ರಾಜ್ಯ

ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು

ಸಮಗ್ರ ನ್ಯೂಸ್: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಮತ್ತು ಪಂಚಾಯಿತಿ ಅಧಿಕಾರಿಗಳು ಹಾಗೂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ. ಇದರಿಂದಾಗಿ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳು ಸ್ತಬ್ಧವಾಗಲಿವೆ. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ಕಾರ್ಯದರ್ಶಿಗಳು, ಕರ ವಸೂಲಿಗಾರರು, ಗುಮಾಸ್ತರು ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ […]

ಇಂದಿನಿಂದ ಗ್ರಾಮ ಪಂಚಾಯತ್ ಸೇವೆಗಳು ಬಂದ್| ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮುಂದಾದ ನೌಕರರು Read More »

ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು?

ಸಮಗ್ರ ನ್ಯೂಸ್: ಮುಡಾ ಸಂಕಷ್ಟಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಲುಕಿದ ನಂತರದಲ್ಲಿ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಗಳು ಆಡಳಿತರೂಢ ಪಕ್ಷ ಹಾಗೂ ವಿಪಕ್ಷಗಳಲ್ಲೂ ನಡೆಯುತ್ತಲೇ ಬಂದಿದೆ. ಇನ್ನೊಂದು ವರ್ಷದಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿದು, ರಾಜ್ಯಕ್ಕೆ ಹೊಸ ಸಿಎಂ ಆಯ್ಕೆ ಆಗಲಿದ್ದಾರೆ ಎಂಬ ಮಾತಿಗೆ ಇದೀಗ ಖುದ್ದು ಸಿದ್ದರಾಮಯ್ಯ ಅವರ ಹೇಳಿಕೆಗಳೇ ಪುಷ್ಠಿ ನೀಡಿವೆ. ಸಿದ್ದರಾಮಯ್ಯ ಅವರು ದಸರಾ ಮಹೋತ್ಸವದ ವೇದಿಕೆಯಲ್ಲಿ ಭಾಷಣ ಮಾಡುವಾಗ, ಇನ್ನೊಂದು ವರ್ಷ ದೇವಿ ನನಗೆ ಅಧಿಕಾರ ನಡೆಸಲು ಆರ್ಶೀವಾದ ಮಾಡಲಿ.

ರಾಜ್ಯಕ್ಕೆ ನೂತನ ಮುಖ್ಯಮಂತ್ರಿ? ದಸರಾ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಹೀಗೇಕೆ ಹೇಳಿದ್ರು? Read More »

14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ

ಸಮಗ್ರ ನ್ಯೂಸ್:ವಾರಣಾಸಿಯ ದೇವಾಲಯಗಳಿಂದ ಸಾಯಿಬಾಬಾ ಮೂರ್ತಿಗಳನ್ನು ತೆರವು ಅಭಿಯಾನ ನಡೆಸುತ್ತಿದ್ದ ಸ್ಥಳೀಯ ಹಿಂದೂ ಸಂಘಟನೆಯಾದ ಸನಾತನ ರಕ್ಷಕ ದಳದ ಮುಖ್ಯಸ್ತನಾದ ಅಜಯ್ ಶರ್ಮಾರವರನ್ನು ಶಾಂತಿ ಭಂಗದ ಆರೋಪದ ಮೇಲೆ ಅ.2ರಂದು ಬಂಧಿಸಲಾಗಿದೆ. ಲೊಹಾಟಿಯಾದ ಬಡಾ ಗಣೇಶ ದೇವಸ್ಥಾನದಲ್ಲಿರುವ ಸಾಯಿಬಾಬಾ ವಿಗ್ರಹ ಸೇರಿದಂತೆ ಇದುವರೆಗೆ 14 ದೇವಸ್ಥಾನಗಳಿಂದ ಸಾಯಿಬಾಬಾ ವಿಗ್ರಹವನ್ನು ತೆಗೆದುಹಾಕಲಾಗಿದೆ ಎಂದು ಶರ್ಮಾ ಅವರು ಬುಧವಾರ ಹೇಳಿದ್ದಾರೆ ಮತ್ತು ಇನ್ನೂ 50 ದೇವಾಲಯಗಳಿಂದ ಸಾಯಿಬಾಬಾ ವಿಗ್ರಹವನ್ನು ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.ಈ ಕ್ರಮಕ್ಕೆ ಹಲವು ಸಾಯಿಬಾಬಾ ಭಕ್ತರು ವಿರೋಧ

14 ದೇವಾಲಯಗಳಿಂದ ಸಾಯಿಬಾಬಾ ಪ್ರತಿಮೆ ತೆರವು ಪ್ರಕರಣ Read More »

ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಮಾಂಸಾಹಾರಿಯಾಗಿದ್ದರು

ಸಮಗ್ರ ನ್ಯೂಸ್:ಬೆಂಗಳೂರಿನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಜಾಗೃತ ಕರ್ನಾಟಕ ಮತ್ತು ಅಹರ್ನಿಶಿ ಪ್ರಕಾಶನ ಆಯೋಜಿಸಿದ್ದ ‘ಗಾಂಧೀಜಿಯ ಹಂತಕ’ ಪುಸ್ತಕ ಬಿಡುಗಡೆ, ಚರ್ಚಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾವರ್ಕರ್ ಗೋಹತ್ಯೆಯ ವಿರೋಧಿಯಲ್ಲ. ಅವರು ಚಿತ್ಪಾವನ ಬ್ರಾಹ್ಮಣರಾಗಿದ್ದರಾದರೂ ಮತ್ತು ಮಾಂಸಹಾರಿ ಎಂದು ಸಚಿವ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗೆ ನೋಡಿದರೆ ಸಾವರ್ಕರ್ ಒಂದು ರೀತಿಯಲ್ಲಿ ಮಾಡರ್ನಿಸ್ಟ್ ಆಗಿಯೂ ಕಾಣುತ್ತಾರೆ. ಆದರೆ ಮೂಲಭೂತವಾದಿಯಾಗಿದ್ದರುಇದು ಭಾರತ ದೇಶದ ಸಂಸ್ಕೃತಿಯಲ್ಲ.ಗಾಂಧೀಜಿಯವರು ಸಸ್ಯಹಾರಿ, ನಮ್ಮ ಸಂಸ್ಕೃತಿ ಸಂಪ್ರದಾಯಗಳ ಮೇಲೆ ಗಾಂಧೀಜಿಯವರಿಗೆ ಅಪಾರವಾದ ನಂಬಿಕೆ ಇತ್ತು.

ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಮಾಂಸಾಹಾರಿಯಾಗಿದ್ದರು Read More »

ಮೈಸೂರು: ಪುಷ್ಪಾರ್ಚನೆ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಿದ ಹಂಪನಾ| ಇಂದಿನಿಂದ ಸಾಂಸ್ಕೃತಿಕ ನಗರಿಯಲ್ಲಿ ದಸರಾ ದರ್ಬಾರ್

ಸಮಗ್ರ ನ್ಯೂಸ್: ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. ಸಾಹಿತಿ ಹಂಪ ನಾಗಾರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ

ಮೈಸೂರು: ಪುಷ್ಪಾರ್ಚನೆ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಿದ ಹಂಪನಾ| ಇಂದಿನಿಂದ ಸಾಂಸ್ಕೃತಿಕ ನಗರಿಯಲ್ಲಿ ದಸರಾ ದರ್ಬಾರ್ Read More »

ಬೆಂಗಳೂರಿನಲ್ಲಿ ಧಾರಾಕಾರ ಮಳೆ.. ರಸ್ತೆಗಳು ಜಲಾವೃತ

ಸಮಗ್ರ ನ್ಯೂಸ್: ಬೆಂಗಳೂರಿನಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಕಾರ್ಪೋರೇಶನ್, ವಿಧಾನಸೌಧ, ಶಾಂತಿನಗರ, ಕೆ.ಆರ್.ವೃತ್ತ, ವಿಜಯನಗರ, ಯಶವಂತಪುರ, ಕಾಮಾಕ್ಷಿಪಾಳ್ಯದಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಇನ್ನು ಮನೆ ಕಡೆ ಹೊರಟಿದ್ದ ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸಿದ್ದಾರೆ, ಕೆಲ ಕಾಲ ಸವಾರರು ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದಾರೆ. ಗುಡುಗು ಸಿಡಿಲು ನೊಂದಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳೆಲ್ಲ ಜಲಾವೃತವಾಗಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ.. ರಸ್ತೆಗಳು ಜಲಾವೃತ Read More »

ಮೈಸೂರು: ನಾಳೆ ನಾಡಹಬ್ಬ ದಸರಾಗೆ ವಿಧ್ಯುಕ್ತ ಚಾಲನೆ| ಮದುವಣಗಿತ್ತಿಯಂತೆ ಸಿಂಗಾರಗೊಂಡ ಸಾಂಸ್ಕೃತಿಕ ನಗರಿ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ನಾಳೆ ವಿಧ್ಯುಕ್ತ ಚಾಲನೆ ಸಿಗಲಿದೆ. ಈಗಾಗಲೇ ಅರಮನೆ ನಗರಿ ಮೈಸೂರು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಅಕ್ಟೋಬರ್ 3ರಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 3 ರಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ

ಮೈಸೂರು: ನಾಳೆ ನಾಡಹಬ್ಬ ದಸರಾಗೆ ವಿಧ್ಯುಕ್ತ ಚಾಲನೆ| ಮದುವಣಗಿತ್ತಿಯಂತೆ ಸಿಂಗಾರಗೊಂಡ ಸಾಂಸ್ಕೃತಿಕ ನಗರಿ Read More »

ದಾವಣಗೆರೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಡಗಿದ್ದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ್ದ ಪೊಲೀಸರು ಇದೀಗ ದಾವಣೆಗೆರೆಯಲ್ಲಿ ನಾಲ್ವರು ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂ‌ರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದು, ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನ ಪ್ರಜೆಯಾಗಿದ್ದಾಳೆ.ದಾವಣಗೆಯಲ್ಲಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಹಿಂದೂಗಳ ಹೆಸರಿನಲ್ಲಿ ವಾಸವಾಗಿದ್ದರು. ಬನ್ನೇರುಘಟ್ಟ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟ‌ರ್ ಕೃಷ್ಣಕುಮಾರ್, ಜಿಗಣಿ ಪೊಲೀಸ್‌ ಠಾಣೆ

ದಾವಣಗೆರೆಯಲ್ಲಿ ಪಾಕಿಸ್ತಾನಿ ಪ್ರಜೆಗಳು ಅರೆಸ್ಟ್ Read More »

ನೇಪಾಳದಲ್ಲಿ ಪ್ರವಾಹ, ಭೂಕುಸಿತಕ್ಕೆ 224 ಮಂದಿ ಬಲಿ

ಸಮಗ್ರ ನ್ಯೂಸ್: ಇತ್ತೀಚಿನ ಪ್ರವಾಹ ಮತ್ತು ಭೂಕುಸಿತಗಳಲ್ಲಿ ನೇಪಾಳದಲ್ಲಿ 224 ಜನರು ಸಾವನ್ನಪ್ಪಿದ್ದಾರೆ.ಒಟ್ಟು 158 ಜನರು ಗಾಯಗೊಂಡಿದ್ದು, 24 ಜನರು ಕಾಣೆಯಾಗಿದ್ದಾರೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಏಕ್ ನಾರಾಯಣ್ ಆರ್ಯಲ್ ಮಂಗಳವಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್ಯಲ್, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ 30,700 ಭದ್ರತಾ ಸಿಬ್ಬಂದಿಯನ್ನು ಸಜ್ಜುಗೊಳಿಸಲಾಗಿದೆ ಎಂದು ಕ್ಸಿಷ್ಣುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಶೋಧ ಮತ್ತು ರಕ್ಷಣಾ ಪ್ರಯತ್ನಗಳು ಎರಡು ದಿನಗಳಲ್ಲಿ ಕೊನೆಗೊಳ್ಳಲಿವೆ ಎಂದು ಪ್ರಧಾನಿ ಕೆ.ಪಿ.ಶರ್ಮಾ ಒಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು,

ನೇಪಾಳದಲ್ಲಿ ಪ್ರವಾಹ, ಭೂಕುಸಿತಕ್ಕೆ 224 ಮಂದಿ ಬಲಿ Read More »

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ನವರಾತ್ರಿ ಉತ್ಸವದ ಆಚರಣೆಯ ಹಿನ್ನಲೆಯಲ್ಲಿ ಅ.3ರಿಂದ 13ರ ವರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಶಾರದಾ ದೇವಿಯ ವಿಗ್ರಹ ಪ್ರತಿಷ್ಠಾಪನೆ ಮತ್ತು ವಿಸರ್ಜನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ತಡೆಯಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ದಸರಾ ಮೆರವಣಿಗೆ ಸಾಗುವ ಪ್ರದೇಶಗಳಲ್ಲಿ ಆಯಾ ದಿನಗಳಂದು ಬಾರ್‌ ಮತ್ತು ಮದ್ಯದ ಅಂಗಡಿಗಳಲ್ಲಿ, ಶೇಂದಿ ಅಂಗಡಿಗಳಲ್ಲಿ ಅಮಲು ಪದಾರ್ಥ ಮಾರಾಟ ಮಾಡದಂತೆ ಹಾಗೂ

ದಸರಾ ಆಚರಣೆ ಹಿನ್ನೆಲೆ| ದ.ಕ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ Read More »