್ರಾಮದ ಸುರೇಶ ಭೋವಿ (32),ಮಹಾಂತೇಶ ಭೋವಿ (35) ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಇದೆ ವೇಳೆ 15 ಜನರು ಕಲುಷಿತ ನೀರು ಸೇವಿಸಿ ವಾಂತಿ ಭೇತಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು ಅದಕ್ಕೆ ಚರಂಡಿ ನೀರು ಸೇರಿ ಕಲುಷಿತಗೊಂಡಿದೆ.ಆದರೆ ಗ್ರಾಮಸ್ಥರು ಕಲುಷಿತ ನೀರು ಸೇವನೆಯೆ ಇದಕ್ಕೆ

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 15 ಜನ ಅಸ್ವಸ್ಥ Read More »

ಬ್ರಿಕ್ಸ್ ಶೃಂಗಸಭೆ/ ರಷ್ಯಾಕ್ಕೆ ತೆರಳಿದ ಮೋದಿ

ಸಮಗ್ರ ನ್ಯೂಸ್‌: 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಕಜಾನ್ ನಗರಕ್ಕೆ ತೆರಳಿದ್ದಾರೆ. ಶೃಂಗಸಭೆಯು ಎಲ್ಲಾ ನಾಯಕರಿಗೆ ಸೌಹಾರ್ದ ಭೋಜನದೊಂದಿಗೆ ಸಂಜೆ ಪ್ರಾರಂಭವಾಗಲಿದೆ. “ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾದ ಕಜಾನ್‌ಗೆ ಹೊರಟಿದ್ದಾರೆ. ಭಾರತವು ಬ್ರಿಕ್ಸ್‌ಗೆ ಅಪಾರ ಪ್ರಾಮುಖ್ಯತೆಯನ್ನು ನೀಡುತ್ತದೆ ಮತ್ತು ವ್ಯಾಪಕವಾದ ಚರ್ಚೆಗಳನ್ನು ನಾನು ಎದುರು ನೋಡುತ್ತಿದ್ದೇನೆ. ನಾನು ಅಲ್ಲಿ ವಿವಿಧ ನಾಯಕರನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ.” ಎಂದು ಭಾರತದಿಂದ ನಿರ್ಗಮಿಸುವ ಮುನ್ನ ಮೋದಿ ಟ್ವೀಟ್‌ ಮಾಡಿದ್ದಾರೆ. ಪ್ರಧಾನಮಂತ್ರಿಯವರು ಬ್ರಿಕ್ಸ್

ಬ್ರಿಕ್ಸ್ ಶೃಂಗಸಭೆ/ ರಷ್ಯಾಕ್ಕೆ ತೆರಳಿದ ಮೋದಿ Read More »

ಪಟಾಕಿಗೆ ಕಡಿವಾಣ : ಕಾಂಗ್ರೆಸ್ ಸರ್ಕಾರ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ ಎಂದು ಆಕ್ರೋಶ

ಸಮಗ್ರ ನ್ಯೂಸ್:ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು, ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಪಟಾಕಿಗಳಿಂದ ಪರಿಸರ ಮಾಲಿನ್ಯ ಆಗುತ್ತಿದ್ದು ಹಾಗಾಗಿ ಈ ಆದೇಶ ನೀಡಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ಕೇವಲ ಹಿಂದೂಗಳ ಹಬ್ಬ ದೀಪಾವಳಿಯಲ್ಲಿ ಸರಕಾರ ಪರಿಸರ ಮಾಲಿನ್ಯದ ಬೊಬ್ಬೆ ಹಾಕುತ್ತಿದ್ದು ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ವರ್ಷ ಪೂರ್ತಿ ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಯಲು ಯಾವ ಕ್ರಮ ಕೈಗೊಂಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ

ಪಟಾಕಿಗೆ ಕಡಿವಾಣ : ಕಾಂಗ್ರೆಸ್ ಸರ್ಕಾರ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ ಎಂದು ಆಕ್ರೋಶ Read More »

ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ

ಸಮಗ್ರ ನ್ಯೂಸ್:ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿಯನ್ನು ಕೇಂದ್ರ ಸರ್ಕಾರದಿಂದ ಅ.23 ರಂದು ಬಿಡುಗಡೆ ಮಾಡಲಾಗುವುದು.ಅ. 23ಕ್ಕೆ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ ಸಂದಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡುವಂತೆ ಕಿತ್ತೂರು ಕರ್ನಾಟಕ ನಿಯೋಗದ ಪ್ರಮುಖರು, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಅರವಿಂದ್ ಬೆಲ್ಲದ್, ಮಾಜಿ ಸಂಸದ ಅಣ್ಣಾ

ಕೇಂದ್ರದಿಂದ ಕಿತ್ತೂರು ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ Read More »

‘ನನ್ನ ಕ್ಯಾರೆಕ್ಟರ್ ಬಗ್ಗೆ ಮಾತಾಡಿದ್ರೆ ಮೆಟ್ಟು ತಗೊಂಡು ಹೊಡಿತೀನಿ’| ದೊಡ್ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರಿಗೆ ತಮ್ಮ ಮಾತುಗಳೇ ಮುಳುವಾಗುತ್ತಿವೆ. ಈಗಾಗಲೇ ಸುದೀಪ್ ಎಚ್ಚರಿಕೆ ನೀಡಿದ್ದರು ಚೈತ್ರಾ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇದೀಗ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ವಿವಾದ ಹುಟ್ಟು ಹಾಕಿದ್ದಾರೆ. ಕಳೆದ ವಾರ ಚೈತ್ರಾ ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಖಂಡಿಸಿದ್ದರು. ಆದರೂ ಚೈತ್ರಾ ಕೊಂಚವೂ ಬದಲಾಗಿಲ್ಲ. ಅಕ್ಟೋಬರ್​ 21ರ ಸಂಚಿಕೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಕಳೆದ ವಾರ ಜಗದೀಶ್ ಅವರಿಗೆ

‘ನನ್ನ ಕ್ಯಾರೆಕ್ಟರ್ ಬಗ್ಗೆ ಮಾತಾಡಿದ್ರೆ ಮೆಟ್ಟು ತಗೊಂಡು ಹೊಡಿತೀನಿ’| ದೊಡ್ಮನೆಯಲ್ಲಿ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ Read More »

ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕಳೆದ ಮೂರ್ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಮುಂದಿನ ಎರಡು ದಿನಗಳು ಮಳೆಯಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಅಕ್ಟೋಬರ್ 23 ರವರೆಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು-ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅ.22ರಂದು ಉಡುಪಿ, ಮೈಸೂರು, ಬೆಂಗಳೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ

ಹವಾಮಾನ ಸಮಾಚಾರ| ರಾಜಧಾನಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ Read More »